ಗದಗ: ಮುಳಗುಂದ ನಾಕಾ ಬಳಿ ಇಸ್ಪೀಟು ಅಡ್ಡೆ ಮೇಲೆ ದಾಳಿ ನಡೆದಿದೆ. ಬೆಟಗೇರಿ ಸಿಪಿಐ ಭೀಮನಗೌಡ ಬಿರಾದಾರ ಹಾಗೂ ಪಿಎಸ್‍ಐ ಗಿರಿಜಾ ಜಕ್ಕಲಿ ನೇತೃತ್ವದಲ್ಲಿ ದಾಳಿಯಾಗಿದೆ. ಈ ವೇಳೆ ಇಸ್ಪೀಟು ಆಡುತ್ತಿದ್ದ ಸುಮಾರು 25 ಜನರ ಬಂಧಿಸಲಾಗಿದೆ. ಬಂಧಿತರಿಂದ ಲಕ್ಷಾಂತರ ರೂ. ಹಣ, ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಘಟನೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಮುಖಂಡರಿಗೆ ಬೇಕಾದವರನ್ನು ಬಿಟ್ಟಿರುವ ಹಾಗೂ ಇಸ್ಪೀಟ್ ನೋಡಲು ಬಂದವರ ಬಂಧನ ಮಾಡಿರುವ ಗಂಭೀರ ಆರೋಪ ಕೇಳಿಬಂದಿದೆ. …
Read More »ಉತ್ತರ ಪ್ರದೇಶದಲ್ಲಿ ಮುಂದುವರಿದ ಪೈಶಾಚಿಕ ಕೃತ್ಯ
ಫತೇಪುರ್: ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಫತೇಪುರ್ ಜಿಲ್ಲೆಯ ಅಶೋಧರ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ. 12 ಹಾಗೂ 8 ವರ್ಷದ ಬಾಲಕಿಯರನ್ನು ಹತ್ಯೆ ಮಾಡಲಾಗಿದ್ದು, ಅವರ ದೇಹದ ಮೇಲೆ ಗಾಯದ ಗುರುತುಗಳು ಕಂಡು ಬಂದಿವೆ. ಗ್ರಾಮದ ಹೊರವಲಯದಲ್ಲಿರುವ ಕೊಳದಲ್ಲಿ ಬಾಲಕಿಯರ ಮೃತದೇಹಗಳು ಕಂಡುಬಂದಿವೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ರಾಜೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ ಮಾಡಲಾಗಿದೆ ಎಂದು …
Read More »ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ದೊಡ್ಡ ದಾಳಿಯನ್ನು ವಿಫಲಗೊಳಿಸಿದ್ದಾರೆ.
ನವದೆಹಲಿ : ದೆಹಲಿ ಪೊಲೀಸರು ಇಬ್ಬರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರನ್ನು ಬಂಧಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯ ಮೇಲೆ ದೊಡ್ಡ ದಾಳಿಯನ್ನು ವಿಫಲಗೊಳಿಸಿದ್ದಾರೆ. ದೆಹಲಿಯಲ್ಲಿ ನಡೆಯಲಿದ್ದ ದೊಡ್ಡ ಭಯೋತ್ಪಾದಕ ದಾಳಿಯನ್ನು ತಡೆಗಟ್ಟಲು ದೆಹಲಿ ಪೊಲೀಸ್ ವಿಶೇಷ ಕೋಶ ಉಗ್ರರನ್ನು ಬಂಧಿಸಿದೆ. ದೆಹಲಿಯ ಸರಾಯ್ ಕೇಲ್ ಖಾನ್ ನಿಂದ ಬಂಧಿಸಲ್ಪಟ್ಟ ಇಬ್ಬರು ಭಯೋತ್ಪಾದಕರನ್ನು ಅಧಿಕಾರಿಗಳು ಈಗ ಪ್ರಶ್ನಿಸುತ್ತಿದ್ದಾರೆ. ದೆಹಲಿ ಪೊಲೀಸ್ ಅಧಿಕಾರಿಗಳ ಪ್ರಕಾರ, ಸೋಮವಾರ ರಾತ್ರಿ 10.15 ರ ಸುಮಾರಿಗೆ ಸರೈ ಕೇಲ್ ಖಾನ್‌ನ …
Read More »ಸಂಗೊಳ್ಳಿ ರಾಯಣ್ಣನ ತಲೆಮೇಲೆ ಕಾಲಿಟ್ಟ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ.
