Breaking News

Uncategorized

ನಕಲಿ ವೈದ್ಯರಿಗೆ ಕಡಿವಾಣ ಹಾಕಿ’

ರಾಮದುರ್ಗ: ‘ಪಟ್ಟಣವೂ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಿದೆ. ಇದರಿಂದ ಜನರಿಗೆ ಸ್ವಲ್ಪ ಪ್ರಮಾಣದ ಸಹಾಯವಾಗಿದ್ದರೂ ಪ್ರಾಣದ ಜೊತೆಗೆ ಆಟವಾಡುವ ನಕಲಿ ವೈದ್ಯರಿಗೆ ಕಡಿವಾಣ ಹಾಕಲಾಗುವುದು’ ಎಂದು ವಿಧಾನಸಭೆಯ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.   ರಾಮದುರ್ಗದ ಸರ್ಕಾರಿ ಆಸ್ಪತ್ರೆಯಲ್ಲಿ ₹55 ಲಕ್ಷದ ವೆಚ್ಚದಲ್ಲಿ ನಿರ್ಮಿಸಿದ ಹೈಟೆಕ್‌ ಪ್ರಯೋಗಾಲಯ ಉದ್ಘಾಟಿಸಿ ಮಾತನಾಡಿ, ‘ತರಬೇತಿ ಇಲ್ಲದೆ ನಕಲಿ ವೈದ್ಯರು ನೀಡುವ ಚಿಕಿತ್ಸೆ ಮತ್ತು ಔಷಧದಿಂದ ರೋಗಿಗಳಿಗೆ ತಾತ್ಕಾಲಿಕವಾಗಿ …

Read More »

ಅಳ್ನಾವರ: ಧಾರಾಕಾರ ಮಳೆ

ಅಳ್ನಾವರ: ಬುಧವಾರ ಸಂಜೆ ಏಕಾಎಕಿ ಸುರಿದ ಮಳೆಯಿಂದ ರಕ್ಷಿಸಿಕೊಳ್ಳಲು ಹೊರ ವಲಯದ ಹೊಲ ಗದ್ದೆಗಳಲ್ಲಿ ಹಾಗೂ ರಾಶಿ ಹಾಕಿದ್ದ ಫಸಲನ್ನು ರಕ್ಷಿಲು ರೈತರು ಪರದಾಡಿದರು. ಸುಮಾರು ಒಂದು ತಾಸು ಧಾರಾಕಾರ ಮಳೆ ಸುರಿಯಿತು. ಪಟ್ಟಣದ ತೆಗ್ಗು ಪ್ರದೇಶದ ಬಡಾವಣೆಗಳು ಜಲಾವೃತಗೊಂಡಿದ್ದವು. ಇಂದಿರಾ ನಗರ ಹಾಗೂ ನೆಹರೂ ನಗರ ಬಡಾವಣೆ ಹಾಗೂ ಮಿಲ್ಲತ್ ಶಾಲೆಯ ಹತ್ತಿರದ ರಸ್ತೆಗಳಲ್ಲಿ ನೀರು ನಿಂತಿತ್ತು. ಚರಂಡಿಗಳು ತುಂಬಿ ಹರಿದವು. ‌ಎಪಿಎಂಸಿ ಆವರಣದಲ್ಲಿ ಗೋವಿನ ಜೋಳ ಒಣಗಿಸಲು …

Read More »

ನಾಮಪತ್ರ ಹಿಂಪಡೆದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ

ಶಿಗ್ಗಾಂವಿ: ಶಿಗ್ಗಾಂವಿ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಅಜ್ಜಂಪೀರ್ ಖಾದ್ರಿ ಇಂದು ನಾಮಪತ್ರ ಹಿಂಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಅಜ್ಜಂಪೀರ್ ಖಾದ್ರಿ ಮನವೊಲಿಕೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಚಿವ ಜಮೀರ್ ಅಹ್ಮದ್, ಶಿವಾನಂದ ಪಾಟೀಲ್ ಜೊತೆ ಶಿಗ್ಗಾಂವಿ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ಅಜ್ಜಂಪೀರ್ ಖಾದ್ರಿ ತಮ್ಮ ನಾಮಪತ್ರ ಹಿಂಪಡೆದಿದ್ದಾರೆ. ನ.13ರಂದು ನಡೆಯಲಿರುವ ಉಪಚುನವಣೆ ಹಿನ್ನೆಲೆಯಲ್ಲಿ ನಾಮಪತ್ರ ವಾಪಾಸ್ ಪಡೆಯಲು …

Read More »

