ಬೆಳಗಾವಿ: ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಕೋವಿಡ್ 19 ಸೋಂಕು ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹ ವ್ಯವಸ್ಥಿತವಾಗಿ ಜನರಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಅಲ್ಲಿಯವರೆಗೂ ಜನರು ಮೈಮರೆಯದೇ ಸರ್ಕಾರದ ಮಾರ್ಗಸೂಚಿಗಳನ್ನು …
Read More »ಶಾಲೆ ಆರಂಭದ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್
ಬೆಂಗಳೂರು : ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುತ್ತಿದೆ. ಜನವರಿಯಿಂದಲೇ ಶಾಲೆ ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮ ಅಂತಿಮಗೊಳಿಸಲಾಗುತ್ತದೆ. ಕನಿಷ್ಠ ಕಲಿಕೆಗೆ ಒತ್ತು ನೀಡಲಾಗುತ್ತದೆಯಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ …
Read More »ಗ್ರಾಹಕರ ವಿಶ್ವಾಸರ್ಹತೆ ಗಳಿಸಿದ ಸಂತೃಪ್ತಿ ವಿಜಯ ಸೌಹಾರ್ಧ ಸಹಕಾರಿಗಿದೆ : ಮುರುಗೇಶ ನಿರಾಣಿ
ಮುಧೋಳ – ನಿರಾಣಿ ಉದ್ಯಮ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಲಿಮಿಟೆಡ್ ಸೌಹಾರ್ದ ಸಹಕಾರಿ ಕ್ಷೇತ್ರದಲ್ಲಿ ಅಲ್ಪಾವಧಿಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸರಿ ಸಮವಾಗಿ ಸೇವೆ ನೀಡುವಷ್ಟು ಸದೃಢವಾಗಿ ಬೆಳೆದು ನಿಂತಿದೆ. ವಿನೂತನ ಯೋಜನೆಗಳೊಂದಿಗೆ ಮಹತ್ತರ ಹೆಜ್ಜೆ ಗುರುತುಗಳನ್ನು ಮೂಡಿಸುವ ಮೂಲಕ ಗ್ರಾಹಕರ ವಿಶ್ವಾಸಾರ್ಹ ಸಂಸ್ಥೆಯಾಗಿ ಹೊರಹೊಮ್ಮಿದ್ದು ಹೆಮ್ಮೆಯ ಸಂಗತಿ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ಬೀಳಗಿ ಶಾಸಕ ಮುರುಗೇಶ ನಿರಾಣಿ ತಿಳಿಸಿದರು. ಮುಧೋಳದ ಸಹಕಾರಿಯ ಪ್ರಧಾನ ಕಚೇರಿ …
Read More »117 ತಾಲ್ಲೂಕುಗಳಲ್ಲಿ ಮೊದಲ ಹಂತದ ಗ್ರಾಮ ಸಮರ, ಎಲ್ಲೆಡೆ ಭರ್ಜರಿ ಮತದಾನ
ಬೆಂಗಳೂರು,ಡಿ.22- ಕೋವಿಡ್ ಆತಂಕದ ನಡುವೆ ರಾಜ್ಯದಲ್ಲಿ ಗ್ರಾಮ ಪಂಚಾಯ್ತಿಗಳ ಮೊದಲ ಹಂತದ ಚುನಾವಣೆಯ ಮತದಾನ ಇಂದು ಬಿರುಸಾಗಿತ್ತು. ಅಲ್ಲಲ್ಲಿ ಮಾತಿನ ಚಕಮಕಿ, ಅಭ್ಯರ್ಥಿಗಳ ನಡುವೆ ಪರಸ್ಪರ ಆರೋಪ, ಪ್ರತ್ಯಾರೋಪ, ತಳ್ಳಾಟ-ನೂಕಾಟ, ಮತಪತ್ರಗಳ ದೋಷದಿಂದ ಹಲವೆಡೆ ಮತದಾನ ಸ್ಥಗಿತ, ಗುಂಪು ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರದಂತಹ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ 30 ಜಿಲ್ಲೆಗಳ 117 ತಾಲ್ಲೂಕುಗಳ 3,019 ಗ್ರಾಪಂಚಾಯ್ತಿಗಳಿಗೆ ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಗ್ರಾಮಪಂಚಾಯ್ತಿಗಳ 43,238 ಸ್ಥಾನಗಳಿಗೆ ಸ್ಪರ್ಧಿಸಿದ್ದ …
