Breaking News

Uncategorized

ತ್ರಿಕೋನ ಫೈಟಲ್ಲಿ ಯಾರ ಮುಡಿಗೆ ‘ಶಿರಾ’ ಕಿರೀಟ?

ತುಮಕೂರು: ಶಿರಾ ಉಪಚುನಾವಣೆಯ ಜಿದ್ದಾಜಿದ್ದಿನ ಅಖಾಡದ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವಢವ ಶುರುವಾಗಿದೆ. ಮೂರೂ ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಇರೋಂದ್ರಿಂದ ಇಂದಿನ ಮತ ಎಣಿಕೆ ಇನ್ನಷ್ಟು ಮತ್ತಷ್ಟು ಕುತೂಹಲ ಕೆರಳಿಸಿದೆ. ಕಾಂಗ್ರೆಸ್, ಜೆಡಿಎಸ್‍ಗೆ ಮತ್ತೆ ಅಸ್ತಿತ್ವ ಉಳಿಸಿಕೊಳ್ಳುವ ತವಕವಿದ್ದರೆ, ಬಿಜೆಪಿಗೆ ಖಾತೆ ತೆರೆಯುವ ತವಕ. ಶಿರಾ ಅಖಾಡದಲ್ಲಿ ಸೋಲು ಗೆಲುವಿನ ಲೆಕ್ಕಾಚಾರ. ಭಾರೀ ಕುತೂಹಲ ಮೂಡಿಸಿರೋ ಶಿರಾ ಉಪಚುನಾವಣೆ ಫಲಿತಾಂಶ ಇವತ್ತು ಪ್ರಕಟಗೊಳ್ಳಲಿದೆ. …

Read More »

ಹಾವೇರಿ ಜಿಲ್ಲೆಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಣ್ಣು ಮಕ್ಕಳನ್ನು ಕದ್ದು ಮಾರಾಟ ಮಾಡುತ್ತಿದ್ದರು:ಶಾಸಕ ನೆಹರು ಓಲೇಕಾರ ಗಂಭೀರ ಆರೋಪ

ಹಾವೇರಿ : ಹಾವೇರಿ ಜಿಲ್ಲೆಯ ಮಾಜಿ ಸಚಿವ ರುದ್ರಪ್ಪ ಲಮಾಣಿ ಹೆಣ್ಣು ಮಕ್ಕಳನ್ನು ಕದ್ದು ಮಾರಾಟ ಮಾಡುತ್ತಿದ್ದರು ಎಂಬ ಮಾತುಗಳಿವೆ ಎಂದು ಶಾಸಕ ನೆಹರು ಓಲೇಕಾರ ಗಂಭೀರ ಆರೋಪ ಮಾಡಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ರುದ್ರಪ್ಪ ಲಮಾಣಿ ಪುತ್ರ ದರ್ಶನ ಬಂಧನ ವಿಚಾರವಾಗಿ ಪ್ರತಿಕ್ರಿಸಿ, ರುದ್ರಪ್ಪಾ ಲಮಾಣಿ ಅವರ ಹಿನ್ನೆಲೆಯೂ ಬೇರೆಯೇ ಇದೆ. ಮಗ ತಂದೆಯನ್ನು ಮೀರಿಸುತ್ತಾನೆ ಎಂದಿದ್ದಾರೆ. ರುದ್ರಪ್ಪ ಲಮಾಣಿ ಅವರು ಭೂ ಕಬಳಿಕೆ, ಹೆಣ್ಣು ಮಕ್ಕಳನ್ನು ಕದ್ದು ರಾಣೇಬೆನ್ನೂರ …

Read More »

ಬಹಳ ದಿನದವರೆಗೂ ತಟಸ್ಥವಾಗಿಯೇ ಉಳಿದಿದ್ದ ಸಸಿಕಾಂತ್ ಸೇಂಥಿಲ್ ಅವರು ಕೊನೆಗೆ ಕಾಂಗ್ರೆಸ್ ಸೇರುವ ನಿರ್ಧಾರ

