ಬೆಳಗಾವಿ- ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ಓರ್ವ ವೈದ್ಯ ಹಾಗೂ ನರ್ಸ್ ಮೇಲೆ ಹಲ್ಲೆ ಮಾಡಿದ ಘಟನೆ ತಡರಾತ್ರಿ ನಡೆದಿದೆ ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ತಡರಾತ್ರಿ ಮಹಿಳೆಯೊಬ್ಬಳಿಗೆ ಉಸಿರಾಟದ ತೊಂದರೆ ಆಗುತ್ತಿದೆ ಎಂದು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ, ಕೆಲ ಹೊತ್ತಿನಲ್ಲಿಯೇ ಮಹಿಳೆ ಮೃತಪಟ್ಟಿದ್ದಾಳೆ,ಆದ್ರೆ ಅವಳಿಗೆ ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ ಎಂದು ಆರೋಪಿಸಿ,ಮೃತ ಮಹಿಳೆಯ ಸಮಂಧಿಕರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ ಮಹಿಳೆ ಸಾವನ್ನೊಪ್ಪುತ್ತಿದ್ದಂತೆಯೇ ಆಸ್ಪತ್ರೆಯಲ್ಲಿ ಗದ್ದಲ …
Read More »ಭಾರತೀಯ ನೌಕಾದಳದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಅಧಿಕಾರಿಗಳು ಯುದ್ಧನೌಕೆಗಳಲ್ಲಿ
ನವದೆಹಲಿ: ಭಾರತೀಯ ನೌಕಾದಳದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಅಧಿಕಾರಿಗಳು ಯುದ್ಧನೌಕೆಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶ ಪಡೆದಿದ್ದಾರೆ. ಈ ಮೂಲಕ ನೌಕಾದಳದಲ್ಲಿಯೂ ಮಹಿಳೆಯರು ತಮ್ಮದೇ ಛಾಪು ಮೂಡಿಸಲು ಆರಂಭಿಸಿದ್ದಾರೆ. ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಹಾಗೂ ಸಬ್ ಲೆಫ್ಟಿನೆಂಟ್ ರಿತಿ ಸಿಂಗ್ ಅವರು ಹೆಲಿಕಾಪ್ಟರ್ ವಿಭಾಗದಲ್ಲಿ ವೀಕ್ಷಕರು ಅಥವಾ ವಾಯುಗಾಮಿ ತಂತ್ರಜ್ಞರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಇಬ್ಬರು ಛಲಗಾರ್ತಿಯರು ಭಾರತೀಯ ನೌಕಾಪಡೆಯ ಯುದ್ಧ ಹೆಲಿಕಾಪ್ಟರ್‍ಗಳನ್ನು ಆನ್‍ಬೋರ್ಡ್ ಯುದ್ಧನೌಕೆಗಳ ಮೂಲಕ ನಿರ್ವಹಿಸಲಿದ್ದಾರೆ. …
Read More »ಶಾಸಕ ಐಹೊಳೆಗೆ ಕೋವಿಡ್ ದೃಢ.
ಬೆಳಗಾವಿ: ರಾಯಬಾಗ ಬಿಜೆಪಿ ಶಾಸಕ ಡಿ.ಎಂ. ಐಹೊಳೆ ಅವರಿಗೆ ಸೋಮವಾರ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ‘ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಯಾವುದೇ ರೀತಿಯ ರೋಗದ ಲಕ್ಷಣಗಳಿಲ್ಲ. ಆರೋಗ್ಯವಾಗಿದ್ದು, ಬೆಂಗಳೂರಿನ ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗದಂತೆ ಬೆಂಗಳೂರಿನಿಂದಲೇ ನಿಗಾ ವಹಿಸುತ್ತೇನೆ’ ಎಂದು ತಿಳಿಸಿದ್ದಾರೆ.
Read More »ಜೂಜಾಟ: 22 ಮಂದಿ ಬಂಧನ.
