Breaking News
Home / Uncategorized (page 695)

Uncategorized

ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಧುಗಿರಿ: ತಾಲ್ಲೂಕಿನಲ್ಲಿ 12 ಜನರಿಗೆ ಶುಕ್ರವಾರ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಧುಗಿರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 38 ವರ್ಷದ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿರುವುದು ಎಲ್ಲರ ನಿದ್ದೆಗೆಡಿಸಿದೆ. ತಾಲ್ಲೂಕಿನ ಶ್ರಾವಂಡನಹಳ್ಳಿಯ 26 ವರ್ಷದ ಮಹಿಳೆ, ಗೊಂದಿಹಳ್ಳಿಯ 65 ವರ್ಷದ ವೃದ್ದ, ಚಿಕ್ಕದಾಳವಟ್ಟದ 63 ವರ್ಷದ ವೃದ್ಧ, ಅಮರಾವತಿಯ 22 ವರ್ಷ ಯುವಕ, ಆಚೇನಹಳ್ಳಿಯ 8 ವರ್ಷದ ಬಾಲಕ, ಮಧುಗಿರಿ …

Read More »

ಅಭಿಮಾನಿಗಳ ಬಗ್ಗೆ ಡಿಂಪಲ್ ಕ್ವೀನ್ ತಮ್ಮ ಇನ್ಸ್ಟಾಗ್ರಾಂನಲ್ಲಿ ಬರೆದಿದ್ದಾರೆ…!

  ಅಭಿಮಾನಿಗಳಂದ್ರೆನೇ ಹಾಗೇ, ನೆಚ್ಚಿನ ನಟನಟಿಯರ ಹುಟ್ಟುಹಬ್ಬ ಬರ್ಲಿ, ಸಿನಿಮಾ ರಿಲೀಸ್​ ಆಗಲಿ, ಹಬ್ಬದಂತೆ ಆಚರಿಸ್ತಾರೆ, ಅವರನ್ನ ನೋಡಿ ಕಣ್ತುಂಬಿಕೊಳ್ಳೋಕ್ಕೆ ಗಂಟೆಗಟ್ಟಲೇ ಮನೆಮುಂದೆ ಕಾದು ಕೂತಿರ್ತಾರೆ, ಒಮ್ಮೆ ನೇರವಾಗಿ ತಮ್ಮ ನೆಚ್ಚಿನ ಸ್ಟಾರ್​ಗಳನ್ನ ಮಾತನಾಡಿಸಿ ಬಿಟ್ರೆ ಅದಕ್ಕಿಂತ ಖುಷಿ ಮತ್ತೊಂದಿಲ್ಲ, ಅದನ್ನ ಹೊರತುಪಡಿಸಿ ಬೇರೇನನ್ನ ಬಯಸೋದು ಇಲ್ಲ ಅಭಿಮಾನಿಗಳು, ಅದಕ್ಕೆ ಅಭಿಮಾನಿಗಳನ್ನ ದೇವರು ಅಂದ್ರು ಡಾ.ರಾಜ್​ ಕುಮಾರ್. ಇದೀಗ ಅಂತಹ ಒಬ್ಬ ಅಭಿಮಾನಿಯ ಬಗ್ಗೆ ಡಿಂಪಲ್​ ಕ್ವೀನ್​ ರಚಿತಾರಾಮ್​ ತಮ್ಮ …

Read More »

