Breaking News

Uncategorized

ಮಳೆಯ ಹನಿಗಳ ಸಿಂಚನದಿಂದಾಗಿ ಜಲಪಾತಗಳು ಮೈದುಂಬಿ ಹರಿಯುತ್ತಿವೆ

ckm falls

ಚಿಕ್ಕಮಗಳೂರು: ನೈಸರ್ಗಿಕ ಸೌಂದರ್ಯದ ಖನಿಯಂತಿರೋ ಕಾಫಿನಾಡಲ್ಲೀಗ ಮುಂಗಾರು ಮಳೆ ಕೊಂಚ ಬಿಡುವು ಪಡೆದಿದೆ. ಆದರೆ ಮಳೆಯ ಹನಿಗಳ ಸಿಂಚನದಿಂದಾಗಿ ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಚಂದ್ರದ್ರೋಣ ಪರ್ವತ ಶ್ರೇಣಿಯ ಸೆರಗಲ್ಲಿರೋ ಅಬ್ಬುಗುಡಿಗೆ ಫಾಲ್ಸ್ ನಿಸರ್ಗದ ನೈಜ ಸೌಂದರ್ಯವನ್ನೇ ಅನಾವರಣಗೊಳಿಸಿದೆ. ದಟ್ಟಕಾನನದ ನಡುವೆ ಬಂಡೆಗಳ ಮೇಲಿಂದ ಧುಮ್ಮಿಕ್ಕಿ ಹರಿಯುತ್ತಿರೋ ಜಲಪಾತವೀಗ ಅದ್ಭುತ ಲೋಕವನ್ನೇ ಸೃಷ್ಟಿಸಿದೆ. ಈ ಜಲಧಾರೆಯ ಸೊಬಗನ್ನು ಸವಿಯೋಕೆ ಪ್ರವಾಸಿಗರ ದಂಡೀಗ ಕಾಫಿನಾಡಲ್ಲಿ ಮನೆ ಮಾಡಿದೆ. ಹೌದು. ಎಲ್ಲಿ ನೋಡಿದರೂ ಹಚ್ಚ …

Read More »

ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದಕಳ್ಳ

ಬೆಂಗಳೂರು, ನ.10- ಹಗಲು ಮತ್ತು ರಾತ್ರಿ ವೇಳೆ ಬೀಗ ಹಾಕಿರುವ ಮನೆಗಳನ್ನು ಗುರುತಿಸಿ ಚಿನ್ನಾಭರಣ ಕಳ್ಳತನ ಮಾಡುತ್ತಿದ್ದ ಕೋಲಾರ ಮೂಲದ ವ್ಯಕ್ತಿಯನ್ನು ಉತ್ತರ ವಿಭಾಗದ ಆರ್‍ಟಿ ನಗರ ಠಾಣೆ ಪೊಲೀಸರು ಬಂಧಿಸಿ 14.1 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಕೋಲಾರದ ವೇಮಗಲ್, ನರಸಾಪುರದ ಸಂತೋಷ್ (36) ಬಂಧಿತ ಆರೋಪಿ. ಈತನಿಂದ 350.3 ಗ್ರಾಂ ತೂಕದ ಚಿನ್ನಾಭರಣ ಮತ್ತು ಎಲ್‍ಇಡಿ ಟಿವಿಯನ್ನು ವಶಪಡಿಸಿಕೊಂಡಿದ್ದಾರೆ. ಮುನೇಶ್ವರ ಬ್ಲಾಕ್‍ನಲ್ಲಿ ವಾಸವಾಗಿರುವ ಮುರಳಿಧರ್ ಎಂಬುವವರು ಲಾಕ್‍ಡೌನ್ …

Read More »

ಕೆಮಿಕಲ್ ಫ್ಯಾಕ್ಟರಿಯಲ್ಲಿ ಭಾರೀ ಅಗ್ನಿ ಅವಘಡ

ಬೆಂಗಳೂರು, ನ.10- ಕೆಮಿಕಲ್ ಫ್ಯಾಕ್ಟರಿಯಲ್ಲಿ ಇಂದು ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಹೊಸಗುಡ್ಡದಹಳ್ಳಿಯ ಬಾಪೂಜಿನಗರದ ಮೊದಲನೆ ಮುಖ್ಯರಸ್ತೆಯಲ್ಲಿ ಕೆಮಿಕಲ್ ಫ್ಯಾಕ್ಟರಿ ಇದೆ. ಈ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ನೋಡನೋಡುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಭಾರೀ ಹೊಗೆ ಆವರಿಸಿದೆ. ಫ್ಯಾಕ್ಟರಿ ಒಳಗಿದ್ದ ನಾಲ್ಕು ಮಂದಿ ಕಾರ್ಮಿಕರು ಹೊರಗೆ ಬಂದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಮೂರು ಅಗ್ನಿಶಾಮಕ ವಾಹನಗಳೊಂದಿಗೆ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ …

Read More »

ಬಂಡೆ’ಯನ್ನು ಆರ್.ಆರ್.ನಗರದ ಜನ ಛಿದ್ರಗೊಳಿಸಿದ್ದಾರೆ : ಕಟೀಲ್

ಬೆಂಗಳೂರು,ನ.10- ಜನತೆಯ ಮುಂದೆ ಅಹಂಕಾರ, ದರ್ಪ ನಡೆಯುವುದಿಲ್ಲ ಎಂಬುದಕ್ಕೆ ರಾಜರಾಜೇಶ್ವರಿನಗರ ಮತ್ತು ಶಿರಾ ವಿಧಾನಸಭಾ ಉಪಚುನಾವಣೆಯ ಫಲಿತಾಂಶ ಪ್ರತಿಪಕ್ಷದ ವಿಧಾನಸಭೆ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಕ್ಕ ಪಾಠ ಕಲಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಪ್ರಚಾರದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಯಾವ ರೀತಿ ಮಾತನಾಡಿದರು ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ದರ್ಪ ಮತ್ತು ಅಹಂಕಾರಕ್ಕೆ ಜನತೆ …

Read More »

ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರವ ಬಗ್ಗೆ ಗುಮಾನಿ:ಪ್ರತಾಪ್ ಸಿಂಹ

ಮೈಸೂರು: ಸಿದ್ದರಾಮಯ್ಯ ಬಿಜೆಪಿ ಜೊತೆ ಕೈ ಜೋಡಿಸಲು ಮುಂದಾಗಿರವ ಬಗ್ಗೆ ಗುಮಾನಿ ಇದೆ ಎಂದು ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ತಿರುಗೇಟು ನೀಡಿರುವ ಅವರು, ನಮ್ಮ ಪಕ್ಷದ ಬಗ್ಗೆ ನಮಗಿಂತ ಹೆಚ್ಚಾಗಿ ಸಿದ್ದರಾಮಯ್ಯನವರಿಗೆ ಗೊತ್ತಾಗುತ್ತಿದೆ. ಅವರಿಗೆ ಯಾವ ಮೂಲದಿಂದ ಇದು ಗೊತ್ತಾಗಿದೆ ತಿಳಿದಿಲ್ಲ. ಬಹುಶಃ ಅವರು ನಮ್ಮ ಕೇಂದ್ರದ ನಾಯಕರ ಸಂಪರ್ಕ ಸಾಧಿಸಿರಬಹುದು. ಕಾಂಗ್ರೆಸ್‍ನಲ್ಲಿ ನನಗೆ ಉಳಿಗಾಲವಿಲ್ಲವೆಂದು ಬಿಜೆಪಿ ಜೊತೆ ಕೈ …

Read More »

ಮತದಾರರು ನೀಡುವ ತೀರ್ಪಿಗೆ ತಲೆ ಬಾಗಲೆಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಹೇಳಿದ್ದಾರೆ.

ಬೆಂಗಳೂರು: ಮತದಾರರು ನೀಡುವ ತೀರ್ಪಿಗೆ ತಲೆ ಬಾಗಲೆಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವುಕುಮಾರ್ ಹೇಳಿದ್ದಾರೆ. ಆರ್.ಆರ್ ನಗರ ಹಾಗೂ ಶಿರಾ ಕ್ಷೇತ್ರಗಳಲ್ಲಿ ಕಾಂಗ್ರೆಸ್‍ಗೆ ಹಿನ್ನಡೆಯಲ್ಲಿದೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು ಮತ ಎಣಿಕ ಮುಗಿಯಲು ಇನ್ನೂ ಕೆಲವು ಗಂಟೆ ಬಾಕಿ ಇದೆ. ಫಲಿತಾಂಶದಲ್ಲಿ ಏನುಬೇಕಾದರೂ ಆಗಬಹುದು. ಕಾದು ನೋಡೊಣ’ ಎಂದು ಹೇಳಿದ್ದಾರೆ.

