ನವದೆಹಲಿ: ಅನ್‌ಲಾಕ್ 5ರ ಮಾರ್ಗಸೂಚಿಯಲ್ಲಿ ಅಕ್ಟೋಬರ್ 15ರ ನಂತರ ದೇಶದಲ್ಲಿ ಶಾಲೆಗಳನ್ನು ತೆರೆಯಬಹುದು ಎಂದು ಕೇಂದ್ರ ಸರ್ಕಾರ ಆರು ದಿನಗಳ ಹಿಂದೆಯೇ ಹೇಳಿತ್ತು. ಈಗ ಗೃಹ ಸಚಿವಾಲಯ ಶಾಲೆಗಳನ್ನು ತೆರೆಯಲು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಪೋಷಕರ ಒಪ್ಪಿಗೆ ಮೇರೆಗೆ ಮಕ್ಕಳು ಶಾಲೆಗೆ ತೆರಳಬಹುದು. ಮಕ್ಕಳಿಗೆ ಹಾಜರಾತಿ ಕಡ್ಡಾಯ ಮಾಡುವಂತಿಲ್ಲ. ಆನ್‍ಲೈನ್ ತರಗತಿಗಳನ್ನು ಆಯ್ಕೆಯಾಗಿ ಇಟ್ಟುಕೊಳ್ಳಬಹುದು ಎಂದು ತಿಳಿಸಿದೆ. ಮಾರ್ಗಸೂಚಿಯಲ್ಲಿ ಏನಿದೆ? ಶಾಲಾ ಕೊಠಡಿಗಳನ್ನು ನಿತ್ಯವೂ ಸ್ಯಾನಿಟೈಸ್ ಮಾಡುವುದು ಕಡ್ಡಾಯ. ಎಲ್ಲಾ ಸಂದರ್ಭಗಳಲ್ಲಿಯೂ …
Read More »ಧೈರ್ಯ ದಿಂದಲೇ ಪಕ್ಷ ಸಂಘಟನೆ ಮಾಡಿ ನಿಮ್ಮೊಂದಿಗೆ ನಾನಿದ್ದೇನೆ :ಸತೀಶ್ ಜಾರಕಿಹೊಳಿ
ಧೈರ್ಯ ದಿಂದಲೇ ಪಕ್ಷ ಸಂಘಟನೆ ಮಾಡಿ ನಿಮ್ಮೊಂದಿಗೆ ನಾನಿದ್ದೇನೆ ಯಾರಿಗೂ ತೊಂದರೆಯಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ನನ್ನದು ಗೋಕಾಕ: ಯಾವುದೇ ಒತ್ತಡಕ್ಕೆ ಮಣಿಯದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಧೈರ್ಯದಿಂದ ಪಕ್ಷದ ಸಂಘಟನೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಗೋಕಾಕ ವಿಧಾನಸಭಾ ಕ್ಷೇತ್ರದ ಕಾರ್ಯಕರ್ತರಿಗೆ ಸೂಚಿಸಿದರು. ಸೋಮವಾರದಂದು ಗೋಕಾಕ ಮತಕ್ಷೇತ್ರದ ಅಂಕಲಗಿ-ಅಕ್ಕತಂಗೇರಹಾಳ ಮತ್ತು ಖನಗಾಂವ್ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದ …
Read More »ಬೆಳಗಾವಿಯಲ್ಲಿ MBV ಸೇರಿ ದಲಿತ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ
ಬೆಳಗಾವಿ: ಹತ್ರಸ್ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ-ಕೊಲೆ ಪ್ರಕರಣ ಖಂಡಿಸಿ ನಗರದಲ್ಲಿ ಸೋಮವಾರ ಮಾನವ ಬಂಧುತ್ವ ವೇದಿಕೆ ಹಾಗೂ ದಲಿತ ಸೇನೆ ಸೇರಿ ವಿವಿಧ ಸಂಘಟನೆಯ ಪದಾಧಿಕಾರಿಗಳು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ಇಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಉದ್ಯಾನವನದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪದಾಧಿಕಾರಿಗಳು ಚನ್ನಮ್ಮ ವೃತ್ತ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …
Read More »ರಾಜಕೀಯ ದುರುದ್ದೇಶದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆನ ದಾಳಿ ನಡೆಸಲಾಗಿದೆ: ಲಕ್ಷ್ಮಿ ಹೆಬ್ಬಾಳಕರ
