Breaking News

Uncategorized

ಕೋವಿಡ್ ಕೇರ್ ಸೆಂಟರಿನಲ್ಲಿ ಮದುವೆ ಸಮಾರಂಭ

ತಿರುವನಂತಪುರಂ: ಕೇರಳದ ಕೊಚ್ಚಿಯಲ್ಲಿರುವ ಕೋವಿಡ್ ಕೇರ್ ಸೆಂಟರಿನಲ್ಲಿ ಮದುವೆಯ ಸಮಾರಂಭವೊಂದು ನಡೆದಿದ್ದು, ಇದೀಗ ಆ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. 19 ವರ್ಷದ ಫಾಜಿಯಾಗೆ ನಿಯಾಜ್ ಜೊತೆ ಮದುವೆ ನಿಗದಿಯಾಗಿತ್ತು. ಆದರೆ ಮದುವೆಗೆ ಒಂದು ದಿನ ಬಾಕಿ ಇರುವಾಗ ಫಾಜಿಯಾ ಕೋವಿಡ್ ಟೆಸ್ಟ್ ಮಾಡಿಸಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಹೀಗಾಗಿ ಫಾಜಿಯಾಳನ್ನು ಮಟ್ಟಂಚೇರಿಯ ಟೌನ್ ಹಾಲ್‍ನಲ್ಲಿ ಸ್ಥಾಪಿಸಲಾದ ಕೋವಿಡ್ ಕೇರ್ ಕೇಂದ್ರಕ್ಕೆ ಸೇರಿಸಲಾಗಿತ್ತು. ಇದರಿಂದ ಫಾಜಿಯಾ ಬೇಸರಗೊಂಡಿದ್ದಳು. ಆಕೆಯನ್ನು …

Read More »

ಬಂದ್ ಎಫೆಕ್ಟ್ – ಗ್ರಾಹಕರಿಗಾಗಿ ಕಾದು ಸುಸ್ತಾಗಿ ನಿದ್ರೆಗೆ ಜಾರಿದ ವ್ಯಾಪಾರಸ್ಥರು

ಬೆಂಗಳೂರು: ರೈತ ವಿರೋಧಿ ಮಸೂದೆಯನ್ನು ವಿರೋಧಿಸಿ ಇಂದು ಕರ್ನಾಟಕ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ರೈತರು ಬೀದಿಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಹರಿಲ್ಲದೆ ವ್ಯಾಪಾರಸ್ಥರು ಕಂಗಾಲಾಗಿದ್ದಾರೆ. ಹೌದು. ಬಂದ್ ಹಿನ್ನೆಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳು ಗ್ರಾಹಕರಿಗಾಗಿ ಕಾದು ಕಾದು ಸುಸ್ತಾಗಿ ಕುಳಿತಲ್ಲಿಯೇ ನಿದ್ದೆಗೆ ಜಾರಿರುವ ಪ್ರಸಂಗ ನಡೆದಿದೆ. ವಿವಿಧ ಸಂಘಟನೆಗಳು ಇಂದು ಬಂದ್‍ಗೆ ಕರೆಕೊಟ್ಟ ಹಿನ್ನೆಲೆಯಲ್ಲಿ ನಗರದ ಪ್ರತಿಷ್ಠಿತ ಶ್ರೀ ಕೃಷ್ಣ ರಾಜೇಂದ್ರ ಮಾರುಕಟ್ಟೆ(ಸಿಟಿ) ಗಿರಾಕಿಗಳಿಲ್ಲದೆ ಭಣಗುಡುತ್ತಿತ್ತು. ಹೀಗಾಗಿ ಬೀದಿ …

Read More »

ನಾಲ್ಕನೇ ಮದುವೆಗೆ ಅಡ್ಡಿಯಾಗುತ್ತಾನೆ ಎಂದು ಮಗನನ್ನೇ ಕೊಂದ ತಾಯಿ

ಪಾಟ್ನಾ: ಕೆಟ್ಟ ಮಕ್ಕಳು ಇರುತ್ತಾರೆ, ಆದರೆ ಕೆಟ್ಟ ಅಮ್ಮ ಇರುವುದಿಲ್ಲ ಎನ್ನುವುದು ತೀರಾ ಹಿಂದಿನಿಂದಲೂ ಚಾಲ್ತಿಯಲ್ಲಿ ಬಂದಿರುವ ನಾಣ್ಣುಡಿ, ಆದರೆ ಇತ್ತೀಚಿನ ದಿನಗಳಲ್ಲಿ ತನ್ನ ಕರುಳಕುಡಿಯನ್ನೇ ಸಾಯಿಸುವುದು, ಮಾರಾಟ ಮಾಡುವುದು ಇತ್ಯಾದಿ ಸುದ್ದಿಗಳು ವರದಿಯಾಗುತ್ತಲೇ ಇವೆ. ಅಂಥದ್ದೇ ಒಂದು ಭಯಾನಕ ಘಟನೆ ಪಾಟ್ನಾದ ಹಸನ್‍ಪುರ್ ಖಂಡಾ ಪ್ರದೇಶದಲ್ಲಿ ನಡೆದಿದೆ. 23 ವರ್ಷದ ಧರ್ಮಶೀಲಾ ದೇವಿ ಇದಾಗಲೇ ಮೂರು ಮದುವೆಯಾಗಿದ್ದಾಳೆ. ನಾಲ್ಕು ವರ್ಷದಲ್ಲಿ ಮೂರು ಮದುವೆಯಾಗಿ ನಾಲ್ಕನೇ ಮದುವೆಯಾಗಲು ಹೊರಟಿದ್ದಳು. ಆದರೆ ಆಕೆಯ …

