Breaking News
Home / Uncategorized (page 668)

Uncategorized

ಲಾಕ್‍ಡೌನ್ ಸಮಯದಲ್ಲಿ ಎಣ್ಣೆ ಕಳ್ಳತನ ಮಾಡಿದ್ದ ಇಬ್ಬರು ಖತರ್ನಾಕ್ ಮದ್ಯ ಕಳ್ಳರ….

ಹಾಸನ: ಲಾಕ್‍ಡೌನ್ ಸಮಯದಲ್ಲಿ ಎಣ್ಣೆ ಕಳ್ಳತನ ಮಾಡಿ ಮತ್ತೆ ಲಾಕ್‍ಡೌನ್ ಆದರೆ ಹೆಚ್ಚು ಬೆಲೆಗೆ ಮಾರಬಹುದು ಎಂದು ಪ್ಲಾನ್ ಮಾಡಿದ್ದ ಇಬ್ಬರು ಖತರ್ನಾಕ್ ಮದ್ಯ ಕಳ್ಳರನ್ನು ಜಿಲ್ಲೆಯ ಸಕಲೇಶಪುರ ತಾಲೂಕಿನ ಪೊಲೀಸರು ಬಂಧಿಸಿದ್ದಾರೆ. ಮೋಹನ್ (31) ಮತ್ತು ಚಂದ್ರು (42) ಬಂಧಿತ ಆರೋಪಿಗಳು. ಇತ್ತೀಚಿನ ದಿನಗಳಲ್ಲಿ ಸಕಲೇಶಪುರ ತಾಲೂಕು ಸೇರಿದಂತೆ ಹಾಸನ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ವ್ಯಾಪಕವಾಗಿ ಮದ್ಯದ ಕಳ್ಳತನ ನಡೆಯುತ್ತಿತ್ತು. ಹೀಗಾಗಿ ಸಕಲೇಶಪುರ ಪೊಲೀಸ್ ಸಿಬ್ಬಂದಿ ನೇತೃತ್ವದಲ್ಲಿ ತನಿಖಾ …

Read More »

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್‍ಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್‍ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅಮಿತಾಬ್ ಟ್ವೀಟ್ ಮಾಡಿ ಖಚಿತಪಡಿಸಿದ್ದು, ನನಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆಸ್ಪತ್ರೆಗೆ ಸ್ಥಳಾಂತರಗೊಂಡಿದ್ದೇನೆ. ನಮ್ಮ ಕುಟುಂಬದವರು ಹಾಗೂ ಸಿಬ್ಬಂದಿಯನ್ನು ಸಹ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿಗಾಗಿ ಕಾಯುತ್ತಿದ್ದೇವೆ ಎಂದು ಬರೆದುಕೊಂಡಿದ್ದಾರೆ. ಕಳೆದ 10 ದಿನಗಳಿಂದ ನನ್ನ ಜೊತೆ ಯಾರ್ಯಾರು ಸಂಪರ್ಕದಲ್ಲಿದಿರೋ ಅವರೆಲ್ಲರೂ ದಯವಿಟ್ಟು ಸ್ವಯಂ ಪ್ರೇರಿತವಾಗಿ ಕೊರೊನಾ ಪರೀಕ್ಷೆಗೆ ಒಳಗಾಗುವಂತೆ ವಿನಂತಿಸುತ್ತೇನೆ ಎಂದು ಬರೆದಿದ್ದಾರೆ. …

Read More »

