ಗೋಕಾಕ ತಾಲೂಕಿನ ಸಮೀಪದ ಬೆನಚಿಮರಡಿ ಗ್ರಾಮದ ಹೊಲದಲ್ಲಿ ಗಾಂಜಾ ಗಿಡ ಬೆಳೆದಿದ್ದ ವ್ಯಕ್ತಿಯನ್ನು ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆನಚಿಮರಡಿ ಗ್ರಾಮದ ಅವಣ್ಣಾ ಸಿದ್ದಪ್ಪ ತಪಸಿ ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 13 ಕೆಜಿ ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೊಲದಲ್ಲಿ ಗಾಂಜಾ ಬೆಳೆದಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳಗಾವಿ ಎಸ್ ಪಿ, ಕೆ.ರಾಮರಾಜನ್ ಇವರ ಆದೇಶದಂತೆ ಡಿಎಸಪಿ ರವಿ ನಾಯಕ ಇವರ ಮಾರ್ಗದರ್ಶನದಲ್ಲಿ ಸಿಪಿಆಯ್ ಶ್ರೀಶೈಲ ಬ್ಯಾಕೂಡ ಇವರು …
Read More »ದಂಡು ಮಂಡಳಿ 756 ಎಕರೆ ಪಾಲಿಕೆಗೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ
ಬೆಳಗಾವಿ:ಬೆಳಗಾವಿ ದಂಡು ಮಂಡಳಿ ವ್ಯಾಪ್ತಿಯ ನಾಗರಿಕ ಪ್ರದೇಶಗಳನ್ನು ಮಹಾನಗರ ಪಾಲಿಕೆಗೆ ಹಸ್ತಾಂತರಿಸುವ ಪ್ರಕ್ರಿಯೆ ಚುರುಕುಗೊಂಡಿದ್ದು, ವಸತಿ ಪ್ರದೇಶ, ಮಾರುಕಟ್ಟೆ, ರಸ್ತೆಗಳು, ಬಂಗಲೆಗಳು ಸೇರಿದಂತೆ ಒಟ್ಟು 756 ಎಕರೆ ಪ್ರದೇಶವನ್ನು ಪಾಲಿಕೆಗೆ ಹಸ್ತಾಂತರಿಸುವಂತೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಂಡು ಮಂಡಳಿ ವ್ಯಾಪ್ತಿಯ ನಾಗರಿಕ ಪ್ರದೇಶಗಳನ್ನು ಸ್ಥಳೀಯ ನಗರ ಸಂಸ್ಥೆಗಳಿಗೆ ಹಸ್ತಾಂತರಿಸುವ ಪ್ರಕ್ರಿಯೆ ಹಲವು ವರ್ಷಗಳಿಂದ ನಡೆಯುತ್ತಿದೆ. …
Read More »ರೈತರಿಗೆ ಮಧ್ಯಂತರ ಬೆಳೆ ಹಾನಿ ಪರಿಹಾರವಾಗಿ ₹11 ಕೋಟಿ ಬಿಡುಗಡೆ
ಬೆಳಗಾವಿ: ಮುಂಗಾರು ಅವಧಿಯಲ್ಲಿ ತೀವ್ರ ಮಳೆ ಕೊರತೆಯಿಂದ ಹೆಸರು, ಉದ್ದು, ಶೇಂಗಾ, ಸೂರ್ಯಕಾಂತಿ, ಹತ್ತಿ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿದ್ದು, ರೈತರಿಗೆ ಮಧ್ಯಂತರ ಬೆಳೆ ಹಾನಿ ಪರಿಹಾರವಾಗಿ ₹11 ಕೋಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ತಿಳಿಸಿದರು. ರಾಮದುರ್ಗ, ಸವದತ್ತಿ ಹಾಗೂ ಯರಗಟ್ಟಿ ತಾಲೂಕುಗಳಲ್ಲಿ ಸುಮಾರು 29 ಸಾವಿರ ಎಕರೆ ಪ್ರದೇಶದಲ್ಲಿ ಹೆಸರು ಮತ್ತು ಉದ್ದು ಬೆಳೆ ಹಾನಿಯಾಗಿದೆ. ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವಾಗುವ …
Read More »ಬೆಳಗಾವಿಯಲ್ಲಿ 5.13 ಲಕ್ಷ ಮತದಾರರು ಹೊರಗುಳಿದಿದ್ದಾರೆ
ಬೆಳಗಾವಿ:ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಬೆಳಗಾವಿ ಜಿಲ್ಲೆಯಲ್ಲಿ 5,13,439 ಮತದಾರರ ಹೆಸರು ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ತಿಳಿಸಿದರು. ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಗೂ ಮುನ್ನ ಜಿಲ್ಲೆಯಲ್ಲಿ ಸುಮಾರು 41 ಲಕ್ಷ ಮತದಾರರಿದ್ದು, ಇದೀಗ 35,93,561 ಮತದಾರರ ಹೆಸರು ಮಾತ್ರ ಕರಡು ಪಟ್ಟಿಯಲ್ಲಿ ಉಳಿದಿದೆ. ಜಿಲ್ಲೆಯ ಎಲ್ಲ ಮತದಾರರ ವಿವರ ಹಾಗೂ ಪೌರತ್ವವನ್ನು ಪರಿಶೀಲನೆಗೆ ಒಳಪಡಿಸಿ …
