ಬೆಂಗಳೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) ಅಕ್ಟೋಬರ್ 3ರಂದು ಉದ್ಘಾಟನೆಗೊಳ್ಳಲಿದ್ದು, ಅ. 12ರಂದು ಜಂಬೂಸವಾರಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ದಸರಾ ಮಹೋತ್ಸವ ಸಂಬಂಧ ಸೋಮವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಆದರೆ ಈ ಬಾರಿ ದಸರಾ ಅದ್ದೂರಿಯಾಗಿ ಆಚರಿಸಲು ತೀರ್ಮಾನಿಸಲಾಗಿದೆ. ಕೊರೊನಾ ಬಂದಿದ್ದರಿಂದ ಕಳೆದ ಬಾರಿ ವಿಜೃಂಭಣೆಯಿಂದ ಆಚರಿಸಲಾಗಲಿಲ್ಲ, …
Read More »‘ಕರ್ನಾಟಕ’ದಲ್ಲಿದ್ದ ಐವರು ಬಾಂಗ್ಲಾ ನಿರಾಶ್ರಿತರಿಗೆ ‘CCA ಕಾಯ್ದೆ’ಯಡಿ ‘ಭಾರತೀಯ ಪೌರತ್ವ’
ರಾಯಚೂರು: ಕರ್ನಾಟಕದಲ್ಲಿ ವಾಸಿಸುತ್ತಿದ್ದಂತ ಐವರು ಬಾಂಗ್ಲಾ ನಿರಾಶ್ರಿತರಿಗೆ ಪೌರತ್ವ ತಿದ್ದುಪಡಿ ಕಾಯ್ದೆಯ ಅಡಿಯಲ್ಲಿ ಭಾರತೀಯ ಪೌರತ್ವವನ್ನು ನೀಡಲಾಗಿದೆ. ಕರ್ನಾಟಕದ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನ ಆರ್ ಹೆಚ್ ಕ್ಯಾಂಪ್ ಗಳಲ್ಲಿ ಐವರು ಬಾಂಗ್ಲಾ ನಿರಾಶ್ರಿತರು ವಾಸಿಸುತ್ತಿದ್ದರು. ಅವರಿಗೆ ಸಿಎಎ ಅಡಿಯಲ್ಲಿ ಈಗ ಭಾರತೀಯ ಪೌರತ್ವ ದೊರೆತಿದೆ. ಸಿಂಧನೂರು ತಾಲ್ಲೂಕಿನ ಆರ್ ಹೆಚ್ ಕ್ಯಾಂಗ್ ನ ನಿವಾಸಿಗಳಾದಂತ ರಾಮಕೃಷ್ಣನ್ ಅಭಿಕರಿ, ಸುಕುಮಾರ, ಮೊಂಡಲ್, ಬಿ.ಪ್ರಸಾದ ಗೋಲ್ಡರ್, ಜಯಂತ್ ಮೊಂಡಲ್ ಹಾಗೂ ಅದ್ವಿತ …
Read More »6.92 ಕೋಟಿ ವೆಚ್ಚದಲ್ಲಿ ವಾಣಿಜ್ಯ ಮಳಿಗೆ: ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ‘ಮೂಡಲಗಿ ಪಟ್ಟಣದಲ್ಲಿ ಪುರಸಭೆಯಿಂದ ₹6.92 ಕೋಟಿ ವೆಚ್ಚದಲ್ಲಿ ಅತ್ಯಾಧುನಿಕವಾದ ವಾಣಿಜ್ಯ ಮಳಿಗೆಯನ್ನು ನಿರ್ಮಿಸಲಾಗುವುದು’ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿನ ಪುರಸಭೆಗೆ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಐಡಿಎಸ್‌ಎಂಟಿ ಯೋಜನೆ ಅಡಿಯಲ್ಲಿ ಮಳಿಗೆಯನ್ನು ನಿರ್ಮಿಸಲಿದ್ದು, ಇದು ಬಹು ಮಹಡಿ ಕಟ್ಟಡವನ್ನು ಹೊಂದಿರಲಿದೆ. ನೆಲ ಮಾಳಿಗೆಯಲ್ಲಿ (ಬೆಸ್ ಮೆಂಟ್) ವಾಹನಗಳ ಪಾರ್ಕಿಂಗ್, ನೆಲ ಮಹಡಿಯಲ್ಲಿ 51 ಮತ್ತು ಮೊದಲ ಮಹಡಿಯಲ್ಲಿ 17 ಅಂಗಡಿಗಳು ಸೇರಿದಂತೆ …
Read More »ಖಾಲಿ ಬಾಟಲಿಯೇ ಹಿರಿ ಜೀವಕ್ಕೆ ಆಧಾರ
