ಕೊಪ್ಪಳ : ದೇಶದಲ್ಲಿ ಕಾಂಗ್ರೆಸ್ ಗೆ ವ್ಯಾಪಕ ಬೆಂಬಲ ಇದೆ. ಆದರೂ ಚುನಾವಣೆಯಲ್ಲಿ ಸೋಲು ಕಾಣುತ್ತಿದ್ದೇವೆ ಇದಕ್ಕೆ ಕಾರಣ ಇವಿಎಂ ಮಷಿನ್ ದೋಷ ಎಂದು ಮಾಜಿ ಸಚಿವ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಆರೋಪಿಸಿದ್ದಾರೆ. ನಗರದಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಆಡಳಿತವನ್ನು ದುರುಪಯೋಗ ಪಡೆದುಕೊಳ್ಳುತ್ತಿದೆ. ಇವಿಎಂ ಮಷಿನ್ ಗಳನ್ನು ದುರುಪಯೋಗ ಪಡೆದುಕೊಳ್ಳುತ್ತಿರುವ ಬಗ್ಗೆ ಚುನಾವಣಾ ಆಯೋಗಕ್ಕೆ ದೂರುಗಳನ್ನು ಸಲ್ಲಿಕೆಯಾಗಿವೆ. ಈ ಬಗ್ಗೆ ಕಾಂಗ್ರೆಸ್ ಸಹ ಮಷಿನ್ …
Read More »ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಪೊಲೀಸರು ಯುವಕನ ತಂದೆ, ತಾಯಿಯನ್ನು ಥಳಿಸಿದ್ದಾರೆ ಎಂಬ ಗಂಭೀರ ಆರೋಪ
ಕಲಬುರಗಿ: ಪ್ರೇಮಿಗಳು ಓಡಿ ಹೋಗಿದ್ದಕ್ಕೆ ಪೊಲೀಸರು ಯುವಕನ ತಂದೆ, ತಾಯಿಯನ್ನು ಥಳಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಲಬುರಗಿ ಮಹಿಳಾ ಠಾಣೆಯ ಪೊಲೀಸರು ಯುವಕನ ಪೋಷಕರಿಗೆ ಥಳಿಸಿದ್ದು, ಯುವಕ ಅಯ್ಯಪ್ಪ ಸ್ವಾಮಿ ತಂದೆ ತುಕಾರಾಮ್ ಮತ್ತು ತಾಯಿ ಸುಜಾತ ಅವರನ್ನು ಪೊಲೀಸ್ ಠಾಣೆಯಲ್ಲೇ ಮನ ಬಂದಂತೆ ಥಳಿಸಿದ್ದಾರೆ ಎಂದು ಆರೋಪಿಸಲಾಗಿದೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಿಂದ ಪೋಷಕರನ್ನು ಕರೆಸಿ ಪೊಲೀಸರು ಹಲ್ಲೆ ಮಾಡಿದ್ದಾರೆ. ಕಲಬುರಗಿಯ ಯುವತಿ ವಿಜಯಪುರ ಯುವಕನ ಮಧ್ಯೆ …
Read More »ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ
ಬೆಂಗಳೂರು: ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ ರಾಜ್ಯ ಸರ್ಕಾರ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬೆನ್ನಲ್ಲೇ ಇತ್ತೀಚೆಗೆ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮತಿ ಸೂಚಿಸಿದ್ದರು. ಆದರೆ ಅನುದಾನದ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿರಲಿಲ್ಲ. ಇದೀಗ ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ ಅನುದಾನ ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
Read More »ವಿನಯ್ ಕುಲ್ಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ
ಧಾರವಾಡ: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಮಾಜಿ ಸಚಿವ ವಿನಯ್ ಕುಲ್ಕರ್ಣಿ ಅವರ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದೆ. ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲ್ಕರ್ಣಿಯವರನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಧಾರವಾಡದ 3ನೇ ಹೆಚ್ಚುವರಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ವಿನಯ್ ಕುಲ್ಕರ್ಣಿಯವರನ್ನು ಇನ್ನಷ್ಟು ವಿಚಾರಣೆ ನಡೆಸಲಿರುವ ಅಗತ್ಯವಿರುವುದರಿಂದ ಮತ್ತಷ್ಟು ದಿನಗಳ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ ಸಿಬಿಐ …
Read More »ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ.
