ಪಣಜಿ : ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ ಮಂಗಳವಾರ ಗೋವಾ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ಚೋಡಂಕರ್ ಮತ್ತು ವಿರೋಧ ಪಕ್ಷದ ನಾಯಕ ದಿಗಂಬರ ಕಾಮತ್ ಅವರನ್ನು ಭೇಟಿ ಮಾಡಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ರಾಜ್ಯ ಭೇಟಿ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರನ್ನು ಭೇಟಿಯಾಗಿ ಚರ್ಚಿಸಿದ್ದು, ರಾಜಕೀಯದಲ್ಲಿ ಸಂಚಲನ ಮೂಡಿಸಿದೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎನ್ ಸಿಪಿ ಜತೆಗೆ ಮೈತ್ರಿ ಮಾಡುವ ಹಿನ್ನೆಲೆಯಲ್ಲಿ ಭೇಟಿಯಾಗಿದ್ದಾರೆ ಎನ್ನಲಾಗುತ್ತಿದೆ. ಸಭೆಯ ಬಳಿಕ ಮಾತನಾಡಿದ ಚೋಡಂಕರ್ …
Read More »ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಸ್ಥಳೀಯರು ಸಾಕಷ್ಟು ಮನವಿ ಮಾಡಿದ್ರೂ ಪ್ರಯೋಜನವಾಗಿರಲಿಲ್ ನಿರಂತರ ಮಳೆಯಿಂದ ನಾಲ್ಕು ಕೆರೆಗಳು ಭರ್ತಿಲ
ಗದಗ: ಒಂದು ಕಾಲದಲ್ಲಿ ಅಲ್ಲಿ ಬರ ತಾಂಡವಾಡ್ತಿತ್ತು. ಜನ-ಜಾನುವಾರುಗಳು ನೀರಿಗಾಗಿ ಹಾಹಾಕಾರ ಪಡುತ್ತಿದ್ದವು. ಇಡೀ ಊರಿಗೆ ಊರೆ ದಾಹ ನೀಗಿಸಿಕೊಳ್ಳಲು ಹಾತೊರೆಯುತ್ತಿತ್ತು. ಅಲ್ಲಿರುವ ಕೆರೆಗಳನ್ನ ತುಂಬಿಸಿಕೊಡಿ ಅಂತ ಗ್ರಾಮಸ್ಥರು ಸರ್ಕಾರಕ್ಕೆ ಸಾಕಷ್ಟು ಬಾರಿ ಬೇಡಿಕೊಂಡರು ಪ್ರಯೋಜನವಾಗಿರಲಿಲ್ಲ. ಕೊನೆಗೆ ತಾವೇ ದಾಹ ನೀಗಿಸಿಕೊಳ್ಳಲು ಮುಂದಾದರು. ಯಾವ ಸರ್ಕಾರಗಳೂ ಮಾಡದ ಕೆಲಸವನ್ನ ತಾವೇ ಮಾಡಲು ಮುಂದಾದರು. ಹೌದು. ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದ ಕೆರೆಗಳಲ್ಲಿ ನೀರು ತುಂಬಿದೆ. ನರೇಗಲ್ ಸುತ್ತ-ಮುತ್ತ …
Read More »ಚಾಮರಾಜನಗರ: ಕಾಡು ಪ್ರಾಣಿ ಬೇಟೆಗೆ ಹೊಂಚು ಹಾಕುತ್ತಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಚಾಮರಾಜನಗರ: ಕಾಡು ಪ್ರಾಣಿ ಬೇಟೆಗೆ ಹೊಂಚು ಹಾಕುತ್ತಿದ್ದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಾನ್ ಜೋನಸ್, ಜಾನ್ ಬೋಸ್ಕೊ, ಅಂಥೋಣಿ ಆನಂದ್ ಕುಮಾರ್, ಸೈಮನ್ ಸ್ಟಾಲಿನ್, ಭಾಗ್ಯರಾಜ್, ಅಂತೋಣಿ ರಾಜ್ ಹಾಗೂ ಸೇಸುರಾಜ್ ಎಂದು ಗುರುತಿಸಲಾಗಿದ್ದು, ಇವರನ್ನು ಚಾಮರಾಜನಗರ ಜಿಲ್ಕೆಯ ಕೊಳ್ಳೇಗಾಲ ತಾಲೂಕಿನ ಜಾಗೇರಿಯ ಕರಚಿಕಟ್ವೆ ಬಳಿ ಅರೆಸ್ಟ್ ಮಾಡಲಾಗಿದೆ. ಬಂಧಿತರಿಂದ 7 ನಾಡ ಬಂದೂಕು ಹಾಗೂ ಸಿಡಿಮದ್ದುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೊಳ್ಳೇಗಾಲ …
Read More »ಆಕ್ಟ್-1978: ಟ್ರೇಲರ್ ಮೂಲಕ ಕೌತುಕದ ಬಾಂಬಿಟ್ಟರು ಮಂಸೋರೆ!