Read More »ಗ್ರಾ. ಪಂ. ಮೊದಲ ಹಂತದ ಚುನಾವಣೆ,ಲಘುಲಾಠಿ ಪ್ರಹಾರ, ಪಿಸ್ತೂಲ್ ಇಟ್ಟುಕೊಂಡ ಅಧಿಕಾರಿ,07 ನೆ ವಯಸ್ಸಿನಲ್ಲಿ ಮತದಾನ ಮಾಡಿದ ಅಜ್ಜಮ್
ಬೆಳಗಾವಿ – ರಾಜ್ಯದ ವಿವಿಧೆಡೆ ಗ್ರಾಮ ಪಂಚಾಯಿತಿ ಮೊದಲ ಹಂತದ ಚುನಾವಣೆ ಮತದಾನ ಬಿರುಸಿನಿಂದ ನಡೆಯುತ್ತಿದೆ. ಎಲ್ಲೆಡೆ ಪೊಲೀಸ್ ಬಂಧೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು, ಶಾಂತ ಮತ್ತು ಸುರಕ್ಷಿತ ಮತದಾನ ನಡೆಯುತ್ತಿದೆ. ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಮತ್ತು ಕಂಗ್ರಾಳಿ ಕೆಎಚ್ ಗ್ರಾಮದಲ್ಲಿ ಜನ ಗುಂಪುಗೂಡಲು ಪ್ರಯತ್ನಿಸಿದ್ದರಿಂದ ಲಘುಲಾಠಿ ಪ್ರಹಾರ ನಡೆಸಲಾಗಿದೆ. ದೇಸೂರು ಗ್ರಾಮ ಪಂಚಾಯಿತಿಯಲ್ಲಿ ಚುನಾವಣೆ ಕರ್ತವ್ಯಕ್ಕೆ ಬಂದಿದ್ದ ಸಿಬ್ಬಂದಿ ಪಿಸ್ತೂಲ್ ಇಟ್ಟುಕೊಂಡು ಬಂದಿದ್ದರಿಂದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಅಧಿಕಾರಿಯನ್ನು ಬದಲಿಸಲಾಗಿದೆ. …
Read More »ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಪೆಟ್ರೋಲ್ ಬಂಕ್ ಬಳಿ ಎಸೆದು ಹೋಗಿರುವ ಘಟನೆ
ಮುಂಬೈ: ನಾಲ್ಕು ವರ್ಷದ ಬಾಲಕಿಯ ಮೇಲೆ ಬಸ್ ಚಾಲಕನೊಬ್ಬ ಅತ್ಯಾಚಾರವೆಸಗಿ, ಬಳಿಕ ಬಾಲಕಿಯನ್ನು ಗೋಣಿ ಚೀಲದಲ್ಲಿ ತುಂಬಿ ಮುಂಬೈ-ಅಹ್ಮದಾಬಾದ್ ಹೆದ್ದಾರಿ ಬಳಿಯ ಪೆಟ್ರೋಲ್ ಬಂಕ್ ಬಳಿ ಎಸೆದು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಮಾರನೆ ದಿನ ಬೆಳಿಗ್ಗೆ ಗೋಣಿ ಚೀಲ ಅಲುಗಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಹತ್ತಿರ ಬಂದು ಪರಿಶೀಲಿಸಿದಾಗ ಅದರಲ್ಲಿ ಬಾಲಕಿ ಇರುವುದು ಕಂಡು ದಂಗಾಗಿದ್ದಾರೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಾರ್ಕ್ ಮಾಡಿದ್ದ ಲಕ್ಸುರಿ ಬಸ್ ಬಳಿ ಬಾಲಕಿ …
Read More »ಗ್ರಾಪಂ ಚುನಾವಣೆಯಲ್ಲಿ ಗೆದ್ದವರಿಗೆ ಮುಂಬರಲಿರುವ ಚುನಾವಣೆಗಳಲ್ಲಿ ಜವಾಬ್ದಾರಿ ನೀಡುವ ತೀರ್ಮಾನ:B.J.P.
ಬೆಂಗಳೂರು,ಡಿ.21- ಗ್ರಾಪಪಂಚಾಯ್ತಿ ಚುನಾವಣೆಯನ್ನೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಭೂಮಿಕೆ ಮಾಡಿಕೊಳ್ಳಲು ಮುಂದಾಗಿರುವ ಬಿಜೆಪಿ, ಗ್ರಾಪಂ ಚುನಾವಣೆಯಲ್ಲಿ ಗೆದ್ದವರಿಗೆ ಮುಂಬರಲಿರುವ ಚುನಾವಣೆಗಳಲ್ಲಿ ಜವಾಬ್ದಾರಿ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜ್ಯ ಪದಾಧಿಕಾರಿಗಳ ಸಭೆ ಮೂಲಕ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೂ ತಯಾರಿ ನಡೆಸಿರುವ ಬಿಜೆಪಿ ಗ್ರಾಪಂ ಚುನಾವಣೆಯನ್ನೇ ಮುಖ್ಯ ಭೂಮಿಕೆ ಮಾಡಿಕೊಳ್ಳಲು ಸಿದ್ಧವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಪ್ರತಿನಿಧಿ ಸಮಾವೇಶ ಆಯೋಜಿಸಲು …
Read More »ಬೆಳಗಾವಿ ಎಸ್ಪಿ ಲಕ್ಷ್ಮಣ ನಿಂಬುರಗಿ ಸಹ ಲೋಕಲ್ ಫೈಟ್ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯಾದ್ಯಂತೆ ತೀವ್ರ ಭದ್ರತೆ ಕೈಗೊಂಡಿದ್ದಾರೆ. 264 ಸೂಕ್ಷ್ಮ ಮತಗಟ್ಟೆ ಎಂದು ಗುರುತಿಸಲಾಗಿದೆ
ಬೆಳಗಾವಿ(ಡಿಸೆಂಬರ್. 21): ಅತ್ಯಂತ ಪ್ರತಿಷ್ಠ ಚುನಾವಣೆ ಆಗಿರುವ ಗ್ರಾಮ ಪಂಚಾಯಿತಿ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇದೀಗ ಎಲ್ಲಾ ರೀತಿಯ ಸಿದ್ದತೆ ನಡೆದಿದೆ. ಬೆಳಗಾವಿ ಜಿಲ್ಲೆಯ 7 ತಾಲೂಕಿನಲ್ಲಿ ಮೊದಲ ಹಂತದಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಇಂದು ಮತ ಪೆಟ್ಟೆಗೆ ಸಮೇತ ಅಧಿಕಾರಿಗಳ ಮತದಾನ ಕೇಂದ್ರಕ್ಕೆ ತೆರಳಿದರು. ಕೊರೋನಾ ವೈರಸ್ ಭೀತಿಯ ನಡುವೆ ಪ್ರತಿಷ್ಠಿತ ಲೋಕಲ್ ಫೈಟ್ ನಡೆಯಲಿದ್ದು, ಗ್ರಾಮೀಣ ಪ್ರದೇಶ ಮತದಾರರು ನಾಳೆ ತಮ್ಮ ಹಚ್ಚು ಚಲಾವಣೆ ಮಾಡಲಿದ್ದಾರೆ. ಬೆಳಗಾವಿ …
Read More »ವಿಧಾನಪರಿಷತ್ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ತಮ್ಮ ಸರ್ಕಾರಿ ಬಂಗಲೆ ಮತ್ತು ಕಾರನ್ನು ವಾಪಸ್ ಮಾಡಿದ್ದಾರೆ.
ಬೆಂಗಳೂರು (ಡಿ. 21): ವಿಧಾನ ಪರಿಷತ್ನಲ್ಲಿ ಕಳೆದ ವಾರ ನಡೆದ ಕೋಲಾಹಲ ಬೆನ್ನಲ್ಲೇ ಇದೀಗ ವಿಧಾನಪರಿಷತ್ ಸಭಾಪತಿ ಪ್ರತಾಪ ಚಂದ್ರ ಶೆಟ್ಟಿ ತಮ್ಮ ಸರ್ಕಾರಿ ಬಂಗಲೆ ಮತ್ತು ಕಾರನ್ನು ವಾಪಸ್ ಮಾಡಿದ್ದಾರೆ. ಸರ್ಕಾರಿ ಮನೆ ತೊರೆದಿರುವ ಅವರು ತಮ್ಮ ಸ್ವ ಕ್ಷೇತ್ರಕ್ಕೆ ತೆರಳಿದ್ದಾರೆ. ಅಲ್ಲದೇ ತಮ್ಮ ಮನೆಯ ಪೀಠೋಪಕರಣಗಳನ್ನು ತೆಗೆದುಕೊಂಡು ಹೋಗುವಂತೆ ಸಭಾಪತಿಯವರೇ ಲೋಕೋಪಯೋಗಿ ಇಲಾಖೆಗೆ ಕರೆ ಮಾಡಿ ಸೂಚನೆ ನೀಡಿದ್ದಾರೆ. ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆಯನ್ನು ನೀಡದ ಪ್ರತಾಪ್ …
Read More »ಭಾರತದಲ್ಲಿ ಪೊಲೀಯೋ ಮಾದರಿಯಲ್ಲಿ ಕೊರೊನಾ ಲಸಿಕಾ ವಿತರಣೆಗೆ ಸಿದ್ಧತೆ
ನವದೆಹಲಿ, ಡಿ.18- ಕೊರೊನಾ ನಿರ್ಮೂಲನೆಗೆ ಪಲ್ಸ್ ಪೊಲೀಯೋ ಮಾದರಿಯಲ್ಲಿ ಲಸಿಕಾ ಆಂದೋಲನ ನಡೆಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಜನವರಿ ವೇಳೆಗೆ ಸಾರ್ವಜನಿಕರಿಗೆ ಲಸಿಕೆ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ದನ್ ಹೇಳಿದ್ದಾರೆ. ಖಾಸಗಿ ಸುದ್ದಿ ಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಲಸಿಕೆ ಆಂದೋಲನದ ಬಗ್ಗೆ ಸಮಗ್ರ ಮಾಹಿತಿ ಹಂಚಿಕೊಂಡಿದ್ದಾರೆ. ನಮ್ಮ ದೇಶಕ್ಕೆ ಲಸಿಕಾ ಆಂದೋಲನದ ವಿಷಯವಾಗಿ ಸಾಕಷ್ಟು ಅನುಭವ ಇದೆ. 25 ವರ್ಷಗಳ ಹಿಂದೆ ಭಾರತದಲ್ಲಿ ಶೇ.60ರಷ್ಟು …
Read More »
Laxmi News 24×7