Breaking News

Uncategorized

ನ.26ರಂದು ಆಟೋ-ಟ್ಯಾಕ್ಸಿ ಚಾಲಕರ ಮುಷ್ಕರ

ಬೆಂಗಳೂರು, ನ.24- ಕೋವಿಡ್ ಸಂಕಷ್ಟದಲ್ಲಿರುವ ಆಟೋ ಮತ್ತು ಟ್ಯಾಕ್ಸಿ ವಾಹನಗಳ ಸಾಲ ಮನ್ನಾ ಮಾಡಬೇಕು. ಚಾಲಕರ ಪುನಶ್ಚೇತನಕ್ಕೆ ಜಾತಿವಾರು ನಿಗಮಗಳಿಂದ ನೇರ ಸಾಲ ಯೋಜನೆಯಡಿ ಸಾಲ ನೀಡುವುದು, ಖಾಸಗಿ ಲೇವಾದೇವಿದಾರರಿಂದಾಗುವ ಕಿರುಕುಳ ತಪ್ಪಿಸುವುದು ಸೇರಿದಂತೆ ಹಲವಾರು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳ ಐಕ್ಯ ಹೋರಾಟ ಸಮಿತಿ (ಜೆಸಿಟಿಯು) ನ.26ರಂದು ನಗರದಲ್ಲಿ ಮುಷ್ಕರ ನಡೆಸಲು ತೀರ್ಮಾನಿಸಿದೆ. ಈ ಸಂಬಂಧ ಇಂದು ಪತ್ರಿಕಾಗೋಷ್ಠಿ ನಡೆಸಿದ ಜೆಸಿಟಿಯು ಸಂಚಾಲಕ …

Read More »

ರೋಷನ್ ಬೇಗ್ ಬೆನ್ನಲ್ಲೇ ಮತ್ತೊಬ್ಬ ಶಾಸಕರಿಗೆ ನಡುಕ ಶುರು

ಬೆಂಗಳೂರು, ನ.23- ಐಎಂಎ ಹಗರಣಕ್ಕೆ ಸಂಬಂಸಿದಂತೆ ಮಾಜಿ ಸಚಿವ ರೋಷನ್ ಬೇಗ್ ಅವರನ್ನು ಸಿಬಿಐ ಬಂಸಿರುವ ಹಿನ್ನೆಲೆಯಲ್ಲಿ ನಗರದ ಶಾಸಕರೊಬ್ಬರಿಗೆ ನಡುಕ ಉಂಟಾಗಿದೆ. ನಗರದ ಈ ಪ್ರಭಾವಿ ಶಾಸಕರ ಹೆಸರು ಐಎಂಎ ಹಗರಣದಲ್ಲಿ ಕೇಳಿ ಬಂದಿತ್ತು. ಎಸ್‍ಐಟಿ ಈಗಾಗಲೇ ಅವರನ್ನು ವಿಚಾರಣೆಗೊಳಪಡಿಸಿ ಕೆಲವು ಮಾಹಿತಿ ಗಳನ್ನು ಪಡೆದುಕೊಂಡಿದೆ. ಈಗ ತನಿಖೆ ನಡೆಸುತ್ತಿರುವ ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಈ ಪ್ರಭಾವಿ ಶಾಸಕರಿಗೆ ಸದ್ಯದಲ್ಲಿಯೇ ನೋಟೀಸ್ ನೀಡಬಹುದು. ವಿಚಾರಣೆ ಸಂದರ್ಭದಲ್ಲಿ ಹಗರಣ ಸಂಬಂಧ …

Read More »