ಒಂದೊಳ್ಳೆ ಸಿನಿಮಾ ಎಂಟ್ರಿ ಕೊಟ್ರೆ ತಿಂಗಳಿಂದೀಚೆಗೆ ಕವುಚಿಕೊಂಡಿರೋ ಕೊರೊನಾ ಗ್ರಹಣ ತಂತಾನೇ ಕಳಚಿಕೊಳ್ಳುತ್ತೆ. ಇದು ಸಿನಿಮಾ ಪ್ರೇಮಿಗಳ ಒಕ್ಕೊರಲಿನ ಅಭಿಪ್ರಾಯ. ಅದರಲ್ಲಿಯೇ ಮತ್ತೆ ಸಿನಿಮಾ ಮಂದಿರಗಳು ಗಿಜಿಗುಡುತ್ತಾ ಕಳೆಗಟ್ಟಿಕೊಳ್ಳಲೆಂಬ ಹಾರೈಕೆಯೂ ಇದೆ. ಅದೆಷ್ಟೋ ಸಿನಿಮಾ ಪ್ರೇಮಿಗಳ ಈ ಮನದಿಂಗಿತವನ್ನು ನಿಜವಾಗಿಸುವಂಥಾ ಗಾಢ ಭರವಸೆ ಹೊತ್ತು ಆಕ್ಟ್-1978 ಚಿತ್ರದ ಟ್ರೇಲರ್ ಲಾಂಚ್ ಆಗಿದೆ. ಬಿಡುಗಡೆಯಾಗಿ ಕೆಲವೇ ಗಂಟೆಗಳಲ್ಲಿ ಅದಕ್ಕೆ ದಕ್ಕಿರೋ ವೀಕ್ಷಣೆ, ನಾನಾ ದಿಕ್ಕುಗಳಿಂದ ಹರಿದು ಬರುತ್ತಿರೋ ಸದಭಿಪ್ರಾಯಗಳೆಲ್ಲವೂ ಒಂದು ಮಹಾ …
Read More »ಅತ್ತೆ-ಸೊಸೆ, ತಾಯಿ-ಮಗಳಂತೆ ಚೆನ್ನಾಗಿರಲಿ: ಸಿ.ಟಿ ರವಿ
ಚಿಕ್ಕಮಗಳೂರು: ಕಾಂಗ್ರೆಸ್ಸಿನಂತಹ ಜನರನ್ನು ನೀವು ಎಲ್ಲೂ ನೋಡಿರಲು ಸಾಧ್ಯವಿಲ್ಲ. ಏಕೆಂದರೆ ಅವರು ಚುನಾವಣೆಯಲ್ಲಿ ಗೆದ್ದರೆ ಜನಾದೇಶ ಅಂತಾರೆ, ಸೋತರೆ ಇವಿಎಂ ಮೇಲೆ ಆರೋಪಿಸುತ್ತಾರೆ. ಈ ರೀತಿಯ ಜನರನ್ನು ನೀವೆಲ್ಲೂ ನೋಡಲು ಆಗುವುದಿಲ್ಲ ಎಂದು ಸಚಿವ ಸಿ.ಟಿ ರವಿ ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಎಐಟಿ ಕಾಲೇಜು ಬಳಿ ಹಿಂದುಳಿದ ವರ್ಗಗಳ ಬಾಲಕರ ವಿದ್ಯಾರ್ಥಿ ನಿಲಯದ ಶಂಕುಸ್ಥಾಪನೆ ಬಳಿಕ ಮಾತನಾಡಿದ ಅವರು, ಆರ್.ಆರ್.ನಗರದಲ್ಲಿ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಹಾಗೂ …
Read More »ಡಿಸಿಸಿ ಬ್ಯಾಂಕ ಚುನಾವಣೆ ವಿಷಯದಲ್ಲಿ ಒಂದಾದಂತೆ ಜಿಲ್ಲೆಯ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಶಕ್ತಿ ಪ್ರದರ್ಶಿಸುವ ಮೂಲಕ ಚಿಕ್ಕೋಡಿ ಜಿಲ್ಲೆ ಮಾಡಿಸಲು ಮುಂದಾಗಬೇಕು:
ಚಿಕ್ಕೋಡಿ : ಬೆಳಗಾವಿ ಡಿಸಿಸಿ ಬ್ಯಾಂಕ ಚುನಾವಣೆ ವಿಷಯದಲ್ಲಿ ಒಂದಾದಂತೆ ಜಿಲ್ಲೆಯ ಎಲ್ಲ ಮುಖಂಡರು ಒಗ್ಗಟ್ಟಿನಿಂದ ಶಕ್ತಿ ಪ್ರದರ್ಶಿಸುವ ಮೂಲಕ ಚಿಕ್ಕೋಡಿ ಜಿಲ್ಲೆ ಮಾಡಿಸಲು ಮುಂದಾಗಬೇಕು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಒತ್ತಾಯಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಜಿಲ್ಲೆಗಾಗಿ ಬಹಳ ದಿನಗಳಿಂದ ಹೋರಾಟ ನಡೆಯುತ್ತಿದೆ. ಆದ್ದರಿಂದ ಈ ಭಾಗದ ಜನರ ಹಿತದೃಷ್ಟಿಯಿಂದ ಚಿಕ್ಕೋಡಿ ಜಿಲ್ಲೆ ಮಾಡಬೇಕು. ಚಿಕ್ಕೋಡಿಗೆ ಸರಕಾರಿ …
Read More »ವೋಟ್ ಮಾಡಿ ಎಲ್ಲೆಂದರಲ್ಲಿ ಗ್ಲೌಸ್ ಬಿಸಾಕಿದ ಮತದಾರ
ಬೆಂಗಳೂರು: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್‍ಆರ್ ನಗರದ ಉಪಚುನಾವಣೆಗೆ ಈಗಾಗಲೇ ಮತದಾನ ಆರಂಭವಾಗಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ ಪೀಣ್ಯ ರಸ್ತೆಯಲ್ಲಿ ಹ್ಯಾಂಡ್ ಗ್ಲೌಸ್ ಗಳನ್ನು ಎಲ್ಲೆಂದರಲ್ಲಿ ಬಿಸಾಕಿರುವುದು ಕಂಡು ಬಂದಿದೆ. ಹೌದು. ರಸ್ತೆಯಲ್ಲಿ ಹ್ಯಾಂಡ್ ಗ್ಲೌಸ್ ಗಳನ್ನು ಬಿಸಾಡಲಾಗಿದೆ. ಮತದಾನ ಮಾಡಿದ ಬಳಿಕ ಜನ ಎಲ್ಲೆಂದರಲ್ಲಿ ಹಾಕಿಹೋಗಿದ್ದಾರೆ. ಮತದಾನ ಮಾಡಲು ಒಬ್ಬ ವ್ಯಕ್ತಿಗೆ ಒಂದು ಗ್ಲೌಸ್ ವಿತರಣೆ ಮಾಡಲಾಗುತ್ತಿದೆ. ಆದರೆ ಸಿಬ್ಬಂದಿ ಮತದಾರರಲ್ಲಿ ಜಾಗೃತಿ ಮೂಡಿಸಿಲ್ಲ. …
Read More »ಸಂಸದರ ಆದರ್ಶ ಗ್ರಾಮದ ಮಕ್ಕಳಿಗೆ ಶಾಲೆ ಕಟ್ಟಡನೇ ಇಲ್ಲ!
