ಬೆಂಗಳೂರು, ಅ.12- ಖುಷ್ಬೂ ಅವರು ಕಾಂಗ್ರೆಸ್ ಪಕ್ಷ ತೊರೆದಿರುವುದು ತಮಿಳುನಾಡು ರಾಜಕೀಯದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಎಐಸಿಸಿ ಉಸ್ತುವಾರಿ ದಿನೇಶ್ ಗುಂಡೂರಾವ್ ಅಭಿಪ್ರಾಯ ಪಟ್ಟಿದ್ದಾರೆ. ಕಳೆದ ಒಂದು ವಾರದ ಹಿಂದೆಯಷ್ಟೇ ಬಿಜೆಪಿ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದ ಖುಷ್ಬೂ ಇದೀಗ ಅದೇ ಪಕ್ಷಕ್ಕೆ ಸೇರ್ಪಡೆಗೊಳ್ಳಲು ಮುಂದಾಗುವ ಮೂಲಕ ಕಾಂಗ್ರೆಸ್ ಮುಖಂಡರ ವಿರುದ್ಧ ಮಾಡುತ್ತಿರುವ ಆರೋಪಗಳನ್ನು ನೋಡಿದರೆ ಅವರಿಗೆ ಸೈದ್ಧಾಂತಿಕ ಸಿದ್ಧಾಂತವಿಲ್ಲ ಎಂಬುದನ್ನು …
Read More »ದೇವಸ್ಥಾನದ ಅರ್ಚಕರಿಗೆ ಉಳಿಗಾಲವಿಲ್ಲದಿರುವುದುವಿಪರ್ಯಾಸ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಕಿಡಿ
ಲಕ್ನೋ, ಅ.12- ಸಂತ ರಾಜ್ಯವಾಳುತ್ತಿರುವ ಉತ್ತರ ಪ್ರದೇಶದಲ್ಲೂ ದೇವಸ್ಥಾನದ ಅರ್ಚಕರಿಗೆ ಉಳಿಗಾಲವಿಲ್ಲದಿರುವುದು ವಿಪರ್ಯಾಸ ಎಂದು ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಕಿಡಿಕಾರಿದ್ದಾರೆ. ಜಮೀನು ವಿವಾದಕ್ಕೆ ಸಂಬಂಸಿದಂತೆ ಗೋಂಡಾ ಜಿಲ್ಲೆಯ ದೇವಸ್ಥಾನ ಅರ್ಚಕರೊಬ್ಬರ ಮೇಲೆ ಕಿಡಿಗೇಡಿಗಳು ಗುಂಡು ಹಾರಿಸಿರುವುದನ್ನು ಉಲ್ಲೇಖಿಸಿ ಮಾಯಾವತಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಟ್ವಿಟರ್‍ನಲ್ಲಿ ವಾಗ್ದಾಳಿ ನಡೆಸಿದ್ದಾರೆ ಸಂತ ರಾಜ್ಯವಾಳುತ್ತಿರುವ ಉತ್ತರ ಪ್ರದೇಶದಲ್ಲಿ ಅರ್ಚಕರ ಮೇಲೆ ದಾಳಿ ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಅದನ್ನು ಗಮನಿಸಿದರೆ ಯುಪಿಯಲ್ಲಿ ಕಾನೂನು ಸುವ್ಯವಸ್ಥೆ …
Read More »ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆದಸರಾ ಉದ್ಘಾಟನೆಗೆ ಆಹ್ವಾನ
ಬೆಂಗಳೂರು: ಇತಿಹಾಸದಲ್ಲೇ ಮೊದಲ ಬಾರಿಗೆ ವೈದ್ಯರಿಗೆ ಆಹ್ವಾನ ನೀಡಿದ್ದಾರೆ. ಹೀಗಾಗಿ ಸರ್ಕಾರದ ಗೌರವಕ್ಕೆ ನಾನು ಆಭಾರಿಯಾಗಿರುತ್ತೇನೆ ಎಂದು ಡಾಕ್ಟರ್ ಮಂಜುನಾಥ್ ದಸರಾ ಉದ್ಘಾಟನೆಗೆ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಸಂತಸ ವ್ಯಕ್ತಪಡಿಸಿದರು. ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ಮೈಸೂರು ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದ ತಂಡ ಇಂದು ಸಿಎಂ ಯಡಿಯೂರಪ್ಪಗೆ ಅಧಿಕೃತವಾಗಿ ಆಹ್ವಾನ ನೀಡಿದೆ. ಮುಖ್ಯ ಅತಿಥಿಯಾಗಿ ಕಾರ್ಯಕ್ರಮ ಉದ್ಘಾಟನೆಗೆ ಡಾ.ಮಂಜುನಾಥ್ ಅವರಿಗೂ ಆಹ್ವಾನ ನೀಡಿದ್ದಾರೆ. ಮೈಸೂರು ಪೇಟ ಮತ್ತು …
Read More »ಮನೆಯಲ್ಲಿ ಮಲಗಿದ್ದ ವೇಳೆ ತಾಯಿ, ಮಗನ ಭೀಕರ ಕೊಲೆ-
ಶಿವಮೊಗ್ಗ: ರಾತ್ರಿ ಊಟ ಮಾಡಿ ಮನೆಯಲ್ಲಿ ಮಲಗಿದ್ದ ವೇಳೆ ತಾಯಿ, ಮಗನನ್ನು ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಲಾಗಿದೆ. ಜಿಲ್ಲೆಯ ಸಾಗರ ತಾಲೂಕಿನ ಹಳೆ ಇಕ್ಕೇರಿಯಲ್ಲಿ ಘಟನೆ ನಡೆದಿದ್ದು, ಮೃತಪಟ್ಟವರನ್ನು ಬಂಗಾರಮ್ಮ(60), ಪ್ರವೀಣ್ (35) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಪ್ರವೀಣ್, ಹಳೆ ಇಕ್ಕೇರಿ ಗ್ರಾಮದ ಮನೆಯಲ್ಲಿ ತಾಯಿ, ಪತ್ನಿ ಹಾಗೂ 10 ತಿಂಗಳ ಮಗುವಿನೊಂದಿಗೆ ವಾಸವಾಗಿದ್ದ. ಶನಿವಾರ ರಾತ್ರಿ ಎಂದಿನಂತೆ ಕುಟುಂಬಸ್ಥರೆಲ್ಲ ಒಟ್ಟಿಗೆ ಕುಳಿತು …
Read More »ನಾವು ಕಂಬಳಿ ಬೀಸಿದ್ದಕ್ಕೆ ಯಡಿಯೂರಪ್ಪ ಸಿಎಂ ಆಗಿದ್ದು: ಎಂಟಿಬಿ
ಬೆಂಗಳೂರು: ಸಂಪುಟ ಸರ್ಜರಿ ವಿಳಂಬಕ್ಕೆ ಬಿಜೆಪಿಯಲ್ಲಿ ಮತ್ತೆ ಬೇಗುದಿ ಸ್ಫೋಟವಾಗಿದೆ. ಈ ಮೂಲಕ ತಾಳ್ಮೆಯಿಂದಿದ್ದ ವಲಸಿಗ ಆಕಾಂಕ್ಷಿಗಳು ಸಿಡಿದೆದ್ರಾ ಅನ್ನೋ ಪ್ರಶ್ನೆ ಮೂಡಿದೆ ಹೌದು. ಸಿಎಂ ಹಾಗೂ ಸರ್ಕಾರದ ವಿರುದ್ಧವೇ ವಲಸಿಗ ಆಕಾಂಕ್ಷಿಗಳು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಸಚಿವ ಸ್ಥಾನ ವಿಳಂಬದಿಂದ ಎಂಟಿಬಿ, ಶಂಕರ್ ಹಾಗೂ ಎಚ್.ವಿಶ್ವನಾಥ್ ಹತಾಶಾರಾಗಿದ್ದಾರೆ. ಹೀಗಾಗಿ ಮಂತ್ರಿಗಿರಿಗೆ ಜಾತಿ ಕಾರ್ಡ್ ಪ್ಲೇ ಮಾಡಲು ಮುಂದಾಗಿದ್ದಾರೆ. ಕುರುಬ ಸಮುದಾಯದ ಚಿಂತನಾ ಸಭೆಯಲ್ಲಿ ಎಂಟಿಬಿ ನಾಗರಾಜ್ ಗುಡುಗಿದ್ದಾರೆ. ನಾವು …
Read More »ರೇಪ್ ಆರೋಪಿಗೆ ಟಿಕೆಟ್ – ಪ್ರಶ್ನಿಸಿದ್ದಕ್ಕೆ ನಾಯಕಿಯ ಮೇಲೆ ಕೈ ಕಾರ್ಯರ್ತರಿಂದ ಹಲ್ಲೆ
ಲಕ್ನೋ: ಉತ್ತರ ಪ್ರದೇಶದಲ್ಲಿ ಉಪಚುನಾವಣೆ ಟಿಕೆಟ್ ವಿಚಾರವಾಗಿ ಕಾಂಗ್ರೆಸ್‍ನಲ್ಲಿ ಘರ್ಷಣೆ ನಡೆದಿದೆ. ಕಾಂಗ್ರೆಸ್ ನಾಯಕಿಯೊಬ್ಬರ ಮೇಲೆ ಪಕ್ಷದ ಕಾರ್ಯಕರ್ತರೇ ಹಲ್ಲೆ ನಡೆಸಿದ್ದಾರೆ. ವಿರೋಧಿಸಿದ್ದಕ್ಕೆ ಸಿಟ್ಟಿಗೆದ್ದ ಭಾಸ್ಕರ್ ಅನುಚರರು, ಸಭೆಯಲ್ಲೇ ತಾರಾ ಯಾದವ್ ಮೇಲೆ ರೌಡಿಗಳ ರೀತಿಯಲ್ಲಿ ದಾಳಿ ನಡೆಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ತಾರಾಯಾದವ್, ಈ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ತಮಗೆ ನ್ಯಾಯ ನೀಡ್ತಾರೆ ಎಂದು ಭಾವಿಸ್ತಿದ್ದೇನೆ ಎಂದಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ, ಹಲ್ಲೆ …
Read More »ಈ ಬಾರಿ ನವರಾತ್ರಿ ಹಾಗೂ ಇತರೆ ಉತ್ಸವಗಳನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಿಸುವಂತೆಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
ಬೆಳಗಾವಿ: ಕೋವಿಡ್-19 ಹಿನ್ನೆಲೆಯಲ್ಲಿ ಈ ಬಾರಿ ನವರಾತ್ರಿ ಹಾಗೂ ಇತರೆ ಉತ್ಸವಗಳನ್ನು ಸರಳ ಮತ್ತು ಸಾಂಕೇತಿಕವಾಗಿ ಆಚರಿಸುವಂತೆ ಜಿಲ್ಲಾ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಧಾರ್ಮಿಕ ಪರಿಷತ್ತಿನ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನಲಾಕ್-5.0 ರ ಮಾರ್ಗಸೂಚಿಗಳು ಹಾಗೂ ಧಾರ್ಮಿಕ ದತ್ತಿ ಇಲಾಖೆಯ ಸುತ್ತೋಲೆಯಲ್ಲಿ ತಿಳಿಸಿರುವಂತೆ ಸರಳ ಮತ್ತು …
Read More »ಕೊರೊನಾದಿಂದ ಶೈಕ್ಷಣಿಕ ವ್ಯವಸ್ಥೆ ಅತಂತ್ರವಾಗಿದೆ.:ಕುಲಪತಿ ಪ್ರೊ.ರಾಮಚಂದ್ರ ಗೌಡ
ಬೆಳಗಾವಿ: ಕೊರೊನಾದಿಂದ ಶೈಕ್ಷಣಿಕ ವ್ಯವಸ್ಥೆ ಅತಂತ್ರವಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ನೀಡುತ್ತಿರುವ ಶಿಕ್ಷಣ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತಿಲ್ಲ ಎಂದು ಕುಲಪತಿ ಪ್ರೊ.ರಾಮಚಂದ್ರ ಗೌಡ ಅವರು ಕಳವಳ ವ್ಯಕ್ತ ಪಡಿಸಿದರು. ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಕಾಲೇಜ್ ನಲ್ಲಿ ನಡೆದ ಸಾಂಸ್ಕೃತಿಕ, ಕ್ರೀಡೆ, ಎನ್. ಎಸ್. ಎಸ್. ಚಟುವಟಿಕೆಗಳ ಸಮಾರೋಪ ಹಾಗೂ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಕೊರೊನಾದಿಂದ ಶಿಕ್ಷಣ ವ್ಯವಸ್ಥೆ ಅತಂತ್ರ ಸ್ಥಿತಿ ಬಂದಿದೆ. …
Read More »ಆತ್ಯಾ ಚಾರಕ್ಕೆ ಕೊನೆ ಯಾವಾಗ? ರೈತ ಬೆನ್ನೆಲುಬು ಅನ್ನೋದನ್ನ ಮರೆತು ಬಿಟ್ಟಿದೆಯ ಸರ್ಕಾರ…?
ಆತ್ಯಾ ಚಾರಕ್ಕೆ ಕೊನೆ ಯಾವಾಗ? ರೈತ ಬೆನ್ನೆಲುಬು ಅನ್ನೋದನ್ನ ಮರೆತು ಬಿಟ್ಟಿದೆಯ ಸರ್ಕಾರ…? ದೌರ್ಜನ್ಯ ನಡೆದ ಇಡೀ ಗ್ರಾಮದ ಸುತ್ತಲೂ ಖಾಕಿ ಸರ್ಪಗಾವಲಿದೆ. ಗ್ರಾಮದೊಳಕ್ಕೆ ಒಂದು ಇರುವೆ ಕೂಡ ಪ್ರವೇಶಿಸುವಂತಿಲ್ಲ. ಈ ವಿಷಯ ಯಾರಿಗೂ ತಿಳಿಸಕೂಡದು ಎಂದು ಅಲ್ಲಿನ ಜಿಲ್ಲಾಧಿಕಾರಿ ಯುವತಿಯ ಹೆತ್ತವರಿಗೆ ಧಮ್ಕಿ ಇಟ್ಟಿದ್ದಾರೆ. ಮಾಧ್ಯಮ ಪ್ರತಿನಿಧಿಗಳು ಊರು ಪ್ರವೇಶಿಸದಂತೆ ಪೊಲೀಸ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಸತ್ತ ಮಗಳ ಮುಖವನ್ನು ಹೆತ್ತ ತಾಯಿಗೂ ತೋರಿಸದೇ ಸುಟ್ಟು ಹಾಕಲಾಗಿದೆ. ಇದು ಅತ್ಯಾಚಾರವೇ …
Read More »ವೇಶ್ಯಾವಾಟಿಕೆ ಅಡ್ಡೆ ಗುರುವಾರ ಮೇಲೆ ದಾಳಿ ನಡೆಸಿದ ಪೊಲೀಸರು
ಬೆಳಗಾವಿ: ಇಲ್ಲಿನ ಖಾನಾಪುರ ರಸ್ತೆಯ ಅಪಾರ್ಟಮೆಂಟ್ ವೊಂದರಲ್ಲಿ ವೇಶ್ಯಾವಾಟಿಕೆ ಅಡ್ಡೆ ಗುರುವಾರ ಮೇಲೆ ದಾಳಿ ನಡೆಸಿದ ಪೊಲೀಸರು ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಚನ್ನಮ್ಮ ನಗರ ದೀಪಾ ಪಾಶ್ಚಾಪೂರ ಬಂಧಿತ ಮಹಿಳೆ. ಆಶ್ರಯ ಎಂಪೈರ್ ಅಪಾರ್ಟಮೆಂಟ್ ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಟಿಳಕವಾಡಿ ಪೊಲೀಸರು, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಈ ಸಂಬಂಧ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Read More »
Laxmi News 24×7