ಬೆಂಗಳೂರು: ಕನ್ನಡದ ಬಿಗ್ಬಾಸ್ ಜನವರಿ ಮೂರನೇ ವಾರದಿಂದ ಆರಂಭಗೊಳ್ಳಲಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷ ಅಕ್ಟೋಬರ್ ನಲ್ಲಿ ಬಿಗ್ಬಾಸ್ ಆರಂಭವಾಗುತ್ತಿತ್ತು. ಕೊರೊನಾ ಹಿನ್ನೆಲೆ ಬಿಗ್ಬಾಸ್ ಮುಂದೂಡಿಕೆ ಮಾಡಲಾಗಿತ್ತು. ಬಿಗ್ಬಾಸ್ ಪ್ರಸಾರವಾಗುವ ವಾಹಿನಿಯ ಬ್ಯುಸಿನೆಸ್ ಹೆಡ್ ಪರಮೇಶ್ವರ್ ಗುಂಡ್ಕಲ್ ಜೊತೆ ನಟ ಕಿಚ್ಚ ಸುದೀಪ್ ಮಾತುಕತೆ ನಡೆಸುತ್ತಿರುವ ಫೋಟೋಗಳು ವೈರಲ್ ಆಗುತ್ತಿವೆ. ಈ ಬಾರಿ ಬಿಗ್ಬಾಸ್ ಮನೆಗೆ ಪ್ರವೇಶ ಪಡೆಯುವ 15 ಸ್ಪರ್ಧಿಗಳ ಹೆಸರು ಅಂತಿಮವಾಗಿದೆ ಎನ್ನಲಾಗಿದೆ. ಕೊರೊನಾ …
Read More »ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.
ಮಂಗಳೂರು: ನಗರದ ಹೊರವಲಯದ ಸುರತ್ಕಲ್ ತಡಂಬೈಲ್ ಬಳಿ ಇಂದು ಭೀಕರ ರಸ್ತೆ ಅಪಘಾತ ನಡೆದಿದೆ. ಸುರತಕ್ಲ್ ಸಮೀಪದ ಕ್ರಾಸ್ ರಸ್ತೆ ಬಳಿ ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಮೃತ ದುರ್ದೈವಿಯನ್ನು ಸೂರಿಂಜೆ ನಿವಾಸಿ ವಿನೋದ್ ಕುಮಾರ್ (43) ಎಂದು ಗುರುತಿಸಲಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಸವಾರ ಏಕಾಏಕಿಯಾಗಿ ರಸ್ತೆಯನ್ನು ಕ್ರಾಸ್ ಮಾಡಿದಾಗ ವೇಗವಾಗಿ ಬಂದ ಲಾರಿ ನಿಯಂತ್ರಣಕ್ಕೆ ಸಿಗದೆ ಬೈಕ್ …
Read More »ಮನೆ ಬಾಗಿಲಿಗೆ ಮಹಾನಗರ ಪಾಲಿಕೆ – ವಿನೂತನ ಕಾರ್ಯಕ್ರಮಕ್ಕೆ ಚಾಲನೆ
ದಾವಣಗೆರೆ: ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಮನೆ ಬಾಗಿಲಿಗೆ ಮಹಾನಗರ ಪಾಲಿಕೆ ಎಂಬ ವಿನೂತನ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಚಾಲೆ ನೀಡಿದರು. ಇಂದು ಬೆಳಗ್ಗೆ ದಾವಣಗೆರೆ ನಗರದ ಗಾಂಧಿ ನಗರದಲ್ಲಿರುವ ಚೌಡೇಶ್ವರಿ ದೇವಾಲಯದ ಬಳಿ ಉದ್ಘಾಟಿಸಿದರು. ಒಂದು ಲಕ್ಷ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ದಾವಣಗೆರೆ ಸಂಸದರಾದ ಜಿ.ಎಂ.ಸಿದ್ದೇಶ್ವರ ಚಾಲನೆ ನೀಡಿದರು. ಜನನ/ ಮರಣ ಪ್ರಮಾಣಪತ್ರ ನೀಡುವ ಕಾರ್ಯಕ್ರಮಕ್ಕೆ …
Read More »ಬೆಂಗಳೂರಿನಲ್ಲಿ ರಮೇಶ್ ಜಾರಕಿಹೋಳಿ ಭೇಟಿಯಾದ ಪ್ರಭಾಕರ್ ಕೋರೆ