ಧಾರವಾಡ: ಸಂಸದರ ಆದರ್ಶ ಗ್ರಾಮಗಳು ಈಗಲೂ ಮೊದಲಿನಂತೆಯೇ ಇವೆ. ಅದಕ್ಕೆ ಕಾರಣ ಆ ಗ್ರಾಮ ದತ್ತು ಪಡೆದ ಸಂಸದರು ಅಭಿವೃದ್ಧಿ ಪಡಿಸದೇ ಇರುವುದು. ಹೌದು. ಧಾರವಾಡ ಜಿಲ್ಲೆಯ ಸಂಸದರ ಗ್ರಾಮದ ಸ್ಥಿತಿ ಅದೇ ರೀತಿಯಾಗಿದೆ. ಕ್ಷೇತ್ರದ ಸಂಸದ ಪ್ರಹ್ಲಾದ್ ಜೋಶಿ ಹಾರೋಬೆಳವಡಿ ಹಾಗೂ ಕಬ್ಬೇನೂರ ಗ್ರಾಮಗಳನ್ನ ದತ್ತು ಪಡೆದಿದ್ದರು. ಕಬ್ಬೇನೂರ ಗ್ರಾಮದಲ್ಲಿ ಶಾಲೆ ಕಟ್ಟಡಕ್ಕೆ ಅಡಿಪಾಯ ಕೂಡ ಹಾಕಲಾಗಿತ್ತು. ಈ ಕಟ್ಟಡ ನಿರ್ಮಾಣ ಆಗಬಹುದು ಎಂದು ಎಲ್ಲರೂ ನೋಡುತ್ತಿದ್ದರೆ, ಅದು …
Read More »ಓರ್ವನ ಕೊಲೆಗೆ ನೂರು ಜನ ಬಂದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್
ಮುಂಬೈ/ಪುಣೆ: ಓರ್ವನ ಕೊಲೆಗೆ ನೂರು ಜನ ಬಂದಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ದುಷ್ಕರ್ಮಿಗಳು ಸಾಲು ಸಾಲು ಬೈಕುಗಳಲ್ಲಿ ಹೋಗುತ್ತಿರೋದನ್ನ ವೀಡಿಯೋದಲ್ಲಿ ಗಮನಿಸಬಹುದು. ಯುವಕನ ಮೇಲೆ ದಾಳಿ ನಡೆಸಿರುವ ದುಷ್ಕರ್ಮಿಗಳು ಮಹಾರಾಷ್ಟ್ರದ ಪುಣೆಯ ನೆಹರೂ ನಗರದಲ್ಲಿ ಶುಕ್ರವಾರ ರಾತ್ರಿ 9.30ಕ್ಕೆ ಈ ಘಟನೆ ನಡೆದಿದೆ. 35 ವರ್ಷದ ನೀಲೇಶ್ ಸುಭಾಷ್ ಜಾಧವ್ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಸುಭಾಷ್ …
Read More »ಮನೆ ಬಳಿ ನಿಂತಿದ್ದ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ್ರು!
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಕಲಬುರಗಿ ನದರದ ಕೈಲಾಶ್ ನಗರದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಶಿವಲಿಂಗಪ್ಪ ಭೂಶೆಟ್ಟಿ(53) ಎಂದು ಗುರುತಿಸಲಾಗಿದೆ. ಆಳಂದ ತಾಲೂಕಿನ ಕಜಗಂಚಿ ಗ್ರಾಮದ ನಿವಾಸಿಯಾಗಿರುವ ಶಿವಲಿಂಗಪ್ಪ ಕಲಬುರಗಿ ನಗರದ ಕೈಲಾಶ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.ಕಳೆದ ರಾತ್ರಿ ಮನೆ ಬಳಿ ನಿಂತಿದ್ದ ವೇಳೆ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ …
Read More »