Breaking News
Home / Uncategorized (page 667)

Uncategorized

ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಪ್ರತಿಭಟನೆ

ಮೂಡಲಗಿ : ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತರು ಪ್ರತಿಭಟನೆ ಹಮ್ಮಿಕೊಂಡಿದ್ದು ಅದೇ ಪ್ರಕಾರ ಸ್ಥಳೀಯ ಆಶಾ ಕಾರ್ಯಕರ್ತೆಯರು ತಮ್ಮ  ಬೇಡಿಕೆಗಳ ಈಡೇರಿಕೆಗಾಗಿ ತಹಸಿಲ್ದಾರ್ ಮತ್ತು ಪುರಸಭೆ ಮುಖ್ಯಾಧಿಕಾರಿಗಳು ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.  ಸೋಮವಾರದಂದು ಸಲ್ಲಿಸಿದ ಮನವಿ ಪತ್ರದಲ್ಲಿ ಈಗಾಗಲೇ ತಿಳಿಸಿದಂತೆ ಇದೇ ಜುಲೈ 10 ರಿಂದ ಆರೋಗ್ಯಸೇವೆಯನ್ನು ಸ್ಥಗಿತಗೊಳಿಸಲಾಗಿದೆ.  ಬೇಡಿಕೆಗಳು ಮಾಸಿಕ 12 ಸಾವಿರ ರೂಗಳ ಗೌರವ ಖಾತರಿಪಡಿಸಬೇಕು.ಕೋವಿಡ 19  ವಿರುದ್ಧ ಹೋರಾಟದಲ್ಲಿ ಅಗತ್ಯ …

Read More »

ಕೇವಲ ಶಿಕ್ಷಕಿ ಮಾತ್ರವಲ್ಲ, SSLC ಮಕ್ಕಳ ತಾಯಿ – ಸುರೇಶ್ ಕುಮಾರ್ ಅಭಿನಂದನೆ

ಮಡಿಕೇರಿ: ತಾಯಿ ಮೃತಪಟ್ಟಿದ್ದರೂ ಎಸ್‍ಎಸ್‍ಎಲ್‍ಸಿ ಪರಿಕ್ಷಾ ಮೌಲ್ಯ ಮಾಪನಕ್ಕೆ ಹಾಜರಾಗಿ ವೃತ್ತಿ ಬದ್ಧತೆಗೆ ಮೆರೆದಿದ್ದ ಶಿಕ್ಷಕಿ ಕವಿತಾ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶಿಕ್ಷಣ ಇಲಾಖೆಯ ಪರವಾಗಿ ಧನ್ಯವಾದ ತಿಳಿಸಿದ್ದಾರೆ.   ಸುರೇಸ್ ಕುಮಾರ್ ಅವರು ಈ ಬಗ್ಗೆ ಟ್ವೀಟ್ ಮಾಡಿ ಶಿಕ್ಷಕಿ ಕವಿತಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. “ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯವೂ ಮುಖ್ಯ ಎಂಬ ಭಾವನೆಯಿಂದ ತನ್ನ ವೈಯಕ್ತಿಕ ನೋವನ್ನು ನುಂಗಿಕೊಂಡು SSLC ಮೌಲ್ಯಮಾಪನಕ್ಕೆ ಹಾಜರಾಗಿರುವ ಮಡಿಕೇರಿ …

Read More »

ಬೆಂಗಳೂರಿನಿಂದ ಮುಂದುವರಿದ ವಲಸೆ- ಬೆಳ್ಳಂಬೆಳಗ್ಗೆ ವಾಹನ ದಟ್ಟಣೆ ಶುರು

ಬೆಂಗಳೂರು: ಇಂದು ರಾತ್ರಿ 8 ಗಂಟೆಯ ಬಳಿಕ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ಲಾಕ್‍ಡೌನ್ ಹಿನ್ನೆಲೆಯಲ್ಲಿ ಇಂದು ಕೂಡ ಜನ ಬೆಂಗಳೂರು ತೊರೆಯುತ್ತಿದ್ದಾರೆ. ಕುಟುಂಬ ಸಮೇತ ಗಂಟು ಮೂಟೆ ಕಟ್ಟಿಕೊಂಡು ಜನರು ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಇವತ್ತು ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಮೆಜೆಸ್ಟಿಕ್‍ನಿಂದ ಗುಳೆ ಹೋಗುವವರ ಸಂಖ್ಯೆ ಕಡಿಮೆಯಾಗಿದೆ. ಒಂದು ವಾರ ಲಾಕ್‍ಡೌನ್ ಇದೆ. ಹೀಗಾಗಿ ಊರಲ್ಲಿ ಇದ್ದು ಬರೋಣ …