ನಕ್ಸಲ್ ಚಟುವಟಿಕೆ ವಿರುದ್ಧ ನಿರಂತರ ಕಾರ್ಯಾಚರಣೆ ನಡೆಯುತ್ತಿದೆ – ಐಜಿ ವಿಫುಲ್ ಕುಮಾರ್

ಮಡಿಕೇರಿ: ಕೇರಳ-ಕೊಡಗಿನ ಗಡಿ ಭಾಗದಲ್ಲಿ ನಕ್ಸಲ್ ಚಟುವಟಿಕೆ ವಿರುದ್ಧ ಎಎನ್‍ಎಫ್, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ನಿರಂತರವಾಗಿ ಕಾರ್ಯಾಚರಣೆ ನಡೆಸುತ್ತಿದೆ ಎಂದು ಐಜಿ ವಿಫುಲ್ ಕುಮಾರ್ ಹೇಳಿದ್ದಾರೆ. ಮಡಿಕೇರಿಯಲ್ಲಿ ಮಾದಕ ವಸ್ತು, ಅಪರಾಧ ತಡೆ ಕುರಿತು ಜಿಲ್ಲಾ ಪೊಲೀಸ್ ಇಲಾಖೆಯಿಂದ ನಗರದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಗೃತಿ ಜಾಥಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕೊರೊನಾ ಸಂದರ್ಭದಲ್ಲಿ ಜಿಲ್ಲೆಯ ಜನತೆ ಆತ್ಮಶಿಸ್ತಿನಿಂದ ವರ್ತಿಸಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಹೇಳುತ್ತೇನೆ ಎಂದರು. …

Read More »

ರಾಜಕುಮಾರ ಸಿನಿಮಾ ಮೂಲಕ ಪರಿಚಿತರಾಗಿರುವ ತಮಿಳು ನಟಿ ಪ್ರಿಯಾ ಆನಂದ್ ವಿಭಿನ್ನ ಫೋಟೋ ಶೂಟ್

ಬೆಂಗಳೂರು: ನಟ, ನಟಿಯರಿಗೆ ಫೋಟೋ ಶೂಟ್ ಎಂದರೆ ಹಬ್ಬವಿದ್ದಂತೆ. ಹಲವರು ವಿವಿಧ ರೀತಿಯ, ಇನ್ನೂ ಹಲವರು ಅಚ್ಚರಿ ಪಡುವ ರೀತಿ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಾರೆ. ಇದೀಗ ರಾಜಕುಮಾರ ಸಿನಿಮಾ ಮೂಲಕ ಪರಿಚಿತರಾಗಿರುವ ತಮಿಳು ನಟಿ ಪ್ರಿಯಾ ಆನಂದ್ ಫೋಟೋ ತಮ್ಮ ವಿಭಿನ್ನ ಫೋಟೋ ಶೂಟ್ ಮೂಲಕ ಸುದ್ದಿಯಾಗಿದ್ದಾರೆ. https://www.instagram.com/p/CH6_56lJ-an/?utm_source=ig_embed   ರಾಜಕುಮಾರ ಸಿನಿಮಾ ಬಳಿಕ ಜೇಮ್ಸ್ ಸಿನಿಮಾ ಮೂಲಕ ಪುನೀತ್ ರಾಜ್‍ಕುಮಾರ್ ಜೊತೆಗೆ ಪ್ರಿಯಾ ಆನಂದ್ ರೊಮ್ಯಾನ್ಸ್ ಮಾಡುತ್ತಿದ್ದಾರೆ. ಜೇಮ್ಸ್ …

Read More »

ಓವೈಸಿಗೆ ಹಾಕುವ ಪ್ರತಿಯೊಂದು ಮತ ದೇಶದ ವಿರುದ್ಧ:

ಹೈದರಾಬಾದ್: ಅಸಾದುದ್ದಿನ್ ಓವೈಸಿ ಮೊಹಮ್ಮದ್ ಅಲಿ ಜಿನ್ನಾನ ಅವತಾರವಾಗಿದ್ದು, ಅವರ ಪಕ್ಷಕ್ಕೆ ಹಾಕುವ ಪ್ರತಿಯೊಂದು ಮತ ದೇಶದ ವಿರುದ್ಧವಾಗಿದೆ ಎಂದು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಗುಡುಗಿದ್ದಾರೆ. ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಗುಡುಗಿದ್ದ ತೇಜಸ್ವಿ ಸೂರ್ಯ, ಇದೀಗ ಹೈದಾರಾಬಾದ್‍ನಲ್ಲಿ ಅಸಾದುದ್ದಿನ್ ಓವೈಸಿ ವಿರುದ್ಧ ಹರಿಹಾಯ್ದಿದ್ದಾರೆ. ಮುಂದಿನ ತಿಂಗಳು ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆ ಇರುವ ಹಿನ್ನೆಲೆ ಬಿಜೆಪಿ ಪರ ತೇಜಸ್ವಿ …

Read More »

ಕಲಿಕಾ ರಹಿತ ವರ್ಷ(zero academic year)ದ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ,: ಸುರೇಶ್‍ಕುಮಾರ್

