ಬೆಳಗಾವಿ: ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂರು ಪ್ರತ್ಯೇಕ ಪ್ರಕರಣ ಭೇದಿಸಿದ್ದಾರೆ. ಎಸಿಪಿ ನಾರಾಯಣ ಬರಮನಿ ಅವರ ಮಾರ್ಗದರ್ಶನದಲ್ಲಿ ನಗರದ ಬಾಯಪಾಸ್ ಸಮೀಪ್ ಹೋಲ್ ಸೆಲ್ ಹಣ್ಣು ಮಾರುಕಟ್ಟೆ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮಲ್ಲಪ್ಪ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದ್ದಾರೆ. ಈತನಿಗೆ ಗಾಂಜಾ ಪೂರೈಕೆ ಮಾಡುತ್ತಿದ್ದ ಇಬ್ಬರನ್ನು ಕಿಂಕ್ ಪೀನ್ ಗಳನ್ನು ಬಂಧಿಸಿ ಒಟ್ಟು 15 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. …
Read More »ವಾಟ್ಸಪ್ ಡ್ರಗ್ಸ್ ಗ್ರೂಪ್ಗೆ ದೀಪಿಕಾ ಅಡ್ಮಿನ್ – ಎನ್ಸಿಬಿ ಮಾಹಿತಿ ರಿವೀಲ್
ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಸಿಬಿ ತನಿಖೆಯನ್ನು ಚುರುಕುಗೊಳಿಸಿದ್ದು, ಬಾಲಿವುಡ್ ನಟಿಯರಾದ ದೀಪಿಕಾ ಪಡುಕೋಣೆ, ರಕುಲ್ಪ್ರೀತ್ ಸಿಂಗ್ ಹಾಗೂ ಸಾರಾ ಅಲಿ ಖಾನ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ. ಇದರ ಬೆನ್ನಲ್ಲೇ ಇದೀಗ ಸ್ಫೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಡ್ರಗ್ಸ್ ಕುರಿತು ಚಾಟ್ ಮಾಡುತ್ತಿದ್ದ ವಾಟ್ಸಪ್ ಗ್ರೂಪ್ಗೆ ದೀಪಾಕಾ ಪಡುಕೋಣೆ ಅಡ್ಮಿನ್ ಆಗಿದ್ದರು ಎಂದು ಸ್ವತಃ ಎನ್ಸಿಬಿ ಮೂಲಗಳು ತಿಳಿಸಿವೆ. ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ …
Read More »ಹೊಸ ಕೃಷಿ ಸುಧಾರಣೆಗಳು ರೈತರಿಗೆ ಅರ್ಥವಾಗಬೇಕು – ಮೋದಿ
ನವದೆಹಲಿ: ಹಿಂದಿನ ಸರ್ಕಾರಗಳು ರೈತರಿಗೆ ಮತ್ತು ಕಾರ್ಮಿಕರಿಗೆ ಅರ್ಥವಾಗದ ಭರವಸೆ ಮತ್ತು ಕಾನೂನುಗಳನ್ನು ರೂಪಿಸಿದೆ. ಅದನ್ನು ಬದಲಿಸಲು ಎನ್ಡಿಎ ಸರ್ಕಾರ ನಿರಂತರ ಪ್ರಯತ್ನ ಮಾಡುತ್ತಿದೆ. ಹೊಸ ಕೃಷಿ ಸುಧಾರಣೆಗಳು ರೈತರಿಗೆ ಅರ್ಥವಾಗಬೇಕಿದ್ದು, ಬಿಜೆಪಿ ಕಾರ್ಯಕರ್ತರು ರೈತರ ಬಳಿ ಹೋಗಿ ಸುಲಭ ಭಾಷೆಯಲ್ಲಿ ಅರ್ಥೈಸಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ. ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಹಿನ್ನಲೆಯಲ್ಲಿ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ …
Read More »ಅನುಷ್ಕಾ ಬಗ್ಗೆ ಕೆಟ್ಟದಾಗಿ ಮಾತನಾಡಿಲ್ಲ, ನನ್ನ ಹೇಳಿಕೆಯನ್ನು ತಿರುಚಲಾಗಿದೆ: ಗವಾಸ್ಕರ್
ಮುಂಬೈ: ಅನುಷ್ಕಾ ಶರ್ಮಾ ಬಗ್ಗೆ ನಾನು ಕೆಟ್ಟದಾಗಿ ಮಾತನಾಡಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಮಾಜಿ ಕ್ರಿಕೆಟಿಗ ಮತ್ತು ವಿಶ್ಲೇಷಕ ಸುನಿಲ್ ಗವಾಸ್ಕರ್ ಅವರು ಹೇಳಿದ್ದಾರೆ. ಗುರುವಾರ ನಡೆದ ಪಂಜಾಬ್ ಮತ್ತು ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕಳಪೆ ಪ್ರದರ್ಶನ ತೋರಿದ್ದರು. ಜೊತೆಗೆ ಎರಡು ಸುಲಭದ ಕ್ಯಾಚನ್ನು ಕೈಚೆಲ್ಲಿದ್ದರು. ಈ ವೇಳೆ ಕಮೆಂಟರಿ ಮಾಡುತ್ತಿದ್ದ ಸುನಿಲ್ ಗವಾಸ್ಕರ್ ಅವರು ಕೊಹ್ಲಿ ವೈಯಕ್ತಿಕ ಜೀವನದ ಬಗ್ಗೆ ಮಾತನಾಡಿ ಅವರ …
Read More »ಮೊಟ್ಟ ಮೊದಲು ಅವಕಾಶ ಕೊಡಿಸಿದ್ದು ಜಾನಕಮ್ಮ……….
ಖ್ಯಾತ ಗಾಯಕ ಎಸ್ಪಿ ಬಾಲಸುಬ್ರಮಣ್ಯಂ ಅವರನ್ನು ಗಾನ ಗಂಧರ್ವ, ಗಾನ ಗಾರುಡಿಗ ಇನ್ನೂ ಅನೇಕ ಹೆಸರುಗಳಿಂದ ಕರೆಯುತ್ತಾರೆ. ಖ್ಯಾತ ಗಾಯಕಿ ಎಸ್.ಜಾನಕಿ ಅಲಿಯಾಸ್ ಎಲ್ಲರ ಪ್ರೀತಿಯ ಜಾನಕಮ್ಮ ಮೊಟ್ಟ ಮೊದಲ ಬಾರಿಗೆ ಅಷ್ಟು ಉದ್ದದ ಹೆಸರನ್ನು ಬಾಲು ಎಂದು ಮಾಡಿದ್ದರು. ಪ್ಲೇ ಬ್ಯಾಕ್ ಸಿಂಗರ್ ಆಗಿ ಮೊದಲ ಹೆಜ್ಜೆಯಿಡಲೂ ಜಾನಕಮ್ಮ ಕಾರಣ. ಅವರಿಂದಲೇ ಇಂದು ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ ಎಂದು ಬಾಲು ಅನೇಕ ಸಾರಿ ಹೇಳಿಕೊಂಡಿದ್ದರು. ಅಪ್ಪನ ಮಾತಿನಂತೆ …
Read More »ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಏಮ್ಸ್ ವೈದ್ಯರು ನನಗೆ ಹೇಳಿದ್ದರು: ಲಾಯರ್ ವಿಕಾಸ್ ಸಿಂಗ್
ಮುಂಬೈ: ನಟ ಸುಶಾಂತ್ ಸಿಂಗ್ ರಜಪೂತ್ ಅವರನ್ನು ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎಂದು ಏಮ್ಸ್ ವೈದ್ಯರು ನನಗೆ ಹೇಳಿದ್ದರು ಎಂದು ನಟನ ಪರವಾಗಿ ವಾದಿಸುತ್ತಿರುವ ಲಾಯರ್ ವಿಕಾಸ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂದು ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ಸುಶಾಂತ್ ಸಿಂಗ್ ಪ್ರಕರಣದಲ್ಲಿ ಆತ್ಮಹತ್ಯೆಯಲ್ಲ ಅದು ಕೊಲೆ ಎಂದು ಕಂಡು ಹಿಡಿಯುವಲ್ಲಿ ಸಿಬಿಐ ತಡ ಮಾಡಿದೆ. ಇದರಿಂದ ನನಗೆ ನಿರಾಶೆಯಾಗಿದೆ. ಈ ಹಿಂದೆ ನನ್ನ ಜೊತೆ …
Read More »ಯಾದಗಿರಿ, ಬೀದರ್, ವಿಜಯಪುರ ಹಾಗೂ ರಾಯಚೂರಿನಲ್ಲಿ ಮತ್ತೆ ವರುಣನ ಅಬ್ಬರ.
ಬೆಂಗಳೂರು: ಯಾದಗಿರಿ, ಬೀದರ್, ವಿಜಯಪುರ ಹಾಗೂ ರಾಯಚೂರಿನಲ್ಲಿ ಮತ್ತೆ ವರುಣ ಅಬ್ಬರಿಸಿದ್ದಾನೆ. ಯಾದಗಿರಿ ಜಿಲ್ಲೆಯಾದ್ಯಂತ ಶುಕ್ರವಾರ ರಾತ್ರಿಯಿಂದ ಭಾರೀ ಮಳೆ ಸುರಿಯುತ್ತಿದೆ. ಮಳೆ ಅಬ್ಬರಕ್ಕೆ ರಸ್ತೆ ಜಲಾವೃತವಾಗಿದ್ದು, ಮನೆಗಳಿಗೆ ನೀರು ನುಗ್ಗಿದೆ. ಮಳೆ ಅರ್ಭಟಕ್ಕೆ ಜನರು ತಲ್ಲಣಗೊಂಡಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರ, ಖಾನಾಪುರ ಎಸ್ ಗ್ರಾಮದೊಳಗೆ ನೀರು ನುಗ್ಗಿದೆ. 30 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ತಡರಾತ್ರಿಯಿಂದ ನಿದ್ದೆ ಮಾಡದೆ ಜನರು ಹೈರಾಣಾಗಿದ್ದಾರೆ. ನಗನೂರ ಗ್ರಾಮದ …
Read More »ಸ್ಟೇಷನ್ ಏನ್ ನಿಮ್ಮಪ್ಪಂದ –K.P.T.C.L. ನೌಕರನ ಮೇಲೆ ಜೆಡಿಎಸ್ ಮುಖಂಡನ ದರ್ಪ
ಹಾಸನ: ವಿದ್ಯುತ್ ಕಡಿತಕ್ಕೆ ಸಂಬಧಿಸಿದಂತೆ ಸರಿಯಾದ ಮಾಹಿತಿ ನೀಡಲಿಲ್ಲವೆಂದು ಕೆಪಿಟಿಸಿಎಲ್ ಪವರ್ ಸ್ಟೇಷನ್ ಆಪರೇಟರ್ಗೆ ಜೆಡಿಎಸ್ ಮುಖಂಡರೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕಿದ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲೂಕಿನ ಗಂಗೂರು ಗ್ರಾಮದಲ್ಲಿ ನಡೆದಿದೆ. ಗಂಗೂರು ಗ್ರಾಮದಲ್ಲಿರುವ ಕೆಪಿಟಿಸಿಎಲ್ ಸಬ್ ಸ್ಟೇಷನ್ನಲ್ಲಿ ಹೇಮಂತ್ ಕುಮಾರ್ ಎಂಬುವವರು ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿದ್ಯುತ್ಗಂಗೂರು ಗ್ರಾಮದಲ್ಲಿರುವ ಕೆಪಿಟಿಸಿಎಲ್ ಸಬ್ ಸ್ಟೇಷನ್ನಲ್ಲಿ ಹೇಮಂತ್ ಕುಮಾರ್ ಎಂಬುವವರು ಆಪರೇಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. …
Read More »ಚೆನ್ನೈ ಫಾರ್ಮ್ಹೌಸ್ನಲ್ಲಿ ಎಸ್ಪಿಬಿ ಅಂತ್ಯಸಂಸ್ಕಾರ- ಬೆಳಗ್ಗೆ 11 ಗಂಟೆವರೆಗೂ ಸಾರ್ವಜನಿಕ ದರ್ಶನಕ್ಕೆ ಅವಕಾಶ
ಚೆನ್ನೈ: ಗಾನ ಗಾರುಡಿಗ ಎಸ್.ಪಿ ಬಾಲಸುಬ್ರಹ್ಮಣಂ ಅವರ ಅಂತ್ಯಸಂಸ್ಕಾರ ಇಂದು ಚೆನ್ನೈನ ರೆಡ್ಹಿಲ್ ಫಾರ್ಮ್ ಹೌಸ್ನಲ್ಲಿ ನಡೆಯಲಿದೆ. ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂ ಫಾರ್ಮ್ ಹೌಸ್ನಲ್ಲಿ ಎಸ್ಪಿಬಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ 11 ಗಂಟೆಯವರೆಗೂ ಸಾರ್ವಜನಿಕರು ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ತಿರುವಳ್ಳೂರ್ ಎಸ್ಪಿ ಎಸ್ಪಿಬಿ ಅವರ ಅಂತ್ಯಸಂಸ್ಕಾರದ ಕುರಿತ ಹೆಚ್ಚಿನ ಮಾಹಿತಿಯನ್ನು ನೀಡಿದ್ದಾರೆ. ತಮ್ಮ ನೆಚ್ಚಿನ ಹಾಡುಗಾರನ ಅಂತಿಮ ದರ್ಶನ ಪಡೆಯಲು …
Read More »ಜಿಲ್ಲಾಧಿಕಾರಿ ಕಾಳಜಿಗೆ ಮನಸೋತು ಮಗುವಿಗೆ ಡಿಸಿ ಹೆಸರಿಟ್ಟ ದಂಪತಿ
ಬಳ್ಳಾರಿ: ಜನ್ಮವಿತ್ತ ಮಗುವಿಗೆ ತಮ್ಮ ಜಿಲ್ಲೆಯ ಡಿಸಿ ಹೆಸರನ್ನೇ ನಾಮಕರಣ ಮಾಡಿದ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ದಾವಣಗೆರೆಯಲ್ಲಿ ನೆಲೆಸಿರುವ ದಂಪತಿ ತಮ್ಮ ಮಗುವಿಗೆ ಡಿಸಿ ಎಸ್.ಎಸ್.ನಕುಲ್ ಅವರ ಹೆಸರನ್ನಿಟ್ಟಿದ್ದಾರೆ. ಮಹಿಳೆಯ ತವರು ಮನೆ ಬಳ್ಳಾರಿಯಾಗಿದ್ದರಿಂದ ಕಳೆದ ಎರಡು ತಿಂಗಳ ಹಿಂದೆ ಹೆರಿಗೆಗೆಂದು ಬಳ್ಳಾರಿಗೆ ಬಂದಿದ್ದರು. ಈ ವೇಳೆ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದಾಗ ಕೋವಿಡ್ ಪಾಸಿಟಿವ್ ದೃಢಪಟ್ಟಿತ್ತು. ಈ ವೇಳೆ ಹೆರಿಗೆಯನ್ನು ಯಶಸ್ವಿಯಾಗಿಯೇ ಬಳ್ಳಾರಿ ನಗರದ ಜಿಲ್ಲಾಸ್ಪತ್ರೆಯಲ್ಲಿ ಮಾಡಿಸಲಾಗಿತ್ತು. ಅದೃಷ್ಟವಶಾತ್ ತಾಯಿಗೆ …
Read More »