Breaking News
Home / Uncategorized (page 664)

Uncategorized

ಕಾಂಗ್ರೆಸ್‌ ಶಾಸಕನಿಗೆ ಅಂಟಿದ ಕೊರೋನಾ ಸೋಂಕು, ಹೆಚ್ಚಿದ ಆತಂಕ..!

ಬೆಳಗಾವಿ: ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಶನಿವಾರ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಇದೆ ವೇಳೆಗೆ ಬೈಲಹೊಂಗಲದಲ್ಲಿ ಶುಕ್ರವಾರವಷ್ಟೇ ಚನ್ನಮ್ಮನ ಕಿತ್ತೂರಿನ ಶಾಸಕ ಮಹಾಂತೇಶ ದೊಡ್ಡಗೌಡರ, ತಹಸೀಲ್ದಾರ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಶಾಸಕ ಮಹಾಂತೇಶ ದೊಡ್ಡಗೌಡರ ಅವರಿಗೂ ಭೀತಿ ಎದುರಾಗಿದೆ. ಬೆಳಗಾವಿ: ಕೊರೋನಾ ಟೆಸ್ಟ್‌ ಮಾಡಿಸದೇ ಪಾಸಿಟಿವ್‌ ಇದೆ ಎಂದಿದ್ದ ಜಿಲ್ಲಾಡಳಿತ ಇತ್ತೀಚೆಗಷ್ಟೇ ಬೆಂಗಳೂರಿಗೆ ತೆರಳಿ …

Read More »

ಆಗಸ್ಟ್ ಮೂರು ಅಥವಾ ನಾಲ್ಕನೇ ತಾರೀಖಿನಂದು ರಾಮಮಂದಿರದ ಶಿಲಾನ್ಯಾಸ ನೆರವೇರುವ ಸಾಧ್ಯತೆ

ಉಡುಪಿ: ಆಗಸ್ಟ್ ಮೂರು ಅಥವಾ ನಾಲ್ಕನೇ ತಾರೀಖಿನಂದು ರಾಮಮಂದಿರದ ಶಿಲಾನ್ಯಾಸ ನೆರವೇರುವ ಸಾಧ್ಯತೆಗಳಿವೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಸಂಬಂಧಿಸಿದ ವಿಡಿಯೋ ಕಾನ್ಫರೆನ್ಸ್ ಮೂಲಕ ಟ್ರಸ್ಟಿಗಳು ಸಭೆ ನಡೆಸಿದ್ದಾರೆ. ಸಭೆಯಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾಗಿದ್ದರು. ಇವತ್ತು ನಡೆದ ಸಭೆಯಲ್ಲಿ ಮಂದಿರ ನಿರ್ಮಾಣ ಕ್ಕೆ ಭೂಮಿಯ ಧಾರಣಾ ಸಾಮರ್ಥ್ಯ ಅಧ್ಯಯನ ಮತ್ತು ಮಂದಿರ ನಿರ್ಮಾಣ ಮೊತ್ತದ ಕ್ರೋಢೀಕರಣದ ಬಗ್ಗೆ ಚರ್ಚೆಯಾಗಿದೆ. ಈ ಬಗ್ಗೆ ಉಡುಪಿಯಲ್ಲಿ ಮಾಧ್ಯಮಗಳಿಗೆ ಪೇಜಾವರ …

Read More »

