Breaking News

Uncategorized

ಕ್ರಿಕೆಟ್ ಬೆಟ್ಟಿಂಗ್ ದಂಧೆ: ವಿಜಯಪುರ, ರಾಯಚೂರಿನಲ್ಲಿ ಪೊಲೀಸ್ ಭರ್ಜರಿ ಬೇಟೆ

ವಿಜಯಪುರ: ಸಿಇಎನ್ ಪೊಲೀಸರು ಕಾರ್ಯಾಚರಣೆ ನಡೆಸಿ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಮೂವರನ್ನು ಬಂಧಿಸಿದ್ದಾರೆ. ಖಾದರ್​ ಇನಾಮದಾರ್​, ಶಾಬಾಜ್ ಇನಾಮದಾರ್, ಅಲ್ತಾಫ್ ಇನಾಮದಾರ್​ ಬಂಧಿತರು. ಇನ್ನು ಬಂಧಿತರಿಂದ 5000 ನಗದು ವಶಕ್ಕೆ ಪಡೆಯಲಾಗಿದೆ. ದಾಳಿ ವೇಳೆ ಓರ್ವ ಪರಾರಿಯಾಗಿದ್ದು, ಆರೋಪಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಗೋಲಗುಂಬಜ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಇನ್ನು ರಾಯಚೂರಿನ ಸದರ್​​ ಬಜಾರ್​​ ಪೊಲೀಸರು ಅಶೋಕ್​​ ಡಿಪೋ ಬಳಿ ಕ್ರಿಕೆಟ್ ಬೆಟ್ಟಿಂಗ್​ನಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದ್ದಾರೆ. ಜಿಲಾನಿ, …

Read More »

ಚರಂಡಿಯಲ್ಲಿ ಬೃಹತ್‌ ಹೆಬ್ಟಾವು ಪತ್ತೆ

ಸಾಂಬ್ರಾ: ಬೆಳಗಾವಿ ಶಾಸ್ತ್ರೀನಗರದ 9ನೇ ಕ್ರಾಸ್‌ ಚರಂಡಿಯಲ್ಲಿ ಬೃಹತ್‌ ಹೆಬ್ಟಾವು ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಶುಕ್ರವಾರ ರಾತ್ತಿ ಬೃಹತ್‌ ಹೆಬ್ಟಾವು ಕಾಣಿಸಿಕೊಂಡಿದ್ದು, ಜನರು ಭಯಭೀತರಾಗಿದ್ದಾರೆ. ಶಾಸ್ತ್ರೀನಗರದ 9ನೇ ಕ್ರಾಸ್‌ ಬಳಿ ಚರಂಡಿಗೆ ಹೋಗುತ್ತಿದ್ದಾಗ ಜನರಿಗೆ ಕಾಣಿಸಿಕೊಂಡಿದೆ. ಹೆಬ್ಟಾವಿನ ದೃಶ್ಯಾವಳಿಯನ್ನು ಜನ ಮೊಬೈಲ್‌ಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣ ಹರಿ ಬಿಟ್ಟಿದ್ದಾರೆ. ಬಳಿಕ ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಜನರು ಮಾಹಿತಿ ನೀಡಿದ್ದಾರೆ. ಚರಂಡಿಯಲ್ಲಿ ಇಷ್ಟೊಂದು ಬೃಹತ್‌ ಗಾತ್ರದ ಹೆಬ್ಟಾವು ಪತ್ತೆಯಾಗಿದ್ದು, …

Read More »

ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ 11ನೆ ದಿನಕ್ಕೆ ಕಾಲಿಟ್ಟ ಮುಷ್ಕ್ ರ

ಗುಡಿಬಂಡೆ: ಕೋವಿಡ್ ನಿಯಂತ್ರಿಸುವಲ್ಲಿ ಮತ್ತು ಕೋವಿಡ್ ಬಗ್ಗೆ ಜಾಗೃತಿ ಮೂಡಿಸುವಲ್ಲಿ ತಮ್ಮ ಪ್ರಾಣ ಪಣಕ್ಕಿಟ್ಟು ಸೇವೆ ಸಲ್ಲಿಸಿದರೂ ಸಹ ಸರ್ಕಾರ ನಮಗೆ ಸೇವಾ ಭದ್ರತೆ ನೀಡುತ್ತಿಲ್ಲ ಎಂದು ಆರೋಪಿಸಿ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಪದಾಧಿಕಾರಿಗಳು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ಪ್ರತಿಭಟನೆ ಉದ್ದೇಶಿ ಸಂಘಟನೆಯ ತಾಲೂಕು ಅಧ್ಯಕ್ಷ ಈಶಣ್ಣ ಮಾತನಾಡಿ, ಆರೋಗ್ಯ ಇಲಾಖೆಯಲ್ಲಿ ಸುಮಾರು …

Read More »

ಪವರ್ ಟಿವಿ ಕ್ಯಾಮೆರಾಮೆನ್ ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್ ನಲ್ಲಿ ಮೃತ ಪಟ್ಟಿದ್ದಾರೆ

ಹುಬ್ಬಳ್ಳಿ: ಮೂರು ದಿನಗಳ ಹಿಂದೆ ನಗರದ ಕಾರವಾರ ರಸ್ತೆಯ ಚಾಟ್ನಿ ಕಾಂಪ್ಲೆಕ್ಸ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪವರ್ ಟಿವಿ ಕ್ಯಾಮೆರಾಮೆನ್ ಸುನೀಲ ಪಾಚಂ(29), ಚಿಕಿತ್ಸೆಗೆ ಸ್ಪಂದಿಸದೆ ಕಿಮ್ಸ್’ನಲ್ಲಿ ಶನಿವಾರ ತಡರಾತ್ರಿ ಮೃತಪಟ್ಟಿದ್ದಾರೆ. ಗುರುವಾರ ರಾತ್ರಿ ಸುನೀಲ ಅವರು ಕರ್ತವ್ಯ ಮುಗಿಸಿ ಮನೆಗೆ ತೆರಳುವಾಗ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಕಿಮ್ಸ್’ಗೆ ದಾಖಲಿಸಲಾಗಿತ್ತು. ಸುನೀಲ‌ ಅವರ ತಲೆ ಭಾಗಕ್ಕೆ ಗಂಭೀರ ಸ್ವರೂಪದ …

Read More »

ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಮುಷ್ಕರ ಮುಗಿಸಿ ವಾಪಸ್ಸು ಹೋಗುವಾಗ ಅಪಘಾತ

ಬೇಲೂರು: ತಾಲ್ಲೂಕಿನ ಶಿವಯೋಗಿಪುರದಲ್ಲಿ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ ಚಾಲಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಅರೇಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಗ್ರೂಪ್ ಡಿ ನೌಕರರಾಗಿ ಕಾರ್ಯ ನಿರ್ವಹಿಸುತ್ತಿದ್ದ ಸಂಜು (30) ಮೃತಪಟ್ಟಿದ್ದಾರೆ. ಹಾಸನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ನಡೆಸುತ್ತಿದ್ದ ಮುಷ್ಕರದಲ್ಲಿ ಭಾಗವಹಿಸಿ ವಾಪಸ್‌ ಊರಿಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಹಿಂಬದಿ ಸವಾರರಾದ ನಾರಾಯಣ, ಮಮತಾ ಅವರ ಕೈ, ಕಾಲು, ತಲೆಗೆ ಪೆಟ್ಟಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ರಸ್ತೆ …

Read More »

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ.

ನವದೆಹಲಿ : ರಾಜ್ಯದ ನಾಲ್ಕು ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದೆ. ಜೆಡಿಎಸ್ ಬಿಟ್ಟು ಬಿಜೆಪಿ ಸೇರಿರುವ ಪುಟ್ಟಣಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದ ಟಿಕೆಟ್ ಸಿಕ್ಕಿದೆ. ಪುಟ್ಟಣಗೆ ಜೆಡಿಎಸ್ ಬಿಟ್ಟು ಬಿಜೆಪಿ ಸೇರುವಾಗಲೇ ಟಿಕೆಟ್ ಭರವಸೆ ನೀಡಲಾಗಿತ್ತು ಎನ್ನಲಾಗಿದೆ. ಅಭ್ಯರ್ಥಿಗಳ ಪಟ್ಟಿ ಆಗ್ನೇಯ ಪದವೀಧರ ಕ್ಷೇತ್ರ : ಎಂ ಚಿದಾನಂದಗೌಡ ಪಶ್ಚಿಮ ಪದವೀಧರ ಕ್ಷೇತ್ರ: ಎಸ್ ವಿ ಸುಂಕನೂರು ಬೆಂಗಳೂರು ಶಿಕ್ಷಕರ ಕ್ಷೇತ್ರ : ಪುಟ್ಟಣ್ಣ …

Read More »

ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡ್ತಿದ್ದ ಮತ್ತೊಬ್ಬ ಉದ್ಯಮಿ ಕಮ್ ಡ್ರಗ್ ಪೆಡ್ಲರ್ ಅರೆಸ್ಟ್

  ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಪ್ರಕರಣ ಸಂಬಂಧ ರಾಜಧಾನಿಯಲ್ಲಿ ಉದ್ಯಮಿ ಹಾಗೂ ಡ್ರಗ್ ಪೆಡ್ಲರ್​ನ ಸಂಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಸಂಜಯನಗರ ಮೂಲದ ಡ್ರಗ್ ಪೆಡ್ಲರ್​ ಅಪಾರ್ಟ್‌ಮೆಂಟ್‌ನಲ್ಲಿ ಡ್ರಗ್ ಪಾರ್ಟಿ ಆಯೋಜಿಸುತ್ತಿದ್ದ. ಈತನ ಅಪಾರ್ಟ್‌ಮೆಂಟ್‌ನಲ್ಲಿ ಪಾರ್ಟಿಗಳನ್ನು ಆಯೋಜಿಸಲಾಗುತ್ತಿತ್ತು. ಈ ಪಾರ್ಟಿಗಳಲ್ಲಿ ಕನ್ನಡದ ನಟ-ನಟಿಯರು ಭಾಗಿಯಾಗುತ್ತಿದ್ರು ಎಂಬ ಆರೋಪ ಕೇಳಿ ಬಂದಿದೆ. ಈತ ಸ್ಯಾಂಡಲ್‌ವುಡ್​ನ ಖ್ಯಾತ ನಟ ನಟಿಯರಿಗೆ ಡ್ರಗ್ಸ್ ಸಪ್ಲೇ ಮಾಡುತ್ತಿದ್ದನಂತೆ. ಈ ಬಗ್ಗೆ ಸ್ವಯಂ ತಪ್ಪೊಪ್ಪಿಕೊಂಡಿದ್ದಾನೆ. …

Read More »

ಚಿತ್ರಸಾಹಿತಿ ಕಲ್ಯಾಣ್ ಪತ್ನಿ ಕುಟುಂಬದ ಆಪ್ತನ ಬಳಿ ಸಿಕ್ತು ಮಾಟ ಮಂತ್ರದ ವಸ್ತುಗಳು!

ಬೆಳಗಾವಿ: ಚಿತ್ರಸಾಹಿತಿ ಕೆ.ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಪೊಲೀಸರು ವಶಕ್ಕೆ ಪಡೆದಿರುವ ಶಿವಾನಂದ ವಾಲಿ ಬಳಿ ಮಾಟ ಮಂತ್ರದ ವಸ್ತುಗಳು ಸಿಕ್ಕಿವೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಡಗಿ ನಿವಾಸಿ ಶಿವಾನಂದ ವಾಲಿ ವಿರುದ್ಧ ಮಾಟ ಮಂತ್ರದ ಆರೋಪ ಕೇಳಿ ಬಂದಿದೆ. ಶಿವಾನಂದ ವಾಲಿ ಕೆ.ಕಲ್ಯಾಣ್ ಪತ್ನಿ ಕುಟುಂಬದ ಆಪ್ತ. ಈ ಹಿಂದೆ ಕೆ‌.ಕಲ್ಯಾಣ್ ಶಿವಾನಂದ ವಾಲಿ ವಿರುದ್ಧ ಅಪಹರಣ ಆರೋಪ ಮಾಡಿದ್ದರು. ಪತ್ನಿ, ಅತ್ತೆ, ಮಾವರನ್ನು ಅಪಹರಣ …

Read More »

ವೈದ್ಯಕೀಯ ಆರೋಗ್ಯ ಇಲಾಖೆಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ತಾಲ್ಲೂಕು ಆಡಳಿತದ ಮುಂಭಾಗ ಪ್ರತಿಭಟನೆ ನಡೆಸಿದರು.

  ಪಿರಿಯಾಪಟ್ಟಣ: ವಿವಿಧ ಬೇಡಿಕೆ ಈಡೇರಿಸಬೇಕೆಂದು ಒತ್ತಾಯಿಸಿ ವೈದ್ಯಕೀಯ ಆರೋಗ್ಯ ಇಲಾಖೆಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ತಾಲ್ಲೂಕು ಆಡಳಿತದ ಮುಂಭಾಗ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಕ್ಷಯರೋಗ ಮೇಲ್ವಿಚಾರಕ ಅಶೋಕ್ ಮಾತನಾಡಿ, ‘ಕೋವಿಡ್ ಸಂಕಷ್ಟದಲ್ಲೂ ಕೂಡ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರು ವೈದ್ಯಕೀಯ, ಅರೆ ವೈದ್ಯಕೀಯ ಮತ್ತು ಕಚೇರಿ ಸಿಬ್ಬಂದಿ ಹಲವಾರು ವರ್ಷಗಳ …

Read More »

2,14,277 ಮಂದಿ ಕೊರೊನಾ ವೈರಸ್ ಸಾವನ್ನಪ್ಪಿದ್ದಾರೆ.

ವಾಷಿಂಗ್ಟನ್ : ವಿಶ್ವದಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ವಿಶ್ವದಾದ್ಯಂತ ಈವರೆಗೆ 3.51 ಕೋಟಿಗೂ ಅಧಿಕ ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದು, 10.03 ಲಕ್ಷಕ್ಕೂ ಅಧಿಕ ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ. ವಿಶ್ವದಾದ್ಯಂತ ಈವರೆಗೆ 3,51,22,281 ಮಂದಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದ್ದು, 10,37,524 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಒಟ್ಟು ಸೋಂಕಿತರ ಪೈಕಿ 2,61,17,241 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 79,67,516 ಕೊರೊನಾ …

Read More »