Read More »ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲವೇ? ಹೆಸರು ಸೇರ್ಪಡೆಗೆ ಅವಕಾಶವಿದೆ
ಬೆಳಗಾವಿ: ವಿಶೇಷ ತೀವ್ರ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮೊದಲ ಹಂತ ಮುಕ್ತಾಯಗೊಂಡು ಕರಡು ಮತದಾರರ ಪಟ್ಟಿ ಪ್ರಕಟಗೊಂಡಿದೆ. ಕರಡು ಪಟ್ಟಿಯಲ್ಲಿ ಹೆಸರು ಕಾಣಿಸದಿರುವ ಮತದಾರರು ಆತಂಕಪಡುವ ಅಗತ್ಯವಿಲ್ಲ. ಅರ್ಹ ಮತದಾರರು ಅಗತ್ಯ ದಾಖಲೆಗಳನ್ನು ಸಲ್ಲಿಸಿ ಹೆಸರು ಸೇರ್ಪಡೆಗೆ ಅವಕಾಶವಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಹಾಗೂ ಮತದಾರರ ಮುಖ್ಯ ನೋಂದಣಾಧಿಕಾರಿ ಕಾರ್ತಿಕ್ ಎಂ. ಸ್ಪಷ್ಟಪಡಿಸಿದ್ದಾರೆ. ಸೋಮವಾರ ಪಾಲಿಕೆ ಕಚೇರಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯ …
Read More »ಮೂಲ ಮಾಲೀಕರಂತೆ ನಟಿಸಿ ಕೃಷಿ ಜಮೀನು ಮಾರಾಟ: ಆರೋಪಿತನ ಬಂಧನ
ಬೆಳಗಾವಿ: ಮೂಲ ಮಾಲೀಕರಂತೆ ನಟಿಸಿ ಮತ್ತೊಬ್ಬರ ಹೆಸರಿನಲ್ಲಿದ್ದ ಕೃಷಿ ಜಮೀನನ್ನು ಬೇರೆಯವರಿಗೆ ಮಾರಾಟ ಮಾಡಿ ವಂಚನೆ ಮಾಡಿದ ಆರೋಪದ ಮೇಲೆ 64 ವರ್ಷದ ವ್ಯಕ್ತಿಯನ್ನು ಬೆಳಗಾವಿ ನಗರದ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಆನಂದ ಮೋರೆ (64), ಕಲ್ಲೇಶ್ವರ ಗಲ್ಲಿ, ಸೋನಾರವಾಡಿ, ಖಾನಾಪುರ ತಾಲೂಕು, ಬೆಳಗಾವಿ ಜಿಲ್ಲೆ ಎಂದು ಗುರುತಿಸಲಾಗಿದೆ. ಈ ಕುರಿತು ಚಂದ್ರಕಾಂತ ರಾಮಚಂದ್ರ ಬಡಮಂಜಿ (64), ಉದ್ಯಮಬಾಗ, ಬೆಳಗಾವಿ ಅವರು ಮಾರ್ಕೆಟ್ ಪೊಲೀಸ್ ಠಾಣೆಗೆ ನೀಡಿದ …
Read More »ಯುಜಿ ಸಿಇಟಿ ಅಂತಿಮ ಫಲಿತಾಂಶ ಪ್ರಕಟ, ಕಾಲೇಜು ಪ್ರವೇಶಕ್ಕೆ ಆ.28 ಕೊನೆ ದಿನ: ಕೆಇಎ
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ಯುಜಿ ಸಿಇಟಿ ಕೋರ್ಸ್‌ಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಅಂತಿಮ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ. ಸಿಇಟಿ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಗೆ ಆ.25ರಿಂದ 28ರವರೆಗೆ ಸಮಯ ನಿಗದಿಪಡಿಸಲಾಗಿದೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಶುಲ್ಕ ಪಾವತಿಸಿ ತಮಗೆ ಹಂಚಿಕೆಯಾಗಿರುವ ಕಾಲೇಜಿನಲ್ಲಿ ಪ್ರವೇಶ ಪಡೆಯಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ. ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಯೋಗ ಮತ್ತು ನ್ಯಾಚುರೋಪತಿ, …
