ಮೂಡಲಗಿ : ಜನೇವರಿ ಒಳಗೆ ಮೂಡಲಗಿಗೆ ಎಲ್ಲ ಸರ್ಕಾರಿ ಕಛೇರಿಗಳನ್ನು ಹಂತ-ಹಂತವಾಗಿ ಆರಂಭಿಸಲು ಪ್ರಯತ್ನಿಸುವುದಾಗಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯ ನೂತನವಾಗಿ ತಹಶೀಲ್ದಾರ ಕಛೇರಿ ಹತ್ತಿರ ಆರಂಭಿಸಲಾದ ತಾಲೂಕ ಪಂಚಾಯತ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮೂಡಲಗಿ ಹೊಸ ತಾಲೂಕು ಆದ ನಂತರ ಈಗಾಗಲೇ ತಹಶೀಲ್ದಾರ ಕಾರ್ಯಾಲಯವನ್ನು ಪ್ರಾರಂಭಿಸಲಾಗಿದೆ. ಸಿಡಿಪಿಓ ಕಛೇರಿ ಕೂಡ ಕಾರ್ಯಾರಂಭವಾಗಿದೆ. ಈಗ ತಾಲೂಕಾ ಪಂಚಾಯತ ಕಛೇರಿ ಉದ್ಘಾಟನೆಯಾಗಿದೆ. ಮುಂದಿನ ದಿನಗಳಲ್ಲಿ …
Read More »ಶನಿವಾರ ವಿನಯ ಕುಲಕರ್ಣಿ ಜನ್ಮ ದಿನ. ಆದರೆ 3 ದಿನಗಳ ಕಾಲ ಸಿಬಿಐ ನಕಸ್ಟಡಿಗೆ
ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿ ಹಿಂಡಲಗಾ ಜೈಲು ಸೇರಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಇಂದು ಜನ್ಮ ದಿನ. ಆದರೆ 3 ದಿನಗಳ ಕಾಲ ಅವರನ್ನು ಸಿಬಿಐ ನಕಸ್ಟಡಿಗೆ ನೀಡಿದ್ದರಿಂದ ಇಂದು ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳು ಬೆಳಗಾವಿಯ ಹಿಂಡಲಗಾ ಜೈಲಿಗೆ ಆಗಮಿಸಿದ್ದಾರೆ. ವಿನಯ ಕುಲಕರ್ಣಿ ಅವರನ್ನು ಸಿಬಿಐ ವಶಕ್ಕೆ ಒಪ್ಪಿಸಲು ಹಿಂಡಲಗಾ ಜೈಲಿನಲ್ಲಿ ಎಲ್ಲ ಪ್ರಕ್ರಿಯೆಗಳನ್ನು ನಡೆಸಲಾಗುತ್ತಿದೆ. ಗುರುವಾರ ಧಾರವಾಡದಲ್ಲಿ ವಿನಯ ಕುಲಕರ್ಣಿಯನ್ನು ಬಂಧಿಸಲಾಗಿದೆ. …
Read More »ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡುವುದರಲ್ಲಿ EXPERT: ಅತಂತ್ರ ಫಲಿತಾಂಶ ಬಂದ್ರೆ ಯಡಿಯೂರಪ್ಪ ಬಿಹಾರಕ್ಕೆ ಹೋಗ್ತಾರೆ
ಶಿವಮೊಗ್ಗ: ಬಿಹಾರದಲ್ಲಿ ಮಹಾಮೈತ್ರಿ ಅಧಿಕಾರಕ್ಕೆ ಬರುವುದು ಹಾಗೂ ತೇಜಸ್ವಿ ಯಾದವ್ ಮುಖ್ಯಮಂತ್ರಿ ಆಗುವುದು ನಿಶ್ಚಿತ. ಆದರೆ ಒಂದು ವೇಳೆ ಅತಂತ್ರ ಫಲಿತಾಂಶ ಬಂದರೆ ಯಡಿಯೂರಪ್ಪ ಬಿಹಾರಕ್ಕೆ ಹೋಗಬೇಕಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಆಪರೇಷನ್ ಕಮಲ ಮಾಡುವುದರಲ್ಲಿ ಎಕ್ಸ್‍ಪರ್ಟ್ ಇದ್ದಾರೆ. ಹೀಗಾಗಿ ಬಿಹಾರಕ್ಕೆ ಹೋಗುತ್ತಾರೆ ಎಂದು ಹೇಳಿ ಕಾಲೆಳೆದರು.
Read More »20 ವರ್ಷಗಳಿಂದ ಮಳೆಗಾಲದಲ್ಲಿ ಹಲವು ಬಾರಿ ಮುಳುಗ್ತಿದೆ ಹೆಬ್ಬಾಳೆ ಸೇತುವೆ- ಸರ್ಕಾರಕ್ಕೆ ಸ್ಥಳೀಯರು ಹಿಡಿಶಾಪ
ಚಿಕ್ಕಮಗಳೂರು: ಈ ಮಳೆಗಾಲ ಮುಗಿದ ತಕ್ಷಣ ಅದಕ್ಕೊಂದು ಶಾಶ್ವತ ಪರಿಹಾರ ಮಾಡ್ತೀವಿ ಅಂತ ಜನಪ್ರತಿನಿಧಿಗಳು, ಸರ್ಕಾರ ಹೇಳ್ತಾ ಬರೋಬ್ಬರಿ 20 ವರ್ಷಗಳೇ ಕಳೆದಿವೆ. ಆದರೂ ಸಮಸ್ಯೆಗೆ ಮಾತ್ರ ಇದುವರೆಗೂ ಪರಿಹಾರ ಸಿಕ್ಕಿಲ್ಲ. ಮಳೆಗಾಲದಲ್ಲಿ ದಿನಕ್ಕೆ ನಾಲ್ಕೈದು ಬಾರಿ ಮುಳುಗಡೆಯಾಗೋ ಆ ಸೇತುವೆಯಿಂದ ಅಲ್ಲಿಯ ಜನ ಅಲ್ಲೇ, ಇಲ್ಲಿಯ ಜನ ಇಲ್ಲೆ. ರಾಜಕಾರಣಿಗಳು, ಸರ್ಕಾರದ ಆಶ್ವಾಸನೆಯಿಂದ ಬೆಂದು ಬೆಂಡಾಗಿರೋ ಜನಸಾಮಾನ್ಯರು ಸರ್ಕಾರದ ವಿರುದ್ಧ ಇಡಿ ಶಾಪ ಹಾಕ್ತಿದ್ದಾರೆ. ಸೇತುವೆ ಮುಳುಗಡೆಯಾದರೆ ಯಾವ …
Read More »ಕರೆಂಟ್ ಶಾಕ್ ಕೊಟ್ಟ ಸರ್ಕಾರಕ್ಕೆ ಸಿದ್ದರಾಮಯ್ಯ ಕ್ಲಾಸ್..!
ಬೆಂಗಳೂರು, ನ.6- ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆಯನ್ನು ಕೈ ಬಿಟ್ಟು ಕೈಗಾರಿಕೆಗಳ ಪುನಶ್ಚೇತನಕ್ಕೆ ಅಗತ್ಯ ಯೋಜನೆಗಳನ್ನು ರೂಪಿಸಬೇಕೆಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಖ್ಯಮಂತ್ರಿಯವರಿಗೆ ಪತ್ರ ಬರೆದಿರುವ ಅವರು, ಕೊರೊನಾ ಕಾರಣದಿಂದ ಉತ್ಪಾದನಾ ಚಟುವಟಿಕೆಗಳು ಸ್ಥಗಿತಗೊಂಡಿವೆ. ಜನರಲ್ಲಿ ಕೊಳ್ಳುವ ಶಕ್ತಿ ಇಲ್ಲ. ಈ ಸಂದರ್ಭದಲ್ಲಿ ಇಂಧನ ಮತ್ತು ವಿದ್ಯುತ್ ದರ ಎರಿಕೆಯಿಂದ ಜನರಿಗೆ ಹೊರೆಯಾಗುತ್ತದೆ. ಪೆಟ್ರೋಲ್, ಡಿಸೇಲ್ ಹಾಗೂ ವಿದ್ಯುತ್ ದರಗಳನ್ನು ಏರಿಕೆ ಮಾಡುವ ಬದಲು ಕಡಿಮೆ ಮಾಡಿ. …
Read More »ಮೂರು ಕ್ಷೇತ್ರ ಮೂವರು ಪ್ರಭಾವಿ ನಾಯಕರ ಬೆಂಬಗರಿಗೆ ಒಲಿದ ಅದೃಷ್ಟ
ಬೆಳಗಾವಿ: ಡಿಸಿಸಿ ಬ್ಯಾಂಕ್ 3 ಕ್ಷೇತ್ರಗಳಿಗೆ ಇಂದು ನಡೆದ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು, ನೇಕಾರ ಸಹಕಾರಿ ಸಂಘದಿಂದ ಸ್ಪರ್ಧಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಆಪ್ತ ಕೃಷ್ಣಾ ಅನಗೋಳ್ಕರ್ ಗೆಲವು ಸಾಧಿಸಿದ್ದಾರೆ. ರಾಮದುರ್ಗ, ಖಾನಾಪುರ ಹಾಗೂ ಸಹಕಾರಿ ಸಂಘ ಮೂರು ಕ್ಷೇತ್ರಗಳ ಅಭ್ಯರ್ಥಿಗಳು ಅವಿರೋಧ ಆಯ್ಕೆ ವಿರೋಧಿಸಿದ್ದರು. ಈ ಹಿನ್ನೆಲೆಯಲ್ಲಿ ಮೂರು ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆದಿದ್ದು, ಫಲಿತಾಂಶ ಪ್ರಕಟಗೊಂಡಿದೆ. ಮೂರು ಕ್ಷೇತ್ರದ ಫಲಿತಾಂಶದಲ್ಲಿ ಮೂವರು ಪ್ರಭಾವಿ ನಾಯಕರ …
Read More »ತೀವ್ರ ಕುತೂಹಲ ಕೆರಳಿಸಿದ ಖಾನಾಪುರ ಡಿಡಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಎಂಇಎಸ್ ಅಭ್ಯರ್ಥಿ ಅರವಿಂದ ಪಾಟೀಲ್ ಜಯ
ಬೆಳಗಾವಿ: ತೀವ್ರ ಕುತೂಹಲ ಕೆರಳಿಸಿದ ಖಾನಾಪುರ ಡಿಡಿಸಿ ಬ್ಯಾಂಕ್ ಚುನಾವಣೆ ಫಲಿತಾಂಶ ಹೊರ ಬಿದ್ದಿದ್ದು, ಎಂಇಎಸ್ ಅಭ್ಯರ್ಥಿ ಅರವಿಂದ ಪಾಟೀಲ್ ಜಯಗಳಿಸಿದ್ದಾರೆ. ಎಂಇಎಸ್ ಅಭ್ಯರ್ಥಿ 27 ಮತಗಳ ಪಡೆದು ವಿಜಯಶಾಲಿಯಾದರೆ, ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ನಿಂಬಾಳ್ಕರ್ 25 ಮತಗಳ ಪಡೆಯುವ ಮೂಲಕ 2 ಮತಗಳ ಅಂತರದಲ್ಲಿ ಪರಾಭವಗೊಂಡಿದ್ದಾರೆ. ಕೋರ್ಟ್ ಆದೇಶ ಪಡೆಯುವ ಮೂಲಕ ಕೊನೆಯ ಕ್ಷಣದಲ್ಲಿ ನಾಲ್ವರು ಮತ ಚಾಲಯಿಸಿದ ಬಳಿಕ ಅಚ್ಚರಿಯ ಫಲಿತಾಶ ಪ್ರಕಟಗೊಂಡಿದೆ. ಇಂದು ಬೆಳಗ್ಗೆ …
Read More »ದೀಪಾವಳಿ ಸಂದರ್ಭದಲ್ಲಿ ಪಟಾಕಿ ಬ್ಯಾನ್ ಮಾಡೋದು ಸರಿಯಲ್ಲ: ಮುತಾಲಿಕ್
