Breaking News

Uncategorized

ಭಟ್ಕಳ ದುರಂತ: ಮೃತರ ಕುಟುಂಬಕ್ಕೆ ₹2 ಲಕ್ಷ, ಗಾಯಾಳುಗಳಿಗೆ ₹50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ದೆಹಲಿ: ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತೀವ್ರ ಕಳವಳ ಹಾಗೂ ಆಘಾತ ವ್ಯಕ್ತಪಡಿಸಿದ್ದಾರೆ. ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ಪ್ರಧಾನಿ ಸಂತಾಪ ಸೂಚಿಸಿದ್ದು, ಸಂತ್ರಸ್ತರಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಘೋಷಿಸಿದ್ದಾರೆ. ಈ ಕುರಿತು ಪ್ರಧಾನಮಂತ್ರಿ ಕಾರ್ಯಾಲಯ (PMO) ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದು, ಪ್ರಧಾನಿಯವರ ಸಂದೇಶವನ್ನು ಉಲ್ಲೇಖಿಸಿದೆ: “ಕರ್ನಾಟಕದ ಕಾರವಾರ ಜಿಲ್ಲೆಯಲ್ಲಿ ಸಂಭವಿಸಿದ ದುರಂತದ ಬಗ್ಗೆ …

Read More »

ಸುವರ್ಣಸೌಧದಲ್ಲೇ ಈ ಬಾರಿ ಮುಂಗಾರು ಅಧಿವೇಶನ?; ಜಿಲ್ಲಾಡಳಿತದಿಂದ ಭರ್ಜರಿ ಸಿದ್ಧತೆ!

ಬೆಳಗಾವಿ: ಪ್ರತಿ ವರ್ಷ ಚಳಿಗಾಲದಲ್ಲಿ ಮಾತ್ರ ಅಧಿವೇಶನ ಕಾಣುತ್ತಿದ್ದ ಬೆಳಗಾವಿಯ ಸುವರ್ಣಸೌಧ, ಈ ಬಾರಿ ಮುಂಗಾರು ಅಧಿವೇಶನಕ್ಕೆ ಸಾಕ್ಷಿಯಾಗುವುದು ಬಹುತೇಕ ಪಕ್ಕಾ ಆಗಿದೆ. ಡಿಸೆಂಬರ್ ತಿಂಗಳ ಚಳಿ, ವಸತಿ ಸೌಕರ್ಯ ಹಾಗೂ ಆರೋಗ್ಯ ಸಮಸ್ಯೆಗಳನ್ನು ತಪ್ಪಿಸಲು ಸರ್ಕಾರ ಈ ಹೊಸ ಪ್ಲ್ಯಾನ್ ಮಾಡಿದ್ದು, ಬೆಳಗಾವಿಯಲ್ಲೇ ಮುಂಗಾರು ಅಧಿವೇಶನ ನಡೆಸಲು ತೀರ್ಮಾನಿಸಿದೆ ಎನ್ನಲಾಗಿದೆ. ಅಧಿವೇಶನ ನಡೆಸುವ ಕುರಿತು ಸರ್ಕಾರದ ಮಟ್ಟದಲ್ಲಿ ಸಿದ್ಧತೆಗಳು ನಡೆಯುತ್ತಿರುವುದರಿಂದ, ಬೆಳಗಾವಿ ಜಿಲ್ಲಾಡಳಿತ ಕೂಡ ಈಗಿನಿಂದಲೇ ಎಚ್ಚೆತ್ತುಕೊಂಡಿದೆ. ಬೆಳಗಾವಿ …

Read More »

ಇಂದಿನಿಂದಲೇ ಭಿನ್ನಾಭಿಪ್ರಾಯ ಬಿಟ್ಟು ಪಕ್ಷ ಸಂಘಟನೆಗೆ ಒತ್ತು ನೀಡಲಿದ್ದೇವೆ: ಬಾಲಚಂದ್ರ ಜಾರಕಿಹೊಳಿ

ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಏನೇ ಗಲಾಟೆಗಳಿದ್ದರೂ ಅವು ಇತ್ಯರ್ಥವಾಗಲಿವೆ. ಇಂದಿನಿಂದಲೇ ಎಲ್ಲರೂ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮರೆತು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಕೆಲಸ ಮಾಡಲಿದ್ದೇವೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಬಿಜೆಪಿ ರಾಷ್ಟ್ರೀಯ ನಾಯಕ ನಿತಿನ್ ನಬಿನ್ ಅವರು ರಾಜ್ಯ ನಾಯಕರ ಜತೆ ಪ್ರಮುಖ ಸಂಘಟನಾ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ನಾಯಕರು ಯಾರಿಗೆ ಏನು ಹೇಳಬೇಕೋ ಅದನ್ನ ಹೇಳಿದ್ದಾರೆ. ರಾಷ್ಟ್ರೀಯ …

Read More »

ಸಂತೆಯಲ್ಲಿ ನುಗ್ಗಿ ಕಳ್ಳತನ: ಐವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಜನರು

ಗ್ರಾಮದಲ್ಲಿ  ವಾರದ ಸಂತೆಯ ವೇಳೆ ಜನಜಂಗುಳಿಯಲ್ಲಿ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಅಂತರರಾಜ್ಯ ಕಳ್ಳರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ಶಮನವಾಡಿ ಗ್ರಾಮದಲ್ಲಿ ಎಂದಿನಂತೆ ವಾರದ ಸಂತೆ ನಡೆದಿತ್ತು. ಈ ವೇಳೆ ಸಾರ್ವಜನಿಕರ ಜನಸಂದಣಿಯನ್ನು ದುರುಪಯೋಗಪಡಿಸಿಕೊಂಡು ಜೇಬುಗಳ್ಳತನ ಹಾಗೂ ಸರಗಳ್ಳತನ ಮಾಡಲು ಯತ್ನಿಸುತ್ತಿದ್ದ ಐವರು ಕಳ್ಳರನ್ನು ಸ್ಥಳೀಯರು ಒಟ್ಟಿಗೆ ಸೇರಿಸಿ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸಂತೆ ಮೈದಾನಕ್ಕೆ ಧಾವಿಸಿದ ಸದಲಗಾ ಠಾಣೆಯ ಪೊಲೀಸರು, ಆರೋಪಿಗಳನ್ನು ತಮ್ಮ ವಶಕ್ಕೆ …

Read More »

ಬೆಳಗಾವಿಯಲ್ಲಿ ಯುವಕನ ಭೀಕರ ಕೊಲೆ: ಆರೋಪಿಗಳು ಅರೆಸ್ಟ್

ಬೆಳಗಾವಿ: ಶನಿವಾರ ಬೆಳಗಾವಿ ಜಿಲ್ಲೆಯ ಮೂಡಲಗಿ ಪಟ್ಟಣದ ವಡ್ಡರ ಓಣಿಯ ಕಳಸನ್ನವರ ಪ್ಲಾಟ್‌ನಲ್ಲಿ ನಡೆದಿದ್ದ ಯುವಕನ ಭೀಕರ ಕೊಲೆ ಪ್ರಕರಣವನ್ನು ಪೊಲೀಸರು 24 ಗಂಟೆಯಲ್ಲೇ ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿದ್ದಾರೆ. ಲಕ್ಷ್ಮಣ ಬಂಡಿವಡ್ಡರ (22) ಕೊಲೆಯಾದ ದುರ್ದೈವಿ. ಆರೋಪಿಗಳು ತಿಮ್ಮಣ್ಣನಿಗೆ ಚೂರಿಯಿಂದ ಬರ್ಬರವಾಗಿ ಇರಿದು ಪರಾರಿಯಾದ ತಕ್ಷಣ, ಆತ ರಕ್ತದ ಮಡುವಿನಲ್ಲೇ ಬಿದ್ದೂ ತನ್ನ ಸಂಬಂಧಿಕರ ಮನೆಗೆ ಫೋನ್ ಕರೆ ಮಾಡಿದ್ದನು. “ನನಗೆ ಯಾರೋ ಚಾಕು ಇರಿದಿದ್ದಾರೆ ಬನ್ನಿ” ಎಂದಿದ್ದಾನೆ. …

Read More »

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ರಾಷ್ಟ್ರೀಯ ಅಧ್ಯಕ್ಷರಿಂದ ಸಲಹೆ: ಸಿ.ಟಿ ರವಿ

ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನಬಿನ್  ಅವರು ಸಲಹೆ ಮತ್ತು ಸೂಚನೆಗಳನ್ನು ನೀಡಿದರು ಎಂದು ಮಾಜಿ ಸಚಿವ ಸಿ.ಟಿ.ರವಿ  ಅವರು ಹೇಳಿದ್ದಾರೆ. ನಿತಿನ್ ನಬಿನ್ ಅವರೊಂದಿಗೆ ನಡೆದ ಸಭೆಯ ನಂತರ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗ ಆಡಳಿತ ನಡೆಸುತ್ತಿರುವ ಕಾಂಗ್ರೆಸ್‍ನ ವೈಫಲ್ಯಗಳನ್ನು ಜನರಿಗೆ ಎತ್ತಿತೋರಿಸಿ ಬಿಜೆಪಿ ವಿಶ್ವಾಸಾರ್ಹ ಪಕ್ಷ …

Read More »

