ತಿಪಟೂರು , – ಕಳೆದ 50 ವರ್ಷಗಳಿಂದಲೂ ಸರ್ಕಾರದಿಂದ ಅಭಿವೃದ್ಧಿಪಡಿಸದ ರಸ್ತೆಯನ್ನು ಗ್ರಾಮಸ್ಥರೆಲ್ಲರೂ ಸೇರಿ ಅಭಿವೃದ್ಧಿಪಡಿಸಿ ಮಾದರಿ ರಸ್ತೆಯನ್ನು ನಿರ್ಮಾಣ ಮಾಡಿ ಜನಪ್ರತಿನಿಗಳ ನಿರ್ಲಕ್ಷ್ಯವನ್ನು ಎತ್ತಿ ಹಿಡಿದಿದ್ದಾರೆ. ತಾಲ್ಲೂಕಿನ ಮತ್ತಿಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಮತ್ತಿಹಳ್ಳಿ ಗ್ರಾಮದ ಕೆರೆಯ ಹಿಂಭಾಗದಿಂದ ಚಿಕ್ಕಬಿದರೆ ಗ್ರಾಮಕ್ಕೆ ಸಂಪರ್ಕಿಸುವ ಸುಮಾರು 1.5 ಕಿ.ಮೀ.ರಸ್ತೆಯನ್ನು ಒಂದು ಲಕ್ಷ ರೂಗಳ ಸ್ವತಃ ಖರ್ಚಿನಲ್ಲಿಯೇ ಗ್ರಾಮಸ್ಥರು ಅಭಿವೃದ್ಧಿಪಡಿಸಿದ್ದಾರೆ. ರಸ್ತೆಯೂ ಹಿಂದೆ ಕಾಲುದಾರಿಯಲ್ಲಿ ಸಂಚರಿಸಲು ಸಾಧ್ಯವಾಗದಂತಹ ಸ್ಥಿತಿಯಲ್ಲಿತ್ತು. ಈ ರಸ್ತೆಯೂ …
Read More »ಮಳೆರಾಯ ರುದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ.
ಬೆಂಗಳೂರು: ಕೊರೊನಾ ಮಧ್ಯೆ ವರುಣ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಅಲ್ಲದೇ ಸಾಕಷ್ಟು ಅವಾಂತರ ಸೃಷ್ಟಿಸಿದ್ದಾನೆ. ಮಳೆರಾಯ ರುದ್ರನರ್ತನಕ್ಕೆ ಉತ್ತರ ಕರ್ನಾಟಕ ಅಕ್ಷರಶಃ ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಮಹಾ ಮಳೆ ಮುಂದುವರಿದಿದ್ದು, ಇದು ಇಲ್ಲಿಗೆ ನಿಲ್ಲೋ ಲಕ್ಷಣಗಳು ಕಾಣುತ್ತಿಲ್ಲ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯದ ಬಹುತೇಕ ಕಡೆ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಪ್ರವಾಹ ಸ್ಥಿತಿ ಏರ್ಪಟ್ಟಿದ್ದು ಜನ ತತ್ತರಿಸಿ ಹೋಗಿದ್ದಾರೆ.ಕೊರೊನಾದಿಂದ ಈಗಾಗಲೇ ಜನ …
Read More »ತುಮಕೂರಲ್ಲಿ ಕಂಗನಾ ವಿರುದ್ಧ ಎಫ್ಐಆರ್
ತುಮಕೂರು: ಕೋರ್ಟ್ ಆದೇಶದಂತೆ ಬಾಲಿವುಡ್ ನಟಿ ಕಂಗನಾ ರಣಾವತ್ ಮೇಲೆ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಕಂಗನಾ ಅವರು ಟ್ವಿಟರ್ ನಲ್ಲಿ ರೈತರನ್ನ ಭಯೋತ್ಪಾದಕರು ಎಂದು ನಿಂದಿಸಿದ್ದಾರೆ ಎಂದು ಆರೋಪಿಸಿ ವಕೀಲ ರಮೇಶ್ ನಾಯ್ಕ್, ಜೆಎಂಎಫ್ಸಿ ಕೋರ್ಟ್ ಮೆಟ್ಟಿಲೇರಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಕೋರ್ಟ್ ನಿರ್ದೇಶನ ಮೇರೆಗೆ ನಟಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕೇಂದ್ರ ಸರ್ಕಾರ ಜಾರಿ ತಂದಿದ್ದ ಕೃಷಿ ತಿದ್ದುಪಡಿ ಮಸೂದೆ ವಿರೋಧಿಸಿ ರೈತರು …
Read More »ಕೊಪ್ಪಳ : ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಟಿ.ಶ್ರೀಧರ್
ಕೊಪ್ಪಳ : ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಐಪಿಎಸ್ ಅಧಿಕಾರಿ ಟಿ.ಶ್ರೀಧರ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. 2012ರ ಐಪಿಎಸ್ ಬ್ಯಾಚ್ ನಲ್ಲಿ ಇವರು, ಬೆಂಗಳೂರುನಲ್ಲಿ ಗುಪ್ತಚರ ವಿಭಾಗ ಸೇರಿ ವಿವಿಧ ಮೂರು ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೊಪ್ಪಳಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಬೀದರ್ ನಲ್ಲಿ ಎಸ್ಪಿಯಾಗಿ ಕಾರ್ಯನಿರ್ವವಹಿಸಿದ್ದಾರೆ. ಶಿಕ್ಷಣ: ಬಳ್ಳಾರಿ ಜಿಲ್ಲೆಯ ಶಿರಗುಪ್ಪ ತಾಲ್ಲೂಕಿನವರು. ಪ್ರಾಥಮಿಕ ಶಿಕ್ಷಣವನ್ನು ಶಿರಗುಪ್ಪ, ಸಿಂಧನೂರಿನಲ್ಲಿ, ಕಾಲೇಜ್ ಶಿಕ್ಷಣ ಧಾರವಾಡದಲ್ಲಿ ಪಡೆದಿದ್ದಾರೆ. …
Read More »ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ
ಬೆಳಗಾವಿ: 50 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಸುಳೇಬಾವಿ ಗ್ರಾಮದ ಬಳಿ ನಡೆದಿದೆ. ಫುಲ್ ಶರ್ಟ್, ನೀಲಿ ಜಾಕೆಟ್ ಧರಿಸಿರುವ ವ್ಯಕ್ತಿ ಸುಳೇಬಾವಿ ಮತ್ತು ಸಲದಾಳ ರೈಲು ನಿಲ್ದಾಣದ ಮಧ್ಯೆ ರೈಲು ಹಳಿಗಳ ಮೇಲೆ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಕೆಂಪು ಬಣ್ಣದ ಛತ್ರಿ, ನೀಲಿ ಚೀಲ ದೊರೆತಿದೆ ಎಂದು ಬೆಳಗಾವಿ ನಗರದ ರೈಲ್ವೆ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
Read More »ಅಕ್ಟೋಬರ್ ನಲ್ಲಿ ಜಲಪ್ರಳಯ ಬಂದಾಯ್ತು..! ನಿಜವಾಗ್ತಿವೆ ಕೋಡಿ ಶ್ರೀಗಳ ಭವಿಷ್ಯ..!
ಹಾಸನ : ರಾಜ್ಯದಲ್ಲಿ ನಡೆಯುವ ಹಲವು ರಾಜಕೀಯ ಹಾಗೂ ಪ್ರಾಕೃತಿಕ ಸನ್ನಿವೇಶಗಳ ಬಗ್ಗೆ ಭವಿಷ್ಯ ನುಡಿಯುವ ಮೂಲಕ ಚಿರಪರಿಚಿತರಾಗಿರುವ ಕೋಡಿಮಠ ಶೀಗಳು ಎರಡು ತಿಂಗಳ ಹಿಂದಿನ ಭವಿಷ್ಯ ನಿಜವಾಗುತ್ತಿದ್ದು ಆತಂಕ ಮೂಡಿಸಿದೆ. ಹೌದು…ಜಿಲ್ಲೆಯ ಅರಸೀಕೆರೆ ತಾಲೋಕಿನ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಆಗಸ್ಟ್ 14 ರಂದು ನುಡಿದ ಭವಿಷ್ಯದಲ್ಲಿ “ಆಗಸ್ಟ್ ತಿಂಗಳಲ್ಲಿ ವಿಪರೀತ ಜಲ ಪ್ರಳಯವಾಗಲಿದೆ ಎಂದು ಹೇಳಿದ್ದರು ನಂತರ ಅಕ್ಟೋಬರ್ ತಿಂಗಳಲ್ಲಿ ಜಲ ಪ್ರಳಯ, ವಾಯು ಆಘಾತ …
Read More »ನಟಿ ಪ್ರಣೀತಾ ಹೆಸರಿನಲ್ಲಿ ಬಿಲ್ಡರ್ಸ್ ಮತ್ತು ಡೆವಲಪರ್ಸ್ ವ್ಯವಸ್ಥಾಪಕರಿಗೆ 13.50 ಲಕ್ಷ ರೂ. ವಂಚಿಸಿ ಪರಾರಿ
ಬೆಂಗಳೂರು, ಅ.13- ಚಲನಚಿತ್ರ ನಟಿ ಪ್ರಣೀತಾ ಹೆಸರಿನಲ್ಲಿ ಬಿಲ್ಡರ್ಸ್ ಮತ್ತು ಡೆವಲಪರ್ಸ್ ವ್ಯವಸ್ಥಾಪಕರಿಗೆ 13.50 ಲಕ್ಷ ರೂ. ವಂಚಿಸಿ ಪರಾರಿಯಾಗಿರುವ ಆರೋಪಿಗಳಿಗಾಗಿ ಹೈಗ್ರೌಂಡ್ ಠಾಣೆ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದಾರೆ. ನಟಿ ಪ್ರಣೀತಾ ಅವರನ್ನು ತಮ್ಮ ಕಂಪನಿಯ ರಾಯಭಾರಿಯನ್ನಾಗಿ ಮಾಡಿಸುವುದಾಗಿ ಅಕ್ಟೋಬರ್ 6ರಂದು ಚೆನ್ನೈನಿಂದ ಬೆಂಗಳೂರಿಗೆ ಬಂದಿದ್ದ ಆರೋಪಿಗಳು ಹೋಟೆಲ್ವೊಂದರಲ್ಲಿ ಎಸ್ವಿ ಗ್ರೂಪ್ ಅಂಡ್ ಡೆವಲಪರ್ಸ್ ಕಂಪನಿ ವ್ಯವಸ್ಥಾಪಕ ಅಮರನಾಥ್ ರೆಡ್ಡಿ ಅವರನ್ನು ಭೇಟಿ ಮಾಡಿದ್ದರು. ವಂಚಕರ ಗುಂಪಿನಲ್ಲಿದ್ದ ವರ್ಷಾ …
Read More »ಕ್ಯಾಪ್ಟನ್ ರಾಜಾರಾವ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತೆರಮೇಶ್ ಜಾರಕಿಹೊಳಿ ಅವರಿಗೆ ಮನವಿ
ಬೆಂಗಳೂರು: ರಾಜ್ಯದ ಪ್ರಖ್ಯಾತ ಮುಖ್ಯ ಅಭಿಯಂತರರಾದ (ನಿವೃತ್ತ) ಕ್ಯಾಪ್ಟನ್ ರಾಜಾರಾವ್ ಅವರಿಗೆ ಈ ಬಾರಿಯ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುವಂತೆ ಜಲಸಂಪನ್ಮೂಲ ಇಂಜಿನಿಯರ್ ಗಳ ಸಂಘ, ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಮನವಿ ಮಾಡಿದರು. ವಿಧಾನಸೌಧದಲ್ಲಿಂದು ಸಚಿವರನ್ನು ಭೇಟಿ ಮಾಡಿದ ಅಭಿಯಂತರರು, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ತಾಂತ್ರಿಕ ಕ್ಷೇತ್ರ ವನ್ನೂ ಪರಿಗಣಿಸುವಂತೆ ಒತ್ತಾಯಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಅಭಿಯಂತರರು ಸದಾ ಶ್ರಮಿಸುತ್ತಿರುವುದನ್ನು ನಾನು ಗಮನಿಸಿದ್ದೇನೆ. 6 ದಶಕಗಳ …
Read More »ಮಾಸ್ಕ್ ನಿಂದಲೂ ಕೊರೊನಾ ಹರಡುವ ಸಾಧ್ಯತೆಗಳಿವೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ.
ಬೆಂಗಳೂರು: ಮಹಾಮಾರಿ ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆ ಕಡ್ಡಾಯ ಮಾಡಲಾಗಿದೆ. ಆದರೆ ಈ ಮಾಸ್ಕ್ ನಿಂದಲೂ ಕೊರೊನಾ ಹರಡುವ ಸಾಧ್ಯತೆಗಳಿವೆ ಎಂಬ ಮಾಹಿತಿಯೊಂದು ಹೊರಬಿದ್ದಿದೆ. ರಾಜ್ಯ ಸರ್ಕಾರ ಮಾಸ್ಕ್ ವಿಚಾರದಲ್ಲಿ ಕಠಿಣ ನಿರ್ಧಾರ ಕೈಗೊಂಡಿದೆ. ಮುಂಚೆ ಮಾಸ್ಕ್ ಇಲ್ಲದೇ ಓಡಾಟ ಮಾಡಿದರೆ 200 ರೂ. ಫೈನ್ ಹಾಕ್ತಿತ್ತು. ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಿರೋದನ್ನ ಗಮನಿಸಿದ ಸರ್ಕಾರ 1000 ಫೈನ್ ಹಾಕಿದೆ. 1000 …
Read More »RR ನಗರ ಮುನಿರತ್ನ ಭವಿಷ್ಯ ನಿರ್ಧರಿಸಿದ ಸುಪ್ರೀಂ ಕೋರ್ಟ್
ದೆಹಲಿ: ಬೆಂಗಳೂರಿನ R.R. ನಗರ ಬೈಎಲೆಕ್ಷನ್ ಮುಂದೂಡಿಕೆ ವಿಚಾರದ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. R.R. ನಗರ ಬೈಎಲೆಕ್ಷನ್ ಮುಂದೂಡಲು ತುಳಸಿ ಮುನಿರಾಜುಗೌಡ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಹಾಗಾಗಿ, ರಾಜರಾಜೇಶ್ವರಿ ನಗರ ಬೈಎಲೆಕ್ಷನ್ ನಿಗದಿಯಂತೆ ನವೆಂಬರ್ 3ರಂದು ನಡೆಯಲಿದೆ. R.R. ನಗರ ಅಸೆಂಬ್ಲಿ ಕ್ಷೇತ್ರದ ಚುನಾವಣಾ ಭವಿಷ್ಯವೂ ನಿರ್ಧಾರ ಇದರೊಂದಿಗೆ ಸುಪ್ರೀಂ ಕೋರ್ಟ್ ಮುನಿರತ್ನ ನಾಯ್ಡು ಅವರ ರಾಜಕೀಯ ಭವಿಷ್ಯ ಮತ್ತು ರಾಜರಾಜೇಶ್ವರಿ ನಗರ ಅಸೆಂಬ್ಲಿ …
Read More »