ಕಾರ್ಕಳ: ಪೋಸ್ಟ್ ಮ್ಯಾನ್ ಎಂದರೆ ನಡೆದುಕೊಂಡು, ಸೈಕಲ್‌ನಲ್ಲೇ ಹೋಗುತ್ತಿದ್ದ ಕಾಲವಿತ್ತು. ಆದರೆ ಈಗ ಸೈಕಲ್‌ನಲ್ಲಿ ಹೋಗುವವರು ಇಲ್ಲವೇ ಇಲ್ಲ ಎಂದು ಹೇಳಬಹುದು. ಮೋಟಾರು ವಾಹನಗಳ ಭರಾಟೆಯ ಈ ದಿನಗಳಲ್ಲಿ ಅಪ್ಪನ ಮೇಲಿನ ಪ್ರೀತಿಗೆ, ಅವರೇ ತೆಗೆಸಿಕೊಟ್ಟ ಸೈಕಲನ್ನು ಏರಿ ಕಳೆದ 36 ವರ್ಷಗಳಿಂದ ಅಂಚೆ ಬಟೆವಾಡೆ ಮಾಡುವ ಪೋಸ್ಟ್‌ಮ್ಯಾನ್ ಒಬ್ಬರು ಬೈಲೂರಿನಲ್ಲಿದ್ದಾರೆ. ನಿಟ್ಟೆ ನಿವಾಸಿ ರವೀಂದ್ರ ಕುಮಾರ್ ಅವರು. ಬೈಲೂರಿನ ಅಂಚೆ ಕಚೇರಿಯಲ್ಲಿ ಪೋಸ್ಟ್ ಮ್ಯಾನ್. ವಯಸ್ಸು 58. 1984ರಲ್ಲಿ …
Read More »ಎಲ್ಲಾ ಬಗೆಯ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ನಿರ್ದೇಶಿಸಿದೆ. ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲು ಹೈಕೋರ್ಟ್ ಸೂಚಿಸಿದೆ.ಎಲ್ಲಾ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ಮೂರು ತಿಂಗಳ ಒಳಗೆ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
Read More »ಪೊಕೊ ಸಿ3 : ಒಂದು ಮಿಲಿಯನ್ ಯೂನಿಟ್‌ಗಳ ಮಾರಾಟ
ಬೆಂಗಳೂರು: ಭಾರತದ 3ನೇ ಅತ್ಯಂತ ದೊಡ್ಡ ಆನ್‌ಲೈನ್ ಸ್ಮಾರ್ಟ್‌ಫೋನ್ ಬ್ರಾಂಡ್ ಆಗಿರುವ ಪೊಕೊ, ಪೊಕೊ ಸಿ3 ಯ 1 ಮಿಲಿಯನ್ (10 ಲಕ್ಷ) ಗೂ ಅಧಿಕ ಯೂನಿಟ್‌ಗಳು ಮಾರಾಟವಾಗಿವೆ. ಇತ್ತೀಚೆಗೆ ಬಿಡುಗಡೆಯಾದ ಪೊಕೊ ಸಿ3 ರೂ.10000ಕ್ಕಿಂತ ಕಡಿಮೆ ಬೆಲೆಯ ದರಪಟ್ಟಿಯಲ್ಲಿ ತನ್ನದೇ ಆದ ಸ್ಥಾನ ಪಡೆದಿದೆ. 6.53 ಇಂಚು ಎಚ್.ಡಿ+ಎಲ್‌ಸಿಡಿ ಡಿಸ್ ಪ್ಲೇ, ಹೀಲಿಯೊ ಜಿ35 ಚಿಪ್‌ಸೆಟ್, 5,000 ಎಂಎಎಚ್ ಬ್ಯಾಟರಿ ಸಾಮರ್ಥ್ಯ ಹೊಂದಿರುವ ಈ ಮಾಡಲ್ ಹಣಕ್ಕೆ ತಕ್ಕ …
Read More »ವೇದಾವತಿ ಕಣಿವೆ ಮೂಲಕ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ನೀರು
ಹಾಸನ: ಮುಂದಿನ ಮಳೆಗಾಲದಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿ ವಿಲಾಸ ಜಲಾಶಯಕ್ಕೆ ವೇದಾವತಿ ಕಣಿವೆ ಮೂಲಕ ತಾತ್ಕಾಲಿಕವಾಗಿ ನೀರು ಹರಿಸಲಾಗುತ್ತದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಶುಕ್ರವಾರ ಜಿಲ್ಲೆಯ ಬೇಲೂರು ತಾಲೂಕಿನ ಎತ್ತಿನಹೊಳೆ ಯೋಜನಾ ಕಾಮಗಾರಿಯನ್ನು ಪರಿವೀಕ್ಷಿಸಿದ ಸಚಿವರು, ಸುದ್ದಿಗಾರರೊಂದಿಗೆ ಮಾತನಾಡಿದರು. ಎತ್ತಿನಹೊಳೆ ಯೋಜನೆಯ ಹಂತ-1ರ ಕಾಮಗಾರಿಗಳು ಮತ್ತು ಹಂತ-2ರ 33 ಕಿ.ಮೀ.ವರೆಗಿನ ಗುರುತ್ವಾ ಕಾಲುವೆ ಕಾಮಗಾರಿಗಳನ್ನು ಮೇ ತಿಂಗಳೊಳಗೆ ಪೂರ್ಣಗೊಳಿಸಲಾಗುತ್ತದೆ. ಪ್ರಾಯೋಗಿಕ ನೀರನ್ನು ವೇದಾವತಿ ಕಣಿವೆಯ …