ಬೆಳಗಾವಿ: ಇತ್ತೀಚೆಗೆ ಪೀರಣವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಕುರಿತ ಹೋರಾಟ, ವಿವಾದ ಮರೆಯುವ ಮುನ್ನವೇ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ. ಪೀರಣವಾಡಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ತಲೆ ಮೇಲೆ ವ್ಯಕ್ತಿಯೊಬ್ಬ ನಿಂತು ಹೊಸ ವಿವಾದ ಸೃಷ್ಟಿಸಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ವ್ಯಕ್ತಿ ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾನೋ ಅಥವಾ ಮಾನಸಿಕ …
Read More »ಉದ್ಯಾನ ನಗರಿಯಲ್ಲಿಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆ
ಬೆಂಗಳೂರು: ಉದ್ಯಾನ ನಗರಿಯಲ್ಲಿ ವರುಣ ಅಬ್ಬರಿಸಿ ಬೊಬ್ಬಿರಿದಿದ್ದು, ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಸುರಿದ ಭಾರೀ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ನಗರದ ಸದಾಶಿವನಗರ, ಮೇಕ್ರಿ ಸರ್ಕಲ್, ಸಂಜಯನಗರ, ಜೆ.ಸಿ.ನಗರ, ಆರ್.ಟಿ ನಗರ, ಯಶವಂತಪುರ, ನಂದಿನಿ ಲೇಔಟ್ ಸೇರಿದಂತೆ ನಗರದ ಬಹುತೇಕ ಕಡೆಗಳಲ್ಲಿ ಮಳೆಯ ಆರ್ಭಟ ಜೋರಾಗಿತ್ತು. ಒಂದೇ ಸಮನೆ ಸುರಿದ ಮಳೆಗೆ ದ್ವಿಚಕ್ರ ವಾಹನ ಸವಾರರು ಪರದಾಡಿದರೆ. ಹಲವೆಡೆ ಟ್ರಾಫಿಕ್ ಜಾಮ್‍ನಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಇನ್ನೂ …
Read More »ಏಳನೇ ಬಾರಿಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದನಿತೀಶ್ ಕುಮಾರ್
ಪಾಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಏಳನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದರು. ಪಾಟ್ನಾ ರಾಜಭವನದೊಳಗೆ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ನಿತೀಶ್ ಕುಮಾರ್ ನಾಲ್ಕನೇ ಅವಧಿಗೆ ಬಿಹಾರದ ಗದ್ದುಗೆ ಏರಿದ್ದಾರೆ. ಇನ್ನು ಬಿಜೆಪಿಯ ತರ್ಕಿಶೋರ್ ಪ್ರಸಾದ್ ಮತ್ತು ರೇಣು ದೇವಿ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು. ತರ್ಕಿಶೋರ್ ಪ್ರಸಾದ್ ಕಟಿಹಾರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಸುಶೀಲ್ ಮೋದಿ ಅವರ ಆಪ್ತರಲ್ಲಿ …
Read More »ಬ್ಯಾಂಡ್ ಬಾರಿಸಿ ತಮಟೆ ಬಾರಿಸಿ ಬಾಯಿ ಬಡಿದುಕೊಂಡರೆ ಯಾರಿಗೂ ಸಚಿವ ಸ್ಥಾನ ಸಿಗಲ್ಲ:ರೇಣುಕಾಚಾರ್ಯ
ದಾವಣಗೆರೆ: ಬ್ಯಾಂಡ್ ಬಾರಿಸಿ ತಮಟೆ ಬಾರಿಸಿ ಬಾಯಿ ಬಡಿದುಕೊಂಡರೆ ಯಾರಿಗೂ ಸಚಿವ ಸ್ಥಾನ ಸಿಗಲ್ಲ ಎಂದು ಸಿಎಂ ಅವರ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಹೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆಯ ವಿಚಾರವಾಗಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ಎಲ್ಲ ಶಾಸಕ ಸಭೆ ಮಾಡಿ ಜಿಲ್ಲೆಗೆ ಒಂದು ಸಚಿವ ಸ್ಥಾನ ನೀಡುವಂತೆ ಸಿಎಂಗೆ ಒತ್ತಾಯ ಮಾಡಿದ್ದೇವೆ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು ದಾವಣಗೆರೆ ಮಧ್ಯ …
Read More »ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ.ಸಿಎಂ:ಲಕ್ಷ್ಮಣ್ ಸವದಿ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಾರಿಗೆ ಇಲಾಖೆಗೆ 634 ಕೋಟಿ ರೂ. ಅನುದಾನ ಕೊಡಲು ಒಪ್ಪಿದ್ದಾರೆ. ತಕ್ಷಣ ಎರಡು ತಿಂಗಳ ವೇತನ ಕೊಡಲು ಸಿಎಂ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ ಎಂದು ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸವದಿ, ಸಾರಿಗೆ ಇಲಾಖೆ ಸಿಬ್ಬಂದಿಯ ಮೂರು ತಿಂಗಳ ವೇತನ ಸಮಸ್ಯೆ ಇದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ವೇತನ ಕೊಡಲು ಸಂಕಷ್ಟ …
Read More »200ಕೋಟಿ gst ವಂಚನೆ ಮಾಡಿದ್ದ 4ಜನ ಅರೆಸ್ಟ್…..!
ಬೆಂಗಳೂರು: ಗುಪ್ತಚರ(ಡಿಜಿಜಿಐ) ವಿಭಾಗ ಹಾಗೂ ಜಿಎಸ್‍ಟಿ ಬೆಂಗಳೂರು ಝೋನಾಲ್ ಯುನಿಟ್(ಬಿಝೆಡ್‍ಯು) ಇತ್ತೀಚೆಗೆ ನಡೆಸಿದ ಕಾರ್ಯಾಚರಣೆಯಲ್ಲಿ ಸುಮಾರು 200 ಕೋಟಿ ರೂಪಾಯಿ ಜಿಎಸ್‍ಟಿ ತೆರಿಗೆ ವಂಚನೆ ಮಾಡಿದ ಆರೋಪದಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಚೀನಾ ಮೂಲದ ಕಂಪನಿಗಳು ಸೇರಿದಂತೆ ಬಹುರಾಷ್ಟ್ರೀಯ ಕಂಪನಿಗಳಿಗೆ ಸೇವೆ ನೀಡಿದ ನೆಪದಲ್ಲಿ ಸುಮಾರು 1,000 ಕೋಟಿ ರೂಪಾಯಿ ಮೌಲ್ಯದ ನಕಲಿ ಇನ್‍ವೈಸ್‍ಗಳನ್ನು ಸೃಷ್ಟಿಸಲಾಗಿದೆ ಎಂದು ಆಪಾದಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಜಿಎಸ್‍ಟಿ ಗುಪ್ತಚರ …
Read More »ಸಾವಿರಾರು ಕೋಟಿ ಒಡೆಯ ಇದ್ದರೂ ತನ್ನ ಸ್ವಂತ ಜಿಲ್ಲೆಗೆ ಮನೆಗೆ ಹೋಗಲು ಕೋರ್ಟ್ ಅನುಮತಿ ಪಡೆಯಬೇಕು…
ನವದೆಹಲಿ: ಬಳ್ಳಾರಿ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೋರಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದ ಮಾಜಿ ಸಚಿವ ಜನಾರ್ಧನ ರೆಡ್ಡಿಗೆ ಹಿನ್ನಡೆಯಾಗಿದ್ದು, ಬಳ್ಳಾರಿ ಪ್ರವೇಶದ ಅರ್ಜಿಗೆ ಸಿಬಿಐ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಡಿಸೆಂಬರ್‍ನಲ್ಲಿ ಪ್ರಕರಣದ ವಿಸ್ತೃತ ವಿಚಾರಣೆ ನಡೆಸಲು ಮುಂದಾಗಿದೆ. ಬಳ್ಳಾರಿ ಸೇರಿ 3 ಜಿಲ್ಲೆಗಳ ಪ್ರವೇಶಕ್ಕೆ ಜನಾರ್ಧನ ರೆಡ್ಡಿ ಅನುಮತಿ ಕೋರಿ ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇಂದು ಸುಪ್ರೀಂಕೋರ್ಟ್ ಅರ್ಜಿ ವಿಚಾರಣೆ ನಡೆಸಿತು. …
Read More »