Breaking News
Home / Uncategorized (page 671)

Uncategorized

ಸೋಮವಾರದಿಂದ ಕೆಲಸಕ್ಕೆ ಹಾಜರಾಗಿ- ಬಿಎಂಟಿಸಿಯಿಂದ ನೌಕರರಿಗೆ ಸೂಚನೆ…

ಬೆಂಗಳೂರು: ಸೋಮವಾರದಿಂದ ಕೆಲಸಕ್ಕೆ ಹಾಜರಾಗುವಂತೆ ಬಿಎಂಟಿಸಿಯಿಂದ ನೌಕರರಿಗೆ ಸೂಚಿಸಿದೆ ಎಂಬ ಮಾಹಿತಿ  ಲಭ್ಯವಾಗಿದೆ. ಸೋಮವಾರದಿಂದ ಬಸ್ ಸಂಚಾರ ಇರುತ್ತದೆ ಎಂದು ತಿಳಿಸಲಾಗಿದ್ದು, ಈ ಮೂಲಕ ಸೋಮವಾರದಿಂದ ಬಿಎಂಟಿಸಿ ಸಂಚಾರ ಆರಂಭವಾಗುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ನೌಕರರಿಗೆ ಮೆಜೆಸ್ಟಿಕ್ ಬಿಎಂಟಿಸಿ ನಿಲ್ದಾಣ, ಶಾಂತಿನಗರ ಸಾರಿಗೆ ಘಟಕ, ಶಾಂತಿ ನಗರ ಬಿಎಂಟಿಸಿ ಆಸ್ಪತ್ರೆ, ಯಶವಂತಪುರ ಬಿಎಂಟಿಸಿ ಘಟಕ, ಕೆಂಗೇರಿ ಟಿಟಿಎಂಸಿ ಹಾಗೂ ಹೆಣ್ಣೂರು ಘಟಕಗಳಲ್ಲಿ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ. ಶುಕ್ರವಾರ ಸುತ್ತೋಲೆ …

Read More »

SSLC ಪರೀಕ್ಷೆ ದಿನಾಂಕ ಸೋಮವಾರ ನಿಗದಿ ಸಾಧ್ಯತೆ……..

ಚಾಮರಾಜನಗರ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದು ಗಡಿ ಜಿಲ್ಲೆ ಚಾಮರಾಜನಗರಕ್ಕೆ ಭೇಟಿ ನೀಡಿದ್ದು, ಸೋಮವಾರ ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ದಿನಾಂಕವನ್ನು ನಿಗದಿಗೊಳಿಸುವ ಸಾಧ್ಯತೆ ಇದೆ ಎಂದಿದ್ದಾರೆ. ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈಗಾಗಲೆ ನಮ್ಮ ನಾಡಿನ ಹಿರಿಯರೊಂದಿಗೆ ಚರ್ಚೆ ನಡೆಸಲಾಗಿದೆ. ಕೊರೊನಾ ಹೆಮ್ಮಾರಿಯಿಂದ ಶಿಕ್ಷಣ ಇಲಾಖೆಗೆ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಿ ತರಗತಿಗಳು ಹೇಗಿರಬೇಕು ಅಂತಾ ಚರ್ಚೆ ನಡೆಸುತ್ತಿದ್ದೇವೆ. ನಾಳೆ ಶಿಕ್ಷಕರ ಮತ್ತು ಪದವೀದರ ಕ್ಷೇತ್ರದ ಪರಿಷತ್ ಸದಸ್ಯರ ಜೊತೆ …

Read More »