ಚನ್ನೈ, ನ.9- ಐಎಎಸ್ ಮಾಜಿ ಅಧಿಕಾರಿ ಸಸಿಕಾಂತ್ ಸೇಂಥಿಲ್ ಅವರು ಅಧಿಕೃತವಾಗಿ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿ ಸೇವೆ ಸಲ್ಲಿಸಿ ರಾಜೀನಾಮೆ ನೀಡಿ ಅರ್ಧಕ್ಕೆ ಹುದ್ದೆ ಬಿಟ್ಟು ಹೋದ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮತ್ತು ಐಎಎಸ್ ಮಾಜಿ ಅಧಿಕಾರಿ ಸಸಿಕಾಂತ್ ಸೇಂಥಿಲ್ ನಡುವೆ ಮುಖಾಮುಖು ಎದುರಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಸಿಕಾಂತ್ ಸೇಂಥಿಲ್ ಅವರು 2009ನೇ ಬ್ಯಾಚ್‍ನ ಐಎಎಸ್ ಅಧಿಕಾರಿಯಾಗಿದ್ದು, ಕರ್ನಾಟಕ ಕೇಡರ್‍ನಲ್ಲಿ ಕೆಲಸ ಮಾಡಿದ್ದರು. ಸೇವಾ ಅವಧಿಯಲ್ಲೇ …

Read More »

ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರ ಅರೆಸ್ಟ್

ಬೆಂಗಳೂರು: ಮಾಜಿ ಸಚಿವ ರುದ್ರಪ್ಪ ಲಮಾಣಿ ಪುತ್ರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ ಮಾಜಿ ಸಚಿವರ ಪುತ್ರನಾಗಿರುವ ದರ್ಶನ್ ಲಮಾಣಿಯನ್ನು ಇಂದು ಕೆಜಿ ನಗರ ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 5ರಂದು ಡ್ರಗ್ಸ್ ಪೆಡ್ಲರ್ ಸುಜಯ್ ಎಂಬಾತನನ್ನು ಸಿಸಿಬಿ ಬಂಧಿಸಿತ್ತು. ಬಂಧಿತ ಸುಜಯ್ ಬಿಟ್ ಕಾಯಿನ್ಸ್ ಮುಖಾಂತರ ಡ್ರಗ್ಸ್ ಖರೀದಿಸುತ್ತಿದ್ದನು. ಬಂಧಿತನಿಂದ ಪೊಲೀಸರು 500 ಗ್ರಾಂ ಹೈಡ್ರೊ ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು. ಇದೇ ಪ್ರಕರಣಕ್ಕೆ …

Read More »

ತನಗೆ ನೊವೆಲ್ ಕೊರೋನ ಸೋಂಕು ತಗಲಿದೆ ಎಂದು ಮೆಗಾಸ್ಟಾರ್ ಚಿರಂಜೀವಿ ತನ್ನ ಟ್ವಟ್ಟರನಲ್ಲಿ   ಸೋಮವಾರ ತಿಳಿಸಿದ್ದಾರೆ.

ಹೈದರಾಬಾದ್: ತನಗೆ ನೊವೆಲ್ ಕೊರೋನ ಸೋಂಕು ತಗಲಿದೆ ಎಂದು ಮೆಗಾಸ್ಟಾರ್ ಚಿರಂಜೀವಿ ತನ್ನ ಟ್ವಟ್ಟರನಲ್ಲಿ   ಸೋಮವಾರ ತಿಳಿಸಿದ್ದಾರೆ. ‘ಆಚಾರ್ಯ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವ ಮುಂಚೆ ಕಡ್ಡಾಯ ಕೋವಿಡ್-ಪರೀಕ್ಷೆಗೆ ಒಳಗಾದಾಗ ಸೋಂಕು ತಗಲಿರುವುದು ದೃಢಪಟ್ಟಿದೆ. ಇದೀಗ ಅವರು ಹೋಮ್ ಕ್ವಾರಂಟೆನ್‍ನಲ್ಲಿದ್ದು, ಕಳೆದು ಐದು ದಿನಗಳಿಂದ ತನ್ನೊಂದಿಗೆ ಸಂಪರ್ಕದಲ್ಲಿರುವವರು ಪರೀಕ್ಷೆಗೆ ಒಳಗಾಗಬೇಕೆಂದು ಅವರು ವಿನಂತಿಸಿದ್ದಾರೆ.

