ಕಲಬುರಗಿ, ಡಿಸೆಂಬರ್ 28: ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಘತ್ತರಗಿ ಗ್ರಾಮದ ಭಾಗ್ಯವಂತಿ ದೇವಿಯ (Bhagyavanti Devi) ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿ ಎಣಿಕೆ ಮಾಡುವ ವೇಳೆ ವಿಚಿತ್ರ ಹರಕೆಯ ನೋಟ್ ಪತ್ತೆಯಾಗಿದೆ. ಅತ್ತೆ ಸಾಯಬೇಕೆಂದು ಬರೆದಿರುವ 20 ರೂ. ಮುಖಬೆಲೆಯ ನೋಟ್ ಪತ್ತೆಯಾಗಿದೆ. “ತಾಯಿ, ನಮ್ಮ ಅತ್ತೆ ಬೇಗ ಸಾಯಬೇಕು” ಅಂತ 20 ರೂ. ಮುಖಬೆಲೆಯ ನೋಟ್ ಮೇಲೆ ಬರೆದು ಹುಂಡಿಯಲ್ಲಿ ಹಾಕಲಾಗಿದೆ.ಹುಂಡಿ ಎಣಿಕೆ ಕಾರ್ಯ …
Read More »ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಬಿಜೆಪಿ ನಾಯಕರು, ಪೊಲೀಸ್ ಮಧ್ಯೆ ಹೈಡ್ರಾಮಾ
ಕಲಬುರಗಿ, ಡಿಸೆಂಬರ್ 28: ಬೀದರ್ ಮೂಲದ ಕಾಂಟ್ರಾಕ್ಟರ್ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ, ಡೆತ್ನೋಟ್ನಲ್ಲಿ ಸುಪಾರಿ ಬಗ್ಗೆ ಉಲ್ಲೇಖವಾಗಿರುವುದು ಕಾಂಗ್ರೆಸ್-ಬಿಜೆಪಿ ರಾಜಕೀಯ ಜಿದ್ದಾಜಿದ್ದಿಗೆ ನಾಂದಿ ಹಾಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಮಾಜಿ ಕಾರ್ಪೋರೆಟರ್ ರಾಜು ಕಪನೂರ್ ಹಾಗೂ ಗ್ಯಾಂಗ್ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್, ಆಂದೋಲಾ ಸ್ವಾಮೀಜಿ ಶ್ರೀ ಸಿದ್ದಲಿಂಗ ಸ್ವಾಮೀಜಿ, ಚಂದು ಪಾಟೀಲ್, ಮಣಿಕಂಠ ಸೇರಿ ನಾಲ್ಕು ಜನರ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂಬ ಉಲ್ಲೇಖದ ಡೆತ್ನೋಟ್ ಕಲಬುರಗಿಯ …
Read More »ಬೆಳಗಾವಿಯಲ್ಲಿ ಸ್ಟೇಡಿಯಂ ನಿರ್ಮಿಸಬೇಕೆಂದು ಆಗ್ರಹಿಸಿದ ದಕ್ಷಿಣ ಶಾಸಕ ಅಭಯ ಪಾಟೀಲ್ಅಭಿನಂದಿಸಲಾಯಿತು.
ಸದನದಲ್ಲಿ ಕ್ರೀಡಾಳುಗಳ ಕುರಿತು ಚರ್ಚಿಸಿ ಶಾಸಕ ಅಭಯ ಪಾಟೀಲ್; ಸ್ಕೇಟಿಂಗ್ ತರಬೇತುದಾರರಿಂದ ಸನ್ಮಾನ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬೆಳಗಾವಿಯ ಕ್ರೀಡಾಳುಗಳ ಸಮಸ್ಯೆಯ ಕುರಿತು ಧ್ವನಿ ಎತ್ತಿ, ಬೆಳಗಾವಿಯಲ್ಲಿ ಸ್ಟೇಡಿಯಂ ನಿರ್ಮಿಸಬೇಕೆಂದು ಆಗ್ರಹಿಸಿದ ದಕ್ಷಿಣ ಶಾಸಕ ಅಭಯ ಪಾಟೀಲ್ ಅವರನ್ನು ಬೆಲಗಾಮ್ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮತ್ತು ಆಭಾ ಸ್ಫೋರ್ಟ್ಸ್ ಕ್ಲಬನ ವತಿಯಿಂದ ಸತ್ಮರಿಸಿ ಅಭಿನಂದಿಸಲಾಯಿತು. ಇದು ವರೆಗೂ ನಡೆದ ಅಧಿವೇಶನದಲ್ಲಿ ಕ್ರೀಡೆ ಮತ್ತು ಕ್ರೀಡಾಳುಗಳ ಕುರಿತು ಯಾವ ಶಾಸಕರು …
Read More »ವಕ್ಫ್ ಇಲಾಖೆಯಲ್ಲಿ ವ್ಯಾಪಕ ಪೆಟ್ರೋಲ್ ದುರ್ಬಳಕೆ ಪತ್ರ ಬರೆದ ಯತ್ನಾಳ್
ವಿಜಯಪುರ, ಡಿಸೆಂಬರ್ 27: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆಯಲ್ಲಿ (Waqf Board) ಮನಬಂದಂತೆ ಪೆಟ್ರೋಲ್ ಇಂಡೆಂಟ್ಗಳನ್ನು ಬಳಸಿಕೊಂಡು ಸರ್ಕಾರಿ ವಾಹನ ಚಾಲಕರು ಹಾಗೂ ಪೆಟ್ರೋಲ್ ಸರ್ವಿಸ್ ಸ್ಟೇಷನ್ಗಳು ದೊಡ್ಡ ಭ್ರಷ್ಟಾಚಾರವನ್ನು ಎಸಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಆರೋಪ ಮಾಡಿದ್ದಾರೆ. ಈ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು ಸರ್ಕಾರದ ಎಲ್ಲ ಇಲಾಖೆಗಳಿಗೂ ಇಂಧನ ಮಿತಿ ಮಾರ್ಗಸೂಚಿ ಹೊರಡಿಸುವಂತೆ ಮನವಿ ಮಾಡಿದ್ದಾರೆ. …
Read More »ಸಿನಿಮಾ ಶೈಲಿಯಲ್ಲಿ ಬ್ಯಾಂಕಿಗೆ ವಂಚನೆ: ತಂಗಿ ಮದ್ವೆ ಸಾಲಕ್ಕೆ ಅಣ್ಣ ಜೈಲು ಸೇರುವ ಪರಿಸ್ಥಿತಿ
ನೆಲಮಂಗಲ, ಡಿಸೆಂಬರ್ 27: ಆಭರಣ ಮೌಲ್ಯಮಾಪಕನಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ 23 ಲಕ್ಷಕ್ಕೂ ಹೆಚ್ಚು ಹಣ ವಂಚನೆ (fraud) ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ. ಆಭರಣ ಮೌಲ್ಯಮಾಪಕ ಮಂಜುನಾಥ ವಂಚಕ. ನೆಲಮಂಗಲ ಪೊಲೀಸ್ ಠಾಣೆಗೆ ಮ್ಯಾನೇಜರ್ ಆನಂದ್ ದೂರು ನೀಡುತ್ತಿದ್ದಂತೆ ಇತ್ತ ವಂಚಕ ಪರಾರಿ ಆಗಿದ್ದಾರೆ. ತಂಗಿಯ ಮದುವೆ ಸಾಲಕ್ಕೆ ಅಣ್ಣ ಜೈಲು ಸೇರುವ ಪರಿಸ್ಥಿತಿ ಎದರಾಗಿದೆ.ಅರ್ಧ ಕೆಜಿಯಷ್ಟು ನಕಲಿ ಚಿನ್ನಾಭರಣ ಅಡವಿಟ್ಟು ಮಂಜುನಾಥ …
Read More »ಚಾಟಿಯಿಂದತಮಗೆ ತಾವೇ ಹೊಡೆದುಕೊಂಡಅಣ್ಣಮಲೈ
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಅಣ್ಣಾ ಯೂನಿರ್ವಸಿಟಿಯಲ್ಲಿ ಓದುತ್ತಿದ್ದ ಇಂಜಿನಿಯರಿಂಗ್ ವಿಧ್ಯಾರ್ಥಿನಿಯ ಮೇಲೆ ಕಾಲೇಜು ಕ್ಯಾಂಪಸ್ನಲ್ಲಿ …
Read More »ಅನ್ಯ ರಾಜ್ಯಗಳಿಂದ ಸಾಗಿಸುತ್ತಿದ್ದ ₹86 ಲಕ್ಷ ಮೌಲ್ಯದ ಗಾಂಜಾ ಜಪ್ತಿ
ಬೆಂಗಳೂರು: ಹೊಸ ವರ್ಷಾಚರಣೆಗೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿರುವ ಬೆನ್ನಲ್ಲೇ ಮಾದಕ ದಂಧೆಕೋರರ ಮೇಲೆ ಪೊಲೀಸರು ಕಣ್ಣಿಟ್ಟಿದ್ದು, 8 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರು ನಗರವನ್ನು ಸಂಪರ್ಕಿಸುವ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ, ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ. ಈ ನಡುವೆ ರೈಲುಗಳ ಮೂಲಕ ನಗರಕ್ಕೆ ಗಾಂಜಾ ಪೂರೈಸುತ್ತಿದ್ದ ಪ್ರತ್ಯೇಕ 5 ಪ್ರಕರಣಗಳಲ್ಲಿ 8 ಜನರನ್ನು ರಾಜ್ಯ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ, ಆರೋಪಿಗಳಿಂದ ಸರಿಸುಮಾರು 86 ಲಕ್ಷ ರೂ. ಮೌಲ್ಯದ ಗಾಂಜಾ …
Read More »ಕುಂದಾನಗರಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದು, ರಾಷ್ಟ್ರೀಯ ನಾಯಕರ ಸ್ವಾಗತಕ್ಕೆ ಜಿಲ್ಲೆಯ ಕೈ ಮುಖಂಡರು, ಕಾರ್ಯಕರ್ತರು ತುದಿಗಾಲ ಮೇಲೆ ನಿಂತಿದ್ದಾರೆ.
ಬೆಳಗಾವಿ: ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ನಡೆದಿದ್ದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಕುಂದಾನಗರಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದ್ದು, ರಾಷ್ಟ್ರೀಯ ನಾಯಕರ ಸ್ವಾಗತಕ್ಕೆ ಜಿಲ್ಲೆಯ ಕೈ ಮುಖಂಡರು, ಕಾರ್ಯಕರ್ತರು ತುದಿಗಾಲ ಮೇಲೆ ನಿಂತಿದ್ದಾರೆ. ಇಡೀ ದೇಶದ ಚಿತ್ತ ಈಗ ಬೆಳಗಾವಿಯತ್ತ ನೆಟ್ಟಿದೆ. 1924, ಡಿ.26ರಂದು ಬಾಪೂಜಿ ನೇತೃತ್ವದಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ನಡೆದಿದ್ದ ಅಂದಿನ ವಿಜಯ ನಗರದ, ಇಂದಿನ ಟಿಳಕವಾಡಿ ವೀರಸೌಧ ಮತ್ತೊಂದು ಐತಿಹಾಸಿಕ ಘಟನೆಗೆ …
Read More »ಮಣಿಪುರದಲ್ಲಿ ಸೇನಾ ವಾಹನ ಅಪಘಾತ: ಇನ್ನೆರಡು ತಿಂಗಳಲ್ಲಿ ನಿವೃತ್ತಿ ಹೊಂದಲಿದ್ದ ಚಿಕ್ಕೋಡಿ ಯೋಧ ಸಾವು
ಚಿಕ್ಕೋಡಿ: ಮಣಿಪುರದ ಬೊಂಬಾಲಾ ಕ್ಷೇತ್ರದಲ್ಲಿ ಸೇನಾ ವಾಹನ ಪಲ್ಟಿಯಾಗಿ ಚಿಕ್ಕೋಡಿ ಮೂಲದ ಯೋಧ ಹುತಾತ್ಮರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪಾನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತಾ(42) ಸಾವನ್ನಪ್ಪಿದವರು. ಸೋಮವಾರ ಮಧ್ಯಾಹ್ನ ದಾರಿಮಧ್ಯೆ ಗುಡ್ಡ ಕುಸಿದ ಪರಿಣಾಮ ಸೇನೆಯ 2.5 ಡೈಟನ್ ವಾಹನ ಪಲ್ಟಿಯಾಗಿತ್ತು. ಸೇನಾ ವಾಹನದಲ್ಲಿ ಒಟ್ಟು ಆರು ಜನ ಯೋಧರು ಪ್ರಯಾಣಿಸುತ್ತಿದ್ದರು. ಆರು ಯೋಧರ ಪೈಕಿ ಇಬ್ಬರು ಯೋಧರು ಸಾವನ್ನಪ್ಪಿದ್ದು, ನಾಲ್ವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವನ್ನಪ್ಪಿರುವ …
Read More »ಬಿಜೆಪಿಗರಿಗೆ ಸುಳ್ಳು ಆರೋಪ ಮಾಡುವುದೇ ರೂಢಿಯಾಗಿ ಬಿಟ್ಟಿದೆ…ಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆ- ಸಚಿವ ಈಶ್ವರ ಖಂಡ್ರೆ
ಬಿಜೆಪಿಗರಿಗೆ ಸುಳ್ಳು ಆರೋಪ ಮಾಡುವುದೇ ರೂಢಿಯಾಗಿ ಬಿಟ್ಟಿದೆ…ಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆ- ಸಚಿವ ಈಶ್ವರ ಖಂಡ್ರೆ ಬಿಜೆಪಿಗರಿಗೆ ಸುಳ್ಳು ಆರೋಪ ಮಾಡುವುದೇ ರೂಢಿಯಾಗಿ ಬಿಟ್ಟಿದೆಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆಸುಳ್ಳನ್ನು ಸತ್ಯವಾಗಿ ಬಿಂಬಿಸುತ್ತಾರೆ ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ ಬಿಜೆಪಿಗರಿಗೆ ಸುಳ್ಳು ಆರೋಪ ಮಾಡಿ ರೂಢಿಯಾಗಿ ಬಿಟ್ಟಿದೆ. ಸುಳ್ಳನ್ನು ಸತ್ಯವಾಗಿ ಬಿಂಬಿಸುತ್ತಾರೆ. ಅವರೇ ಅಪರಾಧ ಮಾಡಿ ಅವರೇ ದೂರು ನೀಡುತ್ತಾರೆ. ಅವರೇ ತನಿಖೆ ಮಾಡಿದಂತೆ …
Read More »
Laxmi News 24×7