Read More »

ಔಷಧಿ ಅಂಗಡಿಗಳು ಮುಚ್ಚಿಕೊಂಡಿದ್ದರಿಂದ ಗ್ರಾಮೀಣ ಪ್ರದೇಶದಿಂದ ಬಂದಿರುವ ರೋಗಿಗಳು ಔಷಧಿ ದೊರೆಯದೇ ಪರದಾಡುವಂತಹ ಪರಿಸ್ಥಿತಿ

ಚಿಕ್ಕೋಡಿ: ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಚಿಕ್ಕೋಡಿ ಪಟ್ಟಣವನ್ನು ಸೋಮವಾರದಿಂದ ಜು. 20ರವರೆಗೆ ಲಾಕ್‍ಡೌನ್ ಮಾಡಲಾಗಿದೆ. ಆದರೆ ಲಾಕ್‍ಡೌನ್‍ಗೆ ಜನರಿಂದ ನಿರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಲಾಕ್‍ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳಿಗೆ ರಾಜ್ಯ ಸರ್ಕಾರ ರಿಯಾಯತಿ ನೀಡಿದೆ. ಆದರೆ ಚಿಕ್ಕೋಡಿ ಪಟ್ಟಣದಲ್ಲಿ ಜು.13 ರಿಂದ 20ರವರೆಗೆ ಅಂಗಡಿಕಾರರು ಸ್ವಯಂ ಪ್ರೇರಿತ ಲಾಕ್‍ಡೌನ್ ಘೋಷಣೆ ಮಾಡಿ ಸೋಮವಾರ ಅಂಗಡಿ ಮುಗ್ಗಟ್ಟುಗಳನ್ನು ಬಂದ ಮಾಡಿದ್ದಾರೆ. ಲಾಕ್‍ಡೌನ್ ಆರಂಭಿಸಿದ್ದರಿಂದ ಪಟ್ಟಣದಲ್ಲಿ ಔಷಧಿ ಅಂಗಡಿಗಳು ಮುಚ್ಚಿಕೊಂಡಿದ್ದರಿಂದ ಗ್ರಾಮೀಣ ಪ್ರದೇಶದಿಂದ …

Read More »

ಬೆಳಗ್ಗೆಯಿಂದಲೇ ಗಂಟೆಗಟ್ಟಲೇ ಟ್ರಾಫಿಕ್ ಜಾಮ್

ಬೆಂಗಳೂರು,ಜು.13- ನಾಳೆ ರಾತ್ರಿಯಿಂದ ಜಾರಿಯಾಗುತ್ತಿರುವ ಎರಡನೆ ಹಂತದ ಲಾಕ್‍ಡೌನ್ ಘೋಷಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಹೊರಹೋಗುತ್ತಿರುವವರು ಮತ್ತು ಬೆಂಗಳೂರಿಗೆ ಬರುತ್ತಿರುವವರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಟೋಲ್‍ಗಳ ಬಳಿ ಇಂದು ಬೆಳಗ್ಗೆಯಿಂದಲೇ ಭಾರೀ ಪ್ರಮಾಣದಲ್ಲಿ ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ ಸರ್ಕಾರ ಉಚಿತವಾಗಿ ವಾಹನಗಳನ್ನು ಬಿಡಲು ಸೂಚಿಸಿದೆ. ಕೊರೋನಾ ನಿಯಂತ್ರಣಕ್ಕಾಗಿ ನಾಳೆ ರಾತ್ರಿ 8 ಗಂಟೆಯಿಂದ 8 ದಿನ ಲಾಕ್‍ಡೌನ್ ಘೋಷಣೆ ಮಾಡಿದ್ದು, ಊರುಗಳಿಗೆ ತೆರಳುವವರು ಮತ್ತು ಬೆಂಗಳೂರಿಗೆ ಬರುವವರಿಗೆ ಅವಕಾಶವನ್ನು ನೀಡಿದ …

