ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ ಮೇ 15 ರಿಂದ ಮೇ 18 ರವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವಾರು ಜಿಲ್ಲೆಗಳಿಗೆ ಕಿತ್ತಳೆ(Orange) ಎಚ್ಚರಿಕೆಯನ್ನೂ ರವಾನಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ(Yellow) ಎಚ್ಚರಿಕೆ ನೀಡಲಾಗಿದೆ. ಇಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಭಾರಿ ಬಿರುಸಿನ ಮತ್ತು ಆಲಿಕಲ್ಲು ಮಳೆಯಾಗಿದೆ. ಭಾರಿ ಮಳೆಯಿಂದಾಗಿ ತಗ್ಗು ಪ್ರದೇಶಗಳಲ್ಲಿ …
Read More »ಎಂಎನ್ಸಿ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ₹14.23 ಲಕ್ಷ ಪೀಕಿದ HR
ಬೆಂಗಳೂರು: ಕೆಲಸಕ್ಕಾಗಿ ನೀವೇನಾದರೂ ಇಂಟರ್ವ್ಯೂಗೆ ಹೋದರೆ ಹುಷಾರಾಗಿರಿ. ಕಾರಣ, ಸಂದರ್ಶನ ಮಾಡುವ ಸೋಗಿನಲ್ಲಿ, ಬಹುರಾಷ್ಟ್ರೀಯ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ್ದ ಆರೋಪಿ ಮಾನವ ಸಂಪನ್ಮೂಲ ಅಧಿಕಾರಿ (ಹೆಚ್ಆರ್) ಸಿಸಿಬಿ ಪೊಲೀಸರ ಅತಿಥಿಯಾಗಿದ್ಧಾನೆ. ಮೆಕ್ರೋಸಾಪ್ಟ್, ಬಾಷ್ ಸೇರಿ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 8 ಮಂದಿ ಉದ್ಯೊಗಾಂಕ್ಷಿಗಳಿಂದ 14.23 ಲಕ್ಷ ಹಣ ಪಡೆದಿದ್ದ ಖಾಸಗಿ ಕಂಪನಿ ನೌಕರನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಂಚನೆಗೊಳಗಾದ ಯುವತಿಯು ನೀಡಿದ ದೂರು …
Read More »ಪಕ್ಷಕ್ಕೆ ವಾಪಸ್ಸು ಸೇರಿಸಿಕೊಳ್ಳಿ ಎಂದು ಯಾವನ ಮನೆಗೂ ನಾನು ಹೋಗಿಲ್ಲ:ಯತ್ನಾಳ್
ವಿಜಯಪುರ, ಮೇ 12: ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ವರಸೆಯನ್ನು ಮುಂದುವರಿಸಿದ್ದಾರೆ, ಪಕ್ಷಕ್ಕೆ ವಾಪಸ್ಸು ಸೇರಿಸಿಕೊಳ್ಳಿ ಎಂದು ಯಾವನ ಮನೆಗೂ ನಾನು ಹೋಗಿಲ್ಲ, ಅದರ ಅವಶ್ಯಕತೆಯೇ ನನಗಿಲ್ಲ, ಯಾಕೆಂದರೆ ದೆಹಲಿ ವರಿಷ್ಠರೆಲ್ಲ (party seniors) ನನ್ನೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಯತ್ನಾಳ್ ಹೇಳಿದರು. ಏಪ್ರಿಲ್ 22 ರಂದು ನಡೆದ ಪಹಲ್ಗಾಮ್ ಉಗ್ರರ ದಾಳಿ ನಂತರ ದೆಹಲಿಯ ಬಿಜೆಪಿ ನಾಯಕರೆಲ್ಲ, ಭಯೋತ್ಪಾದಕರನ್ನು ಹತ್ತಿಕ್ಕುವ, ಪಾಕಿಸ್ತಾನಕ್ಕೆ ಪಾಠ ಕಲಿಸುವ, ಅಪರೇಷನ್ ಸಿಂಧೂರ, ಯುದ್ಧ, ಕದನ …