Read More »

ವಿದ್ಯುತ್ ದರ  ಹೆಚ್ಚಿಸಿರುವ  ಸರ್ಕಾರ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, ತಕ್ಷಣ ಆದೇಶವನ್ನು  ವಾಪಸ್ ಪಡೆಯುವಂತೆ ಒತ್ತಾಯ

ಬೆಂಗಳೂರು:  ವಿದ್ಯುತ್ ದರ  ಹೆಚ್ಚಿಸಿರುವ  ಸರ್ಕಾರ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, ತಕ್ಷಣ ಆದೇಶವನ್ನು  ವಾಪಸ್ ಪಡೆಯುವಂತೆ ಒತ್ತಾಯ ಮಾಡಿದ್ದಾರೆ. ವಿದ್ಯುತ್ ದರ ಹೆಚ್ಚಳ ವಿಚಾರವಾಗಿ  ನಗರದಲ್ಲಿ  ಇಂದು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ನಿಂದಾಗಿ  ದೇಶ, ರಾಜ್ಯಗಳು ಆರ್ಥಿಕ  ಸಂಕಷ್ಟದಲ್ಲಿವೆ.  ಇಂತಹ ಸಂದರ್ಭದಲ್ಲಿ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿದೆ.  ಪ್ರತಿ ಯೂನಿಟ್​ಗೆ 40 ಪೈಸೆ ಹೆಚ್ಚಳ ಮಾಡಿ ಬಿಜೆಪಿ ಸರ್ಕಾರ  ಜನರ ವಿರೋಧಿ …

Read More »

ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಂಯೋಗದೊಂದಿಗೆ, ರಾಜ್ಯದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಉಚಿತ ಟ್ಯಾಬ್

ಯಾದಗಿರಿ: ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಂಯೋಗದೊಂದಿಗೆ, ರಾಜ್ಯದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಉಚಿತ ಟ್ಯಾಬ್ ನೀಡಲಾಯಿತು. ಜ್ಞಾನ ದೀವಿಗೆ ಯೋಜನೆ ಮೊದಲ ಹಂತದಲ್ಲಿ ಮೊಟ್ಟ ಮೊದಲ ಬಾರಿಗೆ, ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಹತ್ತಿಕುಣಿಯ ಸರ್ಕಾರಿ ಪ್ರೌಢಶಾಲೆ ಆಯ್ಕೆಯಾಗಿದೆ. ಇಂದು ಪಬ್ಲಿಕ್ ಟಿವಿ ಜ್ಞಾನ ದೀವಿಗೆ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆ ಪಬ್ಲಿಕ್ ಟಿವಿ ಕ್ಯಾಪ್ಟನ್ ಹೆಚ್.ಆರ್ ರಂಗನಾಥ್ …

Read More »

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಜಯಭೇರಿ ಹಿಂದೆ ಮಂಡ್ಯ ಮೂಲದ ಡಾ.ವಿವೇಕ್ ಮೂರ್ತಿ ಪಾತ್ರ ದೊಡ್ಡದು.

ಮಂಡ್ಯ: ವಿಶ್ವದ ದೊಡ್ಡಣ್ಣ ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಜಯಭೇರಿ ಹಿಂದೆ ಮಂಡ್ಯ ಮೂಲದ ಡಾ.ವಿವೇಕ್ ಮೂರ್ತಿ ಪಾತ್ರ ದೊಡ್ಡದು. ಬೈಡನ್ ಪರ ಚುನಾವಣಾ ತಂತ್ರಗಾರರ ಪೈಕಿ ವಿವೇಕ್ ಕೂಡ ಒಬ್ಬರು. ಈ ನಡುವೆಯೆ ವಿವೇಕ್ ಅವರಿಗೆ ಮಹತ್ವದ ಹುದ್ದೆ ಸಿಗೋದು ಪಕ್ಕ ಆಗಿದ್ದು, ಆ ಮೂಲಕ ಮಂಡ್ಯದ ಹೆಸರು ಅಮೆರಿಕಾದಲ್ಲೂ ಕಮಾಲ್ ಮಾಡುತ್ತಿದೆ. ಅಂದಹಾಗೆ ಡಾ.ವಿವೇಕ್ ಮೂರ್ತಿ ಮಂಡ್ಯ ತಾಲೂಕಿನ ಹಲ್ಲೆಗೆರೆ ಗ್ರಾಮದವರು. ಡಾ.ಎಚ್.ಎನ್.ಲಕ್ಷ್ಮಿನಾರಾಯಣಮೂರ್ತಿ ಮತ್ತು ಮೈತ್ರೇಯಿ …