ಬೆಳಗಾವಿ : ರಾಜಕೀಯ ದುರುದ್ದೇಶದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆನ ದಾಳಿ ನಡೆಸಲಾಗಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಇನ್ನೇನು ರಾಜ್ಯದಲ್ಲಿ ಬೈ ಎಲೆಕ್ಷನ್ ನಡೆಯುತ್ತಿದ್ದಿದೆ. ಇದರಿಂದ ಸರ್ಕಾರ ಅಧಿಕಾರವನ್ನು ಬಳಿಸಿಕೊಂಡು ಸಿಬಿಐ ದಾಳಿ ನಡೆಸಲಾಗಿದೆ. ಪ್ರತಿ ಬಾರಿ ಚುನಾವಣೆ ಸಂದರ್ಭದಲ್ಲಿ ರಾಜಕೀಯ ದುರುದ್ದೇಶದಿಂದ ದಾಳಿ ನಡೆಯುತ್ತಿದೆ. ನಮ್ಮ ನಾಯಕರು ಸಮರ್ಥರಿದ್ದಾರೆ, ಸಮರ್ಥವಾಗಿ ಎಲ್ಲವನ್ನೂ ಎದುರಿಸುತ್ತಾರೆ ಎಂದು ಹೇಳಿದ್ದಾರೆ. ಯಾರನ್ನು ಸಹ …
Read More »“ನನ್ ಹೊಟ್ಟೆ ಉರಿಸಬೇಡಿ, ನನ್ನ ಮಗನನ್ನ ಜೈಲಲ್ಲೇ ಇಟ್ಬಿಡಿ” : ಡಿಕೆಶಿ ತಾಯಿ ಆಕ್ರೋಶ
ಬೆಂಗಳೂರು, ಅ.5- ಸುಮ್ಮನೇ ನನ್ನ ಹೊಟ್ಟೆ ಯಾಕೆ ಉರಿಸುತ್ತಿರಾ ಏನಾದರೂ ಮಾಡಿಕೊಳ್ಳಲಿ. ಬೇಕಿದ್ದರೆ ನನ್ನ ಮಗನನ್ನು ಜೈಲಿನಲ್ಲೇ ಇಟ್ಟು ಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ತಾಯಿ ಗೌರಮ್ಮ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಕನಕಪುರ ತಾಲ್ಲೂಕಿನ ಕೋಡಿಹಳ್ಳಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ತಮ್ಮ ಆಕ್ರೋಶವನ್ನು ಹೊರ ಹಾಕಿದರು. ನಾನು ಅವಿದ್ಯಾವಂತೆ ಮತನಾಡಲು ಬರುವುದಿಲ್ಲ. ಸದ್ಯಕ್ಕೆ ನನಗೆ ಹುಷಾರಿಲ್ಲ. ನಾನೇನು ಮಾತನಾಡುವುದಿಲ್ಲ. ಹುಷಾರಾದ ಮೇಲೆ ಮಾತನಾಡುತ್ತೇನೆ ಎಂದಿದ್ದಾರೆ, ಸಿಬಿಐನವರು …
Read More »ಅಧಿಕಾರದಲ್ಲಿದ್ದಾಗ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ಭಯ ಪಡೋ ಅಗತ್ಯವಿಲ್ಲ: ಹೆಚ್‍ಡಿಕೆ
ಬೆಂಗಳೂರು: ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ ಯಾವುದೇ ರೀತಿ ತನಿಖೆ ನಡೆಸಿದರೂ ಎದುರಿಸಲು ಸಿದ್ಧವಾಗಿರಬೇಕು. ಸತ್ಯಕ್ಕೆ ಜಯ ಸಿಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲಿನ ಸಿಬಿಐ ದಾಳಿಯ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದರು.ವರದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈ ವಿಚಾರಕ್ಕೆ ಸಂಬಂಧಿಸಿದಂತೆ ತಕ್ಷಣ ಯಾವುದೇ ರೀತಿ ಪ್ರತಿಕ್ರಿಯೆ ಕೊಡಲು ತಯಾರಿಲ್ಲ. ಯಾಕೆಂದರೆ ಇಂಹತ ಸನ್ನಿವೇಶದಲ್ಲಿ ಪ್ರತಿಯೊಂದು ರಾಜಕೀಯ ಪಕ್ಷಗಳು ಸಹ ಇದು ರಾಜಕೀಯ ಪಿತೂರಿ ಎಂದು …
Read More »ಸಿದ್ದರಾಮಯ್ಯ ಮನೆ ಮೇಲೆ ಏಕೆ ಸಿಬಿಐ ದಾಳಿ ಆಗಿಲ್ಲ?: ಉಮೇಶ್ ಕತ್ತಿ
