Breaking News
Home / Uncategorized (page 650)

Uncategorized

ಮೆಜೆಸ್ಟಿಕ್‍ನಲ್ಲಿ ನೋಡ ನೋಡುತ್ತಿದ್ದಂತೆಯೇ ಧರೆಗುರುಳಿದ ಕಟ್ಟಡಗಳು!

ಬೆಂಗಳೂರು: ಕಪಾಲಿ ಚಿತ್ರಮಂದಿರದವರು ಮಾಡಿದ ಎಡವಟ್ಟಿನಿಂದ ಸಿಲಿಕಾನ್ ಸಿಟಿಯ ಮೆಜೆಸ್ಟಿಕ್ ನಲ್ಲಿ ಎರಡು ಕಟ್ಟಡಗಳು ಬಿದ್ದು ನೆಲಸಮವಾಗಿವೆ. ಇತ್ತೀಚೆಗೆ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಮಲ್ಟಿಪ್ಲೆಕ್ಸ್ ಕಟ್ಟಡ ನಿರ್ಮಿಸಲು ಕಪಾಲಿ ಥಿಯೇಟರ್ ಅನ್ನು ಒಡೆದು ಹಾಕಲಾಗಿತ್ತು. ಈಗ ಕಪಾಲಿ ಚಿತ್ರಮಂದಿರವಿದ್ದ ಜಾಗದಲ್ಲಿ ಹೊಸ ಮಲ್ಟಿಪ್ಲೆಕ್ಸ್ ಕಟ್ಟಡ ಕಟ್ಟಲಾಗುತ್ತದೆ. ಆದರೆ ಈ ಕಟ್ಟಡ ನಿರ್ಮಿಸಲು 80 ಅಡಿ ಆಳದಲ್ಲಿ ಗುಂಡಿ ತೆಗೆಯಲಾಗಿದೆ. ಮಲ್ಟಿಪ್ಲೆಕ್ಸ್ ಕಟ್ಟಡಕ್ಕೆ ಅಡಿಪಾಯ ಹಾಕಲು 80 ಅಡಿ ಆಳವಾಗಿ ಗುಂಡಿಯನ್ನು …

Read More »

ಸಂಜಯ್‌ ದತ್‌ ವಿರುದ್ಧ ಹೈಕೋರ್ಟ್‌ಗೆ ಹೋದ ರಾಜೀವ್‌ಗಾಂಧಿ ಹಂತಕ!

ಮುಂಬೈ: ಬಾಲಿವುಡ್‌ ನಟ ಸಂಜಯ್‌ ದತ್‌ಗೆ ನಾಳೆ  60ನೇ ಹುಟ್ಟುಹಬ್ಬದ ಸಂಭ್ರಮ. ಆದರೆ ಅದರ ಮುನ್ನಾದಿನವೇ ಅವರಿಗೆ ಶಾಕ್‌ ಆಗುವಂಥ ವಿಚಾರವೊಂದು ನಡೆದಿದೆ. ಅದೇನೆಂದರೆ ಅವರ ವಿರುದ್ಧ ಇಂದು ಬಾಂಬೆ ಹೈಕೋರ್ಟ್‌ಗೆ ಕೇಸೊಂದು ದಾಖಲಾಗಿದೆ. ಈ ಕೇಸ್‌ ದಾಖಲು ಮಾಡಿರುವವರು ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಜಿ ಪೆರರಿವಾಲನ್‌. ಅಷ್ಟಕ್ಕೂ ಈತನಿಗೂ, ಸಂಜಯ್‌ ದತ್‌ಗೂ ಸಂಬಂಧ ಏನೆಂದರೆ, ರಾಜೀವಗಾಂಧಿ ಹತ್ಯೆ ಪ್ರಕರಣದಲ್ಲಿ ಅವರನ್ನು ಹತ್ಯೆ ಮಾಡಲು …

Read More »

ನಾಲ್ಕು ಜಿಲ್ಲೆಗಳಿಗೆ ಸಚಿವ ಸ್ಥಾನ ಮರೀಚಿಕೆ?