ಬೆಳಗಾವಿ- ಬೆಂಗಳೂರಿನ ಸದಾಶಿವನಗರ ದಲ್ಲಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರ ಮನೆ ಈಗ ಸೂಪರ್ ಪಾವರ್ ಸೆಂಟರ್ ಆಗಿ ಪರಿವರ್ತನೆ ಆಗಿದೆ. ಇತ್ತೀಚಿನ ರಾಜಕೀಯ ಬೆಳವಣಿಗೆ,ಸದಾಶಿವ ನಗರದ ರಮೇಶ್ ಸಾಹುಕಾರ್ ಮನೆಯಲ್ಲಿ ನಡೆಯುತ್ತಿರುವ ಮೀಟೀಂಗ್ ಗಳು,ಅವರ ಮನೆಗೆ ಗಣ್ಯರ ಭೇಟಿ,ರಮೇಶ್ ಜಾರಕಿಹೊಳಿ ಅವರ ಪದೇ,ಪದೇ ದೆಹಲಿಗೆ ಭೇಟಿ ಈ ಎಲ್ಲವನ್ನು ಸೂಕ್ಷ್ಮವಾಗಿ ಗಮನಿಸಿದರೆ ಸಾಹುಕಾರ್ ಮನೆ ಈಗ ಸೂಪರ್ ಪಾವರ್ ಸೆಂಟರ್ ಆಗಿದೆ ಅನ್ನೋದಕ್ಕೆ ಸಾಕ್ಷ್ಯ ಒದಗಿಸುತ್ತವೆ. ಇತ್ತೀಚಿಗಷ್ಟೇ …
Read More »ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಹುಟ್ಟು ಹಬ್ಬ
ಮಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರಿಗೆ ಇಂದು 72ನೇ ವರ್ಷದ ಜನ್ಮದಿನದ ಸಂಭ್ರಮ. ಈ ಹಿನ್ನೆಲೆಯಲ್ಲಿ ಗಣ್ಯರು ಪೂಜ್ಯ ಖಾವಂದರಿಗೆ ಶುಭಾಶಯಗಳನ್ನು ಕೋರುತ್ತಿದ್ದಾರೆ. ಅಂತೆಯೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೂಡ ಧರ್ಮಾಧಿಕಾರಿಗೆ ಶುಭಾಶಯ ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ, ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರ ಜನ್ಮದಿನದಂದು ಅವರಿಗೆ ಭಕ್ತಿಪೂರ್ವಕ ಶುಭಕಾಮನೆಗಳು. ಶ್ರೀ ಮಂಜುನಾಥ ಸ್ವಾಮಿಯು ತಮಗೆ ಉತ್ತಮ ಆರೋಗ್ಯವನ್ನು, ಶಿಕ್ಷಣ, …
Read More »ಸುರೇಶ್ ಕುಮಾರ್ ಹೇಳಿಕೆಗೆ ಖಾಸಗಿ ಶಾಲೆಗಳ ಆನ್ಲೈನ್ ಕ್ಲಾಸ್ ಬಂದ್ – ಕ್ಯಾಮ್ಸ್ ಎಚ್ಚರಿಕೆ?
ಬೆಂಗಳೂರು: ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವುದಿಲ್ಲ ಎಂದು ಶಾಲೆಗಳು ಹೇಳುವಂತಿಲ್ಲ ಎಂಬ ಸುರೇಶ್ ಕುಮಾರ್ ಹೇಳಿಕೆಗೆ ಖಾಸಗಿ ಶಾಲೆಗಳ ಒಕ್ಕೂಟ ಕ್ಯಾಮ್ಸ್ ಸಿಡಿದೆದ್ದಿದೆ.ಶಿಕ್ಷಣ ಸಚಿವರು ತಮ್ಮ ಹೇಳಿಕೆಗೆ ನವೆಂಬರ್ 30ರೊಳಗೆ ಸ್ಪಷ್ಟನೆ ಕೊಡಬೇಕು. ಇಲ್ಲದಿದ್ದರೆ ಆನ್ಲೈನ್ ಕ್ಲಾಸ್ ಬಂದ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡುವ ಮೂಲಕ ಸರ್ಕಾರಕ್ಕೆ ಸಡ್ಡು ಹೊಡೆದಿದೆ. ಶಿಕ್ಷಣ ಮಂತ್ರಿಗಳು ಇಂತಹ ಹೇಳಿಕೆ ನೀಡುವುದು ಸರಿಯಲ್ಲ. ಸಚಿವರು ಮನುಷ್ಯತ್ವ ಇಲ್ಲದೆ ಹೇಳಿಕೆ ಕೊಡ್ತಿದ್ದಾರೆ. ಶುಲ್ಕ ಕಟ್ಟಡೇ …
Read More »ನಿವಾರ್ ಸೈಕ್ಲೋನ್ ಮುಂದಿನ ಮೂರು ದಿನ ಮಳೆ ಸಂಭವ…………?
