ಮೈಸೂರು: ಖಾಸಗಿ ವೀಡಿಯೋ ಹೊಂದಿರುವ ಮೆಮೋರಿ ಕಾರ್ಡನ್ನ ತೋರಿಸುತ್ತ ಬಿಜೆಪಿ ಮುಖಂಡನಿಗೆ ಬಿಜೆಪಿ ಮುಖಂಡರೇ ಮುಂದಾಗಿ ಪೊಲೀಸರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದ್ದು, ಕುವೆಂಪುನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಿಜೆಪಿ ಮುಖಂಡರಿಂದ ಬಿಜೆಪಿ ಮುಖಂಡನಿಗೇ ಬ್ಲ್ಯಾಕ್ ಮೇಲ್, ಸುಲಿಗೆ. ಖಾಸಗಿ ವೀಡಿಯೋವುಳ್ಳ ಮೇಮೋರಿ ಕಾರ್ಡ್‌ಗಾಗಿ ಲಕ್ಷಾಂತರ ರೂಪಾಯಿ ವಸೂಲಿ ಮಾಡಲಾಗಿದೆ. ಬರೋಬ್ಬರಿ ಒಂದು ವರ್ಷದ ಬಳಿಕ ಡಾ.ಕೆ.ಪ್ರಕಾಶ್ ಬಾಬುರಾವ್ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ಬಂಧಿಸಿದ್ದಾರೆ. ಆರೋಪಿಗಳಾದ …
Read More »ಸರ್ಕಾರಿ ಜಮೀನು ವಿವಾದದಿಂದ ಪಿಡಿಓ ವಾಹನಕ್ಕೆ ಬೆಂಕಿ ಇಟ್ಟ ಘಟನೆ
ಚಿಕ್ಕಮಗಳೂರು: ಸರ್ಕಾರಿ ಜಮೀನು ವಿವಾದದಿಂದ ಪಿಡಿಓ ವಾಹನಕ್ಕೆ ಬೆಂಕಿ ಇಟ್ಟ ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ತಾಲೂಕಿನ ಬಾಸಾಪುರ ಗ್ರಾಮದಲ್ಲಿ ನಡೆದಿದೆ. ಬಗರ್ ಹುಕುಂ ಜಮೀನಿಗಾಗಿ 2 ಕುಟುಂಬಗಳ ನಡುವೆ ಕಲಹ ಉಂಟಾಗಿದ್ದು, ಜಮೀನಿನಲ್ಲೇ ಎರಡು ಕುಟುಂಬಗಳ ನಡುವೆ ಮಾರಾಮಾರಿ ನಡೆದಿದೆ. ಈ ವೇಳೆ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಸಂಬಂಧ ಪೊಲೀಸರು ಭದ್ರಾವತಿ ತಾಲೂಕಿನ ಪಿಡಿಓ ಹನುಮಂತಪ್ಪನನ್ನು ಬಂಧಿಸಿದ್ದು, ಇನ್ನುಳಿದ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ. ಸ್ಥಳಕ್ಕೆ …
Read More »ರಾಜ್ಯ ಸರ್ಕಾರ ಒಪ್ಪಿಗೆ ನೀಡದಿದ್ದರೆ ಸಿಬಿಐ ತನಿಖೆ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುವಂತಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ರಾಜ್ಯ ಸರ್ಕಾರದ ಸಮ್ಮತಿ ಇಲ್ಲದೆ ಸಿಬಿಐ ಯಾವುದೇ ರಾಜ್ಯದಲ್ಲಿ ತನಿಖೆ ನಡೆಸಲು ಸಾಧ್ಯವಿಲ್ಲ. ಯಾವುದೇ ರಾಜ್ಯದಲ್ಲಾಗಲಿ ಸಿಬಿಐ ತನಿಖೆಗೆ ಮುನ್ನ ಆಯಾ ರಾಜ್ಯದ ಒಪ್ಪಿಗೆ ಪಡೆದಿರಬೇಕು. ರಾಜ್ಯ ಸರ್ಕಾರ ಒಪ್ಪಿಗೆ ನೀಡದಿದ್ದರೆ ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ. ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಳ್ಳುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಅಲಹಾಬಾದ್‍ನ ಫರ್ಟಿಕೋ ಮಾರ್ಕೆಟಿಂಗ್ ಕಂಪೆನಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿದ ಅಧಿಕಾರಿಗಳು ಸಲ್ಲಿಸಿದ್ದ …
Read More »ಪತ್ನಿಕೊಂದ ಪಾಪಿ ಗಂಡ, ಮಗು ಬಚಾವ್
ಕೊರಟಗೆರೆ, ನ.19- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿ ಮಗುವಿನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಂದ್‍ಪಾಷನ ಪೈಶಾಚಿಕ ಕೃತ್ಯಕ್ಕೆ ಸಾವನ್ನಪ್ಪಿದ ಮಹಿಳೆಯನ್ನು ಜಬೀನಾ (32) ಎಂದು ಗುರುತಿಸಲಾಗಿದೆ. ತಂದೆಯಿಂದ ತೀವ್ರವಾಗಿ ಗಾಯಗೊಂಡಿರುವ 9 ವರ್ಷದ ಮಹಮದ್ ಆಲಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊರಟಗೆರೆ ಪಟ್ಟಣದ ರೇಣುಕಾ ಆಸ್ಪತ್ರೆಯ ಹಿಂಭಾಗ ವಾಸಿಸುತ್ತಿದ್ದ ದಂಪತಿ ಪ್ರತಿ ನಿತ್ಯ …
Read More »ಸದ್ಯದಲ್ಲೇ ಕೊರೋನಾ ಲಸಿಕೆ,,,!