ಕಂಟೈನ್ಮೆಂಟ್ ಪ್ರದೇಶದಲ್ಲೇ ವೈನ್‍ಶಾಪ್ ಓಪನ್- ಪಾನಮತ್ತರಿಂದ ಬೇಸತ್ತ ಸ್ಥಳೀಯರು

ಗದಗ: ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಶಿಗ್ಲಿ ಗ್ರಾಮದಲ್ಲಿ ಕಂಟೈನ್ಮೆಂಟ್ ಪ್ರದೇಶದಲ್ಲಿ ಎಲ್ಲವೂ ಬಂದ್ ಇದ್ದು, ವೈನ್‍ಶಾಪ್ ಮಾತ್ರ ಓಪನ್ ಮಾಡಲಾಗಿದೆ. ಗ್ರಾಮದಲ್ಲಿ ಪಾಸಿಟಿವ್ ಕೇಸ್ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಆರೋಗ್ಯ ಇಲಾಖೆಯಿಂದ ಅನೇಕ ಏರಿಯಾಗಳನ್ನಿ ಸೀಲ್ ಡೌನ್ ಮಾಡಲಾಗಿದೆ. ಕಂಟೈನ್ಮೆಂಟ್ ಪ್ರದೇಶದಲ್ಲಿರುವ ಎಲ್ಲಾ ಅಂಗಡಿ ಮುಗ್ಗಟ್ಟುಗಳು, ಜನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಆದರೆ ಕಂಟೈನ್ಮೆಂಟ್ ಪ್ರದೇಶದಲ್ಲಿ ಪ್ರಭಾವಿಯೊಬ್ಬರ ವೈನ್‍ಶಾಪ್ ಮಾತ್ರ ಓಪನ್ ಮಾಡಿದ್ದಾರೆ. ಪಾನಮತ್ತರ ಹಾವಳಿಯಿಂದ ಸ್ಥಳೀಯರು ಬೆಸತ್ತಿದ್ದಾರೆ. …

Read More »

ಪಟ್ಟಣದ ಲಕ್ಷ್ಮಿ ನಗರದಲ್ಲಿ ಆಶಾ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಸೋಂಕು ತಗಲಿದ್ದು, ಆ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ.

ಮೂಡಲಗಿ: ಪಟ್ಟಣದ ಲಕ್ಷ್ಮಿ ನಗರದಲ್ಲಿ ಆಶಾ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಸೋಂಕು ತಗಲಿದ್ದು, ಆ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ. ಲಕ್ಷ್ಮಿ ನಗರ ನಿವಾಸಿಯಾಗಿದ್ದ ಅಂಗನವಾಡಿ ಕಾರ್ಯಕರ್ತೆಗೆ ಸೋಂಕು ಅಂಟಿದ್ದು, ಆರೋಗ್ಯ ಇಲಾಖೆಯ ಈ ಬಗ್ಗೆ ಇಂದು ಸಂಜೆ ಅಧಿಕೃತ ಪ್ರಕಟಣೆ ನೀಡಬೇಕಿದೆ. ಸೋಂಕಿತೆ ವಾಸವಿದ್ದ ನಗರವನ್ನು ಸೀಲ್ ಡೌನ್ ಮಾಡಲಾಗಿದೆ. ಪೊಲೀಸರು, ಅಂಗನವಾಡಿ ಕಾರ್ಯಕರ್ತೆಯರು, ಪುರಸಭೆ ಅಧಿಕಾರಿಗಳು ಹಾಗೂ ಆರೋಗ್ಯ ಕಾರ್ಯಕರ್ತರು ಪರಿಶ್ರಮಪಟ್ಟು ಕೊರೊನಾ ಸೋಂಕು …

Read More »

ಕರದಂಟು ನಾಡಿನಲ್ಲಿ ಕೊರೋನಾದ ಕಹಿ

  ಕರದಂಟು ನಾಡು ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಇವತ್ತು ಒಂದೆ ದಿನ 41 ಕೊರಾನಾ ಪ್ರಕರಣಗಳು ದೃಡಪಟ್ಟಿದ್ದು ಕರದಂಟು ನಾಡಿಗೆ ಕೊರಾನಾ ಕಹಿ ನೀಡಿ ತನ್ನ ಅಟ್ಟಹಾಸ ಮೆರೆದಿದೆ ಇಂದು ಒಂದೇ ದಿನ ನಲವತ್ತು ಒಂದು ಸೋಂಕಿತರು ದೃಢಪಟ್ಟಿದ್ದಾರೆ. ನಾಲ್ವರು ವೈದ್ಯರಿಗೆ ಪಾಸಿಟಿವ್ ಕಂಡು ಬಂದಿದ್ದು, ಗೋಕಾಕ ಪಟ್ಟಣ -18, ತವಗ-9 ಕುಲಗೋಡ-1, ಬೇಡಕಿಹಾಳ-8, ಬೆಟಗೇರಿ- 1, ಮೂಡಲಗಿ- 1ತುಕ್ಕಾನಟ್ಟಿ- 1, ದೊಡವಾಡ 2 ಪ್ರಕರಣಗಳು ಪ್ರಕರಣಗಳು ದಾಖಲಾಗಿವೆ …

Read More »

ತಳ್ಳೋ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿ ಸಾಗಿಸಿದ ಅಮಾನವೀಯ ಘಟನೆ

ಚಿಕ್ಕೋಡಿ: ತಳ್ಳೋ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿ ಸಾಗಿಸಿದ ಅಮಾನವೀಯ ಘಟನೆ ಬೆಳಗಾವಿಯ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಸದಾಶಿವ ಹಿರಟ್ಟಿ (55) ಅನಾರೋಗ್ಯದಿಂದ ಗುರುವಾರ ರಾತ್ರಿ ಸಾವನ್ನಪ್ಪಿದ್ದರು. ಅನಾರೋಗ್ಯದಿಂದ ಬಳಲಿ ತೀರಿಹೋದ ಪತಿಯ ಅಂತ್ಯ ಸಂಸ್ಕಾರಕ್ಕೆ ಕೊರೊನಾ ಭಯದಿಂದ ಯಾರು ಬರದ ಕಾರಣ ಪತ್ನಿಯೇ ತಳ್ಳೋ ಗಾಡಿಯಲ್ಲಿ ಪರಿಚಯಸ್ಥರೊಬ್ಬರ ಸಹಾಯದಿಂದ ಶವ ಸಾಗಿಸಿದ್ದಾರೆ. ಅಥಣಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂದೆ ಚಪ್ಪಲಿ ಹೊಲಿದುಕೊಂಡಿದ್ದ ಸದಾಶಿವ ನಿನ್ನೆ ತಡರಾತ್ರಿ ಮನೆಗೆ …

Read More »

ಲಾವಿದ ಹುಲಿವಾನ್ ಗಂಗಾಧರಯ್ಯ (70) ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಹುಲಿವಾನ್ ಗಂಗಾಧರಯ್ಯ (70) ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ನಿನ್ನೆ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕೊರೊನಾ ಕಾರಣದಿಂದ ಸಿನಿರಂಗದ ಕಲಾವಿದರು, ತಂತ್ರಜ್ಞಾನರು, ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆಯೇ ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ರಾತ್ರಿ 11 ಗಂಟೆ ವೇಳೆಗೆ ಚಿಕಿತ್ಸೆ ಫಲಿಸದೆ …

Read More »

ಕೋವಿಡ್-19 | ಲಾಕ್‌ಡೌನ್‌ ವಿಸ್ತರಣೆ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ಲಾಕ್‌ಡೌನ್‌ ಮುಂದುವರಿಸಬೇಕು ಎಂಬ ಪ್ರಬಲ ಒತ್ತಡಗಳ ನಡುವೆಯೂ ಅದನ್ನು‌ ಮತ್ತೊಂದು ಅವಧಿಗೆ ಮುಂದುವರಿಸದೇ ಇರಲು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಕಠಿಣ ನಿರ್ಧಾರ ತೆಗೆದುಕೊಂಡಿದ್ದಾರೆ. ‘ಕೋವಿಡ್‌ ನಿಯಂತ್ರಿಸಲು ಲಾಕ್‌ಡೌನ್‌ನಿಂದ ಹೆಚ್ಚಿನ ಪ್ರಯೋಜನ ಆಗದ ಕಾರಣ, ಅದನ್ನು ಮುಂದುವರಿಸುವ ಆಲೋಚನೆ ಸರ್ಕಾರಕ್ಕಿಲ್ಲ. ರೋಗಿಗಳಿಗೆ ಪರಿಣಾಮಕಾರಿ ಚಿಕಿತ್ಸೆಯೇ ಕೊರೊನಾ ಮಣಿಸಲು ಇರುವ ಏಕೈಕ ಮಾರ್ಗ’ ಎಂಬ ದೃಢ ಮಾತುಗಳನ್ನು ಅವರು ಆಡಿದ್ದಾರೆ. ಬೆಂಗಳೂರಿನ ಎಂಟು ವಲಯಗಳಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪರಿಸ್ಥಿತಿ ನಿರ್ವಹಣೆಯ ಮಾಹಿತಿ …

