ಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ 1ರಂದು ಶನಿವಾರ ಮಧ್ಯಾಹ್ನ 4 ಗಂಟೆಗೆ ಕಾಲೇಜಿನ ನೂತನ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕರ್ನಾಟಕದ ಪ್ರತಿಷ್ಠಿತ ಬಿವಿವಿ ಸಂಘದ ವಿದ್ಯಾಸಂಸ್ಥೆಯಾದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು 63 ವರ್ಷಗಳ ಶೈಕ್ಷಣಿಕ ಪಯಣವನ್ನು ಯಶಸ್ವಿಯಾಗಿ ಪೂರೈಸಿದ್ದು, ದೇಶದ ಪ್ರಮುಖ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಾಲೇಜು 2007ರಲ್ಲಿ ಯುಜಿಸಿ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ …
Read More »ಯೋಗೇಶ್ ಗೌಡ ಕೊಲೆ ಕೇಸಲ್ಲಿ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ – ಜಾಮೀನು ಮಂಜೂರು
ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್ ಸಿಕ್ಕಿದೆ. ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೀವಾವಧಿ ಶಿಕ್ಷೆಯನ್ನೂ ಅಮಾನತ್ತಿನಲ್ಲಿಟ್ಟಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಅಮಾನತ್ತಿನಲ್ಲಿ ಇರಿಸಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ, ಜೀವಾವಧಿ ಶಿಕ್ಷೆಗೆ ತಡೆಯಾಜ್ಞೆ ನೀಡಿ, ವಿನಯ್ ಕುಲಕರ್ಣಿ …
Read More »ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯ ಬರ್ಬರ ಹತ್ಯೆ
ಉಡುಪಿ: ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿಕ್ಕಿ ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್ (45) ಹತ್ಯೆಗೀಡಾದ ವ್ಯಕ್ತಿ. ಕುಂದಾಪುರದ ಚರ್ಚ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮುಂಜಾನೆ 3:30 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಈ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಐವನ್ ರಿಚರ್ಡ್ ಅವರು ಕೆಲವು ವ್ಯವಹಾರಗಳನ್ನು ನಡೆಸುತ್ತಿದ್ದರು. ತಮ್ಮ ಮೊದಲ ಪತ್ನಿಯನ್ನು ತೊರೆದು, ಬಾರ್ಕೂರು ಮೂಲದ ಮಹಿಳೆಯೊಂದಿಗೆ ಅವರು ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ. …