Read More »ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ
ಹೊಸದಿಲ್ಲಿ : ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಮೇ 29ರಂದು ಚುನಾವಣೆ ನಡೆಸುವ ಪ್ರಸ್ತಾವವನ್ನು ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಮುಂದಿಟ್ಟಿದೆ. ಇದೇ ದಿನವೇ ಎಐಸಿಸಿ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ. ಈ ಎರಡು ವಿಷಯಗಳ ಬಗ್ಗೆ ಕಾಂಗ್ರೆಸ್ ಕಾರ್ಯಕಾರಿ (ಸಿಡಬ್ಲ್ಯೂಸಿ) ಸಮಿತಿ ಸಭೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ. ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಕೃಷಿ ಕಾಯ್ದೆಗಳು ಹಾಗೂ ರೈತರ ಪ್ರತಿಭಟನೆ, ಸಂಸತ್‌ನ ಬಜೆಟ್ ಅಧಿವೇಶನದಲ್ಲಿ ಪಕ್ಷದ ಕಾರ್ಯತಂತ್ರ ಮುಂತಾದ …
Read More »15 ಕೋಟಿ ರೂ. ವೆಚ್ಚದ ಗೋಸಬಾಳ ಗ್ರಾಮದಲ್ಲಿ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಹೊಸ 110 ಕೆವ್ಹಿ ವಿದ್ಯುತ್ ಉಪಕೇಂದ್ರ ನಿರ್ಮಾಣದ ಬಳಿಕ ಈ ಭಾಗದ ಎಲ್ಲಾ ಗ್ರಾಮಗಳ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನಿರಂತರ ಉತ್ತಮ ಗುಣಮಟ್ಟದ ವಿದ್ಯುತ್ ಪೂರೈಕೆಯಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ತಾಲೂಕಿನ ಗೋಸಬಾಳ ಗ್ರಾಮದಲ್ಲಿ ಕೆಪಿಟಿಸಿಎಲ್‍ನಿಂದ 15.09 ಕೋಟಿ ರೂ. ವೆಚ್ಚದ 110 ಕೆವ್ಹಿ ಉಪಕೇಂದ್ರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ …
Read More »ವಾಟ್ಸ್‌ಆಯಪ್ ಹೊಸ ನೀತಿ: ಕಳವಳ ವ್ಯಕ್ತಪಡಿಸಿದ ಸಂಸದೀಯ ಸಮಿತಿ
ನವದೆಹಲಿ: ವಾಟ್ಸ್ ಆಯಪ್ ನೀತಿಯಲ್ಲಿ ಖಾಸಗಿತನಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪ್ರಸ್ತಾಪಿಸಲಾಗಿರುವ ಬದಲಾವಣೆಗಳ ಕುರಿತು ಸಂಸದೀಯ ಸಮಿತಿಯ ಸದಸ್ಯರು ಕಳವಳ ವ್ಯಕ್ತಪಡಿಸಿರುವುದಾಗಿ ವರದಿಯಾಗಿದೆ. ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿ ಎದುರು ವಾಟ್ಸ್‌ಆಯಪ್‌ನ ಪ್ರತಿನಿಧಿ ಹಾಜರಾಗಿದ್ದು, ‘ಪಾರದರ್ಶಕತೆ ಹೆಚ್ಚಿಸುವ ನಿಟ್ಟಿನಲ್ಲಿ ಹೊಸ ನೀತಿಯನ್ನು ಪ್ರಸ್ತಾಪಿಸಲಾಗಿದೆ. ವಾಟ್ಸ್‌ಆಯಪ್ ಚಾಟ್ ಹಾಗೂ ಕರೆಗಳು ಆಗಲೂ ಎಂಡ್-ಟು-ಎಂಡ್ ಎನ್‌ಕ್ರಿಪ್ಟೆಡ್ (ಬೇರೆಯವರು ಸಂದೇಶ ನೋಡಲು ಆಗುವುದಿಲ್ಲ) ಆಗಿರಲಿದೆ ಎಂದಿದ್ದಾರೆ. ಭಾರತೀಯ ಬಳಕೆದಾರರಿಗೆ ಅನುಕೂಲಕರವಲ್ಲದ ಬದಲಾವಣೆಗಳನ್ನು ಪ್ರಸ್ತಾಪಿಸಿರುವ ಬಗ್ಗೆ …
