ಯಾದಗಿರಿ: ನದಿ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಪುಟ್ಟ ಕಂದಮ್ಮನನ್ನು ರಕ್ಷಣೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ರೋಜಾ ಗ್ರಾಮದ ಬಳಿ ಈ ಘಟನೆ ನಡೆದಿದೆ. ಭೀಮಾ ನದಿ ಹಿನ್ನೀರು ಗ್ರಾಮ ನಡುಗಡ್ಡೆಯಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಬೋಟ್ ಮೂಲಕ ಸಂಚಾರ ಮಾಡುತ್ತಿದ್ದರು. ಹೀಗೆ ರಜಿಯಾ ಬೇಗಂ ಅವರು ಕೂಡ ತನ್ನ ಪುಟ್ಟ ಮಗುವಿನೊಂದಿಗೆ ತೆಪ್ಪದಲ್ಲಿ ತಮ್ಮ ಗ್ರಾಮಕ್ಕೆ ತೆರಳಿದ್ದಾರೆ. ಈ ವೇಳೆ ಏಕಾಏಕಿ ತೆಪ್ಪ ಅಲುಗಾಡಿ ಮಗು ರಜಿಯಾ ಅವರ …
Read More »ಜಗನ್‌ಮೋಹನ್ರೆಡ್ಡಿ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಅನರ್ಹರೆಂದು ಪರಿಗಣಿಸಬೇಕೆಂದು ಪಿಐಎಲ್
ಹೊಸದಿಲ್ಲಿ : ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಕೋರಿ ಜಿ.ಎಸ್. ಮಣಿ ಹಾಗೂ ಪ್ರದೀಪ್ ಕುಮಾರ್ ಯಾದವ್ ಎಂಬ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್ ಹಾಲಿ ನ್ಯಾಯಾಧೀಶರಾದ ಜಸ್ಟಿಸ್ ಎನ್.ವಿ. ರಮಣ ವಿರುದ್ಧ ಸಿಎಂ ಹಗರಣದ ಆರೋಪ ಹೊರಿಸಿರುವ ಹಿನ್ನೆಲೆಯಲ್ಲಿ ಅರ್ಜಿ ಅಲ್ಲಿಸಿದ್ದಾರೆ. ಜಗನ್ ರೆಡ್ಡಿ ಸ್ವಯಂ ಅಕ್ರಮ ಹಣ ವರ್ಗಾವಣೆ ಹಾಗೂ ಭ್ರಷ್ಟಾಚಾರ ಸೇರಿ ಹಲವು ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಹಾಲಿ ನ್ಯಾಯಾಧೀಶರ …
Read More »ಹುಕ್ಕೇರಿ ಸಿಪಿಐ ಗುರುರಾಜ್ ಕಲ್ಯಾಣಶೆಟ್ಟಿ ಅವರ ಅಳಿಯನ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಮಂಗಳವಾರ ರಾತ್ರಿ ಗಲಾಟೆ
ಬೆಳಗಾವಿ: ಹುಕ್ಕೇರಿ ಸಿಪಿಐ ಗುರುರಾಜ್ ಕಲ್ಯಾಣಶೆಟ್ಟಿ ಅವರ ಅಳಿಯನ ಕಾರಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದು ಮಂಗಳವಾರ ರಾತ್ರಿ ಗಲಾಟೆ ನಡೆದ್ದು, ಸದ್ಯ ಪ್ರಕರಣ ಸಂಬಂಧ ದೂರು ಪ್ರತಿ ದೂರು ದಾಖಲಾಗಿದೆ. ಸಿಪಿಐ ಗುರುರಾಜ್ ವ್ಯಕ್ತಿಯೊಬ್ಬರಿಗೆ ರಿವಾಲ್ವಾನ್ ತೋರಿಸಿ ಬೆದರಿಕೆ ಹಾಕಿರುವ ಆರೋಪವೂ ಕೇಳಿ ಬಂದಿದೆ. ಘಟನೆ ಹಿನ್ನೆಲೆ? ಮಂಗಳವಾರ ರಾತ್ರಿ ಹುಕ್ಕೇರಿ ಸಿಪಿಐ ಗುರುರಾಜ್ ಕಲ್ಯಾಣಶೆಟ್ಟಿ ತಮ್ಮ ಮಗನ ಜನುಮ ದಿನದ ಹಿನ್ನೆಲೆಯಲ್ಲಿ ಕುಟುಂಬಸ್ಥರೊಂದಿಗೆ ಜಾಂಬೋಟಿ ಬಳಿ ರೆಸಾರ್ಟ್ …
Read More »ಮೂರನೇ ಮದುವೆಯಾದ WWE ಸೂಪರ್ ಸ್ಟಾರ್ ಜಾನ್ ಸಿನಾ
ಫ್ಲೋರಿಡಾ: ಡಬ್ಯ್ಲುಡಬ್ಯ್ಲುಇ ಸೂಪರ್ ಸ್ಟಾರ್ ಜಾನ್ ಸಿನಾ ಅವರು ಮೂರನೇ ಬಾರಿಗೆ ವಿವಾಹವಾಗಿದ್ದು, ತಮ್ಮ ಗೆಳತಿ ಶೇ ಶರಿಯತ್‍ಜಾಡೆ ಅವರನ್ನು ವರಿಸಿದ್ದಾರೆ.ಜಾನ್ ಸಿನಾ ಮದುವೆಯಾಗಿರುವುದನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಆದರೆ ಫ್ಲೋರಿಡಾದ ಸುದ್ದಿ ಮಾಧ್ಯಮಗಳು ಜಾನ್ ಸಿನಾ ಮತ್ತು ಶೇ ಶರಿಯತ್‍ಜಾಡೆ ಅವರು ಬುಧವಾರ ನಡೆದ ಸರಳ ಮತ್ತು ಶಾಂತ ರೀತಿಯ ಮದುವೆ ಕಾರ್ಯಕ್ರಮದಲ್ಲಿ ವಿವಾಹವಾಗಿದ್ದಾರೆ ಎಂದು ವರದಿ ಮಾಡಿವೆ. ಸಿನಾ ತನಗಿಂತ 12 ವರ್ಷ ಚಿಕ್ಕವರಾದ ಶೇ ಶರಿಯತ್‍ಜಾಡೆ …
Read More »ಜೇಮ್ಸ್ ಚಿತ್ರ ತಂಡದಿಂದ ಸಿಹಿ ಸುದ್ದಿ ಹೊರ ಬಿದ್ದಿದ್ದು, ಹೀರೋಯಿನ್ ಆಯ್ಕೆ ಮಾಡಲಾಗಿದೆ.
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ ಜೇಮ್ಸ್ ಚಿತ್ರದ ಶೂಟಿಂಗ್ ಭರದಿಂದ ಸಾಗಿದ್ದು, ಪುನೀತ್ ರಾಜ್‍ಕುಮಾರ್ ಸಹ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಇದೇ ಸಂದರ್ಭದಲ್ಲಿ ಚಿತ್ರ ತಂಡದಿಂದ ಸಿಹಿ ಸುದ್ದಿ ಹೊರ ಬಿದ್ದಿದ್ದು, ಹೀರೋಯಿನ್ ಆಯ್ಕೆ ಮಾಡಲಾಗಿದೆ. ಅನ್‍ಲಾಕ್ ಬಳಿಕ ಬಹುತೇಕ ಚಿತ್ರಗಳ ಶೂಟಿಂಗ್ ಚುರುಕುಗೊಂಡಿದ್ದು, ಯುವರತ್ನ ಸಿನಿಮಾದ ಅಂತಿಮ ಹಂತದ ಚಿತ್ರೀಕರಣ ಮೊನ್ನೆಯಷ್ಟೇ ಪೂರ್ಣಗೊಂಡಿದೆ. ಇದರ ಬೆನ್ನಲ್ಲೇ ಇದೀಗ ಅಪ್ಪು ಜೇಮ್ಸ್ ಸಿನಿಮಾದಲ್ಲಿ ತೊಡಗಿಕೊಂಡಿದ್ದಾರೆ. ಲಾಕ್‍ಡೌನ್ ವೇಳೆ ಫುಲ್ …
Read More »ಕಳೆದ 24 ಗಂಟೆಯಲ್ಲಿ 67,708 ಜನರಲ್ಲಿ ಕೊರೊನಾ ಸೋಂಕು
ನವದೆಹಲಿ: ದೇಶದಲ್ಲಿ ಕೊರೊನಾ ಹಾವಳಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 67,708 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 73,07,098 ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 680 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,11,266ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 8,12,390 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 63,83,442 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ …
Read More »ಮಂಗಳಾರತಿಯಲ್ಲಿದ್ದ ಹಣವನ್ನು ಖತರ್ನಾಕ್ ಭಕ್ತೆಯೊಬ್ಬಳು ಎಗರಿಸಿದ ಘಟನೆ
ಮಡಿಕೇರಿ: ದೇವರಿಗೆ ವಿನಮ್ರವಾಗಿ ಕೈ ಮುಗಿದು, ಸುತ್ತು ಬಂದ ಬಳಿಕ ಮಂಗಳಾರತಿಯಲ್ಲಿದ್ದ ಹಣವನ್ನು ಖತರ್ನಾಕ್ ಭಕ್ತೆಯೊಬ್ಬಳು ಎಗರಿಸಿದ ಘಟನೆ ಮಡಿಕೇರಿಯ ವಿಜಯ ವಿನಾಯಕ ದೇವಸ್ಥಾನದಲ್ಲಿ ನಡೆದಿದೆ. ಅಕ್ಟೋಬರ್ 12 ರಂದು ನಡೆದಿರುವ ಮಹಿಳೆಯ ಖತರ್ನಾಕ್ ಕೆಲಸ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬುಧವಾರ ಸಂಜೆ ಸಿಸಿಟಿವಿ ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಸದ್ಯ ಈ ವೀಡಿಯೋ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ವೀಡಿಯೋದಲ್ಲೇನಿದೆ? ಮಹಿಳೆ ಮೊದಲು ದೇವರಿಗೆ ಕೈಮುಗಿದು ಅತ್ತ-ಇತ್ತ ನೋಡುತ್ತಾಳೆ. ನಂತರ …
Read More »ಕೈ-ಕಮಲ-ದಳ ಸಾಥ್: ಕಾಫಿನಾಡಿನ ಎನ್.ಆರ್.ಪುರ ಬಂದ್
ಚಿಕ್ಕಮಗಳೂರು: ಶತಮಾನಗಳ ಬದುಕೇ ಬೀದಿಗೆ ಬೀಳುತ್ತೆ ಅಂದಾಗ ಹೋರಾಟ ಅನಿವಾರ್ಯ. ಅಂತಹ ಹೋರಾಟಕ್ಕೆ ಜಿಲ್ಲೆಯ ಎನ್.ಆರ್.ಪುರ ತಾಲೂಕು ಮುಂದಾಗಿದೆ. ಬದುಕಿಗಿಂತ ರಾಜಕೀಯ-ರಾಜಕಾರಣ ದೊಡ್ಡದ್ದಲ್ಲ. ಹಾಗಾಗಿ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮರಣ ಶಾಸನವಾಗಿರೋ ಭದ್ರಾ ಹುಲಿ ಯೋಜನೆಯ ಬಫರ್ ಜ್ಹೋನ್, ಪರಿಸರ ಸೂಕ್ಷ್ಮ ವಲಯದ ವಿರುದ್ಧ ಎನ್.ಆರ್.ಪುರ ತಾಲೂಕಿನ ಜನ ಪಕ್ಷಾತೀತವಾಗಿ ಹೋರಾಟಕ್ಕಿಳಿದಿದ್ದಾರೆ. ಇಂದು ಬೆಳಗ್ಗೆ ಏಳು ಗಂಟೆಯಿಂದ ಇಡೀ ದಿನ ಎನ್.ಆರ್.ಪುರ ತಾಲೂಕು ಸಂಪೂರ್ಣ ಸ್ತಬ್ಧಗೊಂಡಿದೆ. ಮೈಸೂರಿನ ಅರಸರಾದ ನರಸಿಂಹರಾಜ …
Read More »ಜೆಸಿಬಿಯನ್ನು ಮಣ್ಣು ಅಗೆಯಲು ಬಳಸುತ್ತಾರೆಇದೇ ಜೆಸಿಬಿಯಲ್ಲಿ ತನ್ಬೆನ್ನು ಉಜ್ಜಿಕೊಳ್ಳುವ ಮೂಲಕ ವ್ಯಕ್ತಿಯೊಬ್ಬರು ಭಾರೀ ಸುದ್ದಿ
ಸಾಮಾನ್ಯವಾಗಿ ಜೆಸಿಬಿಯನ್ನು ಮಣ್ಣು ಅಗೆಯಲು ಬಳಸುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಇದೇ ಜೆಸಿಬಿಯಲ್ಲಿ ತನ್ನ ಬೆನ್ನು ಉಜ್ಜಿಕೊಳ್ಳುವ ಮೂಲಕ ವ್ಯಕ್ತಿಯೊಬ್ಬರು ಭಾರೀ ಸುದ್ದಿಯಾಗಿದ್ದಾರೆ. ಹೌದು. ಈ ವಿಚಾರ ನಿಮಗೆ ಅಚ್ಚರಿ ಎನಿಸಿದರೂ ಸತ್ಯ. ಯಾಕಂದ್ರೆ ಇದಕ್ಕೆ ಸಾಕ್ಷಿ ಎಂಬಂತೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಕೂಡ ವೈರಲ್ ಆಗುತ್ತಿದೆ. 41 ಸೆಕೆಂಡಿನ ವೀಡಿಯೋವನನ್ನು ಅಬ್ದುಲ್ ನಝಾರ್ ಎಂಬವರು ತಮ್ಮ ಫೇಸ್‍ಬುಕ್ ಖಾತೆಯಿಂದ ಶೇರ್ ಮಾಡಿಕೊಂಡಿದ್ದಾರೆ. ಈ ವೀಡಿಯೋ …
Read More »ಚಾಲಕ ಕಾರ್ ನಿಲ್ಲಿಸಿದೇ ಪೊಲೀಸ್ ಅಧಿಕಾರಿಯನ್ನೇ ಕಾರ್ ಬಾನೆಟ್ ಮೇಲೆ ಕೆಲ ಮೀಟರ್ ಗಳ ದೂರ ಕೊಂಡೊಯ್ದು
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಯಾನಕ ಘಟನೆ ನಡೆದಿದ್ದು, ಸಂಚಾರ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸರು ಕಾರ್ ತಡೆದಿದ್ದಾರೆ. ಚಾಲಕ ಕಾರ್ ನಿಲ್ಲಿಸಿದೇ ಪೊಲೀಸ್ ಅಧಿಕಾರಿಯನ್ನೇ ಕಾರ್ ಬಾನೆಟ್ ಮೇಲೆ ಕೆಲ ಮೀಟರ್ ಗಳ ದೂರ ಕೊಂಡೊಯ್ದು ಕೆಳಗೆ ಕೆಡವಿದ್ದಾನೆ. ಈ ಭಯಾನಕ ವಿಡಿಯೋ ಇದೀಗ ವೈರಲ್ ಆಗಿದೆ. ದೆಹಲಿಯ ಧೌಲಾ ಕುವಾನ್ ಬಳಿ ಈ ಭಯಾನಕ ಘಟನೆ ನಡೆದಿದ್ದು, ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸಂಚಾರಿ ನಿಯಮ ಉಲ್ಲಂಘಿಸಿದ್ದಕ್ಕೆ ಪೊಲೀಸರು ಕಾರ್ …
Read More »