Read More »

ಕರ್ನಾಟಕ ಬಂದ್ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಾಗುತ್ತದೆ

ಬೆಂಗಳೂರು: ರೈತರು ಎಪಿಎಂಸಿ, ಭೂಸುಧಾರಣೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಕರೆ ನೀಡಿರುವ ಕರ್ನಾಟಕ ಬಂದ್ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ನೀಡಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,  ರೈತರ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯ ಹೋರಾಟಕ್ಕೆ ಬೆಂಬಲ ನೀಡುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದರಿಂದ ರೈತರ ಹೋರಾಟಕ್ಕೆ ಕೇವಲ ನಮ್ಮ ರಾಜ್ಯದಲ್ಲಿ ಮಾತ್ರ ಬೆಂಬಲ ಸೂಚಿಸಲು ಸಾಧ್ಯವಿಲ್ಲ. ಇಡೀ ರಾಷ್ಟ್ರದಲ್ಲೇ ಬೆಂಬಲ ನೀಡಬೇಕು. …

Read More »

ಸರಳವಾಗಿ ವಿವಾಹವಾದ ಅಂತಾರಾಷ್ಟ್ರೀಯ ಹಾಕಿ ಆಟಗಾರ

ಮಡಿಕೇರಿ: ಅಂತಾರಾಷ್ಟ್ರೀಯ ಹಾಕಿ ಆಟಗಾರ ಕೊಡಗಿನ ಎಸ್.ಕೆ.ಉತ್ತಪ್ಪ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಕೊಡಗಿನ ವಿರಾಜಪೇಟೆ ಬಾಲಾಜಿ ಗ್ರಾಮದ ರೆಸಾರ್ಟ್‍ವೊಂದರಲ್ಲಿ ಸರಳವಾಗಿ ಕೇವಲ ಬೆರಳೆಣಿಕೆಯಷ್ಟು ಕುಟುಂಬ ಸದಸ್ಯ ಒಳಗೊಂಡು ಮದುವೆ ಕಾರ್ಯಕ್ರಮ ನಡೆದಿದೆ. ಎಸ್.ಕೆ.ಉತ್ತಪ್ಪ ಅವರ ನಿಶ್ಚಿತಾರ್ಥ ಕೊಡಗಿನ ಮೂಲದ ಪುಟ್ಟಿಚಂಡ ಸಂಜನಾಳೊಂದಿಗೆ ನಿನ್ನೆ ಮುಗಿದಿದ್ದು, ಇಂದು ಈ ಜೋಡಿ ಹಸೆಮಣೆಯೇರಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮವನ್ನು ಮಾಡಲಾಗಿದೆ. ಇಂದು ರಾತ್ರಿ ದಂಪತಿ ಮುಹೂರ್ತ ನಿಗದಿಯಾಗಿದ್ದು, ಕುಟುಂಬದವರು ಮತ್ತು …

Read More »

ನಾಳೆ ಕರ್ನಾಟಕ ಕಂಪ್ಲೀಟ್ ಬಂದ್ –

ಏನಿರತ್ತೆ..?, ಏನಿರಲ್ಲ..? ಬೆಂಗಳೂರು: ಅನ್ನದಾತರ ಕಿಚ್ಚಿಗೆ ಸೋಮವಾರ ಕರುನಾಡು ಸಂಪೂರ್ಣ ಬಂದ್ ಆಗಲಿದೆ. ರೈತರ ಈ ಹೋರಾಟ ಸರ್ಕಾರದ ವಿರುದ್ಧದಾಗಿದೆ. ರೈತ ವಿರೋಧಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ನಾಳೆ ರೈತರು ಕರ್ನಾಟಕ ಬಂದ್ ಮಾಡಲಿದ್ದಾರೆ. ಬಂದ್ ಗೆ ಯಾರೆಲ್ಲಾ ಬೆಂಬಲ ಕೊಡ್ತಾರೆ? ಐಕ್ಯ ಹೋರಾಟ ಸಮಿತಿ, ರೈತ ಹೋರಾಟ ಸಂಘಟನೆಗಳು, ಕನ್ನಡಪರ ಹೋರಾಟ ಸಂಘಟನೆಗಳು, ನಾರಾಯಣಗೌಡರ ಕರವೇ ಸಂಘಟನೆ, ಪ್ರವೀಣ್ ಶೆಟ್ಟಿ ಕರವೇ ಬಣ, 25ಕ್ಕೂ ಹೆಚ್ಚು ಕಾರ್ಮಿಕ …