ಬೆಂಗಳೂರು: ಕಲಿಕಾ ರಹಿತ ವರ್ಷ(zero academic year)ದ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ, ಇಲಾಖೆಯಲ್ಲಿ ಈ ಪರಿಕಲ್ಪನೆಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಯಾವುದೇ ತರಗತಿಯ ಮಕ್ಕಳು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕೆಂಬ ಉದ್ದೇಶದಿಂದಲೇ ಶಿಕ್ಷಣ ಇಲಾಖೆಯು ಪರ್ಯಾಯ ಬೋಧನಾ ಕ್ರಮಗಳನ್ನು ಚಾಲನೆಯಲ್ಲಿಟ್ಟಿದೆ. ಇಂದಿನಿಂದ ಚಂದನ ವಾಹಿನಿಯಲ್ಲಿ ಪ್ರಾರಂಭವಾಗಿರುವ ಐದರಿಂದ ಏಳನೇ ತರಗತಿಯ ಬೋಧನಾ ತರಗತಿಗಳು ಈ ಪ್ರಯತ್ನದ ಭಾಗವಾಗಿದೆ …

Read More »

ಸಾಲ ಮರುಪಾವತಿ ಮಾಡುವುದಾಗಿ 16 ವರ್ಷದ ಹುಡುಗಿಯನ್ನು ಮನೆಗೆ ಕರೆಸಿಕೊಂಡು ಕಾಮುಕನ ಅತ್ಯಾಚಾರ

ಕೋಲ್ಕತ್ತಾ: ಸಾಲ ಮರುಪಾವತಿ ಮಾಡುವುದಾಗಿ 16 ವರ್ಷದ ಹುಡುಗಿಯನ್ನು ಮನೆಗೆ ಕರೆಸಿಕೊಂಡು ಕಾಮುಕ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. ಕೋಲ್ಕತ್ತಾದ ಗೋವಿಂದಪುರ ಕಾಲೋನಿಯಲ್ಲಿ ಘಟನೆ ನಡೆದಿದ್ದು, ತಾನು ನೀಡಬೇಕಿದ್ದ 4 ಸಾವಿರ ರೂ. ಹಿಂದಿರುಗಿಸುವುದಾಗಿ ಬಾಲಕಿಯನ್ನು ಮನೆಗೆ ಕರೆದಿದ್ದು, ಈ ವೇಳೆ ಅತ್ಯಾಚಾರ ಎಸಗಿದ್ದಾನೆ. ಆರೋಪಿಯನ್ನು ಅಬೀರ್ ನಾಸ್ಕರ್ ಅಲಿಯಾಸ್ ನಾಂಟು ಎಂದು ಗುರುತಿಸಲಾಗಿದೆ. ಈ ಹಿಂದೆ ವನ್ಯಜೀವಿ ಕಾಯ್ದೆ ಉಲ್ಲಂಘನೆಯಡಿ ಆರೋಪಿಯನ್ನು ಬಂಧಿಸಲಾಗಿತ್ತು. ಈತ ಹಲ್ಲಿಗಳನ್ನು ಮಾರಾಟ ಮಾಡುವ …

Read More »

ಕ್ರಿಕೆಟ್ ಟೂರ್ನಾಮೆಂಟ್ ಪಂದ್ಯದಲ್ಲಿ ವಿಜೇತರಾದ ತಂಡಗಳಿಗೆ ಯುವ ದುರೀಣ ರಾಹುಲ್ ಜಾರಕಿಹೊಳಿ ಸೋಮವಾರ ಬಹುಮಾನ್ ವಿತರಿಸಿದರು.