ಬೆಳಗಾವಿ/ಚಿಕ್ಕೋಡಿ: ದೀಪಾವಳಿ ಹಬ್ಬ ಸಂದರ್ಭದಲ್ಲಿ ಪಟಾಕಿ ಬ್ಯಾನ್ ಮಾಡುವುದು ಸರಿಯಲ್ಲ. ಪಟಾಕಿಯಿಂದಲೇ ಪರಿಸರ ಮಾಲಿನ್ಯ ಆಗುತ್ತೆ ಅನ್ನೋದು ಸುಳ್ಳು ಎಂದು ಶ್ರೀರಾಮ ಸೇನಾ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಧಾರ್ಮಿಕ ವಿಧಿ ವಿಧಾನದಿಂದ ಆಚರಣೆಗಳು ನಡೆಯುವ ಕಾರಣ ಪಟಾಕಿಯನ್ನು ಬ್ಯಾನ್ ಮಾಡಬಾರದು. ಪಟಾಕಿಯಿಂದ ಮಾತ್ರ ಭಾರೀ ದೊಡ್ಡ ಪ್ರಮಾಣದಲ್ಲಿ ಪರಿಸರ ಮಾಲಿನ್ಯ ಆಗುತ್ತಿದೆ ಎಂಬುದು ಸುಳ್ಳು. ಇವತ್ತು …
Read More »ವಿನಯ ಕುಲಕರ್ಣಿ ಬಂಧನದ ಹಿಂದೆ ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲ: ಲಕ್ಷ್ಮಣ ಸವದಿ
ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಬಂಧನದ ಹಿಂದೆ ಯಾವುದೇ ರಾಜಕೀಯ ಹಸ್ತಕ್ಷೇಪವಿಲ್ಲ ಅಂತಾ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ವಿನಯ ಕುಲಕರ್ಣಿ ಬಂಧನ ವಿಚಾರವಾಗಿ ಬೆಳಗಾವಿಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಜಿ ಪಂ ಸದಸ್ಯ ಯೋಗೀಶ್ ಗೌಡ ಅವರ ಕೊಲೆ ನಡೆದ ದಿನದಿಂದಲೇ ಈ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಒತ್ತಾಯ ಇತ್ತು. ಅದರಂತೆ ಈಗ ತನಿಖೆ ನಡೆದಿದೆ ಎಂದರು. ಕೊಲೆಯಾಗಿರುವ ಯೋಗೀಶಗೌಡ ಅವರ …
Read More »ಕಾದಾಟದಲ್ಲಿ ಬಾಲ ಕಳೆದುಕೊಂಡು ನೋವು ತಾಳಲಾರದೆ ನೀರಲ್ಲಿಯೇ ನಿಂತ ಸಲಗ
ಚಾಮರಾಜನಗರ: ಕಾದಾಟದಲ್ಲಿ ಬಾಲ ಕಳೆದುಕೊಂಡ ಆನೆ ನೋವು ತಾಳಲಾರದೆ ನದಿಗಿಳಿದು ನೀರಲ್ಲಿಯೇ ನಿಂತ ಘಟನೆ ಚಾಮರಾಜನಗರದ ಕಾವೇರಿ ವನ್ಯ ಜೀವಿ ವ್ಯಾಪ್ತಿಯಲ್ಲಿ ನಡೆದಿದೆ. ಕಾವೇರಿ ವನ್ಯಧಾಮದ ಭೀಮೇಶ್ವರಿ ಕಳ್ಳಭೇಟೆ ಶಿಬಿರದ ಬಳಿ ಈ ಘಟನೆ ನಡೆದಿದ್ದು, ಬಾಲ ತುಂಡಾಗಿ ಗಾಯವಾಗಿರುವ ಆನೆ ನೊಣಗಳ ಹಾವಳಿ ಹಾಗೂ ನೋವು ತಾಳಲಾರದೆ ನದಿಗಿಳಿದಿದೆ. ಈ ಆನೆಗೆ ಚಿಕಿತ್ಸೆ ನೀಡಲು ಅರಣ್ಯ ಇಲಾಖೆ ಮುಂದಾಗಿದೆ. ಗಾಯಗೊಂಡಿರುವ ಆನೆ ಮೇಲೆ ನಿಗಾ ಇಟ್ಟಿರುವ ಅರಣ್ಯ ಸಿಬ್ಬಂದಿ …
Read More »