Breaking News

Uncategorized

ರಾಮನಗರ: ಹೇಗೇ ಸತ್ತರೂ ಕೊರೋನಾ ಸಾವೆಂದು ದಾಖಲಿಸಿ ಹಣ ಲೂಟಿ; ಜಿಲ್ಲಾಧಿಕಾರಿ ವಿರುದ್ಧ ಸಿಡಿದ ಜನ

ರಾಮನಗರ : ಕೊರೋನಾ ವರದಿಯಲ್ಲಿ ನೆಗೆಟಿವ್ ಬಂದಿದ್ದರೂ ಸಹ ಕೊರೋನಾ ಪಾಸಿಟಿವ್ ಇದೇ ಎಂದು ಚಿಕಿತ್ಸೆ ನೀಡಿ ಹಣ ವಸೂಲಿ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿ ಆಕ್ರೋಶವ್ಯಕ್ತಪಡಿಸಿದರು. ರಾಮನಗರ ತಾಲೂಕಿನ ಅಂಜನಾಪುರ ಗ್ರಾಮದ 65 ವರ್ಷದ ಹೊನ್ನಮ್ಮ ಎಂಬುವರು ಕೆಮ್ಮು ಹಾಗೂ ಇತರೆ ಆರೋಗ್ಯ ಸಮಸ್ಯೆಯಿಂದಾಗಿ ರಾಮನಗರ ಜಿಲ್ಲಾಸ್ಪತ್ರೆಗೆ 17-09-2020 ರಂದು ದಾಖಲಾಗಿದ್ದರು. ನಂತರ ಆರೋಗ್ಯದಲ್ಲಿ ವ್ಯತ್ಯಾಸವಾದ ಕಾರಣ ಅವರನ್ನ ಕೋವಿಡ್ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (26-09-2020-ಶನಿವಾರ)

ನಿತ್ಯ ನೀತಿ: ಸರ್ವರನ್ನು ಸಮಬುದ್ಧಿಯಿಂದ ಪ್ರೀತಿಸು. ಸರ್ವ ಕಾರ್ಯ ಗಳನ್ನು ಸಮರ್ಪಣ ಬುದ್ಧಿಯಿಂದ ಮಾಡು. ಚಿತ್ತದಲ್ಲಿ ಸತ್ಕಾಮನೆಗಳನ್ನು ಬಿತ್ತಿದರೆ ಸತಲವೇ ದೊರೆ ಯುತ್ತದೆ. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ # ಪಂಚಾಂಗ : ಶನಿವಾರ, 26.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.13 ಚಂದ್ರ ಉದಯ ಬೆ.02.38 / ಚಂದ್ರ ಅಸ್ತ ರಾ.02.18 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ಶರತ್ ಋತು / ಅಕ ಆಶ್ವಯುಜ ಮಾಸ / …

Read More »

ಅಂಗಡಿ ಉತ್ತರಾಧಿಕಾರಿ ಯಾರು? ಉಪ ಚುನಾವಣೆ ಚರ್ಚೆ ಆರಂಭ

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ಪ್ರತಿನಿಧಿಸುತ್ತಿದ್ದ ಸುರೇಶ ಅಂಗಡಿ ಅವರ ನಿಧನದಿಂದ ತೆರವಾಗಿರುವ ಸ್ಥಾನಕ್ಕೆ ಎದುರಾಗುವ ಉಪ ಚುನಾವಣೆಗೆ ಅಭ್ಯರ್ಥಿಗಳು ಯಾರಾಗಬಹುದು ಎನ್ನುವ ಚರ್ಚೆ ಜಿಲ್ಲೆಯ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಅಂಗಡಿ ಅವರು 2004ರಿಂದ ಒಟ್ಟು 4 ಚುನಾವಣೆಗಳಲ್ಲಿ ಸತತವಾಗಿ ಜಯ ಗಳಿಸಿದ್ದರು. ಇದರಿಂದಾಗಿ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಪ್ರಬಲ ಹಿಡಿತ ಹೊಂದಿದ್ದ ಅಂಗಡಿ ಅವರ ಹಠಾತ್ ನಿಧನದಿಂದ ಬಿಜೆಪಿ ವಲಯದಲ್ಲಿ ಆಘಾತ ಉಂಟಾಗಿದೆ. ಹೀಗಾಗಿ, ಉತ್ತರಾಧಿಕಾರಿ ಯಾರಾಗುತ್ತಾರೆ ಎನ್ನುವ ಕುತೂಹಲ …

Read More »

ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ಹೊರಹಾಕಿದ ಅನ್ನದಾತರು

ಬೆಂಗಳೂರು, – ಅನ್ನದಾತರ ಆಕ್ರೋಶ ಬುಗಿಲೆದ್ದಿದೆ. ಎಪಿಎಂಸಿ, ಭೂ ಸುಧಾರಣೆ ಸೇರಿದಂತೆ ಹಲವು ಕಾಯ್ದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಲು ಮುಂದಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ರೈತರು, ಕಾರ್ಮಿಕರು, ಕನ್ನಡಪರ ಹಾಗೂ ದಲಿತ ಸಂಘಟನೆಗಳ ಕಾರ್ಯಕತರು ಇಂದು ರಸ್ತೆ ತಡೆ ನಡೆಸಿ ಸರ್ಕಾರದ ವಿರುದ್ಧ ರಣಕಹಳೆ ಮೊಳಗಿಸಿದ್ದಾರೆ. ಕೃಷಿ ಕಾಯ್ದೆ ತಿದ್ದುಪಡಿಗಳು ಮಾಲೀಕರು ಮತ್ತು ಬಂಡವಾಳ ಶಾಹಿಗಳ ಪರವಾಗಿವೆ. ರೈತರ ಪಾಲಿಗೆ ಕಂಟಕವಾಗಿದೆ ಎಂದು ರೈತ ಸಂಘಟನೆಗಳು ವಿವಿಧ …

Read More »

ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ

ಗೋಕಾಕ: ಖ್ಯಾತ ಬಹುಭಾಷಾ ಗಾಯಕ ಹಾಗೂ ನಟ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ  ಸಂತಾಪ ಸೂಚಿಸಿದ್ದಾರೆ. ಈ ದೇಶ ಕಂಡ ದಿಗ್ಗಜ ಗಾಯಕ ಬಾಲಸುಬ್ರಹ್ಮಣ್ಯಂ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಮನಸ್ಸಿಗೆ ಬೇಸರವಾಗಿದೆ. ಕಳೆದ ಮೂರು ದಿನಗಳಿಂದ ಒಂದಾದ ಮೇಲೊಂದರಂತೆ ಕೆಟ್ಟ ಸುದ್ದಿಗಳೇ ಬರುತ್ತಿರುವುದು ನೋವಿನ ವಿಚಾರ. ಅವರು ಕೊರೊನಾ ಸೋಂಕಿನಿಂದ ಆಸ್ಪತ್ರೆ ಸೇರಿ 51 ದಿನಗಳು ಕಳೆದಿದ್ದು, ನಮ್ಮೆಲ್ಲರಿಗೂ …

Read More »

40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ:ಲಖನಜಾರಕಿಹೊಳಿ

ಬೆಳಗಾವಿ: ಗಾನ ಗಂಧರ್ವ ಡಾ.ಎಸ್.ಪಿ. ಬಾಲಸುಬ್ರಹ್ಮಣ್