ವೃದ್ಧಾಪ್ಯದಲ್ಲೂ ಕೊರೊನಾ ಗೆದ್ದ ರಾಯಚೂರಿನ 12 ಜನ ಗಟ್ಟಿಗರು

ರಾಯಚೂರು: ಅರವತ್ತು ವರ್ಷ ಮೇಲ್ಪಟ್ಟವರಿಗೆ ಕೊರೊನಾ ಸೋಂಕು ತಗುಲಿದರೆ ಪ್ರಾಣಾಪಾಯ ಹೆಚ್ಚು ಅನ್ನೋದನ್ನ ರಾಯಚೂರಿನ 12 ಜನ ವೃದ್ಧರು ಮೆಟ್ಟಿನಿಂತು ಮಹಾಮಾರಿ ವಿರುದ್ಧ ಗೆದ್ದು ಹೊರಬಂದಿದ್ದಾರೆ. 60 ರಿಂದ 73 ವರ್ಷದ ಮಧ್ಯದ 12 ಜನರು ಕೊರೊನಾ ಸೋಂಕಿನಿಂದ ಗೆದ್ದು ಬಂದು ಸಂಪೂರ್ಣ ಗುಣಮುಖರಾಗುವ ಮೂಲಕ ಸೋಂಕಿತರಲ್ಲಿನ ಭಯ ಹೋಗಲಾಡಿಸಲು ಮಾದರಿಯಾಗಿದ್ದಾರೆ ಜಿಲ್ಲೆಯಲ್ಲಿ ಇದುವರೆಗೆ 631 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 442 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ …

Read More »

ಸಿದ್ದರಾಮಯ್ಯ ಕನ್ನಡಿಯಲ್ಲಿ ಮುಖ ನೋಡಿಕೊಳ್ಳಲಿ- ನಳಿನ್ ಕುಮಾರ್ ತಿರುಗೇಟು

ಮಡಿಕೇರಿ: ರಾಜ್ಯದಲ್ಲಿ ಮೆಡಿಕಲ್ ಕಿಟ್ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ ಒಮ್ಮೆ ಅವರ ಮುಖವನ್ನು ಕನ್ನಡಿಯಲ್ಲಿ ನೋಡಿಕೊಳ್ಳಲಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟಿಲ್ ತಿರುಗೇಟು ನೀಡಿದ್ದಾರೆ. ಮಡಿಕೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಳಿನ್ ಕುಮಾರ್, ಅವರ ಸರ್ಕಾರ ಇದ್ದಾಗ ಇಂದಿರಾ ಕ್ಯಾಂಟಿನ್ ಹೆಸರಿನಲ್ಲಿ ಎಷ್ಟು ಅವ್ಯವಹಾರ ನಡೆಸಿದರು ಎನ್ನೋದು ಗೊತ್ತಿದೆ. ಮೊದಲು ಅದರ ಲೆಕ್ಕವನ್ನು ಕೊಡಲಿ. ಈಶ್ವರ ಕಂಡ್ರೆ …

Read More »

ಬೆಳಗಾವಿ ಜಿಲ್ಲೆಯ ಕಡೆಯಿಂದಲೂ ಕಾಮಗಾರಿ ಆರಂಭಿಸಬೇಕು ಎಂದು ತಿಳಿಸಿದರು.

ಬೆಳಗಾವಿ: ಕುಡಚಿ-ಬಾಗಲಕೋಟೆ ರೈಲು ಮಾರ್ಗ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ರೈಲ್ವೆ ಇಲಾಖೆಗೆ ಜಮೀನು ಹಸ್ತಾಂತರಿಸಿದರೆ ಶೀಘ್ರ ಕಾಮಗಾರಿಯನ್ನು ಪೂರ್ಣಗೊಳಿಸುವುದು ರೈಲ್ವೆ ಇಲಾಖೆಯ ಪ್ರಥಮ ಆದ್ಯತೆಯಾಗಿದೆ ಎಂದು ಸಚಿವ ಸುರೇಶ್ ಅಂಗಡಿ ಹೇಳಿದರು. ಜಿಲ್ಲಾ ಕಚೇರಿಯ ಸಭಾಂಗಣದಲ್ಲಿ ಶನಿವಾರ ನಡೆದ ಬೆಳಗಾವಿ-ಬಾಗಲಕೋಟೆ ಜಿಲ್ಲೆಯ ಜಿಲ್ಲಾಧಿಕಾರಿಗಳು ಮತ್ತು ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಮ್ಮೆ ಭೂಸ್ವಾಧೀನ ಪ್ರಕ್ರಿಯೆ ಆರಂಭಗೊಂಡರೆ ಡಿಪಿಆರ್ ಮತ್ತು …

Read More »

ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು.