ಚಿಕ್ಕೋಡಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದ ಮೇಲೆ ಸಿಬಿಐ ದಾಳಿಯ ಹಿಂದೆ ಯಾವುದೇ ರಾಜಕೀಯ ದುರುದ್ದೇಶವಿಲ್ಲ ಎಂದು ಬಿಜೆಪಿ ಹಿರಿಯ ನಾಯಕ, ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ನಿವಾಸ ಮೇಲೆ ಸಿಬಿಐ ದಾಳಿ ಮಾಡುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂಬುವುದು ಸುಳ್ಳು. ರಾಜಕೀಯ ದುರದ್ದೇಶದಿಂದ ದಾಳಿ ಆಗಿದ್ದರೇ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸದ ಮೇಲೆ ಏಕೆ ದಾಳಿ …
Read More »ನಿರೂಪಕಿಯ ಮೊಬೈಲ್ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ.?.
ದಕ್ಷಿಣ ಕನ್ನಡ: ಌಂಕರ್ ಅನುಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿಯ ಮೊಬೈಲ್ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಘಟಾನುಘಟಿಗಳು ಒತ್ತಡ ಹೇರುತ್ತಿದ್ದಾರೆ ಅನ್ನೋ ಮಾತು ಕೇಳಿಬಂದಿದೆ. ಜೊತೆಗೆ, ಸಿಸಿಬಿ ಪೊಲೀಸರ ಮೇಲೆ ಪ್ರಕರಣ ತಿರುಚಲು ಒತ್ತಡ ಹೇರುತ್ತಿರೋದ್ಯಾರು? ಅನುಶ್ರೀ ಕಾಲ್ ಡಿಟೇಲ್ಸ್ ರಿವೀಲ್ ಆದ್ರೆ ಆ ಪ್ರಭಾವಿಗಳಿಗೆ ಸಂಕಷ್ಟ ಎದುರಾಗತ್ತಾ? ಎಂಬ ಪ್ರಶ್ನೆಗಳನ್ನೂ ಸಹ ಹಲವರು ಕೇಳುತ್ತಿದ್ದಾರೆ. ಇದಕ್ಕೆ ಸಾಕ್ಷಿಯೆಂಬಂತೆ ಅನುಶ್ರೀ ಕಾಲ್ ರೆಕಾರ್ಡ್ ಡಿಲೀಟ್ ಮಾಡಲು ಪೊಲೀಸರಿಗೆ ಕೆಲ ಪ್ರಭಾವಿಗಳು …
Read More »ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ
https://www.facebook.com/105350550949710/videos/756737581723043/?sfnsn=wiwspmo ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು …
Read More »ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ
ಬಾಗಲಕೋಟೆ: ಪ್ರೇಮಿಗಳಿಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಜಿಲ್ಲೆಯ ಮುಧೋಳ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಆನಂದ್ (23), ಅಕ್ಷತಾ (15) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳಾಗಿದ್ದಾರೆ. ಮೃತ ಪ್ರೇಮಿಗಳು ಮೂಲತಃ ಬಾಗಲಕೊಟೆ ಜಿಲ್ಲೆಯ ಮುಧೋಳ ತಾಲೂಕಿನ ಬರಗಿ ಗ್ರಾಮದವರು ಎಂದು ತಿಳಿದು ಬಂದಿದೆ. ಆನಂದ್ ಹಾಗೂ ಅಕ್ಷತಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಅಂತರ್ಜಾತಿ ಹಿನ್ನೆಲೆ ಮನೆಯಲ್ಲಿ ಪ್ರೀತಿಗೆ ಒಪ್ಪುವುದಿಲ್ಲ ಎಂದು ಮನನೊಂದು ಪ್ರೇಮಿಗಳು ಆತ್ಮಹತ್ಯೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ …
Read More »