Read More »

ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುತ್ತಾನೆ ಎಂದು ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಕೊಲೆ

ಚೆನ್ನೈ: ಡ್ರಗ್ಸ್ ದಂಧೆಯನ್ನು ಬಯಲಿಗೆಳೆಯುತ್ತಾನೆ ಎಂದು ಟಿವಿ ಪತ್ರಕರ್ತನನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ತಮಿಳುನಾಡಿನ ಕಾಂಚೀಪುರಂ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಡ್ರಗ್ ಡೀಲರ್‍ಗಳ ಕುರಿತು ಪೊಲೀಸರಿಗೆ ಮಾಹಿತಿ ನೀಡುತ್ತಾನೆ ಎಂಬ ಭಯದಲ್ಲಿ ಗ್ಯಾಂಗ್ ಪತ್ರಕರ್ತನನ್ನು ಹತ್ಯೆ ಮಾಡಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇಸ್ರೇವೆಲ್ ಮೋಸಸ್(27) ಕೊಲೆಯಾದ ಪತ್ರಕರ್ತ, ಭಾನುವಾರ ಸಂಜೆ ಅವರನ್ನು ಮನೆಯಿಂದ ಹೊರಗೆ ಕರೆದೊಯ್ದು, …

Read More »

ವೀರಶೈವ ಮಹಾಸಭಾ ಯುವ ಘಟಕಕ್ಕೆ ಸುರೇಶ ಅಂಗಡಿ ಅಣ್ಣನ ಮಗ

ಬೆಳಗಾವಿ: ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಯುವ ಘಟಕದ ಅಧ್ಯಕ್ಷರನ್ನಾಗಿ ಇತ್ತೀಚೆಗೆ ನಿಧನರಾದ ಕೇಂದ್ರ ಸಚಿವ ಸುರೇಶ ಅಂಗಡಿ ಅವರ ಸಹೋದರ ಹಾಗೂ ಬಿಜೆಪಿ ಮುಖಂಡ ಮೋಹನ ಅಂಗಡಿ ಅವರ ಪುತ್ರ ಚೇತನ ಅಂಗಡಿ ಅವರನ್ನು ನೇಮಕಗೊಳಿಸಲಾಗಿದೆ ಎಂದು ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಬೆಳಗಾವಿ ಜಿಲ್ಲೆಯ ವೀರಶೈವ ಬಾಂಧವರನ್ನು ಅದರಲ್ಲೂ ಮುಖ್ಯವಾಗಿ ಸಮಾಜದ ಯುವ ಪೀಳಿಗೆಯನ್ನು ಒಗ್ಗೂಡಿಸುವುದು, ಅವರಿಗೆ …

Read More »

ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರಗೆ ಕೊರೊನಾ

ಬೆಂಗಳೂರು: ಶಿರಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ಕೊರೊನಾ ಸೋಂಕು ತಗುಲಿದೆ. ತೀವ್ರ ಕೆಮ್ಮು ಕಾಣಿಸಿಕೊಂಡು ಹಿನ್ನೆಲೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದರು. ವರದಿಯಲ್ಲಿ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಟಿ.ಬಿ.ಜಯಚಂದ್ರ ಅವರ ಪತ್ನಿ ನಿರ್ಮಲಾರಿಗೂ ಕೊರೊನಾ ಸೋಂಕು ತಗುಲಿದೆ. ಕಳೆದ ಕೆಲ ದಿನಗಳಿಂದ ತಮ್ಮ ಸಂಪರ್ಕದಲ್ಲಿದವರು ಆರೋಗ್ಯದ ಬಗ್ಗೆ ಮುಂಜಾಗ್ರತೆ ತೆಗೆದುಕೊಳ್ಳುವದರ ಜೊತೆಗೆ ಕೊರೊನಾ ಪರೀಕ್ಷೆಗೆ ಒಳಗಾಗಿ ಎಂದು …

Read More »

ರಾಜ್ಯದ ಬೈಎಲೆಕ್ಷನ್ ಮಾತ್ರವಲ್ಲ ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ.

ದೆಹಲಿ : ರಾಜ್ಯದ ಬೈಎಲೆಕ್ಷನ್ ಮಾತ್ರವಲ್ಲ ಇಂದು ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ. ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಮಧ್ಯೆ ಮದಗಜಗಳ ಮಹಾ ಕಾಳಗ ಏರ್ಪಟ್ಟಿದ್ದು, ಇಂದಿನ ರಿಸಲ್ಟ್ ತೀವ್ರ ಕುತೂಹಲ ಕೆರಳಿಸಿದೆ. ಈ ಮಧ್ಯೆ, ಸಮೀಕ್ಷೆಗಳು ಮಹಾಘಟಬಂಧನ್ ಗೆಲ್ಲೋ ಹಾಟ್ ಫೇವರಿಟ್ ಅಂತಾ ಭವಿಷ್ಯ ನುಡಿದಿವೆ. ರಾಜ್ಯದ 2 ಕ್ಷೇತ್ರಗಳ ಬೈಎಲೆಕ್ಷನ್ ಫಲಿತಾಂಶ ಒಂದೆಡೆಯಾದ್ರೆ, ಮತ್ತೊಂದೆಡೆ ಇಂದು ಬಿಹಾರ ವಿಧಾನಸಭೆ ಚುನಾವಣಾ ಫಲಿತಾಂಶವೂ ಹೊರಬೀಳಲಿದೆ. ಇಡೀ …

Read More »