ಜೂನ್ 5ರಿಂದ ಈ ಬಾರಿ ಮಳೆಗಾಲ ಶುರು

ನವದೆಹಲಿ: ಈ ಬಾರಿಯ ನೈರುತ್ಯ ಮಾನ್ಸೂನ್ ಮಾರುತಗಳ ಆಗಮನ ವಿಳಂಬವಾಗಲಿದೆ ಎಂದು ಕೇಂದ್ರ ಹವಮಾನ ಇಲಾಖೆ ತಿಳಿಸಿದೆ. ಮಾನ್ಸೂನ್ ಆರಂಭಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಐಎಂಡಿ, ಜೂನ್ 1 ರ ಬದಲು 5ರಂದು ಮಾನ್ಸೂನ್ ಮಾರುತಗಳು ಕೇರಳ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮಾನ್ಸೂನ್ ಆರಂಭ ನಾಲ್ಕು ದಿನ ವಿಳಂಬವಾಗಲಿದೆ ಎಂದು ಅಂದಾಜಿಸಿದೆ. ಕಳೆದ ವರ್ಷವೂ ಜೂನ್ 6ರಂದು ದೇಶದಲ್ಲಿ ಮಾನ್ಸೂನ್ ಆರಂಭವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ …

Read More »

ಬೆಳಗಾವಿ: ಡಿ ಗ್ರೂಪ್ ನೌಕರರು ಗುತ್ತಿಗೆದಾರರಿಗೆ ಹಣಕೊಡಬೇಕಂತೆ. ಈ ಸಂಬಂಧ ಕೊರೊನಾ ವಾರಿಯರ್ಸ್ಕ್ಯಾ ಕಣ್ಣೀರು

ಬೆಳಗಾವಿ: ಕಳೆದ ಎರಡು ತಿಂಗಳಿಂದ ಮನೆ ಮಠ ಬಿಟ್ಟು ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್ ಸೇವೆ ಸಲ್ಲಿಸ್ತಾ ಇದ್ದಾರೆ. ಆದರೆ ಇಲ್ಲೊಂದು ಆಸ್ಪತ್ರೆಯಲ್ಲಿ ಕೊರೊನಾ ಡ್ಯೂಟಿ ಬೇಡ ಅಂದ್ರೆ ಡಿ ಗ್ರೂಪ್ ನೌಕರರು ಗುತ್ತಿಗೆದಾರರಿಗೆ ಹಣಕೊಡಬೇಕಂತೆ. ಈ ಸಂಬಂಧ ಕೊರೊನಾ ವಾರಿಯರ್ಸ್ಕ್ಯಾ ಕಣ್ಣೀರು ಹಾಕಿದ್ದಾರೆ. ರಾಜ್ಯದಲ್ಲಿ ಕೊರೊನಾ ರಣಕೇಕೆ ಹಾಕ್ತಿದೆ. ಸೋಂಕಿತರನ್ನು ಮಹಾಮಾರಿ ವೈರಸ್‍ನಿಂದ ಕಾಪಾಡಲು ಕೊರೊನಾ ವಾರಿಯರ್ಸ್ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸ್ತಿದ್ದಾರೆ. ಆದರೆ ರಕ್ಷಕರಿಗೆ ರಕ್ಷಣೆ ಇಲ್ಲ …

Read More »

ಇಂದು 28 ಮಂದಿಗೆ ಕೊರೊನಾ – 987ಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಕಬಂಧಬಾಹುಗಳು ಹರಡಿಕೊಳ್ಳುತ್ತಿದೆ. ಇಂದು ಒಂದೇ ದಿನ 28 ಮಂದಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 987ಕ್ಕೆ ಏರಿಕೆಯಾಗಿದ್ದು, ಈ ಪೈಕಿ 460 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ ಇನ್ನೂ 491 ಜನರು ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೂ 35 ಮಂದಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿದ ಬುಲೆಟಿನ್ ಮಾಹಿತಿ ಪ್ರಕಾರ, ಬೆಂಗಳೂರಿನಲ್ಲಿ …

Read More »

ಒನ್ ನೇಷನ್, ಒನ್ ರೇಷನ್ ಕಾರ್ಡ್ – ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ

ನವದೆಹಲಿ: ಮುಂದಿನ ಎರಡು ತಿಂಗಳೂ 8 ಕೋಟಿ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ವಿತರಣೆ, ಬೀದಿ ಬದಿ ವ್ಯಾಪಾರಿಗಳಿಗೆ 10 ಸಾವಿರ ಸಾಲ, ರೈತರಿಗೆ ಸಾಲದ ಬಡ್ಡಿಯಿಂದ ವಿನಾಯಿತಿ – ಇದು ಕೇಂದ್ರ ಸರ್ಕಾರ ಇಂದು ಪ್ರಕಟಿಸಿದ ಪ್ಯಾಕೇಜ್ ಗಳ ಮುಖ್ಯಾಂಶಗಳು. ಕೈಗಾರಿಕೆ, ಉದ್ಯಮ, ರಿಯಲ್ ಎಸ್ಟೇಟ್, ಕಾರ್ಮಿಕರಿಗೆ ಪ್ಯಾಕೇಜ್ ಪ್ರಕಟಿಸಿದರೆ ಇಂದು ಬಡವರು, ಕೃಷಿ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ವಲಸೆ ಕಾರ್ಮಿಕರಿಗೆ ಸಂಬಂಧಿಸಿದಂತೆ ಪ್ಯಾಕೇಜ್ ಪ್ರಕಟ ಮಾಡಿದೆ. …

Read More »

3 ವರ್ಷ ಪ್ರೀತಿಸಿ ಒಂದು ತಿಂಗ್ಳ ಹಿಂದೆ ಮದುವೆ – ದಂಪತಿ ಆತ್ಮಹತ್ಯೆ

ಚೆನ್ನೈ: ಪ್ರೀತಿಸಿ ಒಂದು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ತಿರುವಣ್ಣಾಮಲೈ ಜಿಲ್ಲೆಯಲ್ಲಿ ನಡೆದಿದೆ. ಜಯಕುಮಾರ್ ಮತ್ತು ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿರುವ ದಂಪತಿ. ತಿರುವಣ್ಣಾಮಲೈ ಜಿಲ್ಲೆಯ ಜಯಕುಮಾರ್ ಮತ್ತು ಕೃಷ್ಣಗಿರಿ ಜಿಲ್ಲೆಯ ಕಲ್ಲೂರು ಗ್ರಾಮದ ವಿಜಯಲಕ್ಷ್ಮಿ ಕಳೆದ ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಪ್ರೀತಿಯ ಬಗ್ಗೆ ಮನೆಯಲ್ಲಿ ತಿಳಿಸಿದ್ದಾರೆ. ಆರಂಭದಲ್ಲಿ ಕುಟುಂಬ ಸದಸ್ಯರು ಇವರ ಪ್ರೀತಿಗೆ ಒಪ್ಪಿಗೆ ನೀಡಲಿಲ್ಲ. ಜಯಕುಮಾರ್ ಮತ್ತು …

Read More »

ಸಿಎಸ್‍ಕೆ ಪರ ಧೋನಿಗಿಂತಲೂ ಹೆಚ್ಚು ಪಂದ್ಯ ಆಡಿದ್ದಾರೆ ರೈನಾ………

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಅತ್ಯಂತ ಸ್ಥಿರವಾದ ಫ್ರ್ಯಾಂಚೈಸ್‍ಗಳಲ್ಲಿ ಒಂದಾದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‍ಕೆ) ಇದುವರೆಗೂ ಒಬ್ಬ ನಾಯಕನನ್ನು ಮಾತ್ರ ಹೊಂದಿದೆ. ಎಂ.ಎಸ್ ಧೋನಿ ಅವರು ಮೊದಲು 9.5 ಕೋಟಿ ರೂ.ಗೆ ತಂಡವನ್ನು ಸೇರಿಕೊಂಡಿದ್ದರು. ಅವರು ಪ್ರತಿ ಬಾರಿಯ ಐಪಿಎಲ್‍ನಲ್ಲಿ ಸಿಎಸ್‍ಕೆ ತಂಡವನ್ನು ಮುನ್ನಡೆಸಿದ್ದಾರೆ. ಅವರ ನೇತೃತ್ವದಲ್ಲಿ ಸಿಎಸ್‍ಕೆ ತಂಡವು ಪ್ರತಿ ಬಾರಿಯೂ ಪ್ಲೇಆಫ್‍ನಲ್ಲಿ ಸ್ಥಾನ ಪಡೆಯುತ್ತಾ ಬಂದಿದೆ. ಅಷ್ಟೇ ಅಲ್ಲದೆ ಮತ್ತು ಇದುವರೆಗೂ ಮೂರು ಬಾರಿ …

Read More »

20 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಬೆನ್ನಲ್ಲೇ ಷೇರು ಪೇಟೆಯಲ್ಲಿ ಸಂಚಲನ

ಮುಂಬೈ, ಮೇ 13-ಕೊರೊನಾ ವೈರಸ್ ದಾಳಿಯಿಂದ ಅಲ್ಲೋಲ-ಕಲ್ಲೋಲವಾಗಿರುವ ದೇಶದ ಆರ್ಥಿಕತೆಗೆ ಪುಷ್ಟಿ ನೀಡಲು ಪ್ರಧಾನಿ ನರೇಂದ್ರ ಮೋದಿ 20 ಲಕ್ಷ ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ಘೋಷಿಸಿದ ನಂತರ ಷೇರುಪೇಟೆಯಲ್ಲಿ ಭಾರೀ ಸಂಚಲನ ಕಂಡುಬಂದಿದೆ. ಮುಂಬೈ ಷೇರು ವಿನಿಮಯ ಕೇಂದ್ರದ ಸಂವೇದಿ ಸೂಚ್ಯಂಕ (ಸೆನ್‍ಸೆಕ್ಸ್)ದಲ್ಲಿ ಇಂದು ಬೆಳಗ್ಗೆ 1,400 ಪಾಯಿಂಟ್‍ಗಳ ಜಿಗಿತವಾಗಿದೆ. ಷೇರುಪೇಟೆಯ ಇಂದಿನ ಆರಂಭಿಕ ವಹಿವಾಟಿನಲ್ಲೇ ಭಾರೀ ಏರಿಕೆ ಗೋಚರಿಸಿದೆ. 30 ಷೇರು ಸೂಚ್ಯಂಕದಲ್ಲಿ 818.68 ಪಾಯಿಂಟ್‍ಗಳು ಅಥವಾ …

Read More »

ಮೈತ್ರಿ ಸರ್ಕಾರದ ಪತನ ಕುರಿತು ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ತುಮಕೂರು: ಮೈತ್ರಿ ಸರ್ಕಾರದ ಪತನ ಕುರಿತು ಸಚಿವ ರಮೇಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತುಮಕೂರಿನ ಗೂಗಡನಹಳ್ಳಿ ಕೆರೆಯ ವೀಕ್ಷಣೆ ವೇಳೆ ರಮೇಶ್ ಜಾರಕಿಹೊಳಿ ಮತ್ತು ಕೆ.ಎನ್.ರಾಜಣ್ಣ ಭೇಟಿಯಾಗಿದ್ದರು. ಈ ವೇಳೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಿದ್ದು ನಾನೇ ಎಂದು ಸಚಿವ ರಮೇಶ್ ಜಾರಕಿಹೊಳಿ ಒಪ್ಪಿಕೊಂಡಿದ್ದಾರೆ. ಮೈತ್ರಿ ಸರ್ಕಾರ ಪತನಕ್ಕಾಗಿ ಕಾಂಗ್ರೆಸ್ ಮಾಜಿ ಶಾಸಕ, ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ನಮಗೆ ಬೆಂಬಲ ನೀಡಿದರು. ಸರ್ಕಾರ ಬೀಳಿಸಲು ಒಂದು ಉದ್ದೇಶವಿತ್ತು. ಹಾಗಾಗಿ …

Read More »