ವಿಮಾನ ಟಿಕೆಟ್ ರದ್ದತಿಗೆ ದುಪ್ಪಟ್ಟು ಶುಲ್ಕ – ತನಿಖೆಗೆ ಪ್ರಹ್ಲಾದ್ ಜೋಶಿ ಆದೇಶ

ಹುಬ್ಬಳ್ಳಿ: ವಿಮಾನ ಪ್ರಯಾಣಿಕರಿಗೆ ಆನ್‌ಲೈನ್ ಟಿಕೆಟ್ ಬುಕ್ಕಿಂಗ್ ವೇದಿಕೆಗಳು ದುಪ್ಪಟ್ಟು ಶುಲ್ಕ ವಿಧಿಸುತ್ತಿದ್ದು, ತಕ್ಷಣವೇ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ CCPA ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಆನ್‌ಲೈನ್ ಟಿಕೆಟ್ ಬುಕಿಂಗ್ ವೇದಿಕೆಗಳು ಗ್ರಾಹಕರಿಗೆ ವಿಮಾನಯಾನ ಸಂಸ್ಥೆಗಳು ಈ ವಿಧಿಸುವುದಕ್ಕಿಂತ ದುಪ್ಪಟ್ಟು ಶುಲ್ಕ ಸುಲಿಗೆ ಮಾಡುತ್ತಿರುವುದನ್ನು ಗ್ರಾಹಕರೊಬ್ಬರು ಬಯಲಿಗೆಳೆದಿದ್ದು, ಇದನ್ನು ಗಮನಿಸಿದ ಸಚಿವರು ತನಿಖೆ ನಡೆಸಿ ವಂಚನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಗ್ರಾಹಕ …

Read More »

ರಾಜ್ಯದ 8 ಮಂದಿ ಸೇರಿ 131 ಸಾಧಕರಿಗೆ ರಾಷ್ಟ್ರಪತಿಗಳಿಂದ ಪದ್ಮ ಪ್ರಶಸ್ತಿ ಪ್ರದಾನ ಗೌರವ

ನವದೆಹಲಿ: ಕರ್ನಾಟಕದ 8 ಸಾಧಕರು ಸೇರಿ 2026ನೇ ಸಾಲಿನ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿರುವ 131 ಮಂದಿಗೆ ನಾಳೆ (ಮೇ 25) ರಾಷ್ಟ್ರಪತಿ ದ್ರೌದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸೋಮವಾರ (ಮೇ 25) ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಷ್ಟ್ರಪತಿಗಳು ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನ ಸಾಧಕರಿಗೆ ಪ್ರದಾನ ಮಾಡಲಿದ್ದಾರೆ. ಈ ವರ್ಷ ಒಟ್ಟು 131 ಸಾಧಕರು ಪದ್ಮ ಪ್ರಶಸ್ತಿ ಗೌರವಕ್ಕೆ …

Read More »

ಕ್ರಿಕೆಟ್ ಆಡುವಾಗಲೇ ಹೃದಯಾಘಾತ – ಮಾಜಿ ರಣಜಿ ಆಟಗಾರ ಎಸ್‌.ಎಲ್ ಅಕ್ಷಯ್ ನಿಧನ

ಬೆಂಗಳೂರು: ಕ್ರಿಕೆಟ್  ಪಂದ್ಯವಾಡುತ್ತಿದ್ದ ವೇಳೆ ಹೃದಯಾಘಾತದಿಂದ  ಕರ್ನಾಟಕದ ಮಾಜಿ ರಣಜಿ ಆಟಗಾರ  ಎಸ್‌. ಎಲ್‌ ಅಕ್ಷಯ್‌ ಸಾವನ್ನಪ್ಪಿದ್ದಾರೆ. ಶಿವಮೊಗ್ಗ  ಮೂಲದ ಅಕ್ಷಯ್ (39),  ಬೆಂಗಳೂರಿನ ಎಸ್‌ಎಲ್‌ಎಸ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಪಂದ್ಯದ ವೇಳೆ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ. ಕರ್ನಾಟಕ ರಣಜಿ ತಂಡದ ಪರ ಆಡಿದ್ದ ಅಕ್ಷಯ್, ತಮ್ಮ ಕರಾರುವಕ್ಕಾದ ಬೌಲಿಂಗ್ ಮೂಲಕ ಗಮನ ಸೆಳೆದಿದ್ದರು. ರಣಜಿ ಮಾತ್ರವಲ್ಲದೇ ಕೆಪಿಎಲ್ ಟೂರ್ನಿಗಳಲ್ಲೂ ಉತ್ತಮ ಪ್ರದರ್ಶನ ನೀಡಿ ಹೆಸರು ಮಾಡಿದ್ದರು. ಕರ್ನಾಟಕ ಪರ ಅವರು 6 …

Read More »

ಅಕ್ರಮ ದಾಸ್ತಾನು ಮಾಡಿದ್ದ 600 ಬ್ಯಾಗ್ ಯೂರಿಯಾ ರಸಗೊಬ್ಬರ ಜಪ್ತಿ

ಮೈಸೂರು: ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದಲ್ಲಿರುವ ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 600 ಬ್ಯಾಗ್ ಯೂರಿಯಾ ರಸಗೊಬ್ಬರವನ್ನ  ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಲಾದ ರಸಗೊಬ್ಬರದ  ಅಂದಾಜು ಮೌಲ್ಯ ಸುಮಾರು 14,40,000 ರೂ. ಎಂದು ಅಂದಾಜಿಸಲಾಗಿದೆ. ರೈತರಿಗೆ ವಿತರಿಸಬೇಕಾದ ರಸಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸಲು ಯತ್ನಿಸಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆ ಅಧಿಕಾರಿಗಳು ತಕ್ಷಣ ಕಾರ್ಯಾಚರಣೆ ನಡೆಸಿದರು. …

Read More »