ಯಮಕನಮರಡಿ : ಹುದಲಿ ಗ್ರಾಮದಲ್ಲಿ ಇಕ್ತಾ ಗ್ರುಪ್ ಟ್ರೋಪಿಯಿಂದ ಭಾನುವಾರ ಆಯೋಜಿಸಿದ್ದ ಕ್ರಿಕೆಟ್ ಟೂರ್ನಾಮೆಂಟ್ ಪಂದ್ಯದಲ್ಲಿ ವಿಜೇತರಾದ ತಂಡಗಳಿಗೆ ಯುವ ದುರೀಣ ರಾಹುಲ್ ಜಾರಕಿಹೊಳಿ ಸೋಮವಾರ ಬಹುಮಾನ್ ವಿತರಿಸಿದರು. ಪ್ರಥಮ  ಸಿದ್ದನಹಳ್ಳಿ  , ದ್ವಿತಿಯ ಗುಡ್ರ್ಯಾನೂರ, ತೃತಿಯ ಕಬಲಾಪುರ ಗ್ರಾಮದ ತಂಡಗಳು ಬಹುಮಾನ ಪಡೆದರು. ವಿರುಪಾಕ್ಷಿ ಮಜಗಿ, ಅಡಿವೇಪ್ಪ ಮಾಳಗಿ, ಅಜ್ಜಪ್ಪ ಮಳಗಲಿ, ರಾಮಣ್ಣ ಗುಳ್ಳಿ, ಪ್ರಕಾಶ ಪಾಟೀಲ, ಬಾಳೇಶ ದಾಸನಟ್ಟಿ, ಯಲ್ಲಪ್ಪ ತಲ್ಲೂರಿ,ಅಡಿವೇಪ್ಪ ಗಿಡಗೇರಿ, ಮಾರುತಿ ಬೇಟಗೇರಿ, ಸಾಬೀರ …

Read More »

ಚುನಾವಣೆಯಲ್ಲಿ ಸೋಲು ಕಾಣುತ್ತಿದ್ದೇವೆ ಇದಕ್ಕೆ ಕಾರಣ ಇವಿಎಂ ಮಷಿನ್:ಶಿವರಾಜ ತಂಗಡಗಿ ಆರೋಪ

ಕೊಪ್ಪಳ :  ದೇಶದಲ್ಲಿ ಕಾಂಗ್ರೆಸ್ ಗೆ ವ್ಯಾಪಕ ಬೆಂಬಲ ಇದೆ. ಆದರೂ ಚುನಾವಣೆಯಲ್ಲಿ ಸೋಲು ಕಾಣುತ್ತಿದ್ದೇವೆ ಇದಕ್ಕೆ ಕಾರಣ ಇವಿಎಂ ಮಷಿನ್ ದೋಷ ಎಂದು ಮಾಜಿ ಸಚಿವ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಆರೋಪಿಸಿದ್ದಾರೆ. ನಗರದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು, ಬಿಜೆಪಿ ಸರ್ಕಾರ ಆಡಳಿತವನ್ನು ದುರುಪಯೋಗ ಪಡೆದುಕೊಳ್ಳುತ್ತಿದೆ.  ಇವಿಎಂ ಮಷಿನ್ ಗಳನ್ನು ದುರುಪಯೋಗ ಪಡೆದುಕೊಳ್ಳುತ್ತಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರುಗಳನ್ನು ಸಲ್ಲಿಕೆಯಾಗಿವೆ.  ಈ ಬಗ್ಗೆ ಕಾಂಗ್ರೆಸ್ ಸಹ ಮಷಿನ್ …

Read More »

ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಪೊಲೀಸರು ಯುವಕನ ತಂದೆ, ತಾಯಿಯನ್ನು ಥಳಿಸಿದ್ದಾರೆ ಎಂಬ ಗಂಭೀರ ಆರೋಪ

ಕಲಬುರಗಿ: ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಪೊಲೀಸರು ಯುವಕನ ತಂದೆ, ತಾಯಿಯನ್ನು ಥಳಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಲಬುರಗಿ ಮಹಿಳಾ ಠಾಣೆಯ ಪೊಲೀಸರು ಯುವಕನ ಪೋಷಕರಿಗೆ ಥಳಿಸಿದ್ದು, ಯುವಕ ಅಯ್ಯಪ್ಪ ಸ್ವಾಮಿ ತಂದೆ ತುಕಾರಾಮ್ ಮತ್ತು ತಾಯಿ ಸುಜಾತ ಅವರನ್ನು ಪೊಲೀಸ್ ಠಾಣೆಯಲ್ಲೇ ಮನ ಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಿಂದ ಪೋಷಕರನ್ನು ಕರೆಸಿ ಪೊಲೀಸರು ಹಲ್ಲೆ ಮಾಡಿದ್ದಾರೆ. ಕಲಬುರಗಿಯ ಯುವತಿ ವಿಜಯಪುರ ಯುವಕನ ಮಧ್ಯೆ …

Read More »