ಕಲಬುರ್ಗಿ: ಸಚಿವ ಸ್ಥಾನಕ್ಕೆ ತೀವ್ರ ಲಾಬಿ ನಡೆಸಿದ್ದ ಮೂವರೂ ಸೇರಿದಂತೆ ಕಲ್ಯಾಣ ಕರ್ನಾಟಕದ ಐವರು ಶಾಸಕರನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ನಿಗಮ-ಮಂಡಳಿಗೆ ನೇಮಕ ಮಾಡಿದ್ದಾರೆ. ಆ ಮೂಲಕ ಈ ಜಿಲ್ಲೆಗಳಿಗೆ ಸದ್ಯ ಸಚಿವ ಸ್ಥಾನ ದೊರೆಯುವುದಿಲ್ಲ ಎಂಬ ಸಂದೇಶವೂ ರವಾನೆಯಾದಂತಾಗಿದೆ. ಬಳ್ಳಾರಿ ಜಿಲ್ಲೆಯ ಆನಂದ ಸಿಂಗ್‌ ಹಾಗೂ ಬೀದರ್‌ ಜಿಲ್ಲೆಯ ಏಕೈಕ ಬಿಜೆಪಿ ಶಾಸಕ ಪ್ರಭು ಚವ್ಹಾಣ್‌ ಅವರು ಸಚಿವರಾಗಿದ್ದಾರೆ. ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ ಜಿಲ್ಲೆಗಳಿಗೆ ಸಂಪುಟದಲ್ಲಿ ಪ್ರಾತಿನಿಧ್ಯ …

Read More »

ಜೈಲಿನಲ್ಲೇ ಮರ್ಡರ್​ಗೆ ಸ್ಕೆಚ್; ₹1 ಕೋಟಿ ಸುಪಾರಿ ಪಡೆದಿದ್ದ ಆರೋಪಿಗಳು ಅರೆಸ್ಟ್​​

ಬೆಂಗಳೂರು: ಜೈಲಿನಲ್ಲೇ ಇದ್ದು ಮರ್ಡರ್ ಮಾಡೋಕೆ ಸ್ಕೆಚ್ ಹಾಕಿದ್ದ ಖತರ್ನಾಕ್ ಗ್ಯಾಂಗ್​ನ ಒಂಬತ್ತು ಜನ ಆರೋಪಿಗಳನ್ನು ಪೊಲೀಸರು ಹೆರೆಮುರಿ ಕಟ್ಟಿದ್ದಾರೆ. ಕಾಮಾಕ್ಷಿಪಾಳ್ಯ ನಿವಾಸಿ ವರಲಕ್ಷ್ಮೀ ಎಂಬುವವರ ಪತಿ ಗೋವಿಂದೇ ಗೌಡನ ಹತ್ಯೆಯ ಪ್ರತೀಕಾರವಾಗಿ ಕೊಲೆ ಮಾಡಿದ ಆರೋಪಿಗಳ ಹತ್ಯೆಗೆ ವರಲಕ್ಷ್ಮೀ ಸುಪಾರಿ ನೀಡಿದ್ದರು ಎನ್ನಲಾಗಿದೆ. ವರಲಕ್ಷ್ಮೀ ಹಾಗೂ ಗೋವಿಂದೇಗೌಡನಿಗೆ ಆತ್ಮೀಯನಾಗಿದ್ದ ಚಿಕ್ಕತಿಮ್ಮೇಗೌಡ, ತಾನು ಬೆಳೆಯುತ್ತಿದ್ದಂತೆ ಇಬ್ಬರನ್ನ ದೂರ ಮಾಡಿದ್ದ. ವರಲಕ್ಷ್ಮೀ ದಂಪತಿಗೆ ಮಕ್ಕಳಿಲ್ಲದ ಕಾರಣ ಚಿಕ್ಕತಿಮ್ಮೇಗೌಡನನ್ನು ಬೆಳೆಸಿ, ಆತನಿಗೆ ಒಳ್ಳೆಯ …

Read More »