Read More »

ಬೆಳಗಾವಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೆಳಗಾವಿಯಲ್ಲಿ ಕೊರೋನಾ ಕುರಿತು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಪ್ರಗತಿ ಪರಶೀಲನೆ ಮಾಡಲಿದ್ದಾರೆ.

ಸೋಮವಾರ ಬೆಳಗಾವಿಗೆ ಜಿಲ್ಲಾ ಉಸ್ತುವಾರಿ ಸಚಿವ ಬೆಳಗಾವಿಯಲ್ಲಿ ಕೊರೋನಾ ಕುರಿತು ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತು ಪ್ರಗತಿ ಪರಶೀಲನೆ ಮಾಡಲಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಬೆಳಗಾವಿ ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಈಗಾಗಲೇ ಲಾಕ್ ಡೌನ್ ಜಾರಿಯಲ್ಲಿದೆ.ಇಡೀ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡಬೇಕು ಎನ್ನುವ ಕೂಗು ಕೇಳಿಬಂದಿದೆ. ಬೆಳಗಾವಿ ನಗರದ ಗಲ್ಲಿ,ಗಲ್ಲಿಗೆ ಮಹಾಮಾರಿ ಕೊರೋನಾ ನುಗ್ಗುತ್ತಿದೆ ಬಹುತೇಕ ನಗರದ ಎಲ್ಲ ಪ್ರದೇಶಗಳಿಗೂ ಕೊರೋನಾ ಹಬ್ಬಿದೆ.ದಿನನಿತ್ಯ …

Read More »

ಹನು​ಮ​ಸಾ​ಗರ ಸ್ವಯಂ ಘೋಷಿತ ಲಾಕ್‌​ಡೌ​ನ್‌…..?

ಕೊಪ್ಪಳ: ಜಿಲ್ಲೆಯಲ್ಲಿ ಕೊರೋನಾ ಹೆಮ್ಮಾರಿಯ ಅಟ್ಟಹಾಸ ನಿಲ್ಲುತ್ತಿಲ್ಲವಾದರೂ ಈಗಾಗಲೇ 248 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಹೋಗಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರದವರೆಗೂ 431 ಜನರಿಗೆ ಸೋಂಕು ದೃಢಪಟ್ಟಿದೆ. ಈ ಪೈಕಿ ಕೇವಲ 9 ಜನರು ಸಾವನ್ನಪ್ಪಿದ್ದು, ಉಳಿದವರ ಪೈಕಿ 248 ಜನರು ಗುಣಮುಖವಾಗಿದ್ದಾರೆ. ಉಳಿದವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದಿಲ್ಲೊಂದು ಕಾಯಿಲೆ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾದಿಂದಲೇ ಯಾರು ಸತ್ತಿಲ್ಲ. ಬೇರೆ ನಾನಾ ಕಾಯಿಲೆ ಇರುವವರಿಗೂ ಸೋಂಕು ಬಂದಿದೆ. ಅಂಥವರು ಮೃತಪಟ್ಟಿದ್ದಾರೆಯೇ ವಿನಃ ಇದುವರೆಗೂ …

Read More »