Breaking News

Uncategorized

ಸರಳವಾಗಿ ವಿವಾಹವಾದ ಅಂತಾರಾಷ್ಟ್ರೀಯ ಹಾಕಿ ಆಟಗಾರ

ಮಡಿಕೇರಿ: ಅಂತಾರಾಷ್ಟ್ರೀಯ ಹಾಕಿ ಆಟಗಾರ ಕೊಡಗಿನ ಎಸ್.ಕೆ.ಉತ್ತಪ್ಪ ಅವರು ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.ಕೊಡಗಿನ ವಿರಾಜಪೇಟೆ ಬಾಲಾಜಿ ಗ್ರಾಮದ ರೆಸಾರ್ಟ್‍ವೊಂದರಲ್ಲಿ ಸರಳವಾಗಿ ಕೇವಲ ಬೆರಳೆಣಿಕೆಯಷ್ಟು ಕುಟುಂಬ ಸದಸ್ಯ ಒಳಗೊಂಡು ಮದುವೆ ಕಾರ್ಯಕ್ರಮ ನಡೆದಿದೆ. ಎಸ್.ಕೆ.ಉತ್ತಪ್ಪ ಅವರ ನಿಶ್ಚಿತಾರ್ಥ ಕೊಡಗಿನ ಮೂಲದ ಪುಟ್ಟಿಚಂಡ ಸಂಜನಾಳೊಂದಿಗೆ ನಿನ್ನೆ ಮುಗಿದಿದ್ದು, ಇಂದು ಈ ಜೋಡಿ ಹಸೆಮಣೆಯೇರಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ವಿವಾಹ ಕಾರ್ಯಕ್ರಮವನ್ನು ಮಾಡಲಾಗಿದೆ. ಇಂದು ರಾತ್ರಿ ದಂಪತಿ ಮುಹೂರ್ತ ನಿಗದಿಯಾಗಿದ್ದು, ಕುಟುಂಬದವರು ಮತ್ತು …

Read More »

ನಾಳೆ ಕರ್ನಾಟಕ ಕಂಪ್ಲೀಟ್ ಬಂದ್ –

ಏನಿರತ್ತೆ..?, ಏನಿರಲ್ಲ..? ಬೆಂಗಳೂರು: ಅನ್ನದಾತರ ಕಿಚ್ಚಿಗೆ ಸೋಮವಾರ ಕರುನಾಡು ಸಂಪೂರ್ಣ ಬಂದ್ ಆಗಲಿದೆ. ರೈತರ ಈ ಹೋರಾಟ ಸರ್ಕಾರದ ವಿರುದ್ಧದಾಗಿದೆ. ರೈತ ವಿರೋಧಿ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ನಾಳೆ ರೈತರು ಕರ್ನಾಟಕ ಬಂದ್ ಮಾಡಲಿದ್ದಾರೆ. ಬಂದ್ ಗೆ ಯಾರೆಲ್ಲಾ ಬೆಂಬಲ ಕೊಡ್ತಾರೆ? ಐಕ್ಯ ಹೋರಾಟ ಸಮಿತಿ, ರೈತ ಹೋರಾಟ ಸಂಘಟನೆಗಳು, ಕನ್ನಡಪರ ಹೋರಾಟ ಸಂಘಟನೆಗಳು, ನಾರಾಯಣಗೌಡರ ಕರವೇ ಸಂಘಟನೆ, ಪ್ರವೀಣ್ ಶೆಟ್ಟಿ ಕರವೇ ಬಣ, 25ಕ್ಕೂ ಹೆಚ್ಚು ಕಾರ್ಮಿಕ …

Read More »

ಸಿಸಿಬಿ ತನಿಖೆ ಬಳಿಕ ಅನುಶ್ರೀಗೆ ಕಾಡ್ತಿದೆ ಡೋಪಿಂಗ್ ಟೆಸ್ಟ್ ಭಯ

ಮಂಗಳೂರು: ಸ್ಯಾಂಡಲ್‍ವುಡ್ ಡ್ರಗ್ಸ್ ಪ್ರಕರಣ ದಿನದಿನೇ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಈಗಾಗಲೇ ನಟಿ ಕಂ ಆ್ಯಂಕರ್ ಅನುಶ್ರೀ ಅವರನ್ನು ಸಿಸಿಬಿ ವಿಚಾರಣೆ ನಡೆಸಿದೆ. ಈ ಬೆನ್ನಲ್ಲೇ ನಿರೂಪಕಿಗೆ ಮತ್ತೊಂದು ಭಯ ಶುರುವಾಗಿದೆ.ಹೌದು. ಸಿಸಿಬಿ ಬಳಿಕ ಇದೀಗ ಅನುಶ್ರೀಗೆ ಡೋಪಿಂಗ್ ಟೆಸ್ಟ್ ಭಯ ಕಾಡುತ್ತಿದೆ. ಸಿಸಿಬಿ ತನಿಖೆ ಮುಗಿದ ಬಳಿಕ ಅನುಶ್ರೀ ಖುಷಿಯಾಗಿದ್ದರು. ಆದರೆ ಕಮಿಷನರ್ ಹೇಳಿಕೆ ಬಳಿಕ ನಟಿ ಚಿಂತಕ್ರಾಂತರಾಗಿದ್ದಾರೆ ಡ್ರಗ್ಸ್ ಟೆಸ್ಟ್ ಮಾಡಿಸಲು ಸಿದ್ಧತೆ ನಡೆಸಲಾಗಿದೆ ಎಂದು ಪೊಲೀಸ್ …