ಗಮನಸೆಳೆದ ಜಾನಪದ ಕಲಾಮೇಳ ಮೆರವಣಿಗೆ

ಬೈಲಹೊಂಗಲ: ವೀರರಾಣಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಕರ್ನಾಟಕ ಸರ್ಕಾರ, ಜಿಲ್ಲಾಡಳಿತ ಬೆಳಗಾವಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಪಟ್ಟಣದಲ್ಲಿ ಆಯೋಜಿಸಿದ್ದ ಬೈಲಹೊಂಗಲ ಉತ್ಸವದ ಜಾನಪದ ಕಲಾಮೇಳ, ರೂಪಕಗಳ ಮೆರವಣಿಗೆ ಗಮನ ಸೆಳೆಯಿತು.   ಕಿತ್ತೂರು ಚನ್ನಮ್ಮನ ವೃತ್ತದಿಂದ ಆರಂಭವಾದ ಕಲಾಮೇಳ ಮೆರವಣಿಗೆ ಎಪಿಎಂಸಿ ಗಣೇಶ ದೇವಸ್ಥಾನ, ಇಂಚಲ ಕ್ರಾಸ್‌, ಬಸ್‌ ನಿಲ್ದಾಣ, ರಾಯಣ್ಣ ವೃತ್ತ ಮಾರ್ಗ ವಾಗಿ ಚನ್ನಮ್ಮನ ಸಮಾಧಿ  ಸ್ಥಳಕ್ಕೆ …

Read More »

ಚನ್ನಮ್ಮನ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಲಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೈಲಹೊಂಗಲ (ದೊಡ್ಡಬಾವೆಪ್ಪ ವೇದಿಕೆ): ‘ಪ್ರತಿ ವರ್ಷ ಬೈಲಹೊಂಗಲದಲ್ಲಿ ಉತ್ಸವ ನಡೆಯಬೇಕು. ಚನ್ನಮ್ಮನ ಸಮಾಧಿ ಸ್ಥಳ ರಾಷ್ಟ್ರೀಯ ಸ್ಮಾರಕ ಮಾಡಲು ಸರ್ಕಾರಗಳು ಶ್ರಮಿಸಬೇಕು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.   ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ಸಮಾಧಿ ಸ್ಥಳದಲ್ಲಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಸೋಮವಾರ ನಡೆದ ಬೈಲಹೊಂಗಲ ಉತ್ಸವ-2024ರ ಸಮಾರಂಭದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಸಮಾರಂಭ ಉದ್ಘಾಟಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, …

Read More »

ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ: ಕೇಸ್ ದಾಖಲಿಸಲು ‘ಸಚಿವ ಈಶ್ವರ್ ಖಂಡ್ರೆ’ ಸೂಚನೆ

ಬೆಂಗಳೂರು: ನಗರದ ಪೀಣ್ಯ ಬಳಿಯ ಹೆಚ್ ಎಂ ಟಿಯ ಅರಣ್ಯ ಭೂಮಿಯಲ್ಲಿ ಸ್ಯಾಂಡಲ್ ವುಡ್ ನ TAXIC ಚಿತ್ರದ ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ ಮಾಡಲಾಗಿದೆ. ಹೀಗೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.   ಇಂದು ಈ ಸಂಬಂಧ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು,ಬೆಂಗಳೂರು ಪೀಣ್ಯ ಪ್ಲಾಂಟೇಷನ್ 1 ಮತ್ತು 2ರಲ್ಲಿ ಒಟ್ಟು 599 ಎಕರೆ …

Read More »