ಹೋಟೆಲ್​​ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಮೂವರು ಅರೆಸ್ಟ್​

ಬೆಂಗಳೂರು: ಹೈಟೆಕ್ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಗೌರವ್, ಹೀನಾ ಹಾಗೂ ಅಣ್ಣಪ್ಪ ಬಂಧಿತರು. ಆರೋಪಿಗಳು ಲಾಡ್ಜ್ ನಡೆಸಲು ಪರವಾನಗಿ ಪಡೆದು ಅನಧಿಕೃತವಾಗಿ ವೇಶ್ಯಾವಾಟಿಕೆಗೆ ಇಳಿದಿದ್ದರು. ಕೆಲಸದ ಆಮಿಷವೊಡ್ಡಿ ಹೊರರಾಜ್ಯದಿಂದ ಹುಡುಗಿಯರನ್ನು ಕರೆಯಿಸಿ ಕಂಫರ್ಟ್ ಹೋಟೆಲ್​​​ನಲ್ಲಿ ದಂಧೆ ನಡೆಸುತ್ತಿದ್ದರು. ಆನ್​ಲೈನ್​​ನಲ್ಲಿ ಮೊಬೈಲ್ ನಂಬರ್ ಹಾಕಿಕೊಂಡು, ಟೆಲಿಕಾಲರ್ ಮೂಲಕ ಗಿರಾಕಿಗಳನ್ನ ಕರೆಸುತ್ತಿದ್ದರು. ಇದು ಯಾರಿಗೂ ಗೊತ್ತಾಗದಂತೆ ಒಂದೊಂದು ನಂಬರ್ ಯ್ಯೂಸ್ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಖಚಿತ …

Read More »

ಅಕ್ರಮ ಹಣ ವರ್ಗಾವಣೆ ಪ್ರಕರಣ ; ಹಲವೆಡೆ ಇಡಿ ದಾಳಿ

ಮುಂಬೈ/ಹೈದರಾಬಾದ್, ಜು.28-ಮುಂಬೈ ವಿಮಾನ ನಿಲ್ದಾಣಗಳ ನಿರ್ವಹಣೆ ವಿಚಾರದಲ್ಲಿ ನಡೆದಿದೆ ಎನ್ನಲಾದ 705 ಕೋಟಿ ರೂ. ಗಳ ಅವ್ಯವಹಾರ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಹಲವಡೆ ದಾಳಿಗಳನ್ನು ನಡೆಸಿದೆ. ಜಿವಿಕೆ ಗ್ರೂಪ್, ಮುಂಬೈ ಇಂಟರ್‍ನ್ಯಾಷನಲ್ ಏರ್ ಪೋರ್ಟ್ ಲಿಮಿಟೆಡ್ (ಎಂಐಎಎಲ್) ಮತ್ತು ಇತರ ಸಂಸ್ಥೆಗಳು ಈ ಅವ್ಯವಹಾರದಲ್ಲಿ ಶಾಮೀಲಾಗಿದ್ದು, ಇಂದು ಬೆಳಗ್ಗೆಯಿಂದ ವಾಣಿಜ್ಯ ರಾಜಧಾನಿ ಮುಂಬೈ ಮತ್ತು ಮುತ್ತಿನ ನಗರಿ ಹೈದರಾಬಾದ್‍ನ ವಿವಿಧೆಡೆ …

Read More »

ಕೊರೊನಾ ಸೋಂಕಿತ ಮಹಿಳೆಯರ ಮೇಲೂ ಕಾಮುಕರ ಕಣ್ಣು.!

ನೋಯ್ಡಾ(ಉ.ಪ್ರ.),ಜು.28- ಡೆಡ್ಲಿ ಕೊರೊನಾ ಸೋಂಕಿನಿಂದ ನರಳುತ್ತಾ ಆಸ್ಪತ್ರೆಗಳ ಪ್ರತ್ಯೇಕ ಕೊಠಡಿಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಯರ ಮತ್ತು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಪ್ರಕರಣಗಳು ದೇಶದ ಕೆಲವಡೆ ವರದಿಯಾಗುತ್ತಿದೆ. ಕಳೆದ ವಾರ ದೆಹಲಿಯಲ್ಲಿ ಅಪ್ರಾಪ್ತೆಯ ಮೇಲೆ ಇಬ್ಬರು ಕಾಮುಕರು ಅತ್ಯಾಚಾರ ನಡೆಸಿದ ಪ್ರಕರಣದ ಬೆನ್ನಲ್ಲೇ ಉತ್ತರ ಪ್ರದೇಶದ ನೋಯ್ಡಾದಲ್ಲಿ ಮತ್ತೊಂದು ಲೈಂಗಿಕ ಕಿರುಕುಳ ಘಟನೆ ವರದಿಯಾಗಿದೆ. ನೋಯ್ಡಾದ ಖಾಸಗಿ ಅಸ್ಪತ್ರೆಯೊಂದರ ಐಸೋಲೇಷನ್ ವಾರ್ಡ್‍ನಲ್ಲಿ ಕೋವಿಡ್-19 ವೈರಾಣು ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ 20 …

Read More »