Read More »

ಗುರುವಾರದಿಂದ ಒಂದು ವಾರ ದಕ್ಷಿಣ ಕನ್ನಡ ಜಿಲ್ಲೆ ಲಾಕ್‍ಡೌನ್

ಮಂಗಳೂರು: ದಿನೇ ದಿನೇ ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಒಂದು ವಾರ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಗುರುವಾರದಿಂದ ಒಂದು ವಾರಗಳ ಕಾಲ ಲಾಕ್‍ಡೌನ್ ಘೋಷಣೆ ಮಾಡಿ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಆದೇಶ ಹೊರಡಿಸಿದ್ದಾರೆ. ಬುಧವಾರದ ತನಕ ಅಗತ್ಯ ವಸ್ತುಗಳ ಖರೀದಿಗೆ ಜನರಿಗೆ ಅವಕಾಶ ಮಾಡಿಕೊಡಲಾಗಿದೆ. ನಂತರ ಬುಧವಾರ ರಾತ್ರಿ 8 ಗಂಟೆಯಿಂದಲೇ ಲಾಕ್‍ಡೌನ್ ಆರಂಭವಾಗಲಿದೆ. ಇಂದು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ 11 …

Read More »

ಹಾಸನ ಜಿಲ್ಲೆಯನ್ನೂ ಲಾಕ್‍ಡೌನ್ ಮಾಡಿ: ಎಂಎಲ್‍ಸಿ ಗೋಪಾಲಸ್ವಾಮಿ

ಹಾಸನ: ಜಿಲ್ಲೆಯಲ್ಲಿ ಕೊರೊನಾ ವ್ಯಾಪಕವಾಗಿ ಹರಡುತ್ತಿರುವುದರಿಂದ ಜಿಲ್ಲೆಯನ್ನು ಲಾಕ್‍ಡೌನ್ ಮಾಡಿ ಎಂದು ಎಂಎಲ್‍ಸಿ ಗೋಪಾಲಸ್ವಾಮಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಜಿಲ್ಲೆಯನ್ನು ಈಗಾಗಲೇ ಜನರೇ ಸ್ವಯಂಪ್ರೇರಿತವಾಗಿ ಭಾಗಶಃ ಲಾಕ್‍ಡೌನ್ ಮಾಡಿದ್ದಾರೆ. ಚನ್ನರಾಯಪಟ್ಟಣ ತಾಲೂಕನ್ನು 14 ದಿನಗಳ ಕಾಲ ಸ್ವಯಂಪ್ರೇರಿತವಾಗಿ ಸಂಪೂರ್ಣ ಲಾಕ್‍ಡೌನ್ ಮಾಡಿ ಈಗಾಗಲೇ ಒಂದು ವಾರ ಕಳೆದಿದೆ. ಅಂದಿನಿಂದ ತಾಲೂಕಿನಲ್ಲಿ ಸೋಂಕು ಹರಡುತ್ತಿರುವ ಪ್ರಮಾಣ ಸ್ವಲ್ಪ ಕಡಿಮೆಯಾಗಿದೆ. ಚನ್ನರಾಯಪಟ್ಟಣದಂತೆಯೇ ಜಿಲ್ಲೆಯ ಅರಸೀಕೆರೆ, ಸಕಲೇಶಪುರ, ಹಾಸನ, ಹೊಳೆನರಸೀಪುರ ತಾಲೂಕುಗಳಲ್ಲೂ ಮಧ್ಯಾಹ್ನದ ನಂತರ …

Read More »

ದಾವಣಗೆರೆ ಮೂದಲ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿ ಖಬರಸ್ತಾನ್ ನಲ್ಲಿ ಪಿಎಫ್‍ಐ ಯುವಕರ ತಂಡ ನಡೆಸಿದೆ.