Read More »ದೇಶ ಅಂದಾಗ ಎಲ್ಲರೂ ಒಂದೇ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಉಡುಪಿ:* ದೇಶ ಅಂತ ಬಂದಾಗ ನಾವೆಲ್ಲರೂ ಒಂದೇ, ವೈರಿ ರಾಷ್ಟ್ರ ನಮ್ಮ ಮೇಲೆ ಯುದ್ದಕ್ಕೆ ಬರುತ್ತಿದೆ. ಭಾರತಕ್ಕಿದು ಸಂಕಷ್ಟದ ಕಾಲ, ಎಲ್ಲರೂ ಒಗ್ಗಟಾಗಿ ಎದುರಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕಾಪುವಿನ ಪುರಾಣ ಪ್ರಸಿದ್ಧ ಮಾರಿಯಮ್ಮನವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ನಮ್ಮ ಬೆಳಗಾವಿಯ ಸೊಸೆ …
Read More »ಸುಹಾಸ್ ಕೊಲೆ: ಹಿಂದೂ ಕಾರ್ಯಕರ್ತರ ವಿರುದ್ಧ ಹೆಡ್ ಕಾನ್ಸ್ಟೇಬಲ್ ರಶೀದ್ ದೂರು
ಮಂಗಳೂರು, ಮೇ 06: ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಕೊಲೆ ಪ್ರಕರಣದಲ್ಲಿ ಬಜ್ಪೆ ಹೆಡ್ ಕಾನ್ಸ್ಟೇಬಲ್ ರಶೀದ್ ಕೂಡ ಪರೋಕ್ಷವಾಗಿ ಕೈಜೋಡಿಸಿದ್ದಾರೆ ಎಂದು ಹಿಂದೂ ಜಾಗರಣ ವೇದಿಕೆ (Hindu Jagaran Vedike) ಆರೋಪ ಮಾಡಿತ್ತು. ಈ ಆರೋಪ ಬೆನ್ನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಹೆಡ್ ಕಾನ್ಸ್ಟೇಬಲ್ ರಶೀದ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಲಾಗಿದೆ. ಈ ಸಂಬಂಧ ಹೆಡ್ ಕಾನ್ಸ್ಟೇಬಲ್ ರಶೀದ್ ಅವರು ಬಜ್ಪೆ ಪೊಲೀಸ್ …
Read More »ಜನಾರ್ದನ ರೆಡ್ಡಿ ಮತ್ತೊಮ್ಮೆ ಚಂಚಲಗೂಡ ಜೈಲಿಗೆ ಶಿಫ್ಟ್ ಏಳು ವರ್ಷಗಳ ಕಾಲ ಶಿಕ್ಷೆ
ಹೈದರಾಬಾದ್, ಮೇ 06: ಓಬಳಾಪುರಂ ಅಕ್ರಮ ಅದಿರು ಗಣಿಗಾರಿಕೆ (OCM Illegal Mining Case) ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ (Janardhan Reddy) ಅವರಿಗೆ ಸಿಬಿಐ ವಿಶೇಷ ನ್ಯಾಯಾಲಯ ಏಳು ವರ್ಷಗಳ ಕಾಲ ಶಿಕ್ಷೆ ಪ್ರಕಟಿಸಿದೆ. ಕೋರ್ಟ್ನಲ್ಲಿ ಎಲ್ಲ ಪ್ರಕ್ರಿಯೆಗಳು ಮುಗಿದಿದ್ದು, ಸಿಬಿಐ ಜನಾರ್ದನ ರೆಡ್ಡಿ ಅವರನ್ನು ಚಂಚಲಗುಡ ಜೈಲಿಗೆ ಶಿಫ್ಟ್ ಮಾಡಿದೆ. ಸಿಬಿಐ ಕೋರ್ಟ್ ಆದೇಶದಿಂದ ಓಬಳಾಪುರಂ ಮೈನಿಂಗ್ ಕೇಸ್ನಲ್ಲಿ ಜನಾರ್ದನ ರೆಡ್ಡಿ ಅವರಿಗೆ ಮತ್ತೊಮ್ಮೆ ಚಂಚಲಗೂಡ ಜೈಲೂಟ …
Read More »ತುಮಕೂರಿನಲ್ಲಿ ಕ್ರಿಕೆಟ್ ಮೈದಾನ: 41ಎಕರೆ ಸ್ವಾಧೀನ ಪತ್ರ ಹಸ್ತಾಂತರಿಸಿದ ಸಚಿವ ಎಂ ಬಿ ಪಾಟೀಲ
ಬೆಂಗಳೂರು: ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣ ನಿರ್ಮಿಸಲು ಕೆಐಎಡಿಬಿ ಮೂಲಕ ಒದಗಿಸುವ 41 ಎಕರೆ ಜಮೀನಿನ ಸ್ವಾಧೀನ ಪತ್ರವನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆ.ಎಸ್.ಸಿ.ಎ) ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು, ಈಗ ಕೊಟ್ಟಿರುವ ಜಾಗದ ಪಕ್ಕದಲ್ಲೇ ಇರುವ 6.5 ಎಕರೆ ಖರಾಬು ಜಮೀನನ್ನು ಕೆಎಸ್ಸಿಎಗೆ ಒದಗಿಸಬೇಕು ಎಂದು ಮನವಿ …
Read More »ಕಾರವಾರ: ಪಹಲ್ಗಾಮ್ ದಾಳಿಗೆ ಮರುಗಿದ ಪುಟಾಣಿಗಳು; ಸ್ಕೇಟಿಂಗ್, ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ
ಕಾರವಾರ (ಉತ್ತರಕನ್ನಡ): ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಲಿಯಾದ ಪ್ರವಾಸಿಗರ ಆತ್ಮಕ್ಕೆ ಶಾಂತಿ ಕೋರಿ ಎರಡು ಗಂಟೆಗಳ ಕಾಲ ನಗರದ ಮಿತ್ರ ಸಮಾಜದ ಆವರಣದಲ್ಲಿ ಭಾನುವಾರ ಪುಟಾಣಿಗಳು ಸ್ಕೇಟಿಂಗ್ ಮಾಡಿದರು. ಹಣಬರ್ ಸ್ಕೇಟಿಂಗ್ ಕ್ಲಬ್ನ ವತಿಯಿಂದ ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟವರನ್ನು ಸ್ಮರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕ್ಲಬ್ನ ಸುಮಾರು 200 ಮಕ್ಕಳು ಕ್ಯಾಂಡಲ್ ಹಿಡಿದು ಭಾರತದ ಭೂಪಟ ರಚನೆ ಮಾಡಿ, ಅದರ ಸುತ್ತ ಸ್ಕೇಟಿಂಗ್ ಮಾಡುವ ಮೂಲಕ ಮೃತರನ್ನು ಸ್ಮರಿಸಿದರು.ಕಾರ್ಯಕ್ರಮಕ್ಕೆ ಕಾರವಾರ-ಅಂಕೋಲಾ …
Read More »ಇಂದಿನಿಂದ ಮೇ 17ರ ವರೆಗೆ ಮನೆ ಮನೆಗೆ ತೆರಳಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಆರಂಭ
ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಸಮೀಕ್ಷೆ ಇಂದಿನಿಂದ (ಸೋಮವಾರ) ಆರಂಭವಾಗಲಿದೆ. ಮೇ 17ರ ವರೆಗೆ ಮನೆ ಮನೆಗೆ ತೆರಳಿ ಸರ್ಕಾರಿ ಶಾಲಾ ಶಿಕ್ಷಕರು ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ. ರಾಜ್ಯಾದ್ಯಂತ ಸುಮಾರು 58,960 ಗಣತಿದಾರರು (Enumerators) ಸಮೀಕ್ಷೆ ಕಾರ್ಯ ನಡೆಸಲಿದ್ದಾರೆ. ಸುಮಾರು 6,000 ಸೂಪರ್ ವೈಸರ್ಸ್ ಗಳನ್ನು ನಿಯೋಜಿಸಲಾಗಿದೆ. ಇವರು ಸಮೀಕ್ಷೆಯ ಮೇಲೆ ನಿಗಾ ವಹಿಸಲಿದ್ದಾರೆ. ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಒಟ್ಟು 101 ಜಾತಿಗಳಿವೆ. ಈ ಪೈಕಿ ಆದಿ ಕರ್ನಾಟಕ, ಆದಿ …
Read More »ಗೋವಾಕ್ಕೆ ಹೆದರಿ ಮೋದಿಯವರು ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ
ಹುಬ್ಬಳ್ಳಿ: ಗೋವಾ ರಾಜ್ಯಕ್ಕೆ ಹೆದರಿಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಮಹದಾಯಿಗೆ ಅನುಮತಿ ಕೊಡಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದರು. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಪಿ.ಎಸ್.ಸಿ ಯಲ್ಲಿ ಅವ್ಯವಸ್ಥೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆಗೆ ಸಿಡಿಮಿಡಿಗೊಂಡ ಸಿಎಂ, ಪ್ರಲ್ಹಾದ್ ಜೋಶಿ ಮೊದಲು ಮಹದಾಯಿ ಬಗ್ಗೆ ಮಾತಾಡಲಿ ಎಂದು ಕಿಡಿಕಾರಿದರು. ಮಹದಾಯಿ ಯೋಜನೆಗೆ ಎನ್ವಿರಾನ್ಮೆಂಟ್ ಕ್ಲಿಯರೆನ್ಸ್ ಯಾಕೆ ಕೊಡಿಸ್ತಿಲ್ಲಾ..? ಗೋವಾಕ್ಕೆ …
Read More »