Read More »ಮಗುವಿಗೆ ಜನ್ಮ ನೀಡಿದ ಬಳಿಕ ಮೊದಲ ಬಾರಿಗೆ ಕ್ಯಾಮರಾ ಮುಂದೆ ಕಾಣಿಸಿಕೊಂಡ ನಟಿ ಅನುಷ್ಕಾ ಶರ್ಮಾ
ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮತ್ತು ವಿರಾಟ್ ಕೊಹ್ಲಿ ದಂಪತಿ ಮಗಳು ಜನಿಸಿದ ಸಂತಸದಲ್ಲಿದ್ದಾರೆ. ಮೊದಲ ಮಗುವನ್ನು ಸ್ವಾಗತ ಮಾಡಿದ ವಿರುಷ್ಕಾ ದಂಪತಿ ಮಗಳ ಫೋಟೊವನ್ನು ರಿವೀಲ್ ಮಾಡಿಲ್ಲ. ಕ್ಯಾಮರಾ ಕಣ್ಣಿನಿಂದ ದೂರ ಇರುವ ಅನುಷ್ಕಾ ಮತ್ತು ವಿರಾಟ್ ಇದೀಗ ಮಗಳು ಜನಿಸಿದ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಜನವರಿ 11 ಮಧ್ಯಾಹ್ನ ಅನುಷ್ಕಾ ಶರ್ಮ ಮೊದಲ ಮಗುವಿಗೆ ಜನ್ಮ ನೀಡಿದ್ದಾರೆ. ಮಗು ಜನಿಸಿದ ಬಳಿಕ ವಿರಾಟ್ ಮಗಳು …
Read More »ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಶುಭ ಕೋರಿದ ರಾಹುಲ್ ಗಾಂಧಿ
ನವದೆಹಲಿ: ವಿಶ್ವದ ದೊಡ್ಡಣ್ಣ ಅಮೆರಿಕ ದೇಶದ ನೂತನ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಜೋ ಬೈಡನ್ ಅವರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಇಂದು ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಅಮೆರಿಕ ಪ್ರಜಾಪ್ರಭುತ್ವದಲ್ಲಿ ಹೊಸ ಅಧ್ಯಾಯದ ಆರಂಭವಾಗಿದೆ ಎಂದು ಅವರು ತಿಳಿಸಿದರು. ಅದುವಲ್ಲದೇ ಭಾರತ ಮೂಲದ ಅಮೆರಿಕದ ಮೊದಲ ಉಪಾಧ್ಯಕ್ಷೆ ಆಗಿ ಪದಗ್ರಹಣ ಮಾಡಿರುವ ಕಮಲಾ ಹ್ಯಾರಿಸ್ ಅವರಿಗೂ ಶುಭಾಶಗಳನ್ನು ಕೋರಿದ್ದಾರೆ. ಅಮೆರಿಕದ …
Read More »ದಾವೂದ್ ಸಹಚರ ಬಂಧನ
ಮುಂಬೈ, ಜ.21- ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ಪರ್ವೇಜ್ ಖಾನ್ ಅಲಿಯಾಸ್ ಚಿಂಕೂ ಪಠಾಣ್ ಎಂಬುವನನ್ನು ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ನವಿ ಮುಂಬೈ ಬಳಿ ಮಾದಕ ವಸ್ತು ನಿಯಂತ್ರಣ ಬ್ಯೂರೋ (ಎನ್‍ಸಿಬಿ) ತಂಡ ಬಂಧಿಸಿದೆ. ಆರೋಪಿ ಖಾನ್‍ನಿಂದ ಮಾದಕವಸ್ತು ವಶಪಡಿಸಿಕೊಂಡಿದ್ದಾರೆ. ಮಾಫಿಯ ಡಾನ್ ಕರೀಂ ಲಾಲಾ ಸಂಬಂಧಿಯೂ ಆಗಿರುವ ಖಾನ್‍ನನ್ನು ಖಚಿತ ಮಾಹಿತಿ ಮೇಲೆ ಎನ್‍ಸಿಬಿ ವಿಭಾಗ ನಿರ್ದೇಶಕ ಸಮೀರ್ ವಾಂಖೆಡೆ ತಂಡ ಬಲೆ ಬೀಸಿ ಬಂಧಿಸಿದೆ.ಖಾನ್ …
Read More »
Laxmi News 24×7