ಸತ್ಯಸಾಯಿ ಸಂಸ್ಥೆಯ 2 ಹೊಸ ಕ್ಯಾಂಪಸ್ ಸ್ಥಾಪನೆಗೆ ರಾಜ್ಯ ಸರ್ಕಾರ ಅನುಮತಿ

ಮುದ್ದೇನಹಳ್ಳಿ: ಶಿಕ್ಷಣ ಕ್ಷೇತ್ರದಲ್ಲಿ ತಮ್ಮದೇ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಇನ್ಸಿಟ್ಯೂಟ್ ಆಫ್ ಹ್ಯೂಮನ್ ಎಕ್ಸಲೆನ್ಸ್ ಸಂಸ್ಥೆಗೆ ಎರಡು ಹೊಸ ಕ್ಯಾಂಪಸ್ ಗಳನ್ನು ಸ್ಥಾಪಿಸಲು ರಾಜ್ಯ ಸರಕಾರ ಅನುಮತಿ ನೀಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮುದ್ದೇನಹಳ್ಳಿಯಲ್ಲಿರುವ ಸಂಸ್ಥೆಗೆ ಗುರುವಾರ ಭೇಟಿ ನೀಡಿದ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಅವರು, ಸಂಸ್ಥೆಯ ಮುಖ್ಯಸ್ಥರಾದ ಸದ್ಗುರು ಶ್ರೀ ಮಧುಸೂಧನ ಸಾಯಿ ಅವರಿಗೆ ಅನುಮತಿ ಪತ್ರಗಳನ್ನು ಹಸ್ತಾಂತರ …

Read More »

ಕಿಮ್ಸ್‌ನಿಂದ ಶುಕ್ರವಾರ ಬೆಳಿಗ್ಗೆ ಪರಾರಿಯಾಗಿದ್ದ ಕೊರೊನಾ ಸೋಂಕಿತ ರಾತ್ರಿ ಗದಗದಲ್ಲಿ ಸಿಕ್ಕು ಬಿದ್ದಿದ್ದಾನೆ.

ಹುಬ್ಬಳ್ಳಿ: ಕಿಮ್ಸ್‌ನಿಂದ ಶುಕ್ರವಾರ ಬೆಳಿಗ್ಗೆ ಪರಾರಿಯಾಗಿದ್ದ ಕೊರೊನಾ ಸೋಂಕಿತ ರಾತ್ರಿ ಗದಗದಲ್ಲಿ ಸಿಕ್ಕು ಬಿದ್ದಿದ್ದಾನೆ. ಇದರಿಂದಾಗಿ ಜಿಲ್ಲಾಡಳಿತ ಹಾಗೂ ಪೊಲೀಸರು ನಿಟ್ಟುಸಿರು ಬಿಡುವಂತಾಗಿದೆ. ಕಳ್ಳತನದ ಆರೋಪದ ಮೇಲೆ ಬಂಧಿತನಾಗಿದ್ದ ಕೊರೊನಾ ಸೋಂಕಿತ ಆರೋಪಿ ಶುಕ್ರವಾರ ಬೆಳಗ್ಗೆ 5.30ರ ಸುಮಾರಿಗೆ ಐಸೋಲೇಷನ್ ವಾರ್ಡ್‍ನಿಂದ ಹೊರಬಂದ 55 ವರ್ಷದ ಸೋಂಕಿತ ಆರೋಪಿ ಎಲ್ಲರ ಕಣ್ತಪ್ಪಿಸಿ ಪರಾರಿಯಾಗಿದ್ದ. ಬೆಳಗ್ಗೆ ವೈದ್ಯರು ಚಿಕಿತ್ಸೆ ನೀಡಲು ತೆರಳಿದ ವೇಳೆ ಇದು ಬೆಳಕಿಗೆ ಬಂದಿತ್ತು. ಈತನನ್ನು ಕಾಯ್ದುಕೊಳ್ಳಲು ಇಬ್ಬರು …

Read More »

ಬಂಧಿಸಲು ಹೋದಾಗ ಕ್ರಿಮಿನಲ್ ಗ್ಯಾಂಗ್‍ನಿಂದ ಫೈರಿಂಗ್- 8 ಮಂದಿ ಪೊಲೀಸರು ದುರ್ಮರಣ

ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ 8 ಮಂದಿ ಪೊಲೀಸರನ್ನು ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಡಿವೈಎಸ್ಪಿ, ಮೂವರು ಸಬ್ ಇನ್ಸ್ ಪೆಕ್ಟರ್‍ಗಳು ಹಾಗೂ ನಾಲ್ಕು ಮಂದಿ ಕಾನ್ಸ್ ಸ್ಟೇಬಲ್ ಗಳನ್ನು ಕಾನ್ಪುರದ ಡಿಕ್ರು ಗ್ರಾಮದಲ್ಲಿ ಕ್ರಿಮಿನಲ್ ಗ್ಯಾಂಗ್ ಹತ್ಯೆ ಮಾಡಿದೆ. ಈ ಘಟನೆ ಉತ್ತರಪ್ರದೇಶ ರಾಜಧಾನಿ ಲಕ್ನೋದಿಂದ 150 ಕಿ.ಮಿ ದೂರದಲ್ಲಿ ನಡೆದಿದೆ. ಮೃತರನ್ನು ಸಿಒ ದೇವೇಂದ್ರ ಕುಮಾರ್ ಮಿಶ್ರಾ, ಎಸ್‍ಒ ಮಹೇಶ್ ಯಾದವ್, ಅನೂಪ್ ಕುಮಾರ್, ಸಬ್ ಇನ್ಸ್ …