ಉಡುಪಿ: ಕೊರೊನಾದಿಂದ ಸಾವನ್ನಪ್ಪಿದ ದಾವಣಗೆರೆ ಮೂದಲ ವ್ಯಕ್ತಿಯ ಅಂತ್ಯಸಂಸ್ಕಾರವನ್ನು ಉಡುಪಿಯಲ್ಲಿ ಖಬರಸ್ತಾನ್ ನಲ್ಲಿ ಪಿಎಫ್‍ಐ ಯುವಕರ ತಂಡ ನಡೆಸಿದೆ. ದಾವಣಗೆರೆ ಮೂಲದ ವ್ಯಕ್ತಿ ಉಡುಪಿಯಲ್ಲಿ ಮೃತಪಟ್ಟಿದ್ದು ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ 72 ವರ್ಷದ ವೃದ್ಧ ಮಣಿಪಾಲ ಕೆಎಂಸಿಗೆ ಭೇಟಿ ಕೊಟ್ಟಿದ್ದರು. ಚಿಕಿತ್ಸಾ ಸಂದರ್ಭ ಅವರಲ್ಲಿ ಕೊರೊನಾದ ಲಕ್ಷಣಗಳು ಕಂಡು ಬಂದಿತ್ತು. ರೋಗಿಯನ್ನು ಕೂಡಲೇ ಟಿಎಂಎ ಪೈ ಕೋವಿಡ್ ಆಸ್ಪತ್ರೆಗೆ ವ್ಯಕ್ತಿಯನ್ನು ಶಿಫ್ಟ್ ಮಾಡಲಾಗಿತ್ತು. ಉಸಿರಾಟದ …

Read More »

ಆನ್‍ಲೈನ್ ಬೆಟ್ಟಿಂಗ್ ಗೇಮ್‍ವೊಂದರಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ

ಹೈದರಾಬಾದ್: ಆನ್‍ಲೈನ್ ಬೆಟ್ಟಿಂಗ್ ಗೇಮ್‍ವೊಂದರಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಥೋಟಾ ಮಧುಕರ್ (24) ಆತ್ಮಹತ್ಯೆ ಮಾಡಿಕೊಂಡ ಎಂಜಿನಿಯರಿಂಗ್ ವಿದ್ಯಾರ್ಥಿ. ಮಧುಕರ್ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದನು. ನಾಲ್ಕು ದಿನಗಳ ಹಿಂದೆ ನಿಷೇಧಿತ ಆಟದಲ್ಲಿ 15 ಲಕ್ಷ ಹಣ ಕಳೆದುಕೊಂಡ ನಂತರ ಮಧುಕರ್ ವಿಷ ಕುಡಿದಿದ್ದಾನೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧುಕರ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ …

Read More »

ಸೂರ್ಯ ಚಂದ್ರ ಇರುವವರಿಗೆ ಪಿಎಸ್‌ಎಸ್‌ಕೆ ಇರಬೇಕು : ಮುರುಗೇಶ್ ನಿರಾಣಿ

ಪಾಂಡವಪುರ,ಜು‌.12ವಿದ್ಯುತ್ ಉತ್ಪಾದನೆ ,ಡಿಸ್ಟಿಲರಿ ಆರಂಭ ಸೇರಿದಂತೆ ಎಲ್ಲಾ ಉಪ ಉತ್ಪನ್ನಗಳ ತಯಾರಿಸಿ ಕಬ್ಬು ಬೆಳೆಗಾರರಿಗೆ ಹಾಗೂ ಕಾರ್ಮಿಕರಿಗೆ ಹೆಚ್ಚಿನ ಹಣಪಾವತಿಸುವುದು ತಮ್ಮ ಸಂಕಲ್ಪ ಮಾಜಿ ಸಚಿವ ಮುರುಗೇಶ್ ನಿರಾಣಿ ಭರವಸೆ ನೀಡಿದರು. ಪಿಎಸ್ ಎಸ್ ಕೆ ಯಲ್ಲಿ ಕಾರ್ಮಿಕರು ಹಾಗೂ ರೈತ ಮುಖಂಡರನ್ನು ಉದ್ದೇಶಿಸಿ ಅವರು ಮಾತನಾಡಿದರು. ಈ ಕಾರ್ಖಾನೆಯಲ್ಲಿ ಕಸ ಗುಡಿಸುವವರಿಂದ ಹಿಡಿದು ಮುಖ್ಯ ತಂತ್ರಜ್ಞರು ಸೇರಿದಂತೆ ಎಲ್ಲರೂ ಒಂದೇ ಕುಟುಂಬದವರಂತೆ ,ನಾಟಕದಲ್ಲಿ ಬರುವಂತೆ ಎಲ್ಲರದೂ ಒಂದೊಂದು ಪಾತ್ರ …

Read More »