Read More »ಕೊಡಗಿನಲ್ಲಿ ಮಳೆಯ ಅಬ್ಬರ – ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಳೆ (Rain) ಗಳು ತುಂಬಿ ಹರಿಯುತ್ತಿವೆ. ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2,857.88 ಅಡಿಗಳಿಗೆ ತಲುಪಿದೆ. ಜಲಾಶಯಕ್ಕೆ 4,008 ಕ್ಯೂಸೆಕ್ ನೀರು ಒಳಹರಿವು …
Read More »ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗು ಕೊಂದ ಪಾಪಿ ಪತಿ
ಬಳ್ಳಾರಿ: ಸುತ್ತಿಗೆಯಿಂದ ಹೊಡೆದು ಪತ್ನಿ, ಏಳು ತಿಂಗಳ ಮಗುವನ್ನು ಕೊಂದು ಪತಿ ಪರಾರಿಯಾಗಿರುವ ಘಟನೆ ಬಳ್ಳಾರಿ ನಗರದ ಅಂದ್ರಾಳ್ ಪ್ರದೇಶದಲ್ಲಿ ನಡೆದಿದೆ. ಆರೋಪಿ ಪತಿ ಹೊನ್ನೂರಸ್ವಾಮಿ ಪತ್ನಿ ರಾಜೇಶ್ವರಿ ಹಾಗೂ ಮಗಳು ಅಶ್ವಿನಿಯನ್ನು ಕೊಲೆ ಮಾಡಿದ್ದಾನೆ. ಕೌಟುಂಬಿಕ ಕಲಹದಿಂದಾಗಿ ಸುತ್ತಿಗೆಯಿಂದ ಹೊಡೆದು ಪತ್ನಿ ಹಾಗೂ ಮಗುವನ್ನು ಕೊಂದು ಆರೋಪಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ …
Read More »ʻಕಾವೇರಿ ಕಿಚ್ಚುʼ – ತಮಿಳುನಾಡು ಸಿಎಂ ವಿಜಯ್ ಭೇಟಿ ಮುಂದೂಡಿಕೆಗೆ ಸಿಎಂ ಡಿಕೆಶಿ ಮನವಿ
ಬೆಂಗಳೂರು: ಆ.13 ರಂದು ʻಕರ್ನಾಟಕ ಬಂದ್ʼ ಘೋಷಣೆಯಾದ ಬೆನ್ನಲ್ಲೇ ತಮಿಳುನಾಡು ಸಿಎಂ ವಿಜಯ್ ಅವರ ಭೇಟಿ ಮುಂದೂಡಿಕೆಗೆ ಸಿಎಂ ಡಿಕೆ ಶಿವಕುಮಾರ್ r ಮನವಿ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡಿಸಿ ಮಾತನಾಡಿದ ಅವರು, ಇಂತಹ ವಾತಾವರಣರಲ್ಲಿ ವಿಜಯ್ ಅವರನ್ನ ಕರೆಸೋದು ಸೂಕ್ತ ಅಲ್ಲ, ನಾನು ಅವರನ್ನ ಕರೆಸೋದು, ಯಾರೋ ಕೂಗೋದು, ಮುತ್ತಿಗೆ ಹಾಕೋದು ಸರಿಯಲ್ಲ. ಕೆಲವರು ಅವರ ಭೇಟಿ ವಿಚಾರದಲ್ಲಿ ನಡೆದುಕೊಳ್ಳುತ್ತಿರುವುದು ಸರಿ ಇಲ್ಲ, ನನಗೇಕೋ ಸಮಾಧಾನ ತರಿಸುತ್ತಿಲ್ಲ ಎಂದು …
Read More »ನಿಮ್ಮ ವಿರುದ್ಧ ಯಾವುದೇ ಕೆಲಸ ಮಾಡಲ್ಲ, ದಯವಿಟ್ಟು ಬಂದ್ ಕೈಬಿಡಿ: ಸಿಎಂ ಡಿಕೆಶಿ ನಮ್ರತೆಯ ಮನವಿ
ಬೆಂಗಳೂರು: ನಿಮ್ಮ ವಿರುದ್ಧ ಯಾವುದೇ ಕೆಲಸ ಮಾಡೋದಿಲ್ಲ. ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ, ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೆಲ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ರೈತ ಪರ ಸಂಘಟನೆಗಳು ಹೋರಾಟ ಮಾಡ್ತಿವೆ. ಹೋರಾಟ ಮಾಡೋದು ತಪ್ಪಲ್ಲ, ಆದ್ರೆ ವಾಸ್ತವಾಂಶ ಗೊತ್ತಿರಲಿ. ರಾಜ್ಯದ ಹಿತ ರಕ್ಷಣೆಗೆ ನಾವಿದ್ದೇವೆ, ನೀವೆಲ್ಲ ಸೇರಿ ನಮಗೆ ಅಧಿಕಾರ ಕೊಟ್ಟಿದ್ದೀರಿ, …
Read More »ಪಶ್ಚಿಮ ಘಟ್ಟದಲ್ಲಿ ವರುಣನ ಅಬ್ಬರ – ಬತ್ತಿಹೋಗಿದ್ದ ಭೀಮೆಯ ಒಡಲು ಒಂದೇ ದಿನದಲ್ಲಿ ಭರ್ತಿ
ಯಾದಗಿರಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಬತ್ತಿಹೋಗಿದ್ದ ಭೀಮಾ ನದಿಯ ಒಡಲು ಒಂದೇ ದಿನ ಭರ್ತಿಯಾಗಿ ಮೈದುಂಬಿ ಹರಿಯುತ್ತಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಗುರುಸಣಗಿ ಬ್ಯಾರೇಜ್‌ನಿಂದ 50 ಸಾವಿರ ಕ್ಯೂಸೆಕ್ ನೀರನ್ನು ಭೀಮಾನದಿಗೆ ಬಿಡುಗಡೆ ಮಾಡಲಾಗಿದೆ. ಅಪಾರ ಪ್ರಮಾಣ ನೀರು ಹರಿದುಬರುತ್ತಿರುವ ಹಿನ್ನೆಲೆ ಭೀಮಾನದಿ ತೀರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ಪರಿಣಾಮ ನದಿ …
Read More »ಬಿಜೆಪಿ ತೊರೆದ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ
ನವದೆಹಲಿ: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ವಕ್ತಾರಾಗಿದ್ದ ಶೆಹಜಾದ್ ಪೂನಾವಾಲಾ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ತಮ್ಮ ‘X’ ಖಾತೆಯ ಬಯೋ ಬದಲಾಯಿಸಿಕೊಂಡಿದ್ದು, ‘ಬಿಜೆಪಿ ರಾಷ್ಟ್ರೀಯ ವಕ್ತಾರ’ ಎಂಬ ಹುದ್ದೆಯ ಹೆಸರನ್ನು ತೆರವುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಅವರು ಸಕ್ರಿಯ ರಾಜಕೀಯದಿಂದ ಹೊರನಡೆಯುತ್ತಾರೆಯೇ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಹಾಗೂ ಚರ್ಚೆ ಆರಂಭವಾಗಿದೆ. ಬಯೋದಲ್ಲಿ ಏನಿದೆ? ಗುರುವಾರ ತಮ್ಮ ಪರಿಷ್ಕೃತ X ಪ್ರೊಫೈಲ್‌ನ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದ 38 ವರ್ಷದ ಪೂನಾವಾಲಾ, …
Read More »ಸುಪ್ರೀಂ ಮೆಟ್ಟಿಲೇರಿದ್ದ ಸಿಎಂ ಒಮರ್ ಅಬ್ದುಲ್ಲಾಗೆ ಕೊನೆಗೂ ಪತ್ನಿಯಿಂದ ಸಿಕ್ತು ವಿಚ್ಛೇದನ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ಅವರ ಪತ್ನಿ ಪಾಯಲ್ ಅವರಿಗೆ ವಿಚ್ಛೇದನ ನೀಡುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ತಿಳಿಸಿದೆ. ದಂಪತಿ ತಮ್ಮ ಮದುವೆಯನ್ನು ವಿಸರ್ಜಿಸಲು ಮತ್ತು ಬಾಕಿ ಇರುವ ಎಲ್ಲಾ ವಿವಾದಗಳನ್ನು ಬಗೆಹರಿಸಲು ಪರಸ್ಪರ ಒಪ್ಪಿಕೊಂಡಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಅದರ ಬೆನ್ನಲ್ಲೇ ವಿಚ್ಛೇದನಕ್ಕೆ ಕೋರ್ಟ್ ಅನುಮತಿ ನೀಡಿದೆ. ದೆಹಲಿ ಹೈಕೋರ್ಟ್ ತನ್ನ ವಿಚ್ಛೇದನ ಅರ್ಜಿಯನ್ನು ತಿರಸ್ಕರಿಸಿತ್ತು. ಅದನ್ನು ಪ್ರಶ್ನಿಸಿ ಅಬ್ದುಲ್ಲಾ ಸಲ್ಲಿಸಿದ್ದ ಅರ್ಜಿಯಲ್ಲಿ …
Read More »
Laxmi News 24×7