ದ್ರಾಕ್ಷಿ ಮತ್ತೆ ಹುಳಿಯಾಗುವ ಆತಂಕ- ನಷ್ಟ ಅನುಭವಿಸುವ ಭೀತಿ

ತೆಲಸಂಗ: ಬೆಳಗಾವಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ದ್ರಾಕ್ಷಿಗೆ ಈಗ ದಾವನಿ ಹಾಗೂ ಕೊಳೆರೋಗ ಆವರಿಸಿದೆ. ತೆಲಸಂಗ, ಬನ್ನೂರ, ಕನ್ನಾಳ ಸೇರಿದಂತೆ ಅಥಣಿ ತಾಲೂಕಿನ ದ್ರಾಕ್ಷಿ ಬೆಳೆಗಾರರು ಪ್ರಸಕ್ತ ವರ್ಷವೂ ನಷ್ಟ ಅನುಭವಿಸುವ ಭೀತಿಯಲ್ಲಿದ್ದಾರೆ.   ರಾಜ್ಯದಲ್ಲಿಯೇ ದ್ರಾಕ್ಷಿ ಬೆಳೆಯುವಲ್ಲಿ 2ನೇ ಸ್ಥಾನದಲ್ಲಿರುವ ಅಥಣಿ ತಾಲೂಕಿನ ದ್ರಾಕ್ಷಿ ಬೆಳೆಗಾರರು, ದ್ರಾಕ್ಷಿ ಚಾಟ್ನಿ ಮಾಡುವ ಈ ಹಂತದಲ್ಲಿ ಹವಾಮಾನ ವೈಪರೀತ್ಯದಿಂದ ಮೊದಲು ತುತ್ತಿನಲ್ಲೇ ಕಲ್ಲು ಬಂದು ಆತಂಕ ಪಡುವಂತಾಗಿದೆ. ಅಥಣಿ ತಾಲೂಕಿನ …

Read More »

ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಿಂದ ಹನಿಟ್ರ್ಯಾಪ್: ಲೇಡಿ ಮೊಬೈಲ್‌ನಲ್ಲಿ ಸಿಕ್ತು 8 ಮಂದಿ ಖಾಸಗಿ ವಿಡಿಯೋ!

ßಬೆಂಗಳೂರು: ಕಾಂಗ್ರೆಸ್‌ ನ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್​ ಅವರಿಗೆ ವಾಟ್ಸಪ್​ ಮೂಲಕ ವಿಡಿಯೊ ಕರೆಗಳನ್ನು ಮಾಡಿ ಅವುಗಳನ್ನು ರೆಕಾರ್ಡ್‌ ಮಾಡಿಕೊಂಡು ಹಣಕ್ಕೆ ಬ್ಲ್ಯಾಕ್​ ಮೇಲ್ ಮಾಡುತ್ತಿದ್ದ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.   ಈ ಆಡಿಯೋ-ವಿಡಿಯೋ ಬಹಿರಂಗಗೊಳಿಸದಿರಲು 20 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್‌ ಪಾಟೀಲರನ್ನು ಬಂಧಿಸಲಾಗಿದೆ. ಮಂಜುಳಾ ಪಾಟೀಲ್ …

Read More »

ಮೊದಲ ದೀಪಾವಳಿ ಸಡಗರ – ಅಯೋಧ್ಯೆಯಲ್ಲಿ ದೀಪಗಳ ದಾಖಲೆ.!

ಅಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ಇದೇ ಮೊದಲ ಬಾರಿಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗಿದ್ದು, ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿಯೂ ಈ ಬಾರಿ ದೀಪಾವಳಿ ಸಂಭ್ರಮ ಕಳೆಗಟ್ಟಲಿದೆ. ಹಬ್ಬದ ಪ್ರಯುಕ್ತ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆಯ ಸರಯೂ ನದಿಯ ತಟದಲ್ಲಿ ಬರೋಬ್ಬರಿ 28 ಲಕ್ಷ ಪರಿಸರ ಸ್ನೇಹಿ ಹಣತೆಗಳಲ್ಲಿ ದೀಪ ಹಚ್ಚುವ ಮೂಲಕ ಹೊಸ ದಾಖಲೆ ಬರೆಯುವ ಗುರಿಯನ್ನು ಹೊಂದಿದೆ.   ವಿಶೇಷ ಎಂದರೆ, ರಾಮಮಂದಿರದಲ್ಲಿ …

Read More »

ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೀಪಾವಳಿಯ ವೇಳೆ ರಾಜ್ಯದಲ್ಲಿ ಪರಿಸರ ಸ್ನೇಹಿ ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ರಾಜ್ಯದಲ್ಲಿ ಪಟಾಕಿಗಳಿಂದ ಯಾವುದೇ ಹಾನಿ, ಗಾಯ ಅಥವಾ ಸಾವು ಸಂಭವಿಸಬಾರದು ಎಂದು ಅವರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗಿನ ಸಭೆಯಲ್ಲಿ ಒತ್ತಿ ಹೇಳಿದ್ದಾರೆ.   “ದೀಪಾವಳಿ ಸಮೀಪಿಸುತ್ತಿದ್ದು, ಯಾವ ರೀತಿಯ ಪಟಾಕಿಗಳನ್ನು ಸಿಡಿಸಬೇಕು ಎಂಬುದಕ್ಕೆ ಸುಪ್ರೀಂ ಕೋರ್ಟ್ ಮಾರ್ಗಸೂಚಿ ನೀಡಿದೆ. ಹಸುರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು …

Read More »