ರಾಯಚೂರು: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ಆಯೋಜಿಸಿರುವ ಬೃಹತ್ ಕಾಂಗ್ರೆಸ್ ಸಮಾವೇಶಕ್ಕೆ ಮಸ್ಕಿ ಕ್ಷೇತ್ರದ ವಿವಿಧೆಡೆಯಿಂದ ಸಾವಿರಾರು ಬೆಂಬಲಿಗರು ಸಮಾವೇಶದಲ್ಲಿ ನೆರೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ ಸೇರಿದಂತೆ ಹಲವು ಮುಖಂಡರು ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಮುಖಂಡರ ಆಗಮನವನ್ನು ಬೆಂಬಲಿಗರು ನಿರೀಕ್ಷಿಸುತ್ತಿದ್ದು, ಆರ್.ಬಸನಗೌಡ ತುರುವಿಹಾಳ ಅವರು ಬೆಂಬಲಿಗರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆ …
Read More »ಮಸ್ಕಿ ಯಲ್ಲಿ ಬೃಹುತ ಕಾಂಗ್ರೆಸ್ ಸಮಾವೇಶ ಎಲ್ಲ ಹಿರಿಯ ನಾಯಕರು ಭಾಗಿ
ಮಸ್ಕಿ: ಬಸನಗೌಡ ತುರ್ವಿಹಾಳ ಅವರು ಕಾಂಗ್ರೆಸ್ ಸೇರ್ಪಡೆಗಾಗಿ ಪಟ್ಟಣದಲ್ಲಿ ನವೆಂಬರ್ 23ರಂದು ಬೃಹತ್ ಕಾಂಗ್ರೆಸ್ ಸಮಾವೇಶ ಆಯೋಜಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸೇರಿದಂತೆ ಪಕ್ಷದ ಹಲವು ಹಿರಿಯ ಮುಖಂಡರು ಪಾಲ್ಗೊಳ್ಳಲಿದ್ದಾರೆ. ಸುಮಾರು 7 ಸಾವಿರ ಆಸನಗಳನ್ನು ಹಾಕಲಾಗುತ್ತಿದ್ದು, ಪೆÇಲೀಸ್ ಠಾಣೆ ಪಕ್ಕದ ಜಾಗದಲ್ಲಿ ವಿಶಾಲವಾದ ವೇದಿಕೆ ನಿರ್ಮಿಸಲಾಗಿದೆ. ಸುಮಾರು ಹತ್ತು ಸಾವಿರ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದ್ದು …
Read More »ಬೇಗ್ ಮೇಲಿರುವ ಆರೋಪ ಏನು?
ಐಎಂಎ ಸಂಸ್ಥಾಪಕ ಮನ್ಸೂರ್ ಖಾನ್‍ನಿಂದ ಸುಮಾರು 200 ಕೋಟಿಗೂ ಹೆಚ್ಚು ಹಣದ ಜೊತೆ ಬೆಲೆಬಾಳುವ ಐಷಾರಾಮಿ ವಸ್ತುಗಳು, ಕಾರುಗಳನ್ನು ಗಿಫ್ಟ್ ಪಡೆದಿರುವ ಗಂಭೀರ ಆರೋಪ ರೋಷನ್ ಬೇಗ್ ಮೇಲಿದೆ. ಐಎಂಎ ತನಿಖೆಗಾಗಿ ಕುಮಾರಸ್ವಾಮಿ ನೇತೃತ್ವದ ಸರ್ಕಾರ ವಿಶೇಷ ತನಿಖಾ ತಂಡ(ಎಸ್‍ಐಟಿ) ರಚಿಸಿತ್ತು. ಐಎಂಎ ನಿರ್ದೇಶಕರು ಸೇರಿದಂತೆ 20ಕ್ಕೂ ಹೆಚ್ಚು ಮಂದಿಯನ್ನು ಎಸ್‍ಐಟಿ ಬಂಧಿಸಿತ್ತು. ಈ ಪ್ರಕರಣದಲ್ಲೇ ಬೆಂಗಳೂರಿನ ಅಂದಿನ ಜಿಲ್ಲಾಧಿಕಾರಿ ಶಂಕರ್, ಬೆಂಗಳೂರು ಉತ್ತರ ಉಪ ವಿಭಾಗಾಧಿಕಾರಿ ಎಲ್.ಸಿ. ನಾಗರಾಜ್ …
Read More »ಪುಟ್ಟು ಮಗು ಸೇರಿ ತಾಯಿ, ಮಗಳ ಮೃತ ದೇಹಗಳು ಯಲ್ಲಾಪುರ ತಾಲೂಕಿನ ಗಣೇಶ್ ಪಾಲ್ ಹೊಳೆಯಲ್ಲಿ ಇಂದು ಪತ್ತೆಯಾಗಿವೆ.
ಕಾರವಾರ: ಇನ್ನು ಹೆಸರಿಡದ ಪುಟ್ಟು ಮಗು ಸೇರಿ ತಾಯಿ, ಮಗಳ ಮೃತ ದೇಹಗಳು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗಣೇಶ್ ಪಾಲ್ ಹೊಳೆಯಲ್ಲಿ ಇಂದು ಪತ್ತೆಯಾಗಿವೆ. ಯಲ್ಲಾಪುರ ತಾಲೂಕಿನ ಹಿತ್ಲಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಲಗೋಡ್ಲುವಿನಲ್ಲಿ ಶುಕ್ರವಾರ ಮನೆಯಿಂದ ಕಾಣೆಯಾಗಿದ್ದ ತಾಯಿ, ಮಗಳು ಹಾಗೂ ಮೊಮ್ಮಗನ ಮೃತದೇಹಗಳು ಪತ್ತೆಯಾಗಿದ್ದು, ಮೃತರನ್ನು ರಾಜೇಶ್ವರಿ ನಾರಾಯಣ ಹೆಗಡೆ(52), ವಾಣಿ ಪ್ರಕಾಶ್.ವೈ (28) ಹಾಗೂ ವಾಣಿಯವರ ಇನ್ನೂ ಹೆಸರಿಡದ 11 ತಿಂಗಳ ಗಂಡು ಮಗು …
Read More »ಲಾಕ್‍ಡೌನ್ ಬಳಿಕ ಮಾಲ್ಡಿವ್ಸ್ ನಟಿ ಮಣಿಯರ ಹಾಟ್‍ಸ್ಪಾಟ್
ಬೆಂಗಳೂರು: ಅವನೇ ಶ್ರೀಮನ್ನಾರಾಯಣ ಬೆಡಗಿ ಶಾನ್ವಿ ಶ್ರೀವಾಸ್ತವ್ ಮಾಲ್ಡಿವ್ಸ್ ಪ್ರವಾಸಕ್ಕೆ ತೆರಳಿದ್ದಾರೆ. ಮಾಲ್ಡಿವ್ಸ್ ಕಡಲ ಕಿನಾರೆಯಲ್ಲಿ ಕಾಲ ಕಳೆಯುತ್ತಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಶಾನ್ವಿ ಶ್ರೀವಾಸ್ತವ್ ಎರಡ್ಮೂರು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದು, ಇತ್ತೀಚೆಗೆ ಕಸ್ತೂರಿ ಮಹಲ್ ಸಿನಿಮಾವನ್ನು ಸಹ ಒಪ್ಪಿಕೊಂಡಿದ್ದಾರೆ. ಚಿತ್ರದಲ್ಲಿ ನಟಿಸುತ್ತಿರುವ ಕುರಿತು ಇತ್ತೀಚೆಗೆ ಟ್ವೀಟ್ ಮಾಡಿ ಬಹಿರಂಗಪಡಿಸಿದ್ದಾರೆ. ದಿನೇಶ್ ಬಾಬು ನಿರ್ದೇಶನದ ಕಸ್ತೂರಿ ಮಹಲ್ ಚಿತ್ರಕ್ಕೆ ಆರಂಭದಲ್ಲಿ ಡಿಂಪಲ್ ಕ್ವೀನ್ ರಚಿತಾರಾಮ್ ಆಯ್ಕೆಯಾಗಿದ್ದರು. ಆದರೆ ಅವರು …
Read More »ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆ
ಚಿಕ್ಕಬಳ್ಳಾಪುರ: ನಶೆಯಲ್ಲಿ ಪತಿಯೇ ಪತ್ನಿಯನ್ನ ಒನಕೆಯಿಂದ ಹೊಡೆದು ಕೊಲೆಗೈದಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಭದ್ರೆಪಲ್ಲಿ ಎಂಬಲ್ಲಿ ನಡೆದಿದೆ35 ವರ್ಷದ ರತ್ನಮ್ಮ ಕೊಲೆಯಾದ ಮಹಿಳೆ. ಕೊಲೆಯ ಬಳಿಕ ಆರೋಪಿ ಆದಿನಾರಾಯಣಪ್ಪ ಪರಾರಿಯಾಗಿದ್ದಾನೆ. ಕೂಲಿ ಕೆಲಸ ಮಾಡಿಕೊಂಡಿದ್ದ ಆದಿನಾರಾಯಣಪ್ಪ ಬೆಳಗ್ಗೆ ಪತ್ನಿಗೆ 500 ರೂಪಾಯಿ ನೀಡಿದ್ದನು. ಮಧ್ಯಾಹ್ನ ವೇಳೆ ಕಂಠಪೂರ್ತಿ ಕುಡಿದು ಬಂದ ಆದಿನಾರಾಯಣಪ್ಪ ತಾನು ನೀಡಿದ ಹಣ ಹಿಂದಿರುಗಿಸುವಂತೆ ಕೇಳಿದ್ದಾನೆ. ರತ್ಮಮ್ಮ ಹಣ ನೀಡಲು ಒಪ್ಪದಿದ್ದಾಗ ಮನೆಯಲ್ಲಿದ್ದ ಒನಕೆಯಿಂದ …
Read More »