ಬೆಳಗಾವಿ: ಇಲ್ಲಿನ ರಾಜಹಂಸ ಗಲ್ಲಿಯ ಸದಾನಂದ ಮಠದ ಪಕ್ಕದ ಗಲ್ಲಿಯಲ್ಲಿ ಭಾನುವಾರ ಮಧ್ಯರಾತ್ರಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ 22 ಮಂದಿಯನ್ನು ಟಿಳಕವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜೂರ ಚೋಪಧಾರ, ಪ್ರದೀಪ ಲಾಟೂಕರ, ಮೋಯಿಜ ಗಚವಾಲೆ, ವಿಜಯ ಪಾಟೀಲ, ಪರಶುರಾಮ ಮೇತ್ರಿ, ಸುಶೀಲ ಮುದೋಳಕರ, ಬಾಬು ಯಾದವ, ಅನಿಲ ಯಳ್ಳೂರಕರ, ಕಿಸನ ಪಾಟೀಲ, ಜಹಾಂಗೀರಖಾನ ಪಠಾಣ, ವಿಜಯ ಶಿಂದೋಳಕರ, ದೀಪಕ ಹೊನ್ಯಾಳಕರ, ಆಕಾಶ ಜಕ್ಕಾನೆ, ವಿನಾಯಕ ಗಣಾಚಾರಿ, ಸಾಗರ ಮುತಗೇಕರ, …
Read More »ಸಿಎಂ ಬಿ ಎಸ್ ಯಡಿಯೂರಪ್ಪ ಓರ್ವ ಸರ್ವಾಧಿಕಾರಿ ; ವಾಟಾಳ್ ನಾಗರಾಜ್ ಗಂಭೀರ ಆರೋಪ
ಬೆಳಗಾವಿ : ರಾಜ್ಯದಲ್ಲಿ ಅನೇಕ ಮುಖ್ಯಮಂತ್ರಿಗಳನ್ನು ನಾನು ನೋಡಿದ್ದೇನೆ. ಆದರೆ, ಬಿ ಎಸ್ ಯಡಿಯೂರಪ್ಪ ಅವರು ಓರ್ವ ಸರ್ವಾಧಿಕಾರಿ ಮುಖ್ಯಮಂತ್ರಿ. ನನ್ನನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್ ಪ್ರವೇಶ ಆಗದಂತೆ ನೋಡಿಕೊಂಡಿದ್ದಾರೆ. ನನ್ನ ವಿರುದ್ಧ ಶ್ರೀಮಂತರನ್ನು ನಿಲ್ಲಿಸಿ ಸೋಲಿಸುತ್ತಾರೆ ಎಂದು ಬೆಳಗಾವಿಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ವಿಶೇಷ ಅಧಿವೇಶನ ನಡೆಸಬೇಕು. ಪ್ರವಾಹ, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿ, …
Read More »‘ಕೇಂದ್ರ ಸರ್ಕಾರದಿಂದ ರೈತ ಪರ ಕಾಯ್ದೆ, ಮಧ್ಯವರ್ತಿಗಳ ಪರ ಇರುವವರಿಂದ ವಿರೋಧ’
ಮಂಗಳೂರು: ರೈತರಿಗೆ ಮೋಸ ಮಾಡುತ್ತಿದ್ದ ಮಧ್ಯವರ್ತಿಗಳು, ಖರೀದಿದಾರರ ಪರವಾಗಿರುವ ಪ್ರತಿಪಕ್ಷಗಳು ಈ ರೈತಪರ ಕಾಯ್ದೆಯನ್ನು ವಿರೋಧಿಸುತ್ತವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಸ್ವತಂತ್ರ ಭಾರತದಲ್ಲಿ ಮೊದಲಬಾರಿಗೆ ರೈತರು ತಮ್ಮ ಉತ್ಪನ್ನಗಳನ್ನು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ದೇಶದ ಯಾವುದೇ ಭಾಗದಲ್ಲಿ ಉತ್ತಮ ಬೆಲೆಗೆ ಮಾರಬಹುದಾಗಿದೆ. ಕನಿಷ್ಠ ಬೆಂಬಲ ಬೆಲೆ ಮುಂದುವರಿಯಲಿದ್ದು ರೈತರು ಆಹಾರ ತಯಾರಿಕಾ …
Read More »ವಿಜಯಪುರ: ನೇಣು ಬಿಗಿದುಕೊಂಡು ಮಹಿಳಾ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ
ವಿಜಯಪುರ : ಎಂಕಾಂ ಅಂತಿಮ ವರ್ಷದ ಕೊನೆಯ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆವರಣದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಭಾನುವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಮೂಲತಃ ಕಲಬುರಗಿ ನಗರದ ಐಶ್ವರ್ಯ ಶಂಕರ ನಾಟಿಕಾರ (24) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ. ತಂಗಿ ಆತ್ಮಹತ್ಯೆಗೆ ಕಾರಣವೆಂದು ಭಾವನನ್ನೇ ಹತ್ಯೆಗೈದ ಯೋಧ ವಿದ್ಯಾರ್ಥಿನಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯಿಂದ ಸಾವಿನ ನಿಖರ …
Read More »ವಿಧಾನಸೌಧದಲ್ಲಿ ಆಡಳಿತ ಪಕ್ಷದ ಶಾಸಕ-ಸಚಿವರ ನಡುವೆ ಫೈಟ್!
