ಬೆಂಗಳೂರು: ಕಲಿಕಾ ರಹಿತ ವರ್ಷ(zero academic year)ದ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ, ಇಲಾಖೆಯಲ್ಲಿ ಈ ಪರಿಕಲ್ಪನೆಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಯಾವುದೇ ತರಗತಿಯ ಮಕ್ಕಳು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಉದ್ದೇಶದಿಂದಲೇ ಶಿಕ್ಷಣ ಇಲಾಖೆಯು ಪರ್ಯಾಯ ಬೋಧನಾ ಕ್ರಮಗಳನ್ನು ಚಾಲನೆಯಲ್ಲಿಟ್ಟಿದೆ. ಇಂದಿನಿಂದ ಚಂದನ ವಾಹಿನಿಯಲ್ಲಿ ಪ್ರಾರಂಭವಾಗಿರುವ ಐದರಿಂದ ಏಳನೇ ತರಗತಿಯ ಬೋಧನಾ ತರಗತಿಗಳು ಈ ಪ್ರಯತ್ನದ ಭಾಗವಾಗಿದೆ …
Read More »ಸಾಲ ಮರುಪಾವತಿ ಮಾಡುವುದಾಗಿ 16 ವರ್ಷದ ಹುಡುಗಿಯನ್ನು ಮನೆಗೆ ಕರೆಸಿಕೊಂಡು ಕಾಮುಕನ ಅತ್ಯಾಚಾರ
ಕೋಲ್ಕತ್ತಾ: ಸಾಲ ಮರುಪಾವತಿ ಮಾಡುವುದಾಗಿ 16 ವರ್ಷದ ಹುಡುಗಿಯನ್ನು ಮನೆಗೆ ಕರೆಸಿಕೊಂಡು ಕಾಮುಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಕೋಲ್ಕತ್ತಾದ ಗೋವಿಂದಪುರ ಕಾಲೋನಿಯಲ್ಲಿ ಘಟನೆ ನಡೆದಿದ್ದು, ತಾನು ನೀಡಬೇಕಿದ್ದ 4 ಸಾವಿರ ರೂ. ಹಿಂದಿರುಗಿಸುವುದಾಗಿ ಬಾಲಕಿಯನ್ನು ಮನೆಗೆ ಕರೆದಿದ್ದು, ಈ ವೇಳೆ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಅಬೀರ್ ನಾಸ್ಕರ್ ಅಲಿಯಾಸ್ ನಾಂಟು ಎಂದು ಗುರುತಿಸಲಾಗಿದೆ. ಈ ಹಿಂದೆ ವನ್ಯಜೀವಿ ಕಾಯ್ದೆ ಉಲ್ಲಂಘನೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಈತ ಹಲ್ಲಿಗಳನ್ನು ಮಾರಾಟ ಮಾಡುವ …
Read More »ಕ್ರಿಕೆಟ್ ಟೂರ್ನಾಮೆಂಟ್ ಪಂದ್ಯದಲ್ಲಿ ವಿಜೇತರಾದ ತಂಡಗಳಿಗೆ ಯುವ ದುರೀಣ ರಾಹುಲ್ ಜಾರಕಿಹೊಳಿ ಸೋಮವಾರ ಬಹುಮಾನ್ ವಿತರಿಸಿದರು.
ಯಮಕನಮರಡಿ : ಹುದಲಿ ಗ್ರಾಮದಲ್ಲಿ ಇಕ್ತಾ ಗ್ರುಪ್ ಟ್ರೋಪಿಯಿಂದ ಭಾನುವಾರ ಆಯೋಜಿಸಿದ್ದ ಕ್ರಿಕೆಟ್ ಟೂರ್ನಾಮೆಂಟ್ ಪಂದ್ಯದಲ್ಲಿ ವಿಜೇತರಾದ ತಂಡಗಳಿಗೆ ಯುವ ದುರೀಣ ರಾಹುಲ್ ಜಾರಕಿಹೊಳಿ ಸೋಮವಾರ ಬಹುಮಾನ್ ವಿತರಿಸಿದರು. ಪ್ರಥಮ ಸಿದ್ದನಹಳ್ಳಿ , ದ್ವಿತಿಯ ಗುಡ್ರ್ಯಾನೂರ, ತೃತಿಯ ಕಬಲಾಪುರ ಗ್ರಾಮದ ತಂಡಗಳು ಬಹುಮಾನ ಪಡೆದರು. ವಿರುಪಾಕ್ಷಿ ಮಜಗಿ, ಅಡಿವೇಪ್ಪ ಮಾಳಗಿ, ಅಜ್ಜಪ್ಪ ಮಳಗಲಿ, ರಾಮಣ್ಣ ಗುಳ್ಳಿ, ಪ್ರಕಾಶ ಪಾಟೀಲ, ಬಾಳೇಶ ದಾಸನಟ್ಟಿ, ಯಲ್ಲಪ್ಪ ತಲ್ಲೂರಿ,ಅಡಿವೇಪ್ಪ ಗಿಡಗೇರಿ, ಮಾರುತಿ ಬೇಟಗೇರಿ, ಸಾಬೀರ …
Read More »ಚುನಾವಣೆಯಲ್ಲಿ ಸೋಲು ಕಾಣುತ್ತಿದ್ದೇವೆ ಇದಕ್ಕೆ ಕಾರಣ ಇವಿಎಂ ಮಷಿನ್:ಶಿವರಾಜ ತಂಗಡಗಿ ಆರೋಪ
ಕೊಪ್ಪಳ : ದೇಶದಲ್ಲಿ ಕಾಂಗ್ರೆಸ್ ಗೆ ವ್ಯಾಪಕ ಬೆಂಬಲ ಇದೆ. ಆದರೂ ಚುನಾವಣೆಯಲ್ಲಿ ಸೋಲು ಕಾಣುತ್ತಿದ್ದೇವೆ ಇದಕ್ಕೆ ಕಾರಣ ಇವಿಎಂ ಮಷಿನ್ ದೋಷ ಎಂದು ಮಾಜಿ ಸಚಿವ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಆರೋಪಿಸಿದ್ದಾರೆ. ನಗರದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಆಡಳಿತವನ್ನು ದುರುಪಯೋಗ ಪಡೆದುಕೊಳ್ಳುತ್ತಿದೆ. ಇವಿಎಂ ಮಷಿನ್ ಗಳನ್ನು ದುರುಪಯೋಗ ಪಡೆದುಕೊಳ್ಳುತ್ತಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರುಗಳನ್ನು ಸಲ್ಲಿಕೆಯಾಗಿವೆ. ಈ ಬಗ್ಗೆ ಕಾಂಗ್ರೆಸ್ ಸಹ ಮಷಿನ್ …
Read More »ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಪೊಲೀಸರು ಯುವಕನ ತಂದೆ, ತಾಯಿಯನ್ನು ಥಳಿಸಿದ್ದಾರೆ ಎಂಬ ಗಂಭೀರ ಆರೋಪ
ಕಲಬುರಗಿ: ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಪೊಲೀಸರು ಯುವಕನ ತಂದೆ, ತಾಯಿಯನ್ನು ಥಳಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಲಬುರಗಿ ಮಹಿಳಾ ಠಾಣೆಯ ಪೊಲೀಸರು ಯುವಕನ ಪೋಷಕರಿಗೆ ಥಳಿಸಿದ್ದು, ಯುವಕ ಅಯ್ಯಪ್ಪ ಸ್ವಾಮಿ ತಂದೆ ತುಕಾರಾಮ್ ಮತ್ತು ತಾಯಿ ಸುಜಾತ ಅವರನ್ನು ಪೊಲೀಸ್ ಠಾಣೆಯಲ್ಲೇ ಮನ ಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಿಂದ ಪೋಷಕರನ್ನು ಕರೆಸಿ ಪೊಲೀಸರು ಹಲ್ಲೆ ಮಾಡಿದ್ದಾರೆ. ಕಲಬುರಗಿಯ ಯುವತಿ ವಿಜಯಪುರ ಯುವಕನ ಮಧ್ಯೆ …
Read More »ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ
ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬೆನ್ನಲ್ಲೇ ಇತ್ತೀಚೆಗೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿ ಸೂಚಿಸಿದ್ದರು. ಆದರೆ ಅನುದಾನದ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರಲಿಲ್ಲ. ಇದೀಗ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
Read More »ವಿನಯ್ ಕುಲ್ಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ
ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲ್ಕರ್ಣಿಯವರನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿನಯ್ ಕುಲ್ಕರ್ಣಿಯವರನ್ನು ಇನ್ನಷ್ಟು ವಿಚಾರಣೆ ನಡೆಸಲಿರುವ ಅಗತ್ಯವಿರುವುದರಿಂದ ಮತ್ತಷ್ಟು ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಸಿಬಿಐ …
Read More »ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.
ರಾಯಚೂರು: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ಆಯೋಜಿಸಿರುವ ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಸೇರಿದಂತೆ ಹಲವು ಮುಖಂಡರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖಂಡರ ಆಗಮನವನ್ನು ಬೆಂಬಲಿಗರು ನಿರೀಕ್ಷಿಸುತ್ತಿದ್ದು, ಆರ್.ಬಸನಗೌಡ ತುರುವಿಹಾಳ ಅವರು ಬೆಂಬಲಿಗರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ …
Read More »ಮಸ್ಕಿ ಯಲ್ಲಿ ಬೃಹುತ ಕಾಂಗ್ರೆಸ್ ಸಮಾವೇಶ ಎಲ್ಲ ಹಿರಿಯ ನಾಯಕರು ಭಾಗಿ
ಮಸ್ಕಿ: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ನವೆಂಬರ್ 23ರಂದು ಬೃಹತ್ ಕಾಂಗ್ರೆಸ್ ಸಮಾವೇಶ ಆಯೋಜಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಸುಮಾರು 7 ಸಾವಿರ ಆಸನಗಳನ್ನು ಹಾಕಲಾಗುತ್ತಿದ್ದು, ಪೆÇಲೀಸ್ ಠಾಣೆ ಪಕ್ಕದ ಜಾಗದಲ್ಲಿ ವಿಶಾಲವಾದ ವೇದಿಕೆ ನಿರ್ಮಿಸಲಾಗಿದೆ. ಸುಮಾರು ಹತ್ತು ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು …
Read More »ಬೇಗ್ ಮೇಲಿರುವ ಆರೋಪ ಏನು?
ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್‍ನಿಂದ ಸುಮಾರು 200 ಕೋಟಿಗೂ ಹೆಚ್ಚು ಹಣದ ಜೊತೆ ಬೆಲೆಬಾಳುವ ಐಷಾರಾಮಿ ವಸ್ತುಗಳು, ಕಾರುಗಳನ್ನು ಗಿಫ್ಟ್ ಪಡೆದಿರುವ ಗಂಭೀರ ಆರೋಪ ರೋಷನ್ ಬೇಗ್ ಮೇಲಿದೆ. ಐಎಂಎ ತನಿಖೆಗಾಗಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ವಿಶೇಷ ತನಿಖಾ ತಂಡ(ಎಸ್‍ಐಟಿ) ರಚಿಸಿತ್ತು. ಐಎಂಎ ನಿರ್ದೇಶಕರು ಸೇರಿದಂತೆ 20ಕ್ಕೂ ಹೆಚ್ಚು ಮಂದಿಯನ್ನು ಎಸ್‍ಐಟಿ ಬಂಧಿಸಿತ್ತು. ಈ ಪ್ರಕರಣದಲ್ಲೇ ಬೆಂಗಳೂರಿನ ಅಂದಿನ ಜಿಲ್ಲಾಧಿಕಾರಿ ಶಂಕರ್, ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ. ನಾಗರಾಜ್ …
Read More »