ಗೋಕಾಕ : ಕೊರೊನಾ ಸೋಂಕು ನಿಯಂತ್ರಿಸಲು ಜನರು ಮಾಸ್ಕ್, ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು 12ನೇ ಅಧಿಕ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿಜಯಕುಮಾರ ಎಂ.ಎ. ಹೇಳಿದರು. ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆರೋಗ್ಯ ಇಲಾಖೆ, ತಾಲೂಕಾಡಳಿತ, ಶಿಕ್ಷಣ ಇಲಾಖೆ ಹಾಗೂ ಎಸ್‍ಎಲ್‍ಜೆ ಕಾನೂನು ಕಾಲೇಜ್ ಸಹಯೋಗದಲ್ಲಿ ನಡೆದ ಕೊರೊನಾ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಕೋವಿಡ್ ನಿಯಂತ್ರಿಸುವ …
Read More »ರಾಯಬಾಗ ತಾಲ್ಲಕಿನ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆರೋಪ
ಬೆಳಗಾವಿ : ಜಿಲ್ಲೆಯ ರಾಯಬಾಗ ತಾಲ್ಲಕಿನ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ ವಿರುದ್ಧ ಕೋವಿಡ್ ನಿರ್ವಹಣೆಗೆ ಬಿಡುಗಡೆಯಾದ ಅನುದಾನ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ತಹಶೀಲ್ದಾರ್ ವಿಚಾರಣೆ ಆರಂಭವಾಗಿದೆ. ಕೋವಿಡ್ ನಿರ್ವಹಣೆಯ 1.49 ಕೋಟಿ ಅನುದಾನವನ್ನು ತಮ್ಮ ಸ್ವಂತ ಖಾತೆಗೆ ತಹಶೀಲ್ದಾರ್ ವರ್ಗಾಯಿಸಿಕೊಂಡು ದುರ್ಬಳಕೆ ಮಾಡಿದ್ದಾರೆ ಎಂದು ಕುಡಚಿ ಶಾಸಕ ಪಿ.ರಾಜೀವ್ ವಿಧಾನಮಂಡಲ ಅಧಿವೇಶನದಲ್ಲಿ ಆರೋಪಿಸಿದ್ದರು. ಕೆಲ ಸಂಘಟನೆಗಳು ತನಿಖೆಗೆ ಜಿಲ್ಲಾಧಿಕಾರಿಗೆ ಒತ್ತಾಯಿಸಿ, ಮನವಿ ಸಲ್ಲಿಸಿದ್ದರು. ಇದರಿಂದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ …
Read More »ಸತ್ತಿದ್ದಾರೆಂದು ಫ್ರೀಜರ್ ಬಾಕ್ಸಿನಲ್ಲಿಟ್ಟ ಕುಟುಂಬಸ್ಥರು – ಬೆಳಗ್ಗೆ ಉಸಿರಾಡುತ್ತಿದ್ದ ವೃದ್
ಚೆನ್ನೈ: ಸತ್ತಿದ್ದಾರೆ ಎಂದು ರಾತ್ರಿ ಪೂರ್ತಿ ಫ್ರೀಜರ್ ಬಾಕ್ಸಿನಲ್ಲಿಟ್ಟ 74 ವರ್ಷದ ವೃದ್ಧರೊಬ್ಬರು ಬೆಳಗ್ಗೆ ಆ ಪೆಟ್ಟಿಗೆಯೊಳಗೆ ಉಸಿರಾಡುತ್ತಿರುವ ವಿಚಿತ್ರ ಘಟನೆ ತಮಿಳುನಾಡಿ ಸೇಲಂನಲ್ಲಿ ನಡೆದಿದೆ. ತಮಿಳುನಾಡಿನ ಸೇಲಂ ಜಿಲ್ಲೆಯ ಕಂಧಂಪತ್ತಿಯ ನಿವಾಸಿ 74 ವರ್ಷದ ವೃದ್ಧ ಬಾಲಸುಬ್ರಹ್ಮಣ್ಯ ಕುಮಾರ್ ಒಂದು ರಾತ್ರಿ ಪೆಟ್ಟಿಗೆಯಲ್ಲಿದ್ದ ವೃದ್ಧ ಎಂದು ಗುರತಿಸಲಾಗಿದೆ. ಸದ್ಯ ಅವರನ್ನು ಪೊಲೀಸರು ರಕ್ಷಿಸಿದ್ದು, ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಕೊಡಿಸಿದ್ದಾರೆ. ಬಾಲಸುಬ್ರಹ್ಮಣ್ಯ ಕುಮಾರ್ 70 ವರ್ಷದ ಕಿರಿಯ ಸಹೋದರ …
Read More »ಭಾರತದಲ್ಲಿ ಲಸಿಕೆ ದೊರೆಯಲಿದೆ :ಕೇಂದ್ರ ಆರೋಗ್ಯ ಸಚಿವ ಹೇಳಿಕೆ
ನವದೆಹಲಿ : ವಿಶ್ವವನ್ನೇ ಹೈರಾಣಾಗಿಸಿರುವ ಕೊರೋನಾ ವೈರಸ್ ನಿಗ್ರಹಕ್ಕೆ 2021ರ ಆರಂಭದಿಂದ ಭಾರತದಲ್ಲಿ ಲಸಿಕೆ ದೊರೆಯಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ ಹರ್ಷವರ್ಧನ್ ಅವರು ಘೋಷಣೆ ಮಾಡಿದ್ದಾರೆ. ದೇಶಾದ್ಯಂತ ಈ ಲಸಿಕೆಯನ್ನು ಯಾವ ರೀತಿ ವಿತರಣೆ ಮಾಡಬೇಕು ಎಂಬ ಯೋಜನೆ ರೂಪಿಸುವ ಕಾರ್ಯದಲ್ಲಿ ತಜ್ಞರು ಮಗ್ನರಾಗಿದ್ದಾರೆ ಎಂದೂ ಹೇಳಿದ್ದಾರೆ. ಸಚಿವರ ಸಮೂಹದ ಸಭೆಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷಾರಂಭದಲ್ಲಿ ದೇಶದಲ್ಲಿ ಲಸಿಕೆ ದೊರೆಯಲಿದೆ. ಒಂದಕ್ಕಿಂತ ಹೆಚ್ಚು ಕಡೆಯಿಂದ ಲಸಿಕೆ …
Read More »ಮೂರು ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆಯಾರಿಗೆ ಒಲಿಯುತ್ತಾಳೆ ರಾಜ ರಾಜೇಶ್ವರಿ?
ಬೆಂಗಳೂರು: ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರುತ್ತಿದೆ. ಇಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ನಿಂದ ಕುಸುಮಾ ಹನುಮಂತರಾಯಪ್ಪ, ಬಿಜೆಪಿಯಿಂದ ಮುನಿರತ್ನ ಮತ್ತು ಜೆಡಿಎಸ್ ನಿಂದ ಕೃಷ್ಣಮೂರ್ತಿ ಬೈ ಎಲೆಕ್ಷನ್ ಅಖಾಡದಲ್ಲಿದ್ದು, ಆರ್.ಆರ್.ನಗರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಗಳಿವೆ.ನಾಮಪತ್ರ ಸಲ್ಲಿಕೆ ಹಿನ್ನೆಲೆ ರಾಜರಾಜೇಶ್ವರಿ ನಗರ ಜಂಟಿ ಆಯುಕ್ತರ ಕಚೇರಿಯ ಸುತ್ತಮುತ್ತ ಭದ್ರತೆ ಕೈಗೊಳ್ಳಲಾಗಿತ್ತು. ಮಂಗಳವಾರ ಬಿಜೆಪಿ ಅಭ್ಯರ್ಥಿ ಮುನಿರತ್ನಗೆ ಸುಪ್ರೀಂಕೋರ್ಟ್ …
Read More »50 ವರ್ಷಗಳಿಂದ ತಿರುಗಿ ನೋಡದ ಸರ್ಕಾರ, ಸ್ವತಃ ಖರ್ಚಿನಲ್ಲಿಯೇ ರಸ್ತೆ ನಿರ್ಮಿಸಿಕೊಂಡ ಗ್ರಾಮಸ್ಥರು..!
ತಿಪಟೂರು , – ಕಳೆದ 50 ವರ್ಷಗಳಿಂದಲೂ ಸರ್ಕಾರದಿಂದ ಅಭಿವೃದ್ಧಿಪಡಿಸದ ರಸ್ತೆಯನ್ನು ಗ್ರಾಮಸ್ಥರೆಲ್ಲರೂ ಸೇರಿ ಅಭಿವೃದ್ಧಿಪಡಿಸಿ ಮಾದರಿ ರಸ್ತೆಯನ್ನು ನಿರ್ಮಾಣ ಮಾಡಿ ಜನಪ್ರತಿನಿಗಳ ನಿರ್ಲಕ್ಷ್ಯವನ್ನು ಎತ್ತಿ ಹಿಡಿದಿದ್ದಾರೆ. ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಮತ್ತಿಹಳ್ಳಿ ಗ್ರಾಮದ ಕೆರೆಯ ಹಿಂಭಾಗದಿಂದ ಚಿಕ್ಕಬಿದರೆ ಗ್ರಾಮಕ್ಕೆ ಸಂಪರ್ಕಿಸುವ ಸುಮಾರು 1.5 ಕಿ.ಮೀ.ರಸ್ತೆಯನ್ನು ಒಂದು ಲಕ್ಷ ರೂಗಳ ಸ್ವತಃ ಖರ್ಚಿನಲ್ಲಿಯೇ ಗ್ರಾಮಸ್ಥರು ಅಭಿವೃದ್ಧಿಪಡಿಸಿದ್ದಾರೆ. ರಸ್ತೆಯೂ ಹಿಂದೆ ಕಾಲುದಾರಿಯಲ್ಲಿ ಸಂಚರಿಸಲು ಸಾಧ್ಯವಾಗದಂತಹ ಸ್ಥಿತಿಯಲ್ಲಿತ್ತು. ಈ ರಸ್ತೆಯೂ …
Read More »ಮಳೆರಾಯ ರುದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ.
ಬೆಂಗಳೂರು: ಕೊರೊನಾ ಮಧ್ಯೆ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಅಲ್ಲದೇ ಸಾಕಷ್ಟು ಅವಾಂತರ ಸೃಷ್ಟಿಸಿದ್ದಾನೆ. ಮಳೆರಾಯ ರುದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಮಹಾ ಮಳೆ ಮುಂದುವರಿದಿದ್ದು, ಇದು ಇಲ್ಲಿಗೆ ನಿಲ್ಲೋ ಲಕ್ಷಣಗಳು ಕಾಣುತ್ತಿಲ್ಲ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಜನ ತತ್ತರಿಸಿ ಹೋಗಿದ್ದಾರೆ.ಕೊರೊನಾದಿಂದ ಈಗಾಗಲೇ ಜನ …
Read More »ತುಮಕೂರಲ್ಲಿ ಕಂಗನಾ ವಿರುದ್ಧ ಎಫ್‍ಐಆರ್
ತುಮಕೂರು: ಕೋರ್ಟ್ ಆದೇಶದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ. ಕಂಗನಾ ಅವರು ಟ್ವಿಟರ್ ನಲ್ಲಿ ರೈತರನ್ನ ಭಯೋತ್ಪಾದಕರು ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ವಕೀಲ ರಮೇಶ್ ನಾಯ್ಕ್, ಜೆಎಂಎಫ್‍ಸಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಕೋರ್ಟ್ ನಿರ್ದೇಶನ ಮೇರೆಗೆ ನಟಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಕೇಂದ್ರ ಸರ್ಕಾರ ಜಾರಿ ತಂದಿದ್ದ ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ರೈತರು …
Read More »ಕೊಪ್ಪಳ : ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಟಿ.ಶ್ರೀಧರ್
ಕೊಪ್ಪಳ : ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಟಿ.ಶ್ರೀಧರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. 2012ರ ಐಪಿಎಸ್ ಬ್ಯಾಚ್ ನಲ್ಲಿ ಇವರು, ಬೆಂಗಳೂರುನಲ್ಲಿ ಗುಪ್ತಚರ ವಿಭಾಗ ಸೇರಿ ವಿವಿಧ ಮೂರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಪ್ಪಳಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಬೀದರ್ ನಲ್ಲಿ ಎಸ್ಪಿಯಾಗಿ ಕಾರ್ಯನಿರ್ವವಹಿಸಿದ್ದಾರೆ. ಶಿಕ್ಷಣ: ಬಳ್ಳಾರಿ ಜಿಲ್ಲೆಯ ಶಿರಗುಪ್ಪ ತಾಲ್ಲೂಕಿನವರು. ಪ್ರಾಥಮಿಕ ಶಿಕ್ಷಣವನ್ನು ಶಿರಗುಪ್ಪ, ಸಿಂಧನೂರಿನಲ್ಲಿ, ಕಾಲೇಜ್ ಶಿಕ್ಷಣ ಧಾರವಾಡದಲ್ಲಿ ಪಡೆದಿದ್ದಾರೆ. …
Read More »ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ
ಬೆಳಗಾವಿ: 50 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸುಳೇಬಾವಿ ಗ್ರಾಮದ ಬಳಿ ನಡೆದಿದೆ. ಫುಲ್ ಶರ್ಟ್, ನೀಲಿ ಜಾಕೆಟ್ ಧರಿಸಿರುವ ವ್ಯಕ್ತಿ ಸುಳೇಬಾವಿ ಮತ್ತು ಸಲದಾಳ ರೈಲು ನಿಲ್ದಾಣದ ಮಧ್ಯೆ ರೈಲು ಹಳಿಗಳ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಕೆಂಪು ಬಣ್ಣದ ಛತ್ರಿ, ನೀಲಿ ಚೀಲ ದೊರೆತಿದೆ ಎಂದು ಬೆಳಗಾವಿ ನಗರದ ರೈಲ್ವೆ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
Read More »