Breaking News

Uncategorized

ಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ  ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಯಚೂರು: ನಗರದ ಹೊರವಲಯದ ಮಂಜರ್ಲಾ ಕ್ರಾಸ್ ಬಳಿ ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ  ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಮೃತರನ್ನ ಬಸವರಾಜ, ಗಣೇಶ ಹಾಗೂ ಅಭಿಷೇಕ ಎಂದು ಗುರುತಿಸಲಾಗಿದೆ. ಉಳಿದಂತೆ ಸಿದ್ದಾರ್ಥ ಹಾಗೂ ಭೀಮಾರೆಡ್ಡಿ ಗಂಭೀರ ಗಾಯಗೊಂಡಿದ್ದಾರೆ. ಎಲ್ಲರೂ ರಾಯಚೂರು ನವೋದಯ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಗಾಯಾಳುಗಳನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಂದು ಕಾರಿನಲ್ಲಿದ್ದವರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ರಾತ್ರಿ …

Read More »

ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆ ಪ್ರತ್ಯಕ್ಷ

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ನಿವಾಸದ ಬಳಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು, ಕೆಲಕಾಲ ಆತಂಕ ಸೃಷ್ಟಿಸಿತ್ತು. ಬಳ್ಳಾರಿ ಜಿಲ್ಲೆ ಹೊಸಪೇಟೆ ನಗರದ ಬೈಪಾಸ್ ಬಳಿ ಎಲ್‍ಎಲ್‍ಸಿ ಕಾಲುವೆ ಇದೆ. ನಿನ್ನೆ ರಾತ್ರಿ ಕಾಲುವೆಯಿಂದ ಮೊಸಳೆಯು ಸಚಿವರ ನಿವಾಸದ ಮುಂಭಾಗದ ರಸ್ತೆಗೆ ಬಂದಿತ್ತು.ಮೊಸಳೆ ಇರುವ ಮಾಹಿತಿ ಅರಿತ ಕಮಲಾಪುರದ ಅಟಲ್ ವಾಜಪೇಯಿ ಝೂಲಾಜಿಕಲ್ ಪಾರ್ಕ್ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅಲ್ಲದೆ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ನಂತರ ಮೊಸಳೆ ಝೂಲಾಜಿಕಲ್ ಪಾರ್ಕ್‍ಗೆ …

Read More »

ಸಚಿವ ಸಂಪುಟ ವಿಸ್ತರಣೆಗೆ ಶಶಿಕಲಾ ಜೊಲ್ಲೆ, ಪ್ರಭು ಚವ್ಹಾಣ್, ಸಿ.ಸಿ.ಪಾಟೀಲ್, ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ನಾಲ್ವರು ಸಚಿವರಿಗೆ ಕೋಕ್

ಬೆಂಗಳೂರು: ಎರಡು ಕ್ಷೇತ್ರದ ಉಪ ಚುನಾವಣೆಯಲ್ಲಿ  ಬಿಜೆಪಿ ಭರ್ಜರಿ  ಜಯಗಳಿದ ಬೆನ್ನಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸಿದ್ಧತೆ ನಡೆಸಿದ್ದಾರೆ.   ದೀಪಾವಳಿ ಹಬ್ಬದ ಬಳಿಕ ಸಚಿವ ಸಂಪುಟದಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ಇದ್ದು, ಕೆಲವು ಸಚಿವರಿಗೆ ಕೋಕ್ ನೀಡಿ, ಹೊಸಬರಿಗೆ ಅವಕಾಶ ನೀಡಲು ರಾಜ್ಯ ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ. ಹಾಲಿ ಸಚಿವರಾದ ಶಶಿಕಲಾ ಜೊಲ್ಲೆ, ಪ್ರಭು ಚವ್ಹಾಣ್, ಸಿ.ಸಿ.ಪಾಟೀಲ್, ಕೋಟಾ ಶ್ರೀನಿವಾಸ ಪೂಜಾರಿ …

Read More »

ಸವಿತಾ ಹುರಕಡ್ಲಿ ಎಂಬ ಮಹಿಳೆಯೊಂದಿಗೆ ಶಾಸಕ ಸವದಿ ಅನುಚಿತವಾಗಿ ವರ್ತಿಸಿದ್ದಾರೆ.