ಬೆಂಗಳೂರು: ಸದ್ಯದಲ್ಲೇ ಕೊರೋನಾ ಲಸಿಕೆಯ ಗುಡ್‍ನ್ಯೂಸ್ ಸಿಗುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಕೋರೋನಾ ಲಸಿಕೆ ಹಂಚಿಕೆ, ಸುರಕ್ಷಿತ ಸಂಗ್ರಹಕ್ಕೆ ಆರೋಗ್ಯ ಇಲಾಖೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗಾಗಲೇ ಲಸಿಕೆ ವಿತರಿಸಲು ಮಾಡಿಕೊಂಡಿರುವ ವ್ಯವಸ್ಥೆಗಳ ಕುರಿತು ಅಂಕಿ ಅಂಶ ಸಮೇತ ಕೇಂದ್ರಕ್ಕೆ ಮಾಹಿತಿ ನೀಡಿದೆ. ಸಾರ್ವಜನಿಕರಿಗೆ ಕೊರೋನಾ ಲಸಿಕೆ ನೀಡಲು ರಾಜ್ಯ ರೆಡಿ ಇದೆ ಎಂಬ ಸಂದೇಶ ರವಾನಿಸಿದೆ.ಈಗಾಗಲೇ ಲಸಿಕೆ ಸ್ಟೋರೇಜ್‍ಗೆ ಬೆಂಗಳೂರಿನ ದಾಸಪ್ಪ ಆಸ್ಪತ್ರೆ, ಬಾಗಲಕೋಟೆಯ ಜಿಲ್ಲಾಸ್ಪತ್ರೆ ಸೇರಿದಂತೆ ರಾಜ್ಯದ ಎಲ್ಲಾ …
Read More »ಗೆಳೆಯರೊಂದಿಗೆ ಈಜಲು ಹೋದ 15 ವರ್ಷದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಗದಗ: ಗೆಳೆಯರೊಂದಿಗೆ ಈಜಲು ಹೋದ 15 ವರ್ಷದ ಬಾಲಕ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಅಗಸ್ತ್ಯತೀರ್ಥ ಹೊಂಡದಲ್ಲಿ ಘಟನೆ ನಡೆದಿದೆ. ಬ್ಯಾಡಗಿ ಮೂಲದ ಹರ್ಷವರ್ಧನ್ ಅರಕೇರಿ ಈಜಲು ಬಾರದೆ ಹೊಂಡದಲ್ಲಿ ಸಾವನ್ನಪ್ಪಿದ ಬಾಲಕ. ದೀಪಾವಳಿ ಹಬ್ಬಕ್ಕೆಂದು ಬ್ಯಾಡಗಿಯಿಂದ ಲಕ್ಷ್ಮೇಶ್ವರದ ಸಂಬಂಧಿಕರ ಮನೆಗೆ ಬಂದಿದ್ದ ಬಾಲಕ, ಸ್ಥಳೀಯ ನಾಲ್ಕು ಜನ ಸ್ನೇಹಿತರೊಂದಿಗೆ ಈಜಲು ಹೋಗಿದ್ದಾನೆ. ಬಟ್ಟೆಗಳನ್ನು ಹೊಂಡದ ದಡದಲ್ಲಿಟ್ಟು ನೀರಿಗೆ ಹಾರಿದ್ದಾರೆ. ಹೊಂಡದಲ್ಲಿದ್ದ ಹೂಳಲ್ಲಿ ಸಿಲುಕಿದ್ದರಿಂದ ಈಜಲು ಬಾರದೆ …
Read More »ಕನ್ನಡದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಧರ್ಮದೇಟು
ಬೆಂಗಳೂರು: ಕನ್ನಡದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಕ್ಕೆ ವ್ಯಕ್ತಿಯೊಬ್ಬನಿಗೆ ಧರ್ಮದೇಟು ಬಿದ್ದಿದೆ. ಬೆಂಗಳೂರಿನ ಗಾಂಧಿನಗರದ ತ್ರಿಭವನ್ ಥೇಟರ್ ಬಳಿ ಈ ಘಟನೆ ನಡೆದಿದೆ. ವ್ಯಕ್ತಿಗೆ ಸ್ಥಳೀಯರು ಥಳಿಸುತ್ತಿರುವ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ತೆಲುಗು ಭಾಷೆ ಮಾತನಾಡುವ ವ್ಯಕ್ತಿ ಕನ್ನಡದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಸಾರ್ವಜನಿಕರು ಆತನನ್ನು ಹಿಡಿದು ಚೆನ್ನಾಗಿ ಥಳಿಸಿದ್ದಾರೆ. ಧರ್ಮದೇಟು ಕೊಟ್ಟ ಬಳಿಕ ಸಾರ್ವಜನಿಕರೇ ಆ ವ್ಯಕ್ತಿಯನ್ನ ಪೊಲೀಸರಿಗೆ ಹಿಡಿದು ಒಪ್ಪಿಸಿದ್ದಾರೆ. …