ಬೆಳಗಾವಿ: ಪಾಚ್ಛಾಪೂರ ಜಿಲ್ಲಾ ಪಂಚಾಯತ ಹಾಗೂ ಹತ್ತರಗಿ ಠಾಣಾ ಜಿಲ್ಲಾ ಪಂಚಾಯತ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿನ ಕಾಮಗಾರಿಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಶನಿವಾರ ಚಾಲನೆ ನೀಡಿದರು. ಅರಳಿಕಟ್ಟಿ, ಹಳೆವಂಟಮೂರಿ, ಬಿರನಹೊಳಿ, ಕಾಟಾಬಳಿ, ಇಸ್ಲಾಂಪೂರ, ಚಿಕ್ಕಲದಿನ್ನಿ, ಶಹಾಬಂದರ, ಗೆಜಪತಿ, ಗುಟಗುದ್ದಿ, ರಾಜಕಟ್ಟಿ ಗ್ರಾಮಗಳಿಗೆ ಭೇಟಿ ನೀಡಿ, ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಇದ್ದರು. ‌

Read More »

ಅನುಷ್ಕಾ ಶರ್ಮಾ ಹಾಟ್ ಫೋಟೋಗಳಿಗೆ ಕೊಹ್ಲಿ ರಿಯಾಕ್ಷನ್..!

ಮುಂಬೈ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಮದುವೆ ಬಳಿಕವೂ ಸಿನಿಮಾಗಳಿಂದ ದೂರವೇ ಉಳಿದ್ದರೂ ತಮ್ಮ ಹಾಟ್ ಫೋಟೋಶೂಟ್ ಸಾಕಷ್ಟು ಸುದ್ದಿಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿರುವ ಅನುಷ್ಕಾ ಅಭಿಮಾನಿಗಳೊಂದಿಗೆ ತಮ್ಮ ಹೊಸ ಫೋಟೋಶೂಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಅನುಷ್ಕಾ ಶರ್ಮಾ ವೋಗ್ ಇಂಡಿಯಾಗಾಗಿ ಫೋಟೋಶೂಟ್ ಮಾಡಿದ್ದು, ಈ ಫೋಟೋವೊಂದನ್ನು ತಮ್ಮ ಇನ್‍ಸ್ಟಾದಲ್ಲಿ ಪೋಸ್ಟ್ ಮಾಡಿದ್ದರು. ಈ ಫೋಟೋ ಅನುಷ್ಕಾ ಪತಿ ವಿರಾಟ್ ಕೊಹ್ಲಿ ಕೂಡ ಪ್ರತಿಕ್ರಿಯೆ ನೀಡಿ ಕಾಮೆಂಟ್ ಮಾಡಿದ್ದು, ಹಾರ್ಟ್ …

Read More »

ಕರೆ ಮಾಡಿ ಒಂದು ಗಂಟೆ ಕಳೆದ್ರೂ ಅಂಬುಲೆನ್ಸ್ ಸ್ಥಳಕ್ಕೆ ಬಂದಿಲ್ರಸ್ತೆಯಲ್ಲೇ ಒದ್ದಾಡಿದ ಗಾಯಾಳುಗಳು!