Read More »

ಸಿಸಿಬಿ ತನಿಖೆ ಬಳಿಕ ಅನುಶ್ರೀಗೆ ಕಾಡ್ತಿದೆ ಡೋಪಿಂಗ್ ಟೆಸ್ಟ್ ಭಯ

ಮಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ ದಿನದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಈಗಾಗಲೇ ನಟಿ ಕಂ ಆ್ಯಂಕರ್ ಅನುಶ್ರೀ ಅವರನ್ನು ಸಿಸಿಬಿ ವಿಚಾರಣೆ ನಡೆಸಿದೆ. ಈ ಬೆನ್ನಲ್ಲೇ ನಿರೂಪಕಿಗೆ ಮತ್ತೊಂದು ಭಯ ಶುರುವಾಗಿದೆ.ಹೌದು. ಸಿಸಿಬಿ ಬಳಿಕ ಇದೀಗ ಅನುಶ್ರೀಗೆ ಡೋಪಿಂಗ್ ಟೆಸ್ಟ್ ಭಯ ಕಾಡುತ್ತಿದೆ. ಸಿಸಿಬಿ ತನಿಖೆ ಮುಗಿದ ಬಳಿಕ ಅನುಶ್ರೀ ಖುಷಿಯಾಗಿದ್ದರು. ಆದರೆ ಕಮಿಷನರ್ ಹೇಳಿಕೆ ಬಳಿಕ ನಟಿ ಚಿಂತಕ್ರಾಂತರಾಗಿದ್ದಾರೆ ಡ್ರಗ್ಸ್ ಟೆಸ್ಟ್ ಮಾಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಪೊಲೀಸ್ …

Read More »

ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ

ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

Read More »

ಬೆಳಗಾವಿ: ಗರ್ಭಿಣಿ ಸೇರಿ ಇಬ್ಬರ ಬರ್ಬರ ಕೊಲೆ

ಬೆಳಗಾವಿ: ತಾಲ್ಲೂಕಿನ ಮಚ್ಚೆ ಗ್ರಾಮದ ಲಕ್ಷ್ಮಿ ನಗರದ ಹೊರವಲಯದಲ್ಲಿ ಶನಿವಾರ ಸಂಜೆ ಐದು ತಿಂಗಳ ಗರ್ಭಿಣಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಅದೇ ಗ್ರಾಮದವರಾದ ರೋಹಿಣಿ ಗಂಗಪ್ಪ ಹುಲಿಮನಿ (22) ಹಾಗೂ ರಾಜಶ್ರೀ ರವಿ ಬನ್ನೂರ (21) ಕೊಲೆಯಾದವರು. ‘ಅವರು ವಾಯುವಿಹಾರಕ್ಕೆಂದು ಬ್ರಹ್ಮದೇವರ ದೇವಸ್ಥಾನದ ಕಡೆಗೆ ಹೋಗಿದ್ದಾಗ ಘಟನೆ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದಿದ್ದವರು ಮಹಿಳೆಯರ ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ಕತ್ತಿಗೆ ಕೊಯ್ದು ಹಾಗೂ ಬೆನ್ನಿಗೆ ಇರಿದು …

Read More »

ರಾಜ್ಯ ಸರ್ಕಾರದಿಂದ ಅನುದಾನ ರಹಿತ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಕೊರೊನಾದಿಂದ ಸಂಕಷ್ಟದಲ್ಲಿರುವ ಅನುದಾನ ರಹಿತ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅನುದಾನ ರಹಿತ ಶಿಕ್ಷಕರಿಗೆ ಶೀಘ್ರವೇ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ಭರವಸೆ ನೀಡಿದ್ದಾರೆ. ಕರ್ನಾಟಕ ಧನವಿನಿಯೋಗ ವಿಧೇಯಕ 2020 ಮಂಡಿಸಿದ ಬಳಕ ಜೆಡಿಎಸ್ ನ ಬಸವರಾಜ ಹೊರಟ್ಟಿ, ಕೊರೊನಾ ಸಂಕಷ್ಟದಲ್ಲಿ ಸರ್ಕಾರ ಎಲ್ಲಾ ವರ್ಗದ ಜನರಿಗೂ ನೆರವು ಘೋಷಿಸಿದೆ. ಆದರೆ, ಅನುದಾನ ರಹಿತ ಶಿಕ್ಷಕರಿಗೆ ಸಹಾಯಧನ ನೀಡಿಲ್ಲ. ಹೀಗಾಗಿ ಅನುದಾನ …

Read More »