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ನಿವಾರ್ ಸೈಕ್ಲೋನ್ ಇನ್ನೆರಡು ದಿನಗಳಲ್ಲಿಯೇ ಅಪ್ಪಳಿಸಲಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಸೈಕ್ಲೋನ್ ಪರಿಣಾಮ ನವೆಂಬರ್ 25 ರಿಂದ 27ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ.ಬಂಗಾಲ ಉಪಸಾಗರ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತವಾಗಿದ್ದು, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ನ.25 ರಂದು ತಮಿಳುನಾಡು ಹಾಗೂ ಪಾಂಡಿಚೇರಿ ಕರಾವಳಿಯಲ್ಲಿ ದಾಟಿ ಕಾರೈಕಲ್, ಮಾಮಲಪುರಂ ಹತ್ತಿರ ಸೈಕ್ಲೋನ್ ಕ್ರಾಸ್ ಆಗುತ್ತೆ. ಇದರ ಪ್ರಭಾವದಿಂದಾಗಿ ಕರಾವಳಿಯ ಕೆಲ …
Read More »ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ
ಲಕ್ನೋ: ಲವ್ ಜಿಹಾದ್ ಕುರಿತು ಹೆಚ್ಚು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಉತ್ತರ ಪ್ರದೇಶ ಸರ್ಕಾರ ಲವ್ ಜಿಹಾದ್ ವಿರುದ್ಧ ಕಾನೂನು ಜಾರಿಗೆ ತಂದಿದ್ದು, ಒಂದು ವೇಳೆ ಆರೋಪ ಸಾಬೀತಾದಲ್ಲಿ 5 ವರ್ಷದ ವರೆಗೆ ಜೈಲು ಶಿಕ್ಷೆ ವಿಧಿಸುವಂತೆ ಕಾನೂನು ರೂಪಿಸಲಾಗಿದೆ.ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕೆಲ ದಿನಗಳ ಹಿಂದಷ್ಟೇ ಕೇಂದ್ರ ಕಾನೂನು ಸಚಿವಾಲಯದ ಬಳಿ ಈ ಕುರಿತು ಯುಪಿ ಸರ್ಕಾರ ಚರ್ಚಿಸಿತ್ತು. ಇದೀಗ ಸುಗ್ರೀವಾಜ್ಞೆ …
Read More »ಶಬರಿಮಲೆ ಯಾತ್ರಾರ್ಥಿಗಳಿಗಾಗಿ ಸಹಾಯವಾಣಿಯನ್ನು ಆರಂಭಿಸಿದ ರಾಜ್ಯ ಸರ್ಕಾರ
ಬೆಂಗಳೂರು: ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತಾದಿಗಳಿಗೆ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ ಬಂದರೂ ದರ್ಶನಕ್ಕೆ ಅವಕಾಶ ನೀಡುತ್ತಿಲ್ಲ ಎಂಬ ಕುರಿತು ಸುದ್ದಿಯಾಗುತ್ತಿದ್ದಂತೆ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಯಾತ್ರಾರ್ಥಿಗಳಿಗಾಗಿ ಸಹಾಯವಾಣಿಯನ್ನು ಆರಂಭಿಸಿದೆ. ಕೇರಳದ ಶಬರಿಮಲೆಗೆ ತೆರಳುವ ಭಕ್ತರಿಗೆ ಅನುಕೂಲವಾಗುವಂತೆ ಹೆಲ್ಪ್ ಲೈನ್ ಆರಂಭಿಸಿ ಸರ್ಕಾರ ಆದೇಶ ಹೊರಡಿಸಿದೆ. 2020-21ನೇ ಸಾಲಿನ ಮಂಡಲ-ಮಕರವಿಳಕ್ಕು ಕಾರ್ಯಕ್ರಮಕ್ಕೆ ತೆರಳುವ ಭಕ್ತರ ಸಮಸ್ಯೆ ಆಲಿಸಲು ಹಾಗೂ ಆರೋಗ್ಯ ಸಲಹೆಗಳಿಗಾಗಿ ಈ ಸಹಾಯವಾಣಿಯನ್ನು ಆರಂಭಿಸಿದೆ. ಕೊರೊನಾ ಹಿನ್ನಲೆ ಶಬರಿಮಲೆ …
Read More »ಕೊಬ್ಬರಿ ಹೋರಿ ಹಿಡಿಯಲು ಹೋಗಿ ಗೋರಿ ಸೇರಿದ ಯುವಕ….
ಹಾವೇರಿ: ಕೊಬ್ಬರಿ ಹೋರಿ ಓಡಿಸೋ ಹಬ್ಬದಲ್ಲಿ ಹಿಡಿಯಲು ಹೋಗಿದ್ದ ಯುವಕನಿಗೆ ಹೋರಿ ಗುದ್ದಿ ಮೃತಪಟ್ಟ ಘಟನೆ ಹಾವೇರಿ ತಾಲೂಕಿನ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು 24 ವರ್ಷದ ಚಂದ್ರು ಈರಕ್ಕನವರ ಎಂದು ಗುರುತಿಸಲಾಗಿದೆ. ಮೃತ ಚಂದ್ರು, ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಅಸುಂಡಿ ಗ್ರಾಮದ ನಿವಾಸಿಯವನಾಗಿದ್ದು, ಕೊಬ್ಬರಿ ಹೋರಿ ಹಬ್ಬಕ್ಕಾಗಿಯೇ ಕೆರಿಮತ್ತಿಹಳ್ಳಿಗೆ ಬಂದಿದ್ದ. ಪೊಲೀಸ್ ಇಲಾಖೆಯ ಅನುಮತಿ ನಿರಾಕರಣೆ ನಡುವೆಯೂ ಕೆರಿಮತ್ತಿಹಳ್ಳಿ ಗ್ರಾಮದಲ್ಲಿ ಇಂದು ಕೊಬ್ಬರಿ ಹೋರಿ ಓಡಿಸೋ …
Read More »