ಬೆಂಗಳೂರು: ರಾಜ್ಯದಲ್ಲಿ ಅಂಬುಲೆನ್ಸ್ ಗಳ ಕೊರತೆ ಇಲ್ಲ ಅಂತ ಸರ್ಕಾರ ಹೇಳುತ್ತಿದೆ. ಆದರೆ ಕೊರೊನಾ ರೋಗಿಗಳ ಶಿಫ್ಟ್‍ಗೆ ಅಂಬುಲೆನ್ಸ್ ಬರದೇ ಒದ್ದಾಡಿದ್ದನ್ನು ನೋಡಿದ್ರಿ. ಇದೀಗ ಅಪಘಾತವಾಗಿ ರೋಗಿಗಳಿಗೂ ಅಂಬುಲೆನ್ಸ್ ಸಿಗುತ್ತಿಲ್ಲ. ಹೌದು. ನಿನ್ನೆ ನೈಸ್ ರಸ್ತೆಯಲ್ಲಿ ಬೈಕ್ ಸೆಲ್ಫ್ ಆಕ್ಸಿಡೆಂಟ್ ಆಗಿ ಬಂಡೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ನಲ್ಲಿದ್ದ ಮೂವರು ಯುವಕರಿಗೆ ಗಂಭೀರ ಗಾಯವಾಗಿ ಪ್ರಜ್ಞೆ ತಪ್ಪಿದ್ದಾರೆ. ಕೂಡಲೇ ನೈಸ್ ಸಿಬ್ಬಂದಿ 108 ಗೆ ಕರೆ ಮಾಡಿದ್ದಾರೆ. ಆದರೆ …

Read More »

ದುಬೆ ನಂತರ ಮತ್ತೋರ್ವ ಗ್ಯಾಂಗ್ ಸ್ಟರ್ ಹತ್ಯೆ – ಯುಪಿಯಲ್ಲಿ ಇಂದು ಡಬಲ್ ಎನ್‍ಕೌಂಟರ್

ಲಕ್ನೋ: ರೌಡಿ ಶೀಟರ್ ವಿಕಾಸ್ ದುಬೆ ನಂತರ ಉತ್ತರ ಪ್ರದೇಶದಲ್ಲಿ ಇನ್ನೊಬ್ಬ ಗ್ಯಾಂಗ್ ಸ್ಟರ್ ಅನ್ನು ಹತ್ಯೆ ಮಾಡಿದ್ದು, ಇಂದು ಒಂದೇ ದಿನ ಎರಡು ಎನ್‍ಕೌಂಟರ್ ಗಳು ನಡೆದಿವೆ. ಇಂದು ಮುಂಜಾನೆ ಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ವಿಕಾಸ್ ದುಬೆಯನ್ನು ಪೊಲೀಸರು ಎನ್‍ಕೌಂಟರ್ ಮಾಡಿದ್ದರು. ಇದಾದ ಬಳಿಕ 36 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿ ಪನ್ನಾ ಯಾದವ್‍ನನ್ನು ವಿಶೇಷ ಕಾರ್ಯಪಡೆಯ (ಎಸ್‍ಟಿಎಫ್) ಪೊಲೀಸ್ ಅಧಿಕಾರಿಗಳು ಬಹ್ರೈಚ್‍ನ ಹಾರ್ಡಿ …

Read More »

ಪೊಲೀಸ್ ಕಮಿಷನರ್ ಕಚೇರಿಯಲ್ಲಿ 12 ಸಿಬ್ಬಂದಿಗೆ ಕೊರೊನಾ,ಆಯುಕ್ತರ ಕಚೇರಿ ಸೀಲ್‍ಡೌನ್

ಬೆಂಗಳೂರು: ಪೊಲೀಸ್ ಕಮಿಷನರ್ ಕಚೇರಿಯಲ್ಲಿ 12 ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ. ಮೂರು ದಿನಗಳ ಕಾಲ ಪೊಲೀಸ್ ಆಯುಕ್ತರ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ. ಇದುವರೆಗೂ ವಿವಿಧ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, ಪೊಲೀಸ್ ಸೋಂಕಿತರ ಸಂಖ್ಯೆ 450ಕ್ಕೆ ಏರಿಕೆಯಾಗಿದೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸಿಸಿಆರ್ ಬಿ ವಿಭಾಗದಲ್ಲಿ 8 ಮತ್ತು ಅಡ್ಮಿನ್ ವಿಭಾಗದಲ್ಲಿ ನಾಲ್ವರಿಗೆ ಕೊರೊನಾ ಪಾಸಿಟಿವ್ …

Read More »