Read More »

ಬೆಳಗಾವಿ: ಆರ್‌ಸಿಯು ಪರೀಕ್ಷೆ ಮುಂದಕ್ಕೆ

ಬೆಳಗಾವಿ: ‘ರೈತ ಸಂಘಟನೆಗಳಿಂದ ಸೆ. 28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವುದರಿಂದ ಅಂದು ನಿಗದಿಯಾಗಿದ್ದ ಎಲ್ಲ ವಿಷಯಗಳ ಪರೀಕ್ಷೆಯನ್ನು ಸೆ. 29ಕ್ಕೆ ಮುಂದೂಡಲಾಗಿದೆ’ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ‘ಪ್ರಜಾವಾಣಿ’ಗೆ ತಿಳಿಸಿದರು.

Read More »

ಬೆಳಗಾವಿ: ಗರ್ಭಿಣಿ ಸೇರಿ ಇಬ್ಬರ ಬರ್ಬರ ಕೊಲೆ

ಬೆಳಗಾವಿ: ತಾಲ್ಲೂಕಿನ ಮಚ್ಚೆ ಗ್ರಾಮದ ಲಕ್ಷ್ಮಿ ನಗರದ ಹೊರವಲಯದಲ್ಲಿ ಶನಿವಾರ ಸಂಜೆ ಐದು ತಿಂಗಳ ಗರ್ಭಿಣಿ ಹಾಗೂ ಮತ್ತೊಬ್ಬ ಮಹಿಳೆಯನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಅದೇ ಗ್ರಾಮದವರಾದ ರೋಹಿಣಿ ಗಂಗಪ್ಪ ಹುಲಿಮನಿ (22) ಹಾಗೂ ರಾಜಶ್ರೀ ರವಿ ಬನ್ನೂರ (21) ಕೊಲೆಯಾದವರು. ‘ಅವರು ವಾಯುವಿಹಾರಕ್ಕೆಂದು ಬ್ರಹ್ಮದೇವರ ದೇವಸ್ಥಾನದ ಕಡೆಗೆ ಹೋಗಿದ್ದಾಗ ಘಟನೆ ನಡೆದಿದೆ. ದ್ವಿಚಕ್ರವಾಹನದಲ್ಲಿ ಬಂದಿದ್ದವರು ಮಹಿಳೆಯರ ಕಣ್ಣಿಗೆ ಖಾರದ ಪುಡಿ ಎರಚಿ, ನಂತರ ಕತ್ತಿಗೆ ಕೊಯ್ದು ಹಾಗೂ ಬೆನ್ನಿಗೆ ಇರಿದು …

Read More »

ರಾಜ್ಯ ಸರ್ಕಾರದಿಂದ ಅನುದಾನ ರಹಿತ ಶಿಕ್ಷಕರಿಗೆ ಭರ್ಜರಿ ಸಿಹಿಸುದ್ದಿ

ಬೆಂಗಳೂರು : ಕೊರೊನಾದಿಂದ ಸಂಕಷ್ಟದಲ್ಲಿರುವ ಅನುದಾನ ರಹಿತ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅನುದಾನ ರಹಿತ ಶಿಕ್ಷಕರಿಗೆ ಶೀಘ್ರವೇ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಮಾಧುಸ್ವಾಮಿ ಭರವಸೆ ನೀಡಿದ್ದಾರೆ. ಕರ್ನಾಟಕ ಧನವಿನಿಯೋಗ ವಿಧೇಯಕ 2020 ಮಂಡಿಸಿದ ಬಳಕ ಜೆಡಿಎಸ್ ನ ಬಸವರಾಜ ಹೊರಟ್ಟಿ, ಕೊರೊನಾ ಸಂಕಷ್ಟದಲ್ಲಿ ಸರ್ಕಾರ ಎಲ್ಲಾ ವರ್ಗದ ಜನರಿಗೂ ನೆರವು ಘೋಷಿಸಿದೆ. ಆದರೆ, ಅನುದಾನ ರಹಿತ ಶಿಕ್ಷಕರಿಗೆ ಸಹಾಯಧನ ನೀಡಿಲ್ಲ. ಹೀಗಾಗಿ ಅನುದಾನ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (27-09-2020-ಭಾನುವಾರ)

