Breaking News

Uncategorized

ಅರಬಿ ಸಮುದ್ರದಲ್ಲಿ ಪತನಗೊಂಡ ಮಿಗ್‌ ಅವಶೇಷ ಪತ್ತೆ : ಪೈಲಟ್ ಸುಳಿವು ಇನ್ನೂ ಸಿಕ್ಕಿಲ್ಲ

ಹೊಸದಿಲ್ಲಿ: ಅರಬಿ ಸಮುದ್ರದಲ್ಲಿ ಗುರುವಾರ ಪತನಗೊಂಡಿದ್ದ ಭಾರತೀಯ ವಾಯುಸೇನೆಯ ಮಿಗ್‌-29 ಕೆ ಯುದ್ಧವಿಮಾನದ ಕೆಲವು ಭಾಗಗಳು ಪತ್ತೆಯಾಗಿವೆ. ಆದರೆ ನಾಪತ್ತೆಯಾಗಿರುವ ಪೈಲಟ್‌ನ ಸುಳಿವು ಸಿಕ್ಕಿಲ್ಲ. ಗುರುವಾರ ಸಂಜೆ ಐಎನ್‌ಎಸ್‌ ವಿಕ್ರಮಾದಿತ್ಯ ಸಮರ ನೌಕೆಯಿಂದ ಹಾರಾಟ ನಡೆಸುವ ವೇಳೆ ಈ ಮಿಗ್‌ ವಿಮಾನ ಪತನಗೊಂಡಿತ್ತು. ರವಿವಾರ ಅದರ ಟರ್ಬೋ ಚಾರ್ಜರ್‌, ಇಂಧನ ಟ್ಯಾಂಕ್‌ ಮತ್ತು ಕೆಲವು ಭಾಗಗಳನ್ನು ನೌಕಾಪಡೆಯ ಶೋಧ ತಂಡ ಪತ್ತೆ ಹಚ್ಚಿದೆ. ಇಬ್ಬರು ಪೈಲಟ್‌ಗಳ ಪೈಕಿ ಓರ್ವರನ್ನು ಗುರುವಾರವೇ …

Read More »

ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿ.1 ರಂದು ಶಿವಸೇನೆಗೆ ಸೇರ್ಪಡೆ

ಮುಂಬಯಿ: ಬಾಲಿವುಡ್ ನಟಿ ಊರ್ಮಿಳಾ ಮಾತೋಂಡ್ಕರ್ ಡಿಸಂಬರ್ 1 ರಂದು ಶಿವಸೇನೆಗೆ ಸೇರಲಿದ್ದಾರೆ. ನಟಿ ಊರ್ಮಿಳಾ ಮಂಗಳವಾರ ಶಿವಸೇನೆ ಪಕ್ಷ ಸೇರಲಿದ್ದಾರೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಆಪ್ತ ಹರ್ಷಲ್ ಪ್ರಧಾನ್ ತಿಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿಂದ ಮುಂಬಯಿ ಉತ್ತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಊರ್ಮಿಳಾ ಸೋತಿದ್ದರು. ನಂತರ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯದಿಂದ ಬೇಸತ್ತಿದ್ದ ಊರ್ಮಿಳಾ ಪಕ್ಷ ತೊರೆದಿದ್ದರು. ಊರ್ಮಿಳಾ ಹೆಸರನ್ನು …

Read More »

ರೈತರಿಂದ ದೆಹಲಿಯ 5 ಪ್ರವೇಶ ದ್ವಾರ ಬಂದ್ ಎಚ್ಚರಿಕೆ

ನವದೆಹಲಿ,  : ಕೊರೆಯುವ ಚಳಿಯ ನಡುವೆಯೇ ಕೇಂದ್ರ ಸರ್ಕಾರದ ವಿರುದ್ಧ ನಡೆಸುತ್ತಿರುವ ಹೋರಾಟವನ್ನು ರೈತರು ಮುಂದುವರೆಸಿದ್ದಾರೆ. ದೆಹಲಿ-ಹರ್ಯಾಣದ ಸಿಂಘು ಗಡಿಯಲ್ಲಿ ಪೊಲೀಸರು ರೈತರನ್ನು ತಡೆದಿದ್ದಾರೆ. ರೈತರು ದೆಹಲಿಯ ಬುರಾಡಿ ಮೈದಾನಕ್ಕೆ ಬಂದರೆ ಅವರ ಜೊತೆ ಮಾತುಕತೆ ನಡೆಸಲಾಗುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರು. ಆದರೆ, ಪ್ರತಿಭಟನೆ ನಡೆಸುತ್ತಿರುವ ರೈತರು ಈ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಬೆಳಗ್ಗೆ 11ಗಂಟೆಗೆ ಮುಂದಿನ ಹೋರಾಟದ ಬಗ್ಗೆ ರೈತರು ಸಭೆ ನಡೆಸಲಿದ್ದಾರೆ. ದೆಹಲಿ …

Read More »

ಸತತವಾಗಿ ಸುರಿದ ಮಳೆಗೆ ರೈತರ ಕನಸೆಲ್ಲಾ ನುಚ್ಚು ನೂರ- ಹತ್ತಿ, ಭತ್ತದ ಬೆಳೆ ನಾಶ

ರಾಯಚೂರು: ನೆರೆಯಿಂದ ಕಂಗೆಟ್ಟಿದ್ದ ರೈತರಿಗೆ ಇದೀಗ ಮತ್ತೆ ನಿವಾರ್ ನಿಂದ ಗಾಯದ ಮೇಲೆ ಬರೆ ಎಳೆದಂತೆ ಆಗಿದ್ದು, ಜಿಲ್ಲೆಯ ರೈತರು ನಿವಾರ್ ಚಂಡಮಾರುತದಿಂದ ಮತ್ತೆ ಹಾನಿಗೊಳಗಾಗಿದ್ದಾರೆ.ಸತತವಾಗಿ ಸುರಿದ ಮಳೆಗೆ ಹತ್ತಿ, ಭತ್ತ ಬೆಳೆ ನಾಶವಾಗಿದ್ದು, ರೈತರು ಮತ್ತೆ ನಷ್ಟಕ್ಕೆ ಸಿಲುಕಿದ್ದಾರೆ. ಬಿಡಿಸಿ ತಂದಿದ್ದ ಹತ್ತಿ, ಭತ್ತದ ಬೆಳೆ ಮಳೆಗೆ ಒದ್ದೆಯಾದರೆ, ಜಮೀನಿನಲ್ಲಿದ್ದ ಹತ್ತಿ, ಭತ್ತ ಬೆಳೆ ಸಹ ಸಂಪೂರ್ಣ ನೆಲಕ್ಕಚ್ಚಿದೆ. ಸ್ವಲ್ಪ ನಿರೀಕ್ಷೆಯಲ್ಲಿದ್ದ ರೈತರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸತತವಾಗಿ …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆಪರೇಷನ್ ಕಮಲ ಆರಂಭ ಸಾಹುಕಾರರ ಹೊಸ ಪ್ಲಾನ್ ಏನು ಗೊತ್ತಾ?

ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಮತ್ತೊಂದು ಸುತ್ತಿನ ಫೈಟ್ ಆರಂಭವಾಗಿದೆ. ಬಿಜೆಪಿಗೆ ಸೇರ್ಪಡೆಯಾಗಿ ಗೆದ್ದು ಬಂದ ದಿನವೇ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನ ಸೋಲಿಸುವುದೇ ನನ್ನ ಗುರಿ ಅಂತ ರಮೇಶ್ ಜಾರಕಿಹೊಳಿ ಶಪಥ ಮಾಡಿದ್ದರು. ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೂ ಸಾಕಷ್ಟು ಸಮಯವಿದ್ದು ಆದ್ರೆ ರಮೇಶ್ ಜಾರಕಿಹೊಳಿ ಮಾತ್ರ ಈಗಲೇ ಅಖಾಡಕ್ಕಿಳಿದಿದ್ದಾರೆ. ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಸದ್ಯ ಆಪರೇಷನ್ ಕಮಲ ಆರಂಭವಾಗಿದೆ. ಸಚಿವ …

Read More »

ಟೀಂ ಇಂಡಿಯಾದ ವಿಕೆಟ್‌ ಕೀಪರ್‌ ಕೆಎಲ್‌ ರಾಹುಲ್‌ ಅವರಿಗೆ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರನ್‌ ಫಿಂಚ್‌ ಅವರು ಕೈಯಿಂದ ಪಂಚ್‌ ಮಾಡಿದ್ದಾರೆ.

ಸಿಡ್ನಿ: ಟೀಂ ಇಂಡಿಯಾದ ವಿಕೆಟ್‌ ಕೀಪರ್‌ ಕೆಎಲ್‌ ರಾಹುಲ್‌ ಅವರಿಗೆ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರನ್‌ ಫಿಂಚ್‌ ಅವರು ಕೈಯಿಂದ ಪಂಚ್‌ ಮಾಡಿದ್ದಾರೆ. ಎರಡನೇ ಪಂದ್ಯದಲ್ಲಿ ನವದೀಪ್‌ ಸೈನಿ 12ನೇ ಓವರ್‌ ಬೌಲ್‌ ಮಾಡುತ್ತಿದ್ದರು. ಗಂಟೆಗೆ 146 ಕಿ.ಮೀ ವೇಗದಲ್ಲಿ ಎಸೆದ 5ನೇ ಎಸೆತವನ್ನು ಹೊಡೆಯಲು ಫಿಂಚ್‌ ಪ್ರಯತ್ನ ಪಟ್ಟಿದ್ದರು. ಆದರೆ ಬಾಲ್‌ ಬ್ಯಾಟ್‌ಗೆ ಸಿಗದೇ ಹೊಟ್ಟೆಗೆ ಬಡಿಯಿತು. ಫುಲ್‌ ಟಾಸ್‌ ಆಗಿದ್ದ ಕಾರಣ ಅಂಪೈರ್‌ ನೋಬಾಲ್‌ ನೀಡಿದರು. ಬಳಿಕ …

Read More »

ಮರಾಠ ಸಮುದಾಯಕ್ಕೆ ‘ 2ಎ ‘ ಮೀಸಲಾತಿ ನೀಡಬೇಕು. ಇಲ್ಲದಿದ್ರೆ ಬೆಳಗಾವಿ ಉಪಚುನಾವಣೆ ಅಷ್ಟೇ ಅಲ್ಲ ಮುಂದಿನ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ: ಅಂಜಲಿ ನಿಂಬಾಳ್ಕರ್

ಧಾರವಾಡ : ಮರಾಠ ಸಮುದಾಯಕ್ಕೆ ‘ 2ಎ ‘ ಮೀಸಲಾತಿ ನೀಡಬೇಕು. ಇಲ್ಲದಿದ್ರೆ ಬೆಳಗಾವಿ ಉಪಚುನಾವಣೆ ಅಷ್ಟೇ ಅಲ್ಲ ಮುಂದಿನ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ ಎಂದು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಎಚ್ಚರಿಸಿದ್ದಾರೆ. ಧಾರವಾಡದ ಮರಾಠ ಕ್ರಾಂತಿ ಮೋರ್ಚಾ ಸಭೆಯಲ್ಲಿ ಮಾತನಾಡಿದ ಅವರು, ನಮಗೆ ಮರಾಠ ಪ್ರಾಧಿಕಾರ ಬೇಡ, ಅಷ್ಟೊಂದು ಮರಾಠರ ಮೇಲೆ ಬಿ.ಎಸ್.ಯಡಿಯೂರಪ್ಪ ನವರಿಗೆ  ಕಾಳಜಿ ಇದ್ದರೆ. ‘2ಎ’ ಗೆ ಸೇರಿಸಿ ಎಂದು ಆಗ್ರಹಿಸಿದ್ದಾರೆ. 7 ದಿನಗಳಲ್ಲಿ ಮರಾಠ …

Read More »

ಹೊರಗಡೆ ಗಣೇಶನ ಚಿತ್ರ, ಒಳಗಡೆ 16 ಲಕ್ಷದ ಕೆನಡಾ ಡ್ರಗ್ಸ್ –

ಆನೇಕಲ್: ಕೆನಡಾದಿಂದ ಲೈಸರ್ಜಿಕ್ ಡೈಥಲಾಮೈಡ್ (ಎಲ್‍ಎಸ್‍ಡಿ) ಡ್ರಗ್ಸ್ ತರಿಸಿದ್ದ ಖಾಸಗಿ ಆಸ್ಪತ್ರೆ ಸಿಬ್ಬಂದಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ ಹೆಬ್ಬಗೋಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಅರುಣ್ ಆಂತೋಣಿ(22) ಎಂದು ಗುರುತಿಸಲಾಗಿದೆ. ಈತ ಮೂಲತಃ ಕೇರಳದ ಪೆರಂಬಾಡಿ ಚೇರಾ ಹೌಸ್‍ನ ಕೊಟ್ಟಾಯಂ ನಿವಾಸಿಯಾಗಿದ್ದಾನೆ. ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿನ ಸ್ಪರ್ಶ ಆಸ್ಪತ್ರೆಯ ಎಕ್ಸ್-ರೇ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದನು.   ಕೆನಡಾದಲ್ಲಿ ಸಿಗುವ ಎಲ್‍ಎಸ್‍ಡಿ ಡ್ರಗ್ಸ್ ಅನ್ನು …

Read More »

ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಚಿವ ಆನಂದ ಸಿಂಗ್  ಮೇಲೆ ಮುತ್ತಿಗೆ ಹಾಕಲು ಯತ್ನ

ಬಳ್ಳಾರಿ :  ವಿಜಯನಗರ ಜಿಲ್ಲೆಯ ರಚನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ಹೋರಾಟಗಾರರು  ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಚಿವ ಆನಂದ ಸಿಂಗ್  ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ವೈಯಕ್ತಿಕ ಹಿತಾಸಕ್ತಿಗಾಗಿ ಸಚಿವ ಆನಂದ ಸಿಂಗ್ ಜಿಲ್ಲೆಯನ್ನು ವಿಭಜಿಸುತ್ತಿದ್ದಾರೆ. ಅವರ ಬಳ್ಳಾರಿಗೆ ಬಂದರೆ ಮುತ್ತಿಗೆ ಹಾಕುತ್ತೇವೆಂದು ಪ್ರತಿಭಟನಾಕಾರರು ಹೇಳಿದ್ದರು. ಅದೇ ರೀತಿ ಇಂದು ಸ್ವರಾಜ್ಯ ಕಾರ್ಯಕ್ರಮಕ್ಕೆ ಜಿಲ್ಲೆಗೆ ಆಗಮಿಸಿದ ಸಚಿವ ಹಾಗೂ ಡಿಸಿಎಂ ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ್ದರು. …

Read More »

ಕುರ್ಣಿವಾಡಿ ಗ್ರಾಮಕ್ಕೆ ಬೆಳಕು ನೀಡಿದ ಶಾಸಕ ಸತೀಶ ಜಾರಕಿಹೊಳಿ, ಹಲವಾರು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಯಮಕನಮರಡಿ: ಯಮಕನಮರಡಿ ವಿಧಾನ ಸಭಾ ಮತ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಬಿಜೆಪಿಯ ಹಲವಾರು ಮುಖಂಡರು ಇಂದು‌ ಅಧಿಕೃತವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ‌ ನೇತೃತ್ವದಲ್ಲಿ ಕಾಂಗ್ರಸ್ ಸೇರ್ಪಡೆಗೊಂಡರು. ದಡ್ಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮೋದಗಾ ಗ್ರಾಮದಲ್ಲಿ ಶನಿವಾರದಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ‌ ಅವರ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಅವರ ಸಾಮಾಜಿಕ‌ ಕಳಕಳಿ ಮತ್ತು ಕ್ಷೇತ್ರದ ವಿವಿಧ ರಂಗಗಳಲ್ಲಿ ಕಳೆದ ಒಂದು ದಶಕಗಳಿಂದ ಮಾಡಿದ ಸಾಧನೆಗಳನ್ನು ಮೆಚ್ಚಿ …

Read More »