ಬಾಗಲಕೋಟೆ: ರಬಕವಿ-ಬನಹಟ್ಟಿಯ ಮಹಾಲಿಂಗಪುರ ಪುರಸಭೆ ಚುನಾವಣೆ ನಡೆಯುತ್ತಿದ್ದು, ಅಧ್ಯಕ್ಷೆ ಆಕಾಂಕ್ಷಿಯಾಗಿ ಮಹಿಳೆಯನ್ನು ಶಾಸಕ ಸಿದ್ದು ಸವದಿ ಎಳೆದಾಡಿರುವ ಘಟನೆ ನಡೆದಿದೆ. ಶಾಸಕರ ಅಸಭ್ಯ ವರ್ತನೆ ವಿಡಿಯೋ ವೈರಲ್ ಆಗಿದೆ. ಮಹಲಿಂಗಪುರ ಪುರಸಭೆ ಅಧ್ಯಕ್ಷೆ ಗಾದಿ ವಿಚಾರವಾಗಿ ಗಲಾಟೆ ನಡೆದಿದ್ದು, ಅಧ್ಯಕ್ಷೆ ಸ್ಥಾನದ ಆಕಾಂಕ್ಷಿಯಾಗಿರುವ ಸವಿತಾ ಹುರಕಡ್ಲಿ ಎಂಬ ಮಹಿಳೆಯೊಂದಿಗೆ ಶಾಸಕ ಸವದಿ ಅನುಚಿತವಾಗಿ ವರ್ತಿಸಿದ್ದಾರೆ. ಅಲ್ಲದೇ ನೆಲಕ್ಕೆ ನೂಕಿರುವ ವಿಡಿಯೋ ವೈರಲ್ ಆಗಿದೆ. ಮಹಾಲಿಂಗಪುರ ಪುರಸಭೆಯ ಒಟ್ಟು 23 ಸದಸ್ಯರಲ್ಲಿ …

Read More »

ಬಿಹಾರದಲ್ಲಿ ಎನ್‍ಡಿಎ ಗೆಲುವಿಗೆ ಕಾರಣವೇನು..?- ಮಹಾಘಟ್‍ಬಂಧನ್ ಎಡವಿದ್ದೆಲ್ಲಿ..?

ಪಾಟ್ನಾ: ಭಾರೀ ಕುತೂಹಲ ಮೂಡಿಸಿದ್ದ ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಹೊರಬಿದ್ದಿದೆ. ಕೊನೆಗೂ ಎನ್‍ಡಿಎ ಮೈತ್ರಿಕೂಟ ಭರ್ಜರಿಯಾಗಿ ಗೆಲುವು ಕಂಡಿತು. ಎನ್‍ಡಿಎ ಗೆಲುವಿಗೆ ಕಾರಣ…? ಪ್ರಧಾನಿ ಮೋದಿ ಮತ್ತು ಸಿಎಂ ನಿತೀಶ್ ಕುಮಾರ್ ಜೋಡಿಗೆ ಜನ ಮನ್ನಣೆ ನೀಡಿದ್ದಾರೆ. ಮೋದಿ ರ್ಯಾಲಿಗಳು ದೊಡ್ಡ ಪ್ರಮಾಣದಲ್ಲಿ ಸಕ್ಸಸ್ ಕಂಡಿವೆ. ಕೊರೊನಾ ವ್ಯಾಕ್ಸಿನ್ ಫ್ರೀ ಹಂಚುವ ಭರವಸೆಗೆ ಜನ ಬೆಂಬಲ ಸೂಚಿಸಿದ್ದಾರೆ. ಆರ್‍ಜೆಡಿಗೆ ಅಧಿಕಾರ ಕೊಟ್ಟರೆ ಜಂಗಲ್ …

Read More »