ವಿಜಯಪುರ(ದೇವನಹಳ್ಳಿ): ’50 ವರ್ಷದ ಹಿಂದೆ ಹಲವು ಮಂದಿಗೆ ಕೆಲಸ ಕೊಟ್ಟ ನನ್ನ ಕೈಗಳು ಈಗ ಸೋತಿವೆ. ದುಡಿಯುವ ಶಕ್ತಿಯನ್ನು ಕಳೆದುಕೊಂಡಿವೆ. ಜೀವನ ಸಾಗಿಸಲು ಬೀದಿಯಲ್ಲಿ ಸಿಗುವ ಖಾಲಿ ಬಾಟಲಿ ಮತ್ತು ರಟ್ಟನ್ನು ಹೆಕ್ಕಿ ಮಾರಿ ಒಂದೂತ್ತಿನ ಹೊಟ್ಟೆ ಹೊರೆಯುತ್ತಿದ್ದೇನೆ…’ -ಇದು ಪಟ್ಟಣದ ಈದ್ಗಾ ಮೊಹಲ್ಲಾದ ನಿವಾಸಿ 95 ವರ್ಷದ ಜಯರಾಮಯ್ಯ ಅವರ ನುಡಿ. ಬಾಗಿದ ಬೆನ್ನು, ಬಾಟಲಿ ಮತ್ತು ರಟ್ಟು ತುಂಬಿದ ಸೈಕಲ್ ಅನ್ನು ನಡುಗುತ್ತಾ ತಳುತ್ತಾ ಪಟ್ಟಣದಲ್ಲಿ ಸಾಗುವ ವೇಳೆ …
Read More »308 ಕ್ಕೇರಿದ ಮೃತರ ಸಂಖ್ಯೆ, ಡ್ರೋನ್ ಆಧಾರಿತ ರಾಡಾರ್ ಮೂಲಕ ಪತ್ತೆ ಕಾರ್ಯ
ವಯನಾಡ್ : ಭಾರೀ ಮಳೆಯಿಂದ ಉಂಟಾದ ಭೂಕುಸಿತದಿಂದ ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 308 ಕ್ಕೆ ತಲುಪಿದೆ. ಇನ್ನೂ 300 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೌಕಾಪಡೆ, ಎನ್‌ಡಿಆರ್‌ಎಫ್ ಮತ್ತು ಇತರ ರಕ್ಷಣಾ ತಂಡಗಳು ಸಹ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಇದುವರೆಗೆ ನೂರಾರು ಜನರನ್ನು ರಕ್ಷಿಸಿ ಸುರಕ್ಷಿತ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 40 ತಂಡಗಳೊಂದಿಗೆ ಶೋಧ ಕಾರ್ಯಾಚರಣೆ: ಶುಕ್ರವಾರ ಬೆಳಗ್ಗೆ ಸುಮಾರು 40 ತಂಡಗಳು ಮಂಡಕ್ಕೈ, …
Read More »ಗುಡ್ಡ ಕುಸಿತದಿಂದ ಸ್ಥಗಿತಗೊಂಡ ಅಂಕೋಲಾ – ಕುಮಟಾ ರಾ.ಹೆ 66 ಪುನರಾರಂಭ
ಅಂಕೋಲಾ: ಶಿರೂರು ಬಳಿ ಗುಡ್ಡ ಕುಸಿದ ಪರಿಣಾಮ ಕೆಲ ದಿನಗಳಿಂದ ವಾಹನ ಸಂಚಾರ ಬಂದ್ ಆಗಿದ್ದ ರಾಷ್ಟ್ರೀಯ ಹೆದ್ದಾರಿ ಇದೀಗ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಜುಲೈ 16ರಂದು ಶಿರೂರು ಬಳಿ ಹೆದ್ದಾರಿಯಲ್ಲಿ ಭೀಕರವಾಗಿ ಗುಡ್ಡಕುಸಿತ ಉಂಟಾಗಿ ಮಂಗಳೂರು – ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಬಂದ್ ಮಾಡಲಾಗಿತ್ತು. ಹೆದ್ದಾರಿಯ ಮಧ್ಯೆ ಮಣ್ಣಿನ ರಾಶಿ ಬಿದ್ದು ಮತ್ತು ,11 ಜನ ಕಣ್ಮರೆಯಾಗಿದ್ದರು. ಅದರಲ್ಲಿ 8 ಜನರ ಮೃತದೇಹ ದೊರೆತಿತ್ತು. ಇನ್ನುಳಿದವರಿಗಾಗಿ …
Read More »ವಿವಾದದ ಸುಳಿಯಲ್ಲಿ ನಟ ದರ್ಶನ್ ಬಂಧಿಸಿದ್ದACP ಚಂದನ್ ಕುಮಾರ್.
ಬೆಂಗಳೂರು: ನಟ ದರ್ಶನ್ ಬಂಧಿಸಿ ಸುದ್ದಿಯಾಗಿದ್ದ ಎಸಿಪಿ ಚಂದನ್ ಕುಮಾರ್ ವಿರುದ್ದ ಕೆಲ ಆರೋಪಗಳು ಕೇಳಿ ಬರುತ್ತಿವೆ. ನಟ ದರ್ಶನ್ ಬಂಧನವಾದ ಬೆನ್ನಲೇ ಸುದ್ದಿಯಾಗಿರುವ ಎಸಿಪಿ ಚಂದನ್ ಕುಮಾರ್ ಈಗ ದಲಿತ ವಿರೋಧಿ ಎನ್ನುವ ಆರೋಪ ಕೇಳಿ ಬಂದಿದ್ದು, ಚಂದನ್ ಅವರ ಬಗ್ಗೆ ಕೇಳಿ ಬರುತ್ತಿರುವ ಆರೋಪ ಇನ್ನೂ ಸಾಬೀತಾಗಿಲ್ಲ. ಎಸಿಪಿ ಚಂದನ್ ಕುಮಾರ್ ಅವರ ಬಗ್ಗೆ ಹರಿರಾಮ್ ಎ ಎನ್ನುವವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹೀಗೆ ಬರೆದುಕೊಂಡಿದ್ದಾರೆ. ಈತನು …
Read More »ಶಸ್ತ್ರಚಿಕಿತ್ಸೆಗಾಗಿ ರೋಗಿಗಳಿಂದ ಲಂಚಕ್ಕೆ ಬೇಡಿಕೆ
ಚಿತ್ರದುರ್ಗ: ಶಸ್ತ್ರ ಚಿಕಿತ್ಸೆಗಾಗಿ ಚಿತ್ರದುರ್ಗದ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಂತ ರೋಗಿಯೊಬ್ಬರಿಗೆ ಜನರಲ್ ಸರ್ಜನ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜನರಲ್ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಚಂದ್ರಶೇಖರ್ ಬಿನ್ ಕೃಷ್ಣಪ್ಪ ರವರು ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ …
Read More »ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ ಶಿಪ್
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?: * ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಅರ್ಹರು. * ಮೊದಲನೆಯ ಪ್ರಯತ್ನದಲ್ಲಿಯೆ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ …
Read More »ಮಹಿಳೆ ಮೇಲೆ ಪಿಎಸ್‌ಐ ಅನಿತಾ ರಾಠೋಡರಿಂದ ಹಲ್ಲೆ- ಆರೋಪ
ಚಿಕ್ಕೋಡಿ(ಬೆಳಗಾವಿ ಜಿಲ್ಲೆ): ‘ವಿಚಾರಣೆ ನೆಪದಲ್ಲಿ ಪಿಎಸ್‌ಐ ಅನಿತಾ ರಾಠೋಡ ಅವರು ನನ್ನ ಹೊಟ್ಟೆಗೆ ಒದ್ದು ಗಾಯಗೊಳಿಸಿದ್ದಾರೆ’ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಇದನ್ನು ಅಲ್ಲಗಳೆದಿರುವ ಎಸ್ಪಿ ಡಾ.ಭೀಮಾಶಂಕರ ಗುಳೇದ, ‘ಮಹಿಳೆಯ ಕೆನ್ನೆಗೆ ಹೊಡೆದಿದ್ದು ದೃಢಪಟ್ಟಿದೆ. ಹೊಟ್ಟೆಗೆ ಒದ್ದಿದ್ದು ವೈದ್ಯಕೀಯ ಪರೀಕ್ಷೆಯಲ್ಲಿ ಗೊತ್ತಾಗಿಲ್ಲ’ ಎಂದು ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಸಂತ್ರಸ್ತೆ, ತಾಲ್ಲೂಕಿನ ಖಡಕಲಾಟ ಗ್ರಾಮದ ಪೂನಂ ಮಾಯಣ್ಣವರ, ‘ನನ್ನನ್ನು ಜುಲೈ 27ರಂದು ಠಾಣೆಗೆ ಕರೆಯಿಸಿ, ಹಲ್ಲೆ ಮಾಡಿದ್ದಾರೆ. ನಿಪ್ಪಾಣಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ …
Read More »