Read More »

ಮದುವೆ ಸಮಾರಂಭ ದಲ್ಲಿ 200ಕ್ಕು ಹೆಚ್ಚು ಜನ ಸೇರಿದರೆ ಕ್ರಿಮಿನಲ್ ಕೇಸ್. ಚುನಾವಣೆ ಪ್ರಚಾರಕ್ಕೆ ಸೇರಿದರೆ ಇಲ್ಲವಾ …. ?

ಮೈಸೂರು: ಕೊರೊನಾ ಲಾಕ್‍ಡೌನ್ ಶುರುವಾಗಿದ್ದೇ ಬಂತು. ಚಿತ್ರಮಂದಿರ, ಕಲ್ಯಾಣ ಮಂಟಪ, ಸಾರ್ವಜನಿಕ ಸಭೆ- ಸಮಾರಂಭಗಳಿಗೆಲ್ಲ ಆತಂಕ ಶುರುವಾಗಿದೆ. ಅದರಲ್ಲೂ ಮೈಸೂರಿನಲ್ಲಿ ಕಲ್ಯಾಣ ಮಂಟಪಗಳ ಹೊಸ ನಿಯಮ ಜಾರಿಯಾಗಿದೆ. ಹೆಚ್ಚು ಜನ ಸೇರಿದರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. ಇತ್ತ ಕಲ್ಯಾಣ ಮಂಟಪದ ಮಾಲೀಕರು ಸಹ ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.ಕೊರೊನಾ ಬಂದ ಮೇಲೆ ಜೀವನ ಶೈಲಿಯೇ ಬದಲಾಗುತ್ತಿದೆ. ಮೊದಲೆಲ್ಲ ಮದುವೆ, ಉಪನಯನ, ಹುಟ್ಟುಹಬ್ಬ, ಬೀಗರೂಟ ಹೀಗೆ ಶುಭ ಸಮಾರಂಭಗಳಿಗೆ …

Read More »

ಸಚಿವ ಸ್ಥಾನಕ್ಕೆ  ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೆ ಸಿ.ಟಿ. ರವಿ ದೆಹಲಿಗೆ ದೌಡಾಯಿಸಿದ್ದಾರೆ. 

ಬೆಂಗಳೂರು:    ಸಚಿವ ಸ್ಥಾನಕ್ಕೆ  ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೆ  ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ದೆಹಲಿಗೆ ದೌಡಾಯಿಸಿದ್ದಾರೆ.  ಸಿ.ಟಿ. ರವಿ  ಅವರಿಗೆ ಇತ್ತೀಚಿಗೆ ಬಿಜೆಪಿ  ರಾಷ್ಟ್ರೀಯ  ಪ್ರಧಾನ ಕಾರ್ಯದರ್ಶಿ ಹುದ್ದೆ ಒಲಿದು ಬಂದಿದೆ. ಇದಾದ ಬೆನ್ನಲ್ಲೇ ಅವರು ತಮ್ಮ  ನಿಭಾಯಿಸುತ್ತಿದ್ದ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.  ಇದೀಗ  ಶನಿವಾರ ಸಂಜೆ  ಅವರ ರಾಜೀನಾಮೆ ಅಂಗೀಕಾರವಾಗಿದೆ. ನಂತರ ಅವರು  ದೆಹಲಿಗೆ ದೌಡಾಯಿಸಿದ್ದು, ಪಕ್ಷದ …

Read More »