ಬೆಂಕಿ ದುರಂತಕ್ಕೆ ಸಂಬಂಧಪಟ್ಟಂತೆ 1 ಬ್ಯಾರಲ್ ಸ್ಯಾನಿಟೈಸರ್ ಬಿದ್ದು ಅನಾಹುತ ಸಂಭವಿಸಿದೆ

ಬೆಂಗಳೂರು: ಸಿಲಿಕಾನ್ ಸಿಟಿಯ ಹೊಸಗುಡ್ಡದಹಳ್ಳಿಯಲ್ಲಿ ಬೆಂಕಿ ದುರಂತಕ್ಕೆ ಸಂಬಂಧಪಟ್ಟಂತೆ 1 ಬ್ಯಾರಲ್ ಸ್ಯಾನಿಟೈಸರ್ ಬಿದ್ದು ಅನಾಹುತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆ ನಡೆದು 20 ಗಂಟೆ ಕಳೆದರೂ ಇನ್ನೂ ಬೆಂಕಿ ಜ್ವಾಲೆ ಆರಿಲ್ಲ. ಕೆಮಿಕಲ್ ಫ್ಯಾಕ್ಟರಿಯಿಂದ ಬೆಂಕಿಯ ಜ್ವಾಲೆ ಬಾನೆತ್ತರಕ್ಕೆ ಚಿಮ್ಮುತ್ತಿದೆ. ಅಕ್ಕ-ಪಕ್ಕದ ಕಟ್ಟಡಗಳಿಗೆ ಬೆಂಕಿ ಆವರಿಸುವ ಆತಂಕ ಸ್ಥಳೀಯರಿಗೆ ಉಂಟಾಗಿದೆ. ಗೋಡೌನ್ ಅಕ್ಕಪಕ್ಕದ ಹತ್ತಾರು ಮನೆಗಳ ನಿವಾಸಿಗಳನ್ನು ಮುನ್ನೆಚ್ಚರಿಕೆ ಕ್ರಮವಾಗಿ ಶಿಫ್ಟ್ ಮಾಡಲಾಗಿದೆ. ನಿನ್ನೆ ಮಧ್ಯಾಹ್ನ ಅವಘಡ …

Read More »

ಬಿಜೆಪಿ ಗೆಲುವನ್ನ ವ್ಯಾಖ್ಯಾನಿಸಿದ H.D.K.

ಬೆಂಗಳೂರು: ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಕಳೆದ 15 ತಿಂಗಳಲ್ಲಿ ಜನತೆಗೆ ಸ್ಪಂದಿಸಿದ ಕಾಳಜಿಗೆ ಉಪಚುನಾವಣೆ ಫಲಿತಾಂಶ ಗೆಲುವು ತಂದು ಕೊಟ್ಟಿರಬಹುದು ಎಂದಷ್ಟೇ ವ್ಯಾಖ್ಯಾನ ಮಾಡುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯಿಸಿದ್ದಾರೆ. ರಾಜ್ಯದ 2 ಉಪ ಚುನಾವಣೆಗಳ ಫಲಿತಾಂಶವನ್ನು ನಮ್ಮ ಪಕ್ಷ ಸಮಚಿತ್ತ ಭಾವದಿಂದ ಸ್ವೀಕರಿಸುತ್ತದೆ. ಪಕ್ಷದ ಅಭ್ಯರ್ಥಿಗಳ ಪರವಾಗಿ ದುಡಿದ ಮುಖಂಡರು ಮತ್ತು ಕಾರ್ಯಕರ್ತರಿಗೆ ನಾನು ಸದಾ ಋಣಿ. ಈ ಫಲಿತಾಂಶದ ಹಿನ್ನಡೆಯಿಂದ …

Read More »

ಶಕ್ತಿನಗರದಲ್ಲಿರುವ ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್ ನ 4ನೇ ಘಟಕದಲ್ಲಿ ಏಕಾಏಕಿ ಬೆಂಕಿ