ನಿತ್ಯ ನೀತಿ: ಹಿಂ ಸೆ ಮತ್ತು ದ್ವೇಷದಿಂದ ಏನನ್ನೂ ಸಾಧಿಸಲಾಗುವುದಿಲ್ಲ. ಅಹಿಂಸೆ ಮತ್ತು ಪ್ರೀತಿಯಿಂದಲೋಕವನ್ನೇ ಜಯಿಸಬಹುದು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ :ಭಾನುವಾರ, 27.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.12 ಚಂದ್ರ ಉದಯ ಬೆ.03.37 / ಚಂದ್ರ ಅಸ್ತ ರಾ.03.11 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಧಿಕ ಆಶ್ವಯುಜ ಮಾಸ / ಶುಕ್ಲ ಪಕ್ಷ / ತಿಥಿ: ಏಕಾದಶಿ(ರಾ.07.47) ನಕ್ಷತ್ರ: …

Read More »

ಇನ್ನೂ 20 ವರ್ಷ ಕಾಂಗ್ರೆಸ್‍ನ್ನು ವಿಪಕ್ಷ ಸ್ಥಾನದಲ್ಲೇ ಕೂರಿಸುತ್ತೇನೆ : ಬಿಎಸ್ವೈ ಚಾಲೆಂಜ್

ಬೆಂಗಳೂರು,  ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 145ರಿಂದ 150 ಸ್ಥಾನ ಗೆದ್ದು ಇನ್ನೂ 20 ವರ್ಷ ಕಾಂಗ್ರೆಸ್ ವಿರೋಧ ಪಕ್ಷದಲ್ಲೇ ಕೂರುವಂತೆ ಮಾಡುವುದು ನನ್ನ ಗುರಿ. ಅದನ್ನು ಮಾಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸವಾಲು ಹಾಕಿದರು. ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಅವರು, ಬಿಡಿಎ ವಸತಿ ಯೋಜನೆಯಲ್ಲಿ ನೀವು ಮಾಡಿರುವ ಆರೋಪ ಕುರಿತು ನೀವು ಸಿಬಿಐಗಾದರೂ ಹೋಗಿ, ಹೈಕೋರ್ಟ್‍ಗಾದರೂ ಹೋಗಿ, ಲೋಕಾಯುಕ್ತಕ್ಕಾದರೂ ಹೋಗಿ, …

Read More »

ಸಂಖ್ಯಾಬಲದ ಕೊರತೆಯಿಂದ ಬಿದ್ದುಹೋಯ್ತು ಕಾಂಗ್ರೆಸ್ ಮಂಡಿಸಿದ್ದ ಅವಿಶ್ವಾಸ ನಿರ್ಣಯ

ಬೆಂಗಳೂರು,   ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟ ಮೇಲೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ವಿಧಾನಸಭೆಯಲ್ಲಿ ಮಂಡಿಸಿದ್ದ ಅವಿಶ್ವಾಸ ನಿರ್ಣಯ ಸಂಖ್ಯಾಬಲದ ಕೊರತೆಯಿಂದ ಬಿದ್ದು ಹೋಗಿದೆ. ಅವಿಶ್ವಾಸ ನಿರ್ಣಯದ ಬಗ್ಗೆ ಎರಡನೇ ಪ್ರತಿಪಕ್ಷ ಜೆಡಿಎಸ್‍ ತಟಸ್ಥ ನಿಲುವು ಅನುಸರಿಸಿತ್ತು. ಅವಿಶ್ವಾಸವನ್ನು ವಿಭಜನೆಯ ಮತಕ್ಕೆ ಹಾಕುವುದಾದರೆ ಕೊರೊನಾ ಸೋಂಕಿಗೆ ಸಿಲುಕಿ ಚಿಕಿತ್ಸೆ ಪಡೆಯುತ್ತಿರುವ ಶಾಸಕರನ್ನು ಪಿಪಿಇ ಕಿಟ್‍ ಹಾಕಿಸಿ ವಿಧಾನಸಭೆಗೆ ಕರೆ ತರುವುದಾಗಿ ಬಿಜೆಪಿ ಹೇಳಿತ್ತು. ಈ ಕುರಿತಂತೆ ಬೆಳಗ್ಗೆ ನಡೆದ ಚರ್ಚೆಯಲ್ಲಿ …

Read More »

ಸಾಲಬಾಧೆ: ಅಂಜುಟಗಿಯಲ್ಲಿ ಯುವಕ ಆತ್ಮಹತ್ಯೆ

ವಿಜಯಪುರ: ಸಾಲಬಾಧೆ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ನಡೆದಿದೆ. ಪುಂಡಲೀಕ ಹಂಜಗಿ(23) ನೇಣುಬಿಗಿದುಕೊಂಡ ಯುವಕ. ಅನಾರೋಗ್ಯ ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಪುಂಡಲೀಕ ಸಾಲಮಾಡಿದ್ದ. ಸಾಲ ಮರುಪಾವತಿಸಲು ಸಾಧ್ಯವಾಗದ ಕಾರಣ ಮನನೊಂದು ನೇಣಿಗೆ ಶರಣಾಗಿದ್ದಾನೆ. ಈತ ಯುವ ರೈತನೂ ಆಗಿದ್ದ. ಆದರೆ ತಪ್ಪು ನಿರ್ಧಾರದಿಂದ ತಮ್ಮವರನ್ನು ಬಿಟ್ಟು ಹೊರಟಿದ್ದಾನೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »