ನವದೆಹಲಿ: ರೈಲ್ವೆ ಇಲಾಖೆ ಬೆಂಗಳೂರು ಹಾಗೂ ಮೈಸೂರು ನಡುವಿನ ರೈಲ್ವೆ ಹಳಿಯ ದುರಸ್ತಿ ಕಾರ್ಯವನ್ನು ಪೂರ್ಣಗೊಳಿಸಿದೆ. ಕಾಮಗಾರಿಯ ನೈಪುಣ್ಯತೆಯನ್ನು ನೀರು ತುಂಬಿದ ಗಾಜಿನ ಲೋಟದ ಮೂಲಕ ಪರೀಕ್ಷೆ ಮೂಲಕ ಅದು ಜನರ ಮುಂದಿಟ್ಟಿದೆ. ಈ ವೇಳೆ ರೈಲು ವೇಗವಾಗಿ ಚಲಿಸಿದರೂ ಒಂದು ಹನಿ ನೀರು ಕೆಳಗೆ ಬಿದ್ದಿಲ್ಲ. ಈ ವಿಡಿಯೋವನ್ನು ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಟ್ವೀಟ್ ಮಾಡಿದ್ದು, ಈ ಮಾರ್ಗ ರೈಲು ಪ್ರಯಾಣ ಎಷ್ಟು ಸುಗಮವಾಗಿ ಇರಲಿದೆ …
Read More »ಸಬರ್‌ಮತಿ ನದಿ ತೀರದಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಏಕತಾ ಪ್ರತಿಮೆ ಇರುವ ಸ್ಥಳಕ್ಕೆ ಸಂಪರ್ಕ ಕಲ್ಪಿಸುವ ದೇಶದ ಮೊದಲ ಸೀಪ್ಲೇನ್ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಲಿದ್ದಾರೆ.
ನವದೆಹಲಿ : ಗುಜರಾತಿನ ಸಬರ್‌ಮತಿ ನದಿ ತೀರದಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಏಕತಾ ಪ್ರತಿಮೆ ಇರುವ ಸ್ಥಳಕ್ಕೆ ಸಂಪರ್ಕ ಕಲ್ಪಿಸುವ ದೇಶದ ಮೊದಲ ಸೀಪ್ಲೇನ್ ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಚಾಲನೆ ನೀಡಲಿದ್ದಾರೆ. ಸರ್ದಾರ್ ಪಟೇಲ್ ಅವರ 146ನೇ ಜನ್ಮ ದಿನದ ನಿಮಿತ್ತ ಈ ಸೇವೆಯನ್ನು ಆರಂಭಿಸಲಾಗುತ್ತಿದೆ. ಸೀಪ್ಲೇನ್ ವಿಮಾನ ಅಹಮದಾಬಾದ್‌ನ ನದಿ ತೀರದಿಂದ 10.15 ನಿಮಿಷಕ್ಕೆ ಹಾರಾಟ ಕೈಗೊಳ್ಳಲಿದ್ದು, 10.45ಕ್ಕೆ ಕೆವಾಡಿಯಾ ತಲುಪಲಿದೆ. ಕೆವಾಡಿಯಾದ ಸರ್ದಾರ್ …
Read More »ಬ್ಲ್ಯಾಕ್ ಡೇ ಗೆ ಕರೆ ಕೊಟ್ಟ ಮಹಾರಾಷ್ಟ್ರ ಸರ್ಕಾರ…!
ಬೆಳಗಾವಿ- ಕನ್ನಡಿಗರು ಹಬ್ಬದ ದಿನ ರಾಜ್ಯೋತ್ಸವದ ದಿನ ಮಹಾರಾಷ್ಟ್ರ ಸರ್ಕಾರವೇ ಕಪ್ಪು ದಿನ ಆಚರಿಸುವ ಮೂಲಕ ಎಂಈಎಸ್ ಗೆ ಬೆಂಬಲ ನೀಡಲು ನಿರ್ಧರಿಸಿ ಭಾರತದ ಒಕ್ಕೂಟದ ವ್ಯೆವಸ್ಥೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿರುವಾಗ ಅದಕ್ಕೆ ತಕ್ಕ ಉತ್ತರ ಕೊಡಬೇಕಾದ ನಮ್ಮ ಸರ್ಕಾರ ಮಲಗಿದೆಯಾ ? ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಕಪ್ಪು ಪಟ್ಟಿ ಧರಿಸಿ,ಕಪ್ಪು ದಿನ ಆಚರಣೆಗೆ ಬೆಂಬಲ ನೀಡಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿ ಈ ಕುರಿತು ಮಹಾರಾಷ್ಟ್ರ ಗಡಿ …
Read More »ದೇವರಗುಂಡಿ ಜಲಪಾತದಲ್ಲಿ ಮಾಡೆಲ್‍ಗಳ ಅರೆಬೆತ್ತಲೆ ಫೋಟೋ ಶೂಟ್
ಮಂಗಳೂರು: ಬೆಂಗಳೂರಿನ ಇಬ್ಬರು ಮಾಡೆಲ್ ಗಳು ಕರಾವಳಿಯ ಪುಣ್ಯಕ್ಷೇತ್ರದ ಬಳಿ ಇರುವ ದೇವರ ಜಲಪಾತದ ಎದುರು ಅರೆಬೆತ್ತಲೆಯಾಗಿ ಫೋಟೋ ಶೂಟ್ ಮಾಡಿದ್ದು, ಇದೀಗ ಭಕ್ತರ ಆಕ್ರೋಶಕ್ಕೆ ಕಾರಣವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ತೊಡಿಕಾನ ಗ್ರಾಮದಲ್ಲಿ 13 ಶತಮಾನದ ಇತಿಹಾಸವಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನವಿದೆ. ಇಲ್ಲಿ ನೆಲೆಸಿರೋ ಪರಮಾತ್ಮ ಇಲ್ಲಿಂದ 2 ಕಿಲೋಮೀಟರ್ ದೂರದಲ್ಲಿರುವ ಈ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದ ಎಂಬ ಐತಿಹ್ಯ ಇದೆ. ಹೀಗಾಗಿ ಇದಕ್ಕೆ …
Read More »ಸಿಐಡಿ ಘಟಕದ ಡಿಜಿಪಿ ಟಿ. ಸುನೀಲ್‍ಕುಮಾರ್ ಅವರು ಈ ತಿಂಗಳ ಅಂತ್ಯದಲ್ಲಿ ಸೇವೆಯಿಂದ ನಿವೃತ್ತಿಯಾಗಲಿದ್ದಾರೆ.
ಬೆಂಗಳೂರು, ಅ. 29- ಸಿಐಡಿ ಘಟಕದ ಡಿಜಿಪಿ ಟಿ. ಸುನೀಲ್‍ಕುಮಾರ್ ಅವರು ಈ ತಿಂಗಳ ಅಂತ್ಯದಲ್ಲಿ ಸೇವೆಯಿಂದ ನಿವೃತ್ತಿಯಾಗಲಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾದ ಸುನೀಲ್‍ಕುಮಾರ್ ಅವರು ಬಿಎಸ್‍ಸಿ ಕೃಷಿ ಪದವಿಯನ್ನು ಪಾಸ್ ಮಾಡಿ ನವದೆಹಲಿಯಲ್ಲಿ ತೋಟಗಾರಿಕೆಯಲ್ಲಿ ಸ್ನಾತಕೋತ್ತರ ಪದವಿ ಪಡೆದು 1986ರಲ್ಲಿ ಐಎಫ್‍ಎಸ್(ಅರಣ್ಯ) ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅರಣ್ಯ ಅಧಿಕಾರಿಯಾಗಿದ್ದರು. ತದನಂತರ 1989ರಲ್ಲಿ ಐಪಿಎಸ್ ಪರೀಕ್ಷೆ ಪಾಸ್ ಮಾಡಿ ಪೊಲೀಸ್ ಅಧಿಕಾರಿಯಾಗಿ ಕರ್ನಾಟಕ ರಾಜ್ಯಕ್ಕೆ ಬಂದರು. ಬೀದರ್ ಜಿಲ್ಲೆಯ ಹುಮ್ನಾಬಾದ್ ಉಪವಿಭಾಗದಲ್ಲಿ ಎಎಸ್‍ಪಿಯಾಗಿ …
Read More »ಪ್ರೇಮ ಕವಿ, ಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ ಪ್ರಮುಖ ಆರೋಪಿ ಗಂಗಾ ಕುಲಕರ್ಣಿ ವಿಷ ಸೇವಿಸಿ ಆತ್ಮಹತ್ಯೆ
ಕೊಪ್ಪಳ : ಪ್ರೇಮ ಕವಿ, ಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಮೂಡಿಸಿದ ಪ್ರಮುಖ ಆರೋಪಿ ಗಂಗಾ ಕುಲಕರ್ಣಿ ಗುರುವಾರ ಜಿಲ್ಲೆಯ ಕುಷ್ಟಗಿ ನ್ಯಾಯಾಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವಕನಿಗೆ ಕೆಲಸ ಕೊಡಿಸುವುದಾಗಿ ನಂಬಿಸಿ 3 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ್ದಳು. ಈ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಗಂಗಾಳನ್ನು ಪೊಲೀಸರು ಕರೆ ತಂದಿದ್ದರು. ಆದರೆ ಗಂಗಾ ನ್ಯಾಯಾಲಯಕ್ಕೆ ಆಗಮಿಸುವ ಮೊದಲೇ ವಿಷ ಸೇವಿಸಿ ಕೋರ್ಟ್ ಆಗಮಿಸಿದ್ದರು. ಇದರಿಂದ ಕೋರ್ಟ್ …
Read More »ಡಿಸಿಸಿ ಬ್ಯಾಂಕಿಗೆ ಈವರೆಗೆ ಅವಿರೋಧ ಆಯ್ಕೆಯಾದವರ ಹೆಸರುಗಳನ್ನು ರಮೇಶ ಕತ್ತಿ ತಿಳಿಸಿದರು.
ಡಿಸಿಸಿ ಬ್ಯಾಂಕಿಗೆ ಈವರೆಗೆ ಅವಿರೋಧ ಆಯ್ಕೆಯಾದವರ ಹೆಸರುಗಳನ್ನು ರಮೇಶ ಕತ್ತಿ ತಿಳಿಸಿದರು. ಅಪ್ಪಾಸಾಹೇಬ ಮಾರುತಿ ಕುಲಗುಡೆ, ಅಣ್ಣಾಸಾಹೇಬ ಜೊಲ್ಲೆ, ರಮೇಶ ಕತ್ತಿ, ಶಿವಾನಂದ ಡೋಣಿ, ರಾಜೇಂದ್ರ ಅಂಕಲಗಿ, ಆನಂದ ಮಾಮನಿ, ಅಶೋಕ ರಾಜಗೌಡ, ಸುಭಾಷ ಡವಳೇಶ್ವರ, ನೀಲಕಂಠ ಕಪ್ಪಲಗುದ್ದಿ, ಪಂಚನಗೌಡ ದ್ಯಾಮನಗೌಡ ಅವಿರೋಧ ಆಯ್ಕೆಯಾಗಿದ್ದಾರೆ.ಇನ್ನೂ 6 ಕ್ಷೇತ್ರಗಳಿಗೆ ಆಯ್ಕೆಯಾಗಬೇಕಿದ್ದು, ನಾಳೆ ಅವಿರೋಧ ಆಯ್ಕೆ ಮಾಡುವುದಾಗಿ ರಮೇಶ ಕತ್ತಿ ತಿಳಿಸಿದ್ದಾರೆ.ಪಕ್ಷದ ಪರಿವಾರದ ಸೂಚನೆಯಂತೆ ರೈತರ ಏಳಿಗೆಗಾಗಿ ನಮ್ಮಲ್ಲಿರುವ ಭಿನ್ನಾಪ್ರಾಯ ಬದಿಗಿಟ್ಟು ಒಗ್ಗಟ್ಟಾಗಿ …
Read More »ಹದಗೆಟ್ಟ ರಸ್ತೆಗಳಿಗಿಲ್ಲ ಮುಕ್ತಿ – ಅಂಬುಲೆನ್ಸ್ ನಲ್ಲೇ ಹೆರಿಗೆ
ರಾಯಚೂರು: ಕೆಟ್ಟ ರಸ್ತೆಗಳನ್ನ ಕಂಡಾಗ ಗರ್ಭಿಣಿಯರಿಗೆ ಇಲ್ಲೆ ಹೆರಿಗೆಯಾಗಿ ಬಿಡುತ್ತೆ ಅಂತ ಉದ್ಘಾರ ತೆಗೆಯುವುದು ಸಾಮಾನ್ಯ. ಆದರೆ ಅದು ರಾಯಚೂರು ಪಾಲಿಗೆ ಬಹುತೇಕ ನಿಜವಾಗಿದೆ. ಯಾಕಂದ್ರೆ ರಾಯಚೂರಿನ ರಸ್ತೆಗಳಲ್ಲೇ ಹೆರಿಗೆಯಾಗುವುದು ಸಾಮಾನ್ಯವಾಗಿದೆ. ಈ ಅಂಕಿ ಅಂಶಗಳನ್ನ ನೋಡಿದ್ರೆ ನೀವು ಗಾಬರಿಯಾಗದೆ ಇರಲ್ಲ. ಆಸ್ಪತ್ರೆ ಸೇರುವ ಮುನ್ನವೇ ಅಂಬುಲೆನ್ಸ್ ನಲ್ಲಿ ಹೆರಿಗೆಯಾಗುವುದರಲ್ಲಿ ರಾಜ್ಯದಲ್ಲೇ ರಾಯಚೂರು ಈಗ ನಂಬರ್ 1 ಆಗಿದೆ.ಅಂಬುಲೆನ್ಸ್ ನಲ್ಲಿ ಆರೋಗ್ಯ ಕವಚ ಸಿಬ್ಬಂದಿ ಸುಲಭ ಹೆರಿಗೆ ಮಾಡುವ ಮೂಲಕ …
Read More »ನಕಲಿ ಸಹಿ ಬಳಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪದಡಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ.
ಆನೇಕಲ್: ನಕಲಿ ಸಹಿ ಬಳಸಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಆರೋಪದಡಿ ಸುಧೀರ್ ಅಂಗೂರ್, ಶೈಲಜಾ ಸೇರಿ 10 ಜನರ ವಿರುದ್ಧ FIR ದಾಖಲಾಗಿದೆ. ಕಾಲೇಜ್ ಶುಲ್ಕ, ಟ್ಯೂಷನ್ ಫೀ, ಹಾಸ್ಟೆಲ್ ಫೀ ಎಂದು ಮಧುಕರ್ ಅವರ ನಕಲಿ ಸಹಿ ಬಳಸಿಕೊಂಡು ವಿದ್ಯಾರ್ಥಿಗಳ ಬಳಿ ಹಣ ವಸೂಲಿ ಮಾಡಿ ದುರುಪಯೋಗ ಮಾಡಿದ್ದಾರೆ ಎಂದು ಅಲಯನ್ಸ್ ವಿವಿ ಸಂಸ್ಥಾಪಕ ಮಧುಕರ್ ಅಂಗೂರ್ ದೂರು ದಾಖಲಿಸಿದ್ದರು. ದೂರು ಆಧರಿಸಿ ಸುಧೀರ್ ಅಂಗೂರ್, ಶೈಲಜಾ ಸೇರಿ …
Read More »Districts ರಥೋತ್ಸವಕ್ಕೂ ಕೋವಿಡ್ ಕರಿನೆರಳು – ದೊಡ್ಡ ರಥದ ಬದಲು ಚಿಕ್ಕ ತೇರಿನಲ್ಲಿ ಮೆರವಣಿಗೆ
ಮೈಸೂರು: ಚಾಮುಂಡೇಶ್ವರಿ ರಥೋತ್ಸವಕ್ಕೂ ಕೋವಿಡ್ ಕರಿನೆರಳು ಬಿದ್ದಿದೆ. ದೊಡ್ಡ ರಥದ ಬದಲು ಚಿಕ್ಕ ತೇರಿನಲ್ಲಿ ಮೆರವಣಿಗೆ ಸಾಗಿದೆ. ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‍ರಿಂದ ರಥ ಎಳೆದು ಚಾಲನೆ ನೀಡಿದ್ದು, ಚಾಮುಂಡೇಶ್ವರಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಗಿದೆ. ದಸರಾ ಮುಗಿದ ಬಳಿಕ ಮಹಾರಾಜರು ಜಾತ್ರೆ ಆಯೋಜನೆ ಮೂಲಕ ಭಕ್ತರಿಗೆ ಚಾಮುಂಡಿ ದರ್ಶನದ ವ್ಯವಸ್ಥೆ ಮಾಡಿದ್ದರು. ಇತಿಹಾಸದಲ್ಲೇ ಮೊದಲ ಬಾರಿಗೆ ಜನರಿಲ್ಲದ ಜಾತ್ರೆ ಇದಾಗಿದೆ. ರಥೋತ್ಸವದ ಸಂಭ್ರಮ, ಸಡಗರವನ್ನು ಮಹಾಮಾರಿ ಕಸಿದುಕೊಂಡಿದೆ. ದೊಡ್ಡ …
Read More »