ರಾಯಚೂರು: ಜಿಲ್ಲೆಯ ಶಕ್ತಿನಗರದಲ್ಲಿರುವ ಬೃಹತ್ ಶಾಖೋತ್ಪನ್ನ ವಿದ್ಯುತ್ ಕೇಂದ್ರ ಆರ್‌ಟಿಪಿಎಸ್ ನ 4ನೇ ಘಟಕದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಅವಘಡ ಸಂಭವಿಸಿದೆ. ಮಂಗಳವಾರ ರಾತ್ರಿ ವೇಳೆ ಆರ್‌ಟಿಪಿಎಸ್ ನಲ್ಲಿ ವಿದ್ಯುತ್ ಘಟಕ ಆರಂಭಿಸುವ ವೇಳೆ ಬೆಂಕಿ ಕಾಣಿಸಿಕೊಂಡಿದೆ. ನಾಲ್ಕು ತಿಂಗಳಿಂದ ವಿದ್ಯುತ್ ಕೇಂದ್ರ ಕಾರ್ಯಸ್ಥಗಿತಗೊಂಡಿದ್ದರಿಂದ ಘಟಕ ಆರಂಭಿಸುವ ವೇಳೆ ತಾಂತ್ರಿಕ ಸಮಸ್ಯೆಯಿಂದ ಭಾರೀ ಪ್ರಮಾಣದ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕೆನ್ನಾಲಿಗೆ ವಿದ್ಯುತ್ ಪರಿವರ್ತಕ ಸೇರಿದಂತೆ ಸುಮಾರು 60 ಲಕ್ಷ ರೂ.ಮೌಲ್ಯದ …

Read More »

ಡೆಲ್ಲಿ ಚೊಚ್ಚಲ ಐಪಿಎಲ್ ಆಸೆ ಭಗ್ನ, ದಾಖಲೆ ಬರೆದ ರೋಹಿತ್

ದುಬೈ: ಇಂದು ನಡೆದ ಐಪಿಎಲ್-2020ಯ ಫೈನಲ್ ಪಂದ್ಯದಲ್ಲಿ ಭರ್ಜರಿಯಾಗಿ ಬ್ಯಾಟಿಂಗ್ ಮತ್ತು ಬೌಲಿಂಗ್ ಮಾಡಿದ ಮುಂಬೈ ತಂಡ ಗೆದ್ದು ಬೀಗಿದೆ. ಈ ಮೂಲಕ ಐದನೇ ಬಾರಿ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿದೆ. ಇಂದಿನ ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಆರಂಭದಲ್ಲೇ ಮೂರು ವಿಕೆಟ್ ಕಳೆದುಕೊಂಡಿತ್ತು. ನಂತರ ನಾಯಕ ಶ್ರೇಯಸ್ ಐಯ್ಯರ್ ಮತ್ತು ರಿಷಭ್ ಪಂತ್ ಅವರ ತಾಳ್ಮೆಯ ಆಟದಿಂದ ನಿಗದಿತ 20 ಓವರಿನಲ್ಲಿ …

Read More »

ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅವಘಡದಲ್ಲಿ ಇನ್ನೂ ಬೆಂಕಿ ಸಂಪೂರ್ಣವಾಗಿ ನಂದಿಲ್ಲ.

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಹೊಸಗುಡ್ಡದಹಳ್ಳಿಯಲ್ಲಿರುವ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಅವಘಡದಲ್ಲಿ ಇನ್ನೂ ಬೆಂಕಿ ಸಂಪೂರ್ಣವಾಗಿ ನಂದಿಲ್ಲ. ಕಳೆದ 20 ಗಂಟೆಯಿಂದ ಬೆಂಕಿ ಧಗ ಧಗನೇ ಉರಿಯುತ್ತಿದೆ. ಸ್ಥಳಕ್ಕೆ ನೂರಾರು ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ರಾತ್ರಿಯಿಡೀ ಬೆಂಕಿ ನಂದಿಸೋ ಕಾರ್ಯದಲ್ಲಿ ಸಿಬ್ಬಂದಿ ನಿರತರಾಗಿದ್ದರು. ಬೆಂಕಿ ಅವಘಡದಲ್ಲಿ 2 ರಿಂದ 3 ಕೋಟಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. 7 ವಾಹನಗಳು, 2 ವಿದ್ಯುತ್ ಕಂಬ ನಾಶವಾಗಿವೆ. ಘಟನೆ …

Read More »