ವಿಶ್ವನಾಥ್, ಎಂಟಿಬಿಗೆ ಸಚಿವ ಸ್ಥಾನ ಸಿಕ್ಕರೆ ಒಳ್ಳೆಯದು: ಶ್ರೀಮಂತ ಪಾಟೀಲ್

ಧಾರವಾಡ: ಹೆಚ್. ವಿಶ್ವನಾಥ್ ಹಾಗೂ ಎಂಟಿಬಿ ನಾಗರಾಜ್ ತ್ಯಾಗ ಮಾಡಿ ಬಂದವರು. ಈ ಸರ್ಕಾರ ರಚನೆಗೆ ಅವರ ಸಹಕಾರ ಬಹಳ ಸಿಕ್ಕಿದೆ. ಅವರಿಗೆ ಸಚಿವ ಸ್ಥಾನ ಸಿಕ್ಕರೆ ಒಳ್ಳೆಯದು ಎಂದು ಅಲ್ಪ ಸಂಖ್ಯಾತ ಇಲಾಖೆಯ ಸಚಿವ ಶ್ರೀಮಂತ ಪಾಟೀಲ್ ಹೇಳಿದರು. ಧಾರವಾಡದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ನಮ್ಮ ಪಕ್ಷದ ಮುಖಂಡರು ಎಲ್ಲ ಸರಿ ಪಡಿಸ್ತಾರೆ. ಯಾವುದೇ ತೊಂದರೆ ಆಗದಂತೆ ನೋಡಿಕೊಳ್ತಾರೆ ಎಂದು ಹೇಳಿದರು. ನಿಗಮ …

Read More »

ವಿಡಿಯೋ ಕಾಲ್ ಮಾಡಿ ವೈದ್ಯರ ಸಲಹೆ ಪಡೆದು ಹೆರಿಗೆ ಮಾಡಿಸಿದ ಮಹಿಳೆಯರು

ಹಾವೇರಿ : ವಿಡಿಯೋ ಕಾಲ್ ಮೂಲಕ ವೈದ್ಯರ ಸಲಹೆ ಪಡೆದು ಮಹಿಳೆಯರು ಹೆರಿಗೆ ಮಾಡಿಸಿರುವ ಘಟನೆ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ 2:30ರ ಸುಮಾರಿಗೆ ವಾಸವಿ ಪತ್ತೆಪೂರ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಆದ್ರೆ ಸಂಡೇ ಲಾಕ್ ಡೌನ್ ಇದ್ದ ಕಾರಣ ಇಡೀ ನಗರವೇ ಸ್ತಬ್ಧವಾಗಿತ್ತು. ಹೀಗಾಗಿ ವಾಸವಿ ಪತ್ತೆಪೂರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸಾಧ್ಯವಾಗಿರಲ್ಲಿಲ್ಲ. ಇತ್ತ ಮಹಿಳೆಯ ಆಕ್ರಂದನ ಮತ್ತು ಕಿರುಚುವುದನ್ನ ಕಂಡ ಸ್ಥಳೀಯ …

Read More »

24 ಗಂಟೆಯಲ್ಲಿ 654 ಜನರು ಸಾವು ಇಂದು ವಿಶ್ವದಲ್ಲೇ ಅತಿ ಹೆಚ್ಚು.

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ. ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15 ಲಕ್ಷದ ಹತ್ತಿರ ಬಂದಿದೆ. ಸಾವಿನ ಸಂಖ್ಯೆಯೂ ವೇಗವಾಗಿ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 47,704 ಹೊಸ ಸೋಂಕು ಪ್ರಕರಣಗಳು ಕಾಣಿಸಿಕೊಂಡಿವೆ. 24 ಗಂಟೆಯಲ್ಲಿ 654 ಜನರು ಸಾವನ್ನಪ್ಪಿದ್ದಾರೆ.   ಈ ಸಾವುಗಳು ಇಂದು ವಿಶ್ವದಲ್ಲೇ ಅತಿ ಹೆಚ್ಚು. ಅಮೆರಿಕ ಮತ್ತು ಬ್ರೆಜಿಲ್‌ನಲ್ಲಿ ಸಾವಿನ ಸಂಖ್ಯೆ ಭಾರತಕ್ಕಿಂತ ಕಡಿಮೆಯಿದೆ. ಯುಎಸ್ ಮತ್ತು ಬ್ರೆಜಿಲ್ ನಲ್ಲಿ ಕಳೆದ …

Read More »