Breaking News

Uncategorized

ಜಲಶಕ್ತಿ ಸಚಿವರೊಂದಿಗೆ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ

ಬೆಂಗಳೂರು: ನೆರೆ ರಾಜ್ಯಗಳೊಂದಿಗೆ ನದಿ‌ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಚರ್ಚೆ ನಡೆಸಿದರು. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ರಿಗೆ ತುರ್ತು ದೂರವಾಣಿ ಕರೆ ಮಾಡಿ , ಚರ್ಚಿಸಿದ್ದಾರೆ. ಕಳಸಾ ಬಂಡೂರ ಕುಡಿಯುವ ನೀರಿನ ಯೋಜನೆ, ಯುಕೆಪಿ 3ನೇ ಹಂತದ ಯೋಜನೆ ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಮಹತ್ವದ ಮಾತುಕತೆ ನಡೆಸಿದ್ದಾರೆ. ಗೋವಾ ಮಾಡುತ್ತಿರುವ ವಾದ ಅತಾರ್ಕಿಕವಾದದ್ದು ಎಂದು …

Read More »

ಇವತ್ತು ದೇವಸ್ಥಾನಕ್ಕೂ ಹೋಗಿಲ್ಲ, ಪೂಜೆನೂ ಮಾಡ್ಸಿಲ್ಲ’ ಮಗಳ ಹುಟ್ಟುಹಬ್ಬ ಆಚರಿಸಲಾಗದೆ ರೇಷ್ಮಾ ಗಲ್ರಾನಿ ಬೇಸರ

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟಿದೆ ಎಂಬ ಪ್ರಕರಣ ಸಂಬಂಧಿಸಿ ನಟಿ ಸಂಜನಾ ಗಲ್ರಾನಿ ಪರಪ್ಪನ ಅಗ್ರಹಾರದಲ್ಲಿ ಕಂಬಿ ಎಣಿಸುತ್ತಿದ್ದಾರೆ. ಇಂದು ಅವರ ಜನುಮದಿನವಾಗಿದ್ದು ಅಬ್ಬರದ ಪಾರ್ಟಿಗಳಿಂದ ದೂರ ಇದ್ದಾರೆ. ಈ ಬಗ್ಗೆ ಸಂಜನಾ ತಾಯಿ ದುಃಖ ವ್ಯಕ್ತಪಡಿಸಿದ್ದಾರೆ. ಅಬ್ಬರದ ಪಾರ್ಟಿಗಳಿಲ್ಲ, ಕೇಕ್ ಕಟಿಂಗ್​ಗಳಿಲ್ಲ.. ವಿಷ್ ಗಳಿಲ್ಲ.. ಸ್ಟಾರ್ ನಟಿ ಸಂಜನಾ ತನ್ನ ಬರ್ತ್ ಡೇಯನ್ನು ಸ್ಟಾರ್ ಹೋಟೆಲ್​ಗಳಲ್ಲಿ, ನಗರದ ಹೊರವಲಯದ ರೆಸಾರ್ಟ್​ನಲ್ಲಿ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದರು. ಆದರೆ ಈ ಬಾರಿ …

Read More »

ಇಂದು ಬೆಳಗಾವಿಯಲ್ಲಿ ಬಿಜೆಪಿ ಮೀಟೀಂಗ್….ಆಕಾಂಕ್ಷಿಗಳ……

ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಇಂದು ಸಂಜೆ ನಾಲ್ಕು ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಸಂಕಮ ಹೊಟೇಲ್ ನಲ್ಲಿ ಇಂದು ಬೆಳಗಾವಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ ಈ ಸಭೆಯಲ್ಲಿ ನಳೀನಕುಮಾರ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಯದಿದ್ದರೂ …

Read More »

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ?

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ? #laxminews https://youtu.be/YbVu7tmiprE

Read More »

ಪಂಚಾಂಗ : ಶನಿವಾರ, 10.10.2020

ನಿನ್ನೊಳಗೆ ಅಹಂ ಇರುವವರೆಗೆ ದೈವದ ಸ್ಮರಣೆಯೂ ಆಗದು ನಿನ್ನೊಳಗೇ ಇರುವ ದೈವದ ಅರಿವೂ ಆಗದು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 10.10.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.03 ಚಂದ್ರ ಉದಯ ರಾ.01.35 / ಚಂದ್ರ ಅಸ್ತ ಮ.01.50 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಅಷ್ಟಮಿ …

Read More »

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಇಂದಿನಿಂದ 13ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ಇಂದಿನಿಂದ 13ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ. ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಬಾಗಲಕೋಟೆ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಲೆನಾಡಲ್ಲಿ ಮತ್ತೆ ಮಳೆ ಅಬ್ಬರ ಜೋರಾಗಿದೆ. ಚಿಕ್ಕಮಗಳೂರು, ಕಳಸ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆ …

Read More »

ಆರೋಗ್ಯ ಸಿಬ್ಬಂದಿ ಧಮ್ಕಿ ಹಾಕಿ ಕೊರೊನಾ ಸೋಂಕು ತಪಾಸಣೆ ಮಾಡಿಸಿಕೊಳ್ಳದೆ ನೂರಾರು ಪ್ರಯಾಣಿಕರು ನಗರಕ್ಕೆ

ಯಾದಗಿರಿ: ಮುಂಬೈನಿಂದ ಯಾದಗಿರಿ ಜಿಲ್ಲೆಗೆ ಎಂಟ್ರಿ ಕೊಟ್ಟು ಜಿಲ್ಲೆಯ ಜನರ ಮೇಲೆ ದಾಳಿ ಮಾಡಿದ್ದ ಕೊರೊನಾ 50ಕ್ಕೂ ಅಧಿಕ ಜನರ ಪ್ರಾಣ ಬಲಿ ಪಡೆದಿದೆ. ಈಗ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹೊತ್ತಿನಲ್ಲಿ ಮತ್ತೆ, ಯಾದಗಿರಿಗೆ ಮುಂಬೈ ಕಂಟಕ ಎದುರಾಗಿದೆ. ಇದಕ್ಕೆ ಪುಷ್ಟಿ ನೀಡುವಂತೆ, ಮುಂಬೈನಿಂದ ರಾಜ್ಯಕ್ಕೆ ಬಂದ ವ್ಯಕ್ತಿ ಓರ್ವ ನಾನು ಯಾವ ಟೆಸ್ಟ್ ಮಾಡಸಲ್ಲ ಏನು ಮಾಡತ್ತಿರಿ ಮಾಡಿಕೊಳ್ಳಿ ಎಂದು ಆರೋಗ್ಯ ಸಿಬ್ಬಂದಿ ಅವಾಜ್ ಹಾಕಿ ಉದ್ಧಟತನ …

Read More »

ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತದೆ ಎಂಬ ಭಯ: ಹೆಚ್‍ಡಿ.ರೇವಣ್ಣ ಆಕ್ರೋಶ

ಹಾಸನ: ಹಾಸನ ನಗರಸಭೆ ಅಧ್ಯಕ್ಷಗಾದಿಯನ್ನು ಎಸ್‍ಟಿ ಅಭ್ಯರ್ಥಿಗೆ ಮೀಸಲಿರಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಹಾಸನದಲ್ಲಿ ಶಾಸಕ ಹೆಚ್‍ಡಿ.ರೇವಣ್ಣ ಆಕ್ರೋಶ ಹೊರಹಾಕಿದ್ದಾರೆ. ಹಾಸನ ನಗರಸಭೆ ಅಧ್ಯಕ್ಷರಾಗಿ ಬಿಜೆಪಿ ಅಭ್ಯರ್ಥಿ ಆಯ್ಕೆಯಾಗುವುದು ಖಚಿತವಾಗಿದ್ದು, ಬಹುಮತವಿದ್ದರೂ ಜೆಡಿಎಸ್ ಪಕ್ಷ ಅಧ್ಯಕ್ಷ ಸ್ಥಾನದಿಂದ ವಂಚಿತವಾಗಿದೆ. ಈ ಬಗ್ಗೆ ಹಾಸನದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ರೇವಣ್ಣ, ಮೀಸಲು ನಿಗದಿಯಲ್ಲಿ ನ್ಯಾಯ ದೇವತೆಗೆ ಅನ್ಯಾಯ ಮಾಡಿದ್ದಾರೆ ಎಂದರು.  ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಬೆಳೆಯುತ್ತದೆ ಎಂಬ ಭಯ ಇರಬಹುದು. ಜಿಲ್ಲೆಯಲ್ಲಿ …

Read More »

ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ

ಬೆಂಗಳೂರು:  ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …

Read More »

ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು.

ಶಿವಮೊಗ್ಗ: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಕುರಿತು ಈಶ್ವರಪ್ಪ ಹೇಳಿಕೆಗೆ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.   ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು. ಮೀಸಲಾತಿ ಹೆಚ್ಚಳ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಒಂದು ಬಾರಿ ವಾಲ್ಮೀಕಿ ಜನಾಂಗ ಬೇಡಿಕೆ ಈಡೇರಿಸಲಾಗುವುದು ಎನ್ನುತ್ತಾರೆ. ಮತ್ತೊಮ್ಮೆ ಕುರುಬ ಜನಾಂಗ ಸೇರಿದಂತೆ ಇನ್ನೂ ಎರಡು ಮೂರು …

Read More »