Breaking News

Uncategorized

ವಧು ಕಲ್ಯಾಣ ಮಂಟಪದಿಂದ ನೇರವಾಗಿ ಮಡಿಕೇರಿಯ ಜ್ಯೂನಿಯರ್ ಕಾಲೇಜಿಗೆ ಆಗಮಿಸಿ ಪರೀಕ್ಷೆಗೆ ಹಾಜರ

ಮಡಿಕೇರಿ: ಧಾರೆ ಮುಹೂರ್ತ ಮುಗಿಸಿದ ವಧು ಕಲ್ಯಾಣ ಮಂಟಪದಿಂದ ನೇರವಾಗಿ ಮಡಿಕೇರಿಮಡಿಕೇರಿಯ ಅಶೋಕಪುರ ನಿವಾಸಿ ಸ್ವಾತಿ ಜೀವನ ಪರೀಕ್ಷೆ ಮುಗಿಸಿಕೊಂಡು ಕಲ್ಯಾಣ ಮಂಟಪದಿಂದ ನೇರವಾಗಿ ನಗರದ ಜೂನಿಯರ್ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಿದ್ದಾರೆ. ವಿವಾಹ ದಿನಾಂಕಕ್ಕೂ ಮೊದಲು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡಿದ್ದ ಸ್ವಾತಿ ಅವರಿಗೆ ಸುಂಟಿಕೊಪ್ಪದ ಮದುರಮ್ಮ ಪಟ್ಟಣದ ಸುರೇಶ್ ಅವರೊಂದಿಗೆ ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಮದುವೆ ನಿಶ್ಚಯವಾಗಿತ್ತು.ಯ ಜ್ಯೂನಿಯರ್ ಕಾಲೇಜಿಗೆ ಆಗಮಿಸಿ ಪರೀಕ್ಷೆಗೆ ಹಾಜರಾಗಿದ್ದಾರೆ.ವಿಪರ್ಯಾಸವೆಂದರೆ ಪರೀಕ್ಷಾ ದಿನದಂದೇ ಧಾರೆ …

Read More »

ನಿಖಿಲ್ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆಎಲ್ಲರೂ ಸೇರಿ ನಮ್ಮನ್ನು ಸೋಲಿಸಬೇಕೆಂದು ನಿರ್ಧರಿಸಿಯೇ ಸೋಲಿಸಿದರು.: H.D.K.

ಮಂಡ್ಯ:  ಜಿಲ್ಲೆ ಮದ್ದೂರು ತಾಲ್ಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಗನ ಸೋಲನ್ನು ನೆನೆದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿ ಭಾವುಕರಾದ್ದಾರೆ. ನನಗೆ ಮಂಡ್ಯ ಜಿಲ್ಲೆಯ ಜನರ ಮೇಲೆ ಬೇಸರವಿಲ್ಲ. ರಾಜಕಾರಣಕ್ಕೆ ಬಂದಾಗಿನಿಂದ ಮಂಡ್ಯ ಜನರ ಜೊತೆ ನನ್ನ ಒಡನಾಟವಿದೆ. ಜಿಲ್ಲೆಯ ಜನರು ತುಂಬಾ ಮುಗ್ದರು. ಆದರೆ ಎಲ್ಲರೂ ಸೇರಿಕೊಂಡು ಮುಗಿಸಿ ಬಿಟ್ಟರು ಭಾವಕರಾದರು. ನಿಖಿಲ್ ಚುನಾವಣೆಗೆ ನಿಲ್ಲುವುದು ಬೇಡ ಎಂದು ಹೇಳಿದ್ದೆ. ಆದರೆ, ಎಲ್ಲರೂ ಸೇರಿ ನಿಖಿಲ್’ನನ್ನು ಚುನಾವಣೆಯಲ್ಲಿ ನಿಲ್ಲಿಸಿದರು. ಎಲ್ಲರೂ …

Read More »

ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿಗೆ 8 ಗಂಟೆಗಳ ಕಾಲ ವಿಚಾರಣೆ

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಗಳು ಮಾಜಿ ಸಚಿವ ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿಗೆ 8 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ. ಧಾರವಾಡ ಉಪನಗರ ಠಾಣೆಗೆ ಬೆಳಗ್ಗೆ 11 ಗಂಟೆಗೆ ಆಗಮಿಸಿದ್ದ ವಿಜಯ್ ಕುಲಕರ್ಣಿ, ಸಂಜೆ 7 ಗಂಟೆಗೆ ವಿಚಾರಣೆ ಎದುರಿಸಿ ಠಾಣೆಯಿಂದ ಹೊರ ಬಂದರು. ಈ ವೇಳೆ ಮಾಧ್ಯಮದವರು ಪ್ರಶ್ನೆ ಕೇಳಲು ಮುಂದಾದಾಗ ಕೊಲೆ ಪ್ರಕರಣ ನ್ಯಾಯಾಲಯದಲ್ಲಿದೆ ಎಂದು ಹೇಳಿ …

Read More »

ಸಿಎಂ ಭೇಟಿಗಾಗಿ 80 ಕಿ.ಮೀ. ಪಾದಯಾತ್ರೆ: ರೈತರ ನಿರ್ಧಾರ

ಚಾಮರಾಜನಗರ: ಜಿಲ್ಲೆಯ ನೂರಾರು ರೈತರು ನವೆಂಬರ್ 24ರಂದು ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಜಿಲ್ಲೆಯ ಏಕೈಕ ಸಕ್ಕರೆ ಕಾರ್ಖಾನೆಯಾದ ಕೊಳ್ಳೇಗಾಲ ತಾಲೂಕು ಕುಂತೂರಿನಲ್ಲಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯುವುದು ಇದರ ಉದ್ದೇಶವಾಗಿದೆ. ನವೆಂಬರ್ 25 ಹಾಗೂ 26ರಂದು ಮುಖ್ಯಮಂತ್ರಿ ಯಡಿಯೂರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ …

Read More »

ಭದ್ರಾ ನಾಲೆಯಲ್ಲಿ ತೇಲಿ ಬಂದ ಅಪರಿಚಿತ ಮಹಿಳೆ ಶವ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ನೂರಾರು ಕಿ.ಮೀ. ಹಾದು ಹೋಗಿರುವ ಭದ್ರಾ ಮೇಲ್ದಂಡೆ ಯೋಜನೆಯ ನಾಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಸ್ನೇಹಿತರ ಜೊತೆ ಈಜಲು ಹೋದ 22 ವರ್ಷದ ಯುವಕ ಸಾವನಪ್ಪಿದ ಘಟನೆ ಮಾಸುವ ಮುನ್ನವೇ ಇಂದು ತರೀಕೆರೆ ತಾಲೂಕಿನ ದೊಡ್ಡ ಕುಂದೂರು ಗ್ರಾಮದ ಬಳಿ ಮಹಿಳೆಯ ಮೃತದೇಹ ತೇಲಿ ಬಂದಿದೆ.ಮೃತ ಮಹಿಳೆ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ. ಆದರೆ ಸುಮಾರು 24 ವರ್ಷದ ಮಹಿಳೆ ಎಂದು ಅಂದಾಜಿಸಲಾಗಿದೆ. ಇದು …

Read More »

2021ನೇ ಸಾಲಿನ ಸರ್ಕಾರಿ ರಜೆಗಳನ್ನು ಘೊಷಣೆ ಮಾಡಿ ಆದೇಶ

ಬೆಂಗಳೂರು,ನ.21- ರಾಜ್ಯ ಸರ್ಕಾರ 2021ನೇ ಸಾಲಿನ ಸರ್ಕಾರಿ ರಜೆಗಳನ್ನು ಘೊಷಣೆ ಮಾಡಿ ಆದೇಶ ಹೊರಡಿಸಿದೆ. ತಿಂಗಳ 2ನೇ ಶನಿವಾರ, 4ನೇ ಶನಿವಾರ ಸೇರಿದಂತೆ 20 ಸಾವ್ರರ್ತಿಕ ರಜಾ ದಿನಗಳು ಹಾಗೂ 19 ಪರಿಮಿತಿ ರಜಾ ದಿನಗಳೆಂದು ಘೋಷಣೆ ಮಾಡಿದೆ. ಜನವರಿ 14 ಮಕರ ಸಂಕ್ರಾಂತಿ, ಜ.26 ಗಣರಾಜ್ಯೋತ್ಸವ, ಮಾ.11ರಂದು ಮಹಾಶಿವರಾತ್ರಿ, ಏಪ್ರಿಲ್4 ಗುಡ್‍ಫ್ರೈಡೇ, ಏ.13 ಯುಗಾದಿ, ಏ.14 ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ, ಮೇ 1 ಕಾರ್ಮಿಕರ ದಿನಾಚರಣೆ, ಮೇ 14 ಬಸವ …

Read More »

ಒಂದು ಕಾಲದಲ್ಲಿ ಕರ್ನಾಟಕದ ಕ್ರಶ್ ಆಗಿದ್ದ ರಶ್ಮಿಕಾ, ಇದೀಗ ದೇಶದ ಕ್ರಶ್

ಬೆಂಗಳೂರು: ಕನ್ನಡದ ‘ಕಿರಿಕ್ ಪಾರ್ಟಿ’ ಸಿನಿಮಾದ ಮೂಲಕ ಮನೆಮಾತಾಗಿದ್ದ ಕೊಡಗಿನ ಬೆಡಗಿ, ಇದೀಗ ತಮಿಳು- ತೆಲುಗಿನಲ್ಲಿ ಮಿಂಚುತ್ತಿದ್ದಾರೆ. ಕೇವಲ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತವಾಗಿರದೆ, ಇಡೀ ದೇಶದ ಜನ ರಶ್ಮಿಕಾ ಮುಗ್ಧತೆಗೆ ಮನಸೋತಿದ್ದಾರೆ. ಹೌದು, ಒಂದು ಕಾಲದಲ್ಲಿ ಕರ್ನಾಟಕದ ಕ್ರಶ್ ಆಗಿದ್ದ ರಶ್ಮಿಕಾ, ಇದೀಗ ದೇಶದ ಕ್ರಶ್ ಆಗಿದ್ದಾರೆ. ಹೀಗಂತ ನಾವು ಹೇಳ್ತಿಲ್ಲ. ಗೂಗಲ್ ನಲ್ಲಿ ‘ನ್ಯಾಷನಲ್ ಕ್ರಶ್ ಆಫ್ ಇಂಡಿಯಾ’ ಅಂತ ಹುಡುಕಿದ್ರೆ ರಶ್ಮಿಕಾ ಮಂದಣ್ಣ ಅವರ ಹೆಸರು, …

Read More »

ಕೇರಳ ಪೊಲೀಸ ದೌರ್ಜನ್ಯಕ್ಕೆ ಕರ್ನಾಟಕ ಭಕ್ತರು ಕಂಗಾಲುನೆಗೆಟಿವ್ ಬಂದ್ರು ಕನ್ನಡಿಗರಿಗಿಲ್ಲ ಅಯ್ಯಪ್ಪನ ದರ್ಶನ ಭಾಗ್ಯ

ಬೆಂಗಳೂರು: ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಮಾಲೆ ಧರಿಸಿ ತಮ್ಮ ಕಷ್ಟ ಕಾರ್ಪಣ್ಯವನ್ನು ನೀಗಿಸು ತಂದೆ ಎಂದು ಕೇರಳದ ಪ್ರಸಿದ್ಧ ಅಯ್ಯಪ್ಪ ಸ್ವಾಮಿ ದೇವರ ದರ್ಶನ ಮಾಡುವ ಕನ್ನಡದ ಭಕ್ತರಿಗೆ ಕೊರೊನಾ ವಿಚಾರದಲ್ಲಿ ಸಮಸ್ಯೆ ಎದುರಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಕೆಲ ಸ್ವಾಮಿ ಭಕ್ತರು ಶಬರಿಮಲೆಯ ಅಯ್ಯಪ್ಪನನ್ನು ನೋಡಲು ಹೋದ ವೇಳೆ ಅಲ್ಲಿನ ಪೊಲೀಸರು ತಡೆ ಹಿಡಿದಿದ್ದಾರೆ. ಜೊತೆಗೆ ಕೊರೊನಾ ವರದಿ ನೆಗೆಟಿವ್ ಬಂದರೂ, ಅಯ್ಯಪ್ಪನ ಬೆಟ್ಟಕ್ಕೆ ಹೋಗಲು …

Read More »

ಶಾಸಕ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆ

ಗೋಕಾಕ್: ಕನ್ನಡಪರ ಸಂಘಟನೆಗಳನ್ನು ‘ರೋಲ್‍ಕಾಲ್ ಹೋರಾಟಗಾರರು ಎಂದು ಕರೆದಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಯನ್ನು ಖಂಡಿಸಿ ಆಕ್ರೋಶಗೊಂಡಿರುವ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ರಸ್ತೆ ತಡೆದು ತಾಲೂಕಾಧ್ಯಕ್ಷ ಬಸವರಾಜ ಖಾನಪ್ಪನವರ ನೇತೃತ್ವದಲ್ಲಿ ಶಾಸಕ ಯತ್ನಾಳ್ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಶಾಸಕ ಯತ್ನಾಳ್ ಒಬ್ಬ ಬ್ಲಾಕ್‍ಮೇಲ್ ಶಾಸಕನಿದ್ದಂತೆ, ಕನ್ನಡಪರ ಸಂಘಟನೆಗಳಿಗೆ ಅಪಮಾನ ಮಾಡುವ ಮೂಲಕ ಕರ್ನಾಟಕದ ಜನರಿಗೆ ಅಪಮಾನ ಮಾಡಿದ್ದಾರೆ. …

Read More »

ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಕರೆಪ್ಪ ತಳವಾರ ಇವರಿಗೆ ಕೆಪಿಸಿಸಿ ಕಾರ್ಯ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಆದೇಶ ಪತ್ರ ನೀಡಿದರು.

ಬೆಳಗಾವಿ : ಗೋಕಾಕ ತಾಲ್ಲೂಕಿನ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಉದಯ ಕರೆಪ್ಪ ತಳವಾರ ಇವರಿಗೆ ಕೆಪಿಸಿಸಿ ಕಾರ್ಯ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಆದೇಶ ಪತ್ರ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಎಸ್.ಟಿ.ಘಟಕದ ಅಧ್ಯಕ್ಷ ಬಾಳೇಶ ದಾಸನಟ್ಟಿ ಹಾಗೂ ಅನೇಕ ಕಾರ್ಯಕರ್ತರು ಹಾಜರಿದ್ದರು.

Read More »