ಬೆಂಗಳೂರು : ಇಂದಿನಿಂದ ವಿಧಾನಸಭೆ ಅಧಿವೇಶನ ಆರಂಭವಾಗಿದ್ದು, ಆಡಳಿತ ಪಕ್ಷದ ಶಾಸಕ ಮತ್ತು ಸಚಿವರ ನಡುವೆ ಅನುದಾನದ ವಿಚಾರವಾಗಿ ಗಲಾಟೆ ಮಾಡಿಕೊಂಡಿರುವ ಘಟನೆ ವಿಧಾನಸಭೆ ಸೆಂಟ್ರಲ್ ಹಾಲ್ ಲಾಂಜ್ ನಲ್ಲಿ ನಡೆದಿದೆ. ಕಡೂರು ಕ್ಷೇತ್ರದ ಶಾಸಕ ಬೆಳ್ಳಿ ಪ್ರಕಾಶ್ ಅವರು ಸಚಿವ ನಾರಾಯಣಗೌಡಅವರನ್ನು ಅನುದಾನದ ವಿಚಾರವಾಗಿ ಏಕವಚನದಲ್ಲೇ ನಿಂದಿಸಿದ್ದಾರೆ. ಬಳಿಕ ಮಾತಿನ ಚಕಮಕಿ ತಾರಕಕ್ಕೇರಿ ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. ತೋಟಗಾರಿಕೆ ಇಲಾಖೆಯಿಂದ ನೀಡಬೇಕಿದ್ದ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ …
Read More »ಜೆಡಿಎಸ್‌ಗೆ ತಲೆನೋವಾದ ಶಿರಾ ಕ್ಷೇತ್ರ
ಶಿರಾ : ಶಾಸಕ ಸತ್ಯನಾರಾಯಣ ನಿಧನದಿಂದ ತೆರವಾದ ಶಿರಾ ಕ್ಷೇತ್ರಕ್ಕೆ ಜೆಡಿಎಸ್ ಪಕ್ಷದಿಂದ ಯಾರಿಗೆ ಟಿಕೇಟ್ ನೀಡಬೇಕು ಎಂಬುದು ಪಕ್ಷದ ವರಿಷ್ಠರಿಗೆ ತಲೆನೋವಾಗಿದೆ. ಶಾಸಕ ಸತ್ಯನಾರಾಯಣ ಮೃತಟ್ಟ ನಂತರ ಮಾಜಿ ಪ್ರಧಾನಿ ದೇವೇಗೌಡ ಅವರು ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಗೊಂದಲ ಮೂಡಿದೆ. ಸತ್ಯನಾರಾಯಣ ಪತ್ನಿ ಅಥವಾ ಮಗನಿಗೆ ಟಿಕೆಟ್ ಕೊಟ್ಟರೆ ಅನುಕಂಪದಿಂದ ಗೆಲ್ಲಬಹುದು ಎಂಬ ಲೆಕ್ಕಾಚಾರದಲ್ಲಿದ್ದರು. ದಿನ ಕಳೆದಂತೆ ಅನುಕಂಪದ ಅಲೆ ಕಡಿಮೆಯಾಗುತ್ತಿದ್ದು, …
Read More »ಪ್ರಧಾನಿ ಮೋದಿ ಭಾವಚಿತ್ರ ಹಚ್ಚೆ ಹಾಕಿಸಿಕೊಂಡ ಮಹಿಳೆ
ಪಿರಿಯಾಪಟ್ಟಣ : ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಅಂಗವಾಗಿ ಪಟ್ಟಣದ ಮಹಿಳಾ ಅಭಿಮಾನಿಯೊಬ್ಬರು ಅವರ ಎಡಗೈ ಮೇಲೆ ಮೋದಿ ಅವರ ಭಾವಚಿತ್ರದ ಹಚ್ಚೆ ಹಾಕಿಸಿ ಅಭಿಮಾನ ತೋರಿದ್ದಾರೆ. ಹಲವು ಸಾಮಾಜಿಕ ಚಟುವಟಿಕೆ ಮೂಲಕ ಗುರುತಿಸಿಕೊಂಡಿರುವ ಪಟ್ಟಣದ ನಿವಾಸಿ ಶುಭಾಗೌಡ ಹಚ್ಚೆ ಹಾಕಿಸಿಕೊಂಡವರು. ನರೇಂದ್ರ ಮೋದಿ ಅವರು ದೇಶದ ಪ್ರಧಾನ ಮಂತ್ರಿಯಾದಾಗಿನಿಂದ ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದು ಭಾರತವನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ …
Read More »