Read More »ಶಶಿಕಲಾ ಜೊಲ್ಲೆ ಸಂಪುಟದಿಂದ ಕೈ ಬಿಡುವ ಸಾಧ್ಯತೆ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ
ಬೆಂಗಳೂರು : ಸಚಿವ ಸಂಪುಟ ಪುನಾರಚನೆಯಲ್ಲಿ ಶಾಸಕ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದ್ದು, ಈಗಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸಂಪುಟದಿಂದ ಕೈ ಬಿಡುವ ಸಾಧ್ಯತೆ ಇದೆ. ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಪಕ್ಷದ ನಾಯಕರೊಂದಿಗೆ ಚರ್ಚಿಸಿ, ಪಟ್ಟಿ ನೀಡಿದ್ದಾರೆ. ಸುಮಾರು 50 ನಿಮಿಷಗಳ ಕಾಲ ಸಿಎಂ ಬಿಎಸ್ ವೈ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾವರ …
Read More »ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿಪ್ರತಿಭಟನಾ ಮೆರವಣಿಗೆ
ಬೆಳಗಾವಿ: ರಾಜ್ಯ ಸರ್ಕಾರದ ವಿದ್ಯುತ್ ದರ ಏರಿಕೆ ನಿರ್ಧಾರವನ್ನು ಖಂಡಿಸಿ ಬೆಳಗಾವಿ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇಲ್ಲಿ ಕಾಂಗ್ರೆಸ್ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದರು. ಬಿಜೆಪಿ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು. ಬಿಜೆಪಿ ಸರ್ಕಾರವು ವಿದ್ಯುತ್ ದರವನ್ನು ಸರಾಸರಿ 5.4 ರಂತೆ ಪ್ರತಿ ಯೂನಿಟ್ ಗೆ 40 ಪೈಸೆ ಹೆಚ್ಚಳ ಮಾಡಿದೆ. ಕೋವಿಡ್ ಸಂಕಷ್ಟದ …
Read More »ಜನರ ರಕ್ತ ಹೀರುವ ಹೆದ್ದಾರಿ ಟೋಲ್‍ಗಳು, ಹಗಲು ದರೋಡೆಗೆ ಮತ್ತೊಂದು ಲೈಸೆನ್ಸ್..!
ಬೆಂಗಳೂರು, ನ.19-ಮುಂದಿನ ವರ್ಷದಿಂದ ಹೆದ್ದಾರಿಗಳ ಟೋಲ್‍ಗಳಲ್ಲಿ ಹಾದು ಹೋಗಬೇಕಾದರೆ ಫಾಸ್ಟ್ಯಾಗ್ ಕಡ್ಡಾಯ ಎಂಬ ನಿರ್ಧಾರ ವಾಹನ ಸವಾರರನ್ನು ಕೆರಳಿಸಿದ್ದು, ಎಲ್ಲೆಡೆ ವ್ಯಾಪಕ ಆಕ್ರೋಶ ಕೇಳಿಬರುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸರ್ಕಾರದ ನಿರ್ಧಾರದ ವಿರುದ್ಧ ವಾಗ್ದಾಳಿಗಳು ನಡೆಯುತ್ತಿವೆ. ಸರ್ಕಾರ ಸರಿಯಾದ ಸೌಲಭ್ಯ ನೀಡದೆ, ಬದಲಿ ರಸ್ತೆ ನಿರ್ಮಿಸದೆ ಜನರನ್ನು ಸುಲಿಗೆ ಮಾಡುವಂತಹ ಹುಚ್ಚು ನಿರ್ಧಾರಗಳನ್ನು ಪ್ರಕಟಿಸಿರುವುದು ಪ್ರಶ್ನಾರ್ಹವಾಗಿದೆ. ಜನವರಿ 1ರಿಂದ ಟೋಲ್ ಇರುವ ಹೆದ್ದಾರಿಗಳಲ್ಲಿ ಸಂಚರಿಸಬೇಕಾದರೆ ಫಾಸ್ಟ್ಯಾಗ್ ಕಡ್ಡಾಯ. ಫಾಸ್ಟ್ಯಾಗ್ …
Read More »