Read More »

ಕೊರೊನಾ ಎಂಬ ಮಹಾಮಾರಿ ಬದುಕು ಬದಲಿಸಿ ಈಗ ಬೀದಿಯಲ್ಲಿ ನಿಂತು ಕೆಲಸ ಮಾಡುವಂತೆ ಮಾಡಿದೆ.

ಬೆಂಗಳೂರು: ಕೊರೊನಾ ಸುನಾಮಿ ಹಲವರ ಬದುಕನ್ನು ಅತಂತ್ರ ಮಾಡಿದೆ. ಲಾಕ್‍ಡೌನ್‍ಗೂ ಮುಂಚೆ ಹೇಗೋ ಜೀವನಸಾಗಿಸುತ್ತಿದ್ದ ವಯೋವೃದ್ಧೆಯರು ಈಗ ದುಡಿಮೆಗಾಗಿ ಗಾಳಿ, ಬಿಸಿಲು, ಮಳೆ ಎನ್ನದಂತೆ ದುಡಿಯಬೇಕಿದೆ. ಕೊರೊನಾ ಎಂಬ ಮಹಾಮಾರಿ ಬದುಕು ಬದಲಿಸಿ ಈಗ ಬೀದಿಯಲ್ಲಿ ನಿಂತು ಕೆಲಸ ಮಾಡುವಂತೆ ಮಾಡಿದೆ. ಮನೆಗೆಲಸ ಮಾಡುತ್ತಿದ್ದ ಮಹಿಳೆ, ಕಳೆದ 10 ವರ್ಷಗಳಿಂದ ತಿಂಗಳಿಗೊಮ್ಮೆ ಸಂಬಳ. ಹತ್ತಾರು ಮನೆಯಲ್ಲಿ ಅಡುಗೆ, ಕ್ಲಿನಿಂಗ್ ಕೆಲಸ ಇಷ್ಟೇ ಈಕೆ ಪ್ರಪಂಚವಾಗಿತ್ತು. ಆದರೆ ಇದೀಗ ಎಲ್ಲವೂ ಬದಲಾಗಿದೆ. …

Read More »

ಧ್ರುವ ಸರ್ಜಾ ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.

ಬೆಂಗಳೂರು: ನಟ ಧ್ರುವ ಸರ್ಜಾ ಅವರಿಗೆ ಆರೋಗ್ಯ ಸಮಸ್ಯೆ ಆಗಿದೆ. ಲೋ ಬಿಪಿಯಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಂತ ಗಾಂಧಿನಗರದಲ್ಲಿ ಸುದ್ದಿಯಾಗಿತ್ತು. ಈ ಎಲ್ಲಾ ಗಾಸಿಪ್ ಗಳಿಗೆ ಧ್ರುವ ಆಪ್ತ ವಲಯ ಉತ್ತರ ಕೊಟ್ಟಿದೆ. ಧ್ರುವ ಸರ್ಜಾ ಆರೋಗ್ಯವಾಗಿದ್ದು, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಕಳೆದ ತಿಂಗಳು ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಈಗ ಆರಾಮಾಗಿದ್ದಾರೆ. ತಂದೆ, ತಾಯಿ ಕೂಡ ಆರಾಮಾಗಿದ್ದಾರೆ ಅಂತ ಧ್ರುವ ಆಪ್ತವಲಯ ಪಬ್ಲಿಕ್ …

Read More »

ಸಾರ್ವಜನಿಕರು ಸುರಕ್ಷತೆಯ ಕಡೆಗೆ ಹೆಚ್ಚಿನ ಗಮನ ನೀಡಿಬಾಲಚಂದ್ರ ಜಾರಕಿಹೊಳಿಸೂಚನೆ ಮೇರೆಗೆ ನಡೆಸಿದ ಮುಂಜಾಗ್ರತಾ ಸಭೆ