Read More »ವಿರೋಧ ಪಕ್ಷಕ್ಕೆ ರಾಜಕಾರಣಕ್ಕಿಂತ ರಾಜ್ಯದ ಹಿತ ಮುಖ್ಯವಾಗಲಿ: ಡಿ.ಕೆ. ಶಿವಕುಮಾರ್
ಬೆಂಗಳೂರು: ರಾಜಕಾರಣಕ್ಕಿಂತ ರಾಜ್ಯದ ಹಿತ ಮತ್ತು ಜನರ ಸಮಸ್ಯೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ಸದಸ್ಯರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದರು. ವಿಧಾನ ಪರಿಷತ್ತಿನಲ್ಲಿ ಸೋಮವಾರ ಮಾತನಾಡಿದ ಅವರು, ಸರ್ಕಾರ ರಚನೆಯಾದ ಬಳಿಕ ನಡೆದ ಮೊದಲ ಅಧಿವೇಶನದಲ್ಲೇ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಎಲ್ಲ ಸದಸ್ಯರಿಗೆ ಮುಕ್ತ ಮನಸ್ಸಿನಿಂದ ಕೆಲಸ ಮಾಡುವಂತೆ ಮನವಿ ಮಾಡಿದ್ದೆ. ನನಗೆ ಯಾವುದೇ …
Read More »ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ – ವಿಧಾನಮಂಡಲ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಹೋರಾಟ ಮುಂದುವರೆಸಿದ್ದರಿಂದ ವಿಧಾನಮಂಡಲದ ಕಲಾಪವನ್ನು ಮೂರು ದಿನಗಳ ಮೊದಲೇ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿದೆ. ಒಂದು ವಾರದಿಂದ ಸದನದ ಒಳಗೆ-ಹೊರಗೆ ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ಇಂದಿನಿಂದ ಅಹೋರಾತ್ರಿ ಧರಣಿಗೆ ಮುಂದಾಗಿತ್ತು. ಆದರೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಇದಕ್ಕೂ ಮುನ್ನ ನಾಗೇಂದ್ರ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಿತ್ತು. ಒಂದು ತಂಡ ಅಶೋಕ್-ವಿಜಯೇಂದ್ರ ನೇತೃತ್ವದಲ್ಲಿ ವಿಕಾಸಸೌಧದ …
Read More »ಮೆಡಿಕಲ್ ಶಾಪ್ ಮಾಲೀಕನ ಬರ್ಬರ ಹತ್ಯೆ ಕೇಸ್ – 6 ಮಂದಿ ಅರೆಸ್ಟ್
ಬೆಂಗಳೂರು: ಮೆಡಿಕಲ್ ಶಾಪ್ ಮಾಲೀಕ ಸುಹೇಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿವಾಳ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಡೆಪಾಳ್ಯ ರೌಡಿಶೀಟರ್ ಆದಿಲ್ ಸೇರಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಆದಿಲ್ ಸ್ನೇಹಿತ ಶಬ್ಬೀರ್ ಕೊಲೆಗೆ ಪ್ರತೀಕಾರವಾಗಿ ಸುಹೇಲ್ ಹತ್ಯೆ ನಡೆದಿದೆ ಎನ್ನಲಾಗಿದೆ. ಸುಹೇಲ್ ಹತ್ಯೆ ಬಳಿಕ ಆರೋಪಿಗಳು ಮುಂಬೈಗೆ ಪರಾರಿಯಾಗಲು ಸ್ಕೆಚ್ ಹಾಕಿದ್ದರು. ಅಷ್ಟರಲ್ಲೇ ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಜನವರಿಯಲ್ಲಿ ಬಂಡೆಪಾಳ್ಯ ವ್ಯಾಪ್ತಿಯಲ್ಲಿ ಶಬ್ಬೀರ್ ಕೊಲೆಯಾಗಿತ್ತು. …
Read More »
Laxmi News 24×7