Breaking News

Uncategorized

ತನಗೆ ನೊವೆಲ್ ಕೊರೋನ ಸೋಂಕು ತಗಲಿದೆ ಎಂದು ಮೆಗಾಸ್ಟಾರ್ ಚಿರಂಜೀವಿ ತನ್ನ ಟ್ವಟ್ಟರನಲ್ಲಿ   ಸೋಮವಾರ ತಿಳಿಸಿದ್ದಾರೆ.

ಹೈದರಾಬಾದ್: ತನಗೆ ನೊವೆಲ್ ಕೊರೋನ ಸೋಂಕು ತಗಲಿದೆ ಎಂದು ಮೆಗಾಸ್ಟಾರ್ ಚಿರಂಜೀವಿ ತನ್ನ ಟ್ವಟ್ಟರನಲ್ಲಿ   ಸೋಮವಾರ ತಿಳಿಸಿದ್ದಾರೆ. ‘ಆಚಾರ್ಯ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವ ಮುಂಚೆ ಕಡ್ಡಾಯ ಕೋವಿಡ್-ಪರೀಕ್ಷೆಗೆ ಒಳಗಾದಾಗ ಸೋಂಕು ತಗಲಿರುವುದು ದೃಢಪಟ್ಟಿದೆ. ಇದೀಗ ಅವರು ಹೋಮ್ ಕ್ವಾರಂಟೆನ್‍ನಲ್ಲಿದ್ದು, ಕಳೆದು ಐದು ದಿನಗಳಿಂದ ತನ್ನೊಂದಿಗೆ ಸಂಪರ್ಕದಲ್ಲಿರುವವರು ಪರೀಕ್ಷೆಗೆ ಒಳಗಾಗಬೇಕೆಂದು ಅವರು ವಿನಂತಿಸಿದ್ದಾರೆ.

Read More »

ವಿದ್ಯುತ್ ದರ  ಹೆಚ್ಚಿಸಿರುವ  ಸರ್ಕಾರ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, ತಕ್ಷಣ ಆದೇಶವನ್ನು  ವಾಪಸ್ ಪಡೆಯುವಂತೆ ಒತ್ತಾಯ

ಬೆಂಗಳೂರು:  ವಿದ್ಯುತ್ ದರ  ಹೆಚ್ಚಿಸಿರುವ  ಸರ್ಕಾರ ಕ್ರಮವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಖಂಡಿಸಿದ್ದು, ತಕ್ಷಣ ಆದೇಶವನ್ನು  ವಾಪಸ್ ಪಡೆಯುವಂತೆ ಒತ್ತಾಯ ಮಾಡಿದ್ದಾರೆ. ವಿದ್ಯುತ್ ದರ ಹೆಚ್ಚಳ ವಿಚಾರವಾಗಿ  ನಗರದಲ್ಲಿ  ಇಂದು  ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ನಿಂದಾಗಿ  ದೇಶ, ರಾಜ್ಯಗಳು ಆರ್ಥಿಕ  ಸಂಕಷ್ಟದಲ್ಲಿವೆ.  ಇಂತಹ ಸಂದರ್ಭದಲ್ಲಿ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿದೆ.  ಪ್ರತಿ ಯೂನಿಟ್​ಗೆ 40 ಪೈಸೆ ಹೆಚ್ಚಳ ಮಾಡಿ ಬಿಜೆಪಿ ಸರ್ಕಾರ  ಜನರ ವಿರೋಧಿ …

Read More »

ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಂಯೋಗದೊಂದಿಗೆ, ರಾಜ್ಯದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಉಚಿತ ಟ್ಯಾಬ್

ಯಾದಗಿರಿ: ಪಬ್ಲಿಕ್ ಟಿವಿ ಮತ್ತು ರೋಟರಿ ಕ್ಲಬ್ ಸಂಯೋಗದೊಂದಿಗೆ, ರಾಜ್ಯದ ಸರ್ಕಾರಿ ಶಾಲೆಯ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ಜಿಲ್ಲೆಯಲ್ಲಿ ಉಚಿತ ಟ್ಯಾಬ್ ನೀಡಲಾಯಿತು. ಜ್ಞಾನ ದೀವಿಗೆ ಯೋಜನೆ ಮೊದಲ ಹಂತದಲ್ಲಿ ಮೊಟ್ಟ ಮೊದಲ ಬಾರಿಗೆ, ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಹತ್ತಿಕುಣಿಯ ಸರ್ಕಾರಿ ಪ್ರೌಢಶಾಲೆ ಆಯ್ಕೆಯಾಗಿದೆ. ಇಂದು ಪಬ್ಲಿಕ್ ಟಿವಿ ಜ್ಞಾನ ದೀವಿಗೆ ಕಾರ್ಯಕ್ರಮಕ್ಕೆ ಸಿಎಂ ಯಡಿಯೂರಪ್ಪ, ಶಿಕ್ಷಣ ಸಚಿವ ಸುರೇಶ್ ಕುಮಾರ್ ಜೊತೆ ಪಬ್ಲಿಕ್ ಟಿವಿ ಕ್ಯಾಪ್ಟನ್ ಹೆಚ್.ಆರ್ ರಂಗನಾಥ್ …

Read More »

ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಜಯಭೇರಿ ಹಿಂದೆ ಮಂಡ್ಯ ಮೂಲದ ಡಾ.ವಿವೇಕ್ ಮೂರ್ತಿ ಪಾತ್ರ ದೊಡ್ಡದು.

ಮಂಡ್ಯ: ವಿಶ್ವದ ದೊಡ್ಡಣ್ಣ ಅಮೆರಿಕದ ನೂತನ ಅಧ್ಯಕ್ಷ ಜೋ ಬೈಡನ್ ಜಯಭೇರಿ ಹಿಂದೆ ಮಂಡ್ಯ ಮೂಲದ ಡಾ.ವಿವೇಕ್ ಮೂರ್ತಿ ಪಾತ್ರ ದೊಡ್ಡದು. ಬೈಡನ್ ಪರ ಚುನಾವಣಾ ತಂತ್ರಗಾರರ ಪೈಕಿ ವಿವೇಕ್ ಕೂಡ ಒಬ್ಬರು. ಈ ನಡುವೆಯೆ ವಿವೇಕ್ ಅವರಿಗೆ ಮಹತ್ವದ ಹುದ್ದೆ ಸಿಗೋದು ಪಕ್ಕ ಆಗಿದ್ದು, ಆ ಮೂಲಕ ಮಂಡ್ಯದ ಹೆಸರು ಅಮೆರಿಕಾದಲ್ಲೂ ಕಮಾಲ್ ಮಾಡುತ್ತಿದೆ. ಅಂದಹಾಗೆ ಡಾ.ವಿವೇಕ್ ಮೂರ್ತಿ ಮಂಡ್ಯ ತಾಲೂಕಿನ ಹಲ್ಲೆಗೆರೆ ಗ್ರಾಮದವರು. ಡಾ.ಎಚ್.ಎನ್.ಲಕ್ಷ್ಮಿನಾರಾಯಣಮೂರ್ತಿ ಮತ್ತು ಮೈತ್ರೇಯಿ …

Read More »

ಮದುವೆ ಸಮಾರಂಭ ದಲ್ಲಿ 200ಕ್ಕು ಹೆಚ್ಚು ಜನ ಸೇರಿದರೆ ಕ್ರಿಮಿನಲ್ ಕೇಸ್. ಚುನಾವಣೆ ಪ್ರಚಾರಕ್ಕೆ ಸೇರಿದರೆ ಇಲ್ಲವಾ …. ?

ಮೈಸೂರು: ಕೊರೊನಾ ಲಾಕ್‍ಡೌನ್ ಶುರುವಾಗಿದ್ದೇ ಬಂತು. ಚಿತ್ರಮಂದಿರ, ಕಲ್ಯಾಣ ಮಂಟಪ, ಸಾರ್ವಜನಿಕ ಸಭೆ- ಸಮಾರಂಭಗಳಿಗೆಲ್ಲ ಆತಂಕ ಶುರುವಾಗಿದೆ. ಅದರಲ್ಲೂ ಮೈಸೂರಿನಲ್ಲಿ ಕಲ್ಯಾಣ ಮಂಟಪಗಳ ಹೊಸ ನಿಯಮ ಜಾರಿಯಾಗಿದೆ. ಹೆಚ್ಚು ಜನ ಸೇರಿದರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಪೊಲೀಸರು ಎಚ್ಚರಿಸಿದ್ದಾರೆ. ಇತ್ತ ಕಲ್ಯಾಣ ಮಂಟಪದ ಮಾಲೀಕರು ಸಹ ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.ಕೊರೊನಾ ಬಂದ ಮೇಲೆ ಜೀವನ ಶೈಲಿಯೇ ಬದಲಾಗುತ್ತಿದೆ. ಮೊದಲೆಲ್ಲ ಮದುವೆ, ಉಪನಯನ, ಹುಟ್ಟುಹಬ್ಬ, ಬೀಗರೂಟ ಹೀಗೆ ಶುಭ ಸಮಾರಂಭಗಳಿಗೆ …

Read More »

ಸಚಿವ ಸ್ಥಾನಕ್ಕೆ  ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೆ ಸಿ.ಟಿ. ರವಿ ದೆಹಲಿಗೆ ದೌಡಾಯಿಸಿದ್ದಾರೆ. 

ಬೆಂಗಳೂರು:    ಸಚಿವ ಸ್ಥಾನಕ್ಕೆ  ರಾಜೀನಾಮೆ ಅಂಗೀಕಾರಗೊಂಡ ಬೆನ್ನಲ್ಲೆ  ಬಿಜೆಪಿ  ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ದೆಹಲಿಗೆ ದೌಡಾಯಿಸಿದ್ದಾರೆ.  ಸಿ.ಟಿ. ರವಿ  ಅವರಿಗೆ ಇತ್ತೀಚಿಗೆ ಬಿಜೆಪಿ  ರಾಷ್ಟ್ರೀಯ  ಪ್ರಧಾನ ಕಾರ್ಯದರ್ಶಿ ಹುದ್ದೆ ಒಲಿದು ಬಂದಿದೆ. ಇದಾದ ಬೆನ್ನಲ್ಲೇ ಅವರು ತಮ್ಮ  ನಿಭಾಯಿಸುತ್ತಿದ್ದ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.  ಇದೀಗ  ಶನಿವಾರ ಸಂಜೆ  ಅವರ ರಾಜೀನಾಮೆ ಅಂಗೀಕಾರವಾಗಿದೆ. ನಂತರ ಅವರು  ದೆಹಲಿಗೆ ದೌಡಾಯಿಸಿದ್ದು, ಪಕ್ಷದ …

Read More »

ಸುಧಾ ಆಪ್ತೆ ರೇಣುಕಾ ಮನೆಯಲ್ಲಿ ನೂರಾರು ಕೋಟಿ ಮೌಲ್ಯದ ಆಸ್ತಿ,ಚಿನ್ನಾಭರಣ ಪತ್ತೆ..!

ಬೆಂಗಳೂರು, ನ.8- ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಆಡಳಿತಾಧಿಕಾರಿ ಸುಧಾ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಅವರ ಆಪ್ತರ ನಿವಾಸಗಳಲ್ಲೂ ಅಪಾರ ಪ್ರಮಾಣದ ಚಿನ್ನಾಭರಣ ಪತ್ತೆಯಾಗಿರುವುದು ಅಧಿಕಾರಿಗಳನ್ನು ಬೆಚ್ಚಿ ಬೀಳಿಸಿದೆ. ನಿವೃತ್ತ ಡಿವೈಎಸ್‍ಪಿ ಚಂದ್ರಶೇಖರ್ ಅವರ ಪತ್ನಿ ರೇಣುಕಾ ಅವರು ಸುಧಾ ಅವರ ಆಪ್ತರಾಗಿದ್ದು, ಇವರ ನಿವಾಸದ ಮೇಲೆ ನಡೆದ ದಾಳಿ ಸಂದರ್ಭದಲ್ಲಿ ಒಟ್ಟು 3.5 ಕೆಜಿ ಚಿನ್ನ, 7 ಕೆಜಿ ಬೆಳ್ಳಿ ವಸ್ತುಗಳು, …

Read More »

ಅಂದು ನನ್ನ ತಾಯಿ ಭಾರತದಿಂದ ಬಂದಾಗ ಇದನ್ನು ಊಹಿಸಿರಲಿಲ್ಲ: ಕಮಲಾ ಹ್ಯಾರಿಸ್

ವಾಷಿಂಗ್ಟನ್: ವಿಶ್ವದ ಗಮನವನ್ನೇ ಸೆಳೆದಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣಾ ಫಲಿತಾಂಶ ಕೊನೆಗೂ ಅಚ್ಚರಿಯ ರೀತಿಯಲ್ಲಿ ಹೊರಬಿದ್ದಿದೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷ ಅಭ್ಯರ್ಥಿ ಜೋ ಬೈಡನ್ 273 ಮತಗಳನ್ನು ಪಡೆಯುವುದರ ಮೂಲಕ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಇದರಿಂದಾಗಿ ಅಮೆರಿಕದಾದ್ಯಂತ ಸಂಭ್ರಮ ಮನೆ ಮಾಡಿದ್ದು, ಎಲ್ಲೆಡೆ ಜಯಘೋಷ ಕೇಳಿ ಬರುತ್ತಿದೆ. ಅದೇ ರೀತಿ ತಮಿಳುನಾಡು ಮೂಲದ ಕಮಲಾ ಹ್ಯಾರಿಸ್ ಅವರು ಉಪಾಧ್ಯಕ್ಷರಾಗಿರುವುದಕ್ಕೂ ಸಹ ಭಾರತೀಯರು ಸಂಭ್ರಮಿಸುತ್ತಿದ್ದಾರೆ. ಜೋ ಬೈಡನ್ 46ನೇ …

Read More »

ದೀಪ ಆರಿಸಬೇಡ ಸಖೀ………..

ದೀಪ ಆರಿಸಬೇಡ ಸಖೀ ದೀಪವಾರಿಸಬೇಡ ಸಖೀ ಇರಲಿ ಬಿಡು. ಗೊತ್ತು ಇಲ್ಲಿ ಯಾರೂ ಇಲ್ಲ ಸುಖೀ ಇರಲಿಬಿಡು. ಉತ್ತರಿಸಲಿ ಕಾಲ ಎಲ್ಲ ಪ್ರಶ್ನೆಗಳಿಗೂ ಕಾಯುತ್ತೇನೆ ಅನವರತ ಮೌನ-ಮಾತಾಗುವ ಭರವಸೆಯಲ್ಲಿ!! ದೀಪವಾರಿಸಬೇಡ ಸಖೀ ಇರಲಿ ಬಿಡು. ಜಗವ ಬೆಳಗುವ ದೀಪದ ಕೆಳಗೂ ಕತ್ತಲಿರುವಾಗ. ಒಲವ ಹಣತೆಗಳು ಮತ್ತೆ ಹೊತ್ತಿ ಉರಿಯಲಿ ಬಿಡು. ಉರಿವ ಎದೆಯ ಬೆಂಕಿಗೆ ಇಲ್ಲಿ ತುಪ್ಪ ಸುರಿದವರೆಷ್ಟೋ?? ಅವರ ಹರಕೆಗಳು ಫಲಿಸಿಲ್ಲ ನಿಜ ಶಾಪಗಳಾದರೂ ತಟ್ಟಲಿ ಬಿಡು. ದೀಪವಾರಿಸಬೇಡ …

Read More »

ರಾಜ್ಯದಲ್ಲೇ ಮೊದಲ ಪ್ರಯೋಗ – ವಿದ್ಯಾರ್ಥಿಗಳಿಗೆ ಅನುಕೂಲ

ರಾಮನಗರ: ಇಲ್ಲೊಂದು ಇಂಟರ್ ನೆಟ್ ಗ್ರಾಮವಿದೆ. ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಾಲವನ್ನು ಹೆಚ್ಚಿಸುವುದನ್ನು ಉತ್ತೇಜಿಸಲು, ಮಾತೃಭೂಮಿ ಸೇವಾ ಫೌಂಡೇಶನ್ ಸಂಸ್ಥೆಯಿಂದ ಈ ಸೇವೆ ಕಲ್ಪಿಸಲಾಗಿದೆ. ಯೂತ್ ಬ್ರಾಂಡ್ ಬ್ಯಾಂಡ್ ಸಹಯೋಗದಲ್ಲಿ ಈ ಗ್ರಾಮಕ್ಕೆ ಇಂಟರ್ನೆಟ್ ಸಂಪರ್ಕ ಕಲ್ಪಿಸಿ ಉಚಿತ ವೈಫೈ ನೀಡಲಾಗಿದೆ. ಇದರಿಂದ ಆನ್‍ಲೈನ್ ಶಿಕ್ಷಣಕ್ಕೆ ವಿದ್ಯಾರ್ಥಿಗಳಿಗೆ ಅನುಕೂಲವಾಗಿದ್ದು, ಇದು ರಾಜ್ಯದಲ್ಲಿಯೇ ಮೊದಲ ಪ್ರಯೋಗವಾಗಿದೆ. ಹೌದು. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲ್ಲೂಕಿನ ಚಿಕ್ಕೇನಹಳ್ಳಿ ಗ್ರಾಮದಲ್ಲಿ ವಿದ್ಯಾರ್ಥಿಗಳ ಆನ್‍ಲೈನ್ ಕ್ಲಾಸ್ ಗೆ ಸಹಾಯವಾಗಲೆಂದು …

Read More »