ಗೋಕಾಕ : ವಿಶ್ವ ವ್ಯಾಪಿಯಾಗಿ ದಿನದಿಂದ ದಿನಕ್ಕೆ ಹರಡುತ್ತಿರುವ ಕೊರೋನಾ ವೈರಸ್ ಕೌಜಲಗಿಯ ಮಿರಾಳ ತೋಟಕ್ಕೂ ಪ್ರವೇಶಿಸಿದ್ದು, ಸಾರ್ವಜನಿಕರು ಸುರಕ್ಷತೆಯ ಕಡೆಗೆ ಹೆಚ್ಚಿನ ಗಮನ ನೀಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ಗೋಕಾಕ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಶುಕ್ರವಾರದಂದು ತಾಲ್ಲೂಕಿನ ಕೌಜಲಗಿ ಗ್ರಾಪಂ ಕಾರ್ಯಾಲಯದ ಆವರಣದಲ್ಲಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆ ಮೇರೆಗೆ ನಡೆಸಿದ ಮುಂಜಾಗ್ರತಾ ಸಭೆಯಲ್ಲಿ ಗ್ರಾಮಸ್ಥರನ್ನುದ್ಧೇಶಿಸಿ ಅವರು ಮಾತನಾಡಿದರು. ಕೌಜಲಗಿ ಗ್ರಾಮದಿಂದ …

Read More »

ಇತಿಹಾಸ ಸೃಷ್ಟಿಸಿ ದೇಶಕ್ಕೆ ಮಾದರಿಯಾದ ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಸುರೇಶ್ ಕುಮಾರ್

ಬೆಂಗಳೂರು: ಜೂನ್ 25ರಿಂದ ಜುಲೈ 3ರವರೆಗೆ ನಡೆದ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ವಿದ್ಯಾರ್ಥಿಗಳು, ಪೋಷಕರು, ವಿವಿಧ ಇಲಾಖೆಗಳು ಮತ್ತು ಜಿಲ್ಲಾಡಳಿತಗಳ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆದಿವೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಆರನೇ ದಿನದ ಪರೀಕ್ಷೆಯ ನಂತರ ಶುಕ್ರವಾರ ಸಂಜೆ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಆರು ದಿನಗಳ ಅವಧಿಯ ಪರೀಕ್ಷೆಗಳಲ್ಲಿ ಪ್ರತಿದಿನ ಸರಾಸರಿ 7.5 ಲಕ್ಷ ವಿದ್ಯಾಥಿಗಳು ಯಾವುದೇ …

Read More »

ವಕ್ಷ್ ಸಚಿವ ಪ್ರಭು ಚವ್ಹಾಣ್ಬೆಳಗಾವಿಗೆ………

ಬೆಳಗಾವಿ: ಪಶುಸಂಗೋಪನೆ, ಹಜ್ ಮತ್ತು ವಕ್ಷ್ ಸಚಿವ ಪ್ರಭು ಚವ್ಹಾಣ್ ಅವರು ಸೋಮವಾರ(ಜು.6) ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 9 ಗಂಟೆಗೆ ಅಥಣಿಯ ಪಶು ವ್ಯದ್ಯಕಿಯ ಕಾಲೇಜಿನ ಪ್ರಗತಿ ಪರಿಶೀಲನೆ ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ರಸ್ತೆ ಮೂಲಕ ಬೆಳಗಾವಿಗೆ ಆಗಮಿಸಿ 12.30ಕ್ಕೆ ನಗರದ ಬಿಜೆಪಿ ಕಚೇರಿಗೆ ಭೇಟಿ ನೀಡಲಿದ್ದಾರೆ.  ಮಧ್ಯಾಹ್ನ 1 ಗಂಟೆಗೆ ನಗರದ ಪಶುಸಂಗೋಪನಾ ಇಲಾಖೆಯ ಕಚೇರಿಯಲ್ಲಿ  ಪಶುಸಂಗೋಪನಾ ಇಲಾಖೆ, ಹಜ್ ಮತ್ತು ವಕ್ಷ್ …

Read More »