ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿ ನಡೆಯಲಿದೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ 16 ಸಾವಿರ ಪೊಲೀಸ್ ಸಿಬ್ಬಂದಿ ನೇಮಕಾತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅನುಮತಿ ನೀಡಿದ್ದು, ಶೀಘ್ರವೇ ನೇಮಕಾತಿ ನಡೆಯಲಿದೆ ಎಂದಿದ್ದಾರೆ. ಈಗಾಗಲೇ ಹಲವು ಉದ್ಯೋಗಗಳಿಗೆ ನೇಮಕಾತಿ ನಡೆಯುತ್ತಿದೆ. ಇನ್ನೂ ಹೆಚ್ಚಿನ ಸಿಬ್ಬಂದಿ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಶೀಘ್ರವೇ ನೇಮಕಾತಿ ನಡೆಯಲಿದೆ …
Read More »ದೆಹಲಿ ಬಿಟ್ಟು ಗೋವಾ ಅಥವಾ ಚೆನ್ನೈನಲ್ಲಿ ತಂಗಲಿದ್ದಾರೆಸೋನಿಯಾ ಗಾಂಧಿ
ನವದೆಹಲಿ,ನ.20- ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪರಿಸರ ಮಾಲಿನ್ಯ ದಿನದಿಂದ ದಿನಕ್ಕೆ ಹದಗೆಡುತ್ತಿರುವ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕೆಲ ದಿನಗಳ ಮಟ್ಟಿಗೆ ಹೊರಭಾಗದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ವೈದ್ಯರು ಹಾಗೂ ಕುಟುಂಬ ಸದಸ್ಯರ ಸಲಹೆ ಮೇರೆಗೆ ಇಂದು ಸಂಜೆಯೊಳಗೆ ಸೋನಿಯಾ ಗಾಂಧಿ ಅವರು ಗೋವಾ ಅಥವಾ ಚೆನ್ನೈನಲ್ಲಿ ತಂಗಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಕಳೆದ ಹಲವು ವರ್ಷಗಳಿಂದ ಅನಾರೋಗ್ಯಕ್ಕೆ ತುತ್ತಾಗಿರುವ ಸೋನಿಯಾ ಗಾಂಧಿಗೆ ಉಸಿರಾಟದ ತೊಂದರೆಯಿದೆ. ದೆಹಲಿಯಲ್ಲಿ …
Read More »ಛಿದ್ರವಾಯ್ತು 906 ವರ್ಷಗಳ ಪುರಾತನ ಮಹಾಕಾಳಿ ವಿಗ್ರಹ..!
ಹಾಸನ, ನ.20- ಸುಮಾರು 906 ವರ್ಷಗಳ ಇತಿಹಾಸಹೊಂದಿರುವ ಬೇಲೂರು ರಸ್ತೆಯ ದೊಡ್ಡಗದವಳ್ಳಿ ಲಕ್ಷ್ಮೀದೇವಾಲಯದಲ್ಲಿರುವ ಮಹಾಕಾಳಿ ವಿಗ್ರಹ ಇದ್ದಕ್ಕಿದ್ದಂತೆ ಛಿದ್ರವಾಗಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ. ಹಾಸನ-ಬೇಲೂರು ರಸ್ತೆಯ ಹಗರೆ ಬಳಿ ಇರುವ ಪುರಾತನ ಲಕ್ಷ್ಮೀದೇವಾಲಯದಲ್ಲಿ ಮಹಾಕಾಳಿ ವಿಗ್ರಹವಿತ್ತು. ಈ ವಿಗ್ರಹ ಕೊಲ್ಲಾಪುರದ ಮಹಾಲಕ್ಷ್ಮಿ ವಿಗ್ರಹಕ್ಕೆ ಸ್ವಾಮ್ಯತೆ ಇತ್ತು. ಕೇಂದ್ರ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ಒಳಪಟ್ಟಿದ್ದು, ಇದೀಗ ಈ ವಿಗ್ರಹ ಹಾನಿಗೀಡಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಈ ಪುರಾತನ ದೇವಾಲಯಕ್ಕೆ ಪ್ರತಿನಿತ್ಯ ಹಲವಾರು …
Read More »ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಸಿದ್ಧತೆ
ಬೆಂಗಳೂರು,ನ.20- ವಿಧಾನಸಭೆಯಲ್ಲಿ ಬಹುಮತದಿಂದ ಅಂಗೀಕೃತವಾದ ಮಸೂದೆಗಳನ್ನು ಉದ್ದೇಶಪೂರ್ವಕವಾಗಿ ತಡೆಹಿಡಿಯಲಾಗುತ್ತದೆ ಎಂಬ ಕಾರಣಕ್ಕೆ ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಬಿಜೆಪಿ ಸಜ್ಜಾಗಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಪರಿಷತ್‍ಗೆ ಹೊಸ ಸಭಾಪತಿ ಆಯ್ಕೆ ಮಾಡಲು ಚಿಂತಿಸಿದೆ ಎಂದು ಮೂಲಗಳು ತಿಳಿಸಿವೆ. ಉಭಯ ಪಕ್ಷಗಳ ನಡುವೆ ಮೈತ್ರಿಯಾದರೆ, ಬಿಜೆಪಿಗೆ ಸಭಾಪತಿ ಹಾಗೂ ಜೆಡಿಎಸ್‍ಗೆ ಉಪಸಭಾಪತಿ ಸ್ಥಾನ ಹಂಚಿಕೆಯಾಗಲಿದೆ. ಡಿಸೆಂಬರ್ 7 ರಿಂದ 15 ರವರೆಗೆ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಸಭಾಪತಿ …
Read More »ರೈಲು ಏರಿ ಸೆಲ್ಫಿ ಕ್ಲಿಕಿಸಿಕೊಳ್ಳುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಯುವಕ ಸಾವು
ಚೆನ್ನೈ,ನ.20- ಸರಕು ರೈಲಿನ(ಗೂಡ್ಸ್ ರೈಲ್) ಮೇಲೆ ಹತ್ತಿ ಸೆಲ್ಫಿ ಕ್ಲಿಕಿಸಿಕೊಳ್ಳುತ್ತಿದ್ದ ಯುವಕನಿಗೆ ಹೈಟೆಕ್ಷಂನ್ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುವೆನಲಿಯಲ್ಲಿ ನಡೆದಿದೆ. ಎಂ.ಗಣೇಶ್ವರ(15) ವಿದ್ಯುದ್ಘಾತಕ್ಕೆ ತುತ್ತಾಗಿರುವ ಯುವಕ. ರೈಲ್ವೆ ಜಂಕ್ಷನ್‍ನಲ್ಲಿ ಗೂಡ್ಸ್ ರೈಲು ಮೂಲಕ ಸಾಗಿಸುವ ಆಹಾರ ಧಾನ್ಯಗಳನ್ನು ಪರಿಶೀಲಿಸುವ ಇನ್‍ಸ್ಪೆಕ್ಟರ್ ಮಗ ಈತ. ನಿನ್ನೆ ತನ್ನ ತಂದೆಯೊಂದಿಗೆ ಬಂದಿದ್ದ. ಬೇರೆ ಪ್ಲಾಟ್‍ಫಾರ್ಮ್‍ನಲ್ಲಿ ರೈಲು ಹತ್ತಿದ್ದನು. ಅಲ್ಲೇ ಹಾದುಹೋಗಿರುವ ಹೈಟೆನ್ಷನ್ ತಂತಿಯನ್ನು ಗಮನಿಸದೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದನು.ಈ ವೇಳೆ …
Read More »ಬಿಜೆಪಿ ಮುಖಂಡರಿಂದ ಬಿಜೆಪಿ ಮುಖಂಡನಿಗೇ ಬ್ಲ್ಯಾಕ್ ಮೇಲ್,
ಮೈಸೂರು: ಖಾಸಗಿ ವೀಡಿಯೋ ಹೊಂದಿರುವ ಮೆಮೋರಿ ಕಾರ್ಡನ್ನ ತೋರಿಸುತ್ತ ಬಿಜೆಪಿ ಮುಖಂಡನಿಗೆ ಬಿಜೆಪಿ ಮುಖಂಡರೇ ಮುಂದಾಗಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದ್ದು, ಕುವೆಂಪುನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಮುಖಂಡರಿಂದ ಬಿಜೆಪಿ ಮುಖಂಡನಿಗೇ ಬ್ಲ್ಯಾಕ್ ಮೇಲ್, ಸುಲಿಗೆ. ಖಾಸಗಿ ವೀಡಿಯೋವುಳ್ಳ ಮೇಮೋರಿ ಕಾರ್ಡ್‌ಗಾಗಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಲಾಗಿದೆ. ಬರೋಬ್ಬರಿ ಒಂದು ವರ್ಷದ ಬಳಿಕ ಡಾ.ಕೆ.ಪ್ರಕಾಶ್ ಬಾಬುರಾವ್ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ಬಂಧಿಸಿದ್ದಾರೆ. ಆರೋಪಿಗಳಾದ …
Read More »ಸರ್ಕಾರಿ ಜಮೀನು ವಿವಾದದಿಂದ ಪಿಡಿಓ ವಾಹನಕ್ಕೆ ಬೆಂಕಿ ಇಟ್ಟ ಘಟನೆ
ಚಿಕ್ಕಮಗಳೂರು: ಸರ್ಕಾರಿ ಜಮೀನು ವಿವಾದದಿಂದ ಪಿಡಿಓ ವಾಹನಕ್ಕೆ ಬೆಂಕಿ ಇಟ್ಟ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ಬಾಸಾಪುರ ಗ್ರಾಮದಲ್ಲಿ ನಡೆದಿದೆ. ಬಗರ್ ಹುಕುಂ ಜಮೀನಿಗಾಗಿ 2 ಕುಟುಂಬಗಳ ನಡುವೆ ಕಲಹ ಉಂಟಾಗಿದ್ದು, ಜಮೀನಿನಲ್ಲೇ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಪೊಲೀಸರು ಭದ್ರಾವತಿ ತಾಲೂಕಿನ ಪಿಡಿಓ ಹನುಮಂತಪ್ಪನನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಸ್ಥಳಕ್ಕೆ …
Read More »ರಾಜ್ಯ ಸರ್ಕಾರ ಒಪ್ಪಿಗೆ ನೀಡದಿದ್ದರೆ ಸಿಬಿಐ ತನಿಖೆ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ರಾಜ್ಯ ಸರ್ಕಾರದ ಸಮ್ಮತಿ ಇಲ್ಲದೆ ಸಿಬಿಐ ಯಾವುದೇ ರಾಜ್ಯದಲ್ಲಿ ತನಿಖೆ ನಡೆಸಲು ಸಾಧ್ಯವಿಲ್ಲ. ಯಾವುದೇ ರಾಜ್ಯದಲ್ಲಾಗಲಿ ಸಿಬಿಐ ತನಿಖೆಗೆ ಮುನ್ನ ಆಯಾ ರಾಜ್ಯದ ಒಪ್ಪಿಗೆ ಪಡೆದಿರಬೇಕು. ರಾಜ್ಯ ಸರ್ಕಾರ ಒಪ್ಪಿಗೆ ನೀಡದಿದ್ದರೆ ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಅಲಹಾಬಾದ್‍ನ ಫರ್ಟಿಕೋ ಮಾರ್ಕೆಟಿಂಗ್ ಕಂಪೆನಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ ಅಧಿಕಾರಿಗಳು ಸಲ್ಲಿಸಿದ್ದ …
Read More »ಪತ್ನಿಕೊಂದ ಪಾಪಿ ಗಂಡ, ಮಗು ಬಚಾವ್
ಕೊರಟಗೆರೆ, ನ.19- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಂದ್‍ಪಾಷನ ಪೈಶಾಚಿಕ ಕೃತ್ಯಕ್ಕೆ ಸಾವನ್ನಪ್ಪಿದ ಮಹಿಳೆಯನ್ನು ಜಬೀನಾ (32) ಎಂದು ಗುರುತಿಸಲಾಗಿದೆ. ತಂದೆಯಿಂದ ತೀವ್ರವಾಗಿ ಗಾಯಗೊಂಡಿರುವ 9 ವರ್ಷದ ಮಹಮದ್ ಆಲಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊರಟಗೆರೆ ಪಟ್ಟಣದ ರೇಣುಕಾ ಆಸ್ಪತ್ರೆಯ ಹಿಂಭಾಗ ವಾಸಿಸುತ್ತಿದ್ದ ದಂಪತಿ ಪ್ರತಿ ನಿತ್ಯ …
Read More »ಸದ್ಯದಲ್ಲೇ ಕೊರೋನಾ ಲಸಿಕೆ,,,!
ಬೆಂಗಳೂರು: ಸದ್ಯದಲ್ಲೇ ಕೊರೋನಾ ಲಸಿಕೆಯ ಗುಡ್‍ನ್ಯೂಸ್ ಸಿಗುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕೋರೋನಾ ಲಸಿಕೆ ಹಂಚಿಕೆ, ಸುರಕ್ಷಿತ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗಾಗಲೇ ಲಸಿಕೆ ವಿತರಿಸಲು ಮಾಡಿಕೊಂಡಿರುವ ವ್ಯವಸ್ಥೆಗಳ ಕುರಿತು ಅಂಕಿ ಅಂಶ ಸಮೇತ ಕೇಂದ್ರಕ್ಕೆ ಮಾಹಿತಿ ನೀಡಿದೆ. ಸಾರ್ವಜನಿಕರಿಗೆ ಕೊರೋನಾ ಲಸಿಕೆ ನೀಡಲು ರಾಜ್ಯ ರೆಡಿ ಇದೆ ಎಂಬ ಸಂದೇಶ ರವಾನಿಸಿದೆ.ಈಗಾಗಲೇ ಲಸಿಕೆ ಸ್ಟೋರೇಜ್‍ಗೆ ಬೆಂಗಳೂರಿನ ದಾಸಪ್ಪ ಆಸ್ಪತ್ರೆ, ಬಾಗಲಕೋಟೆಯ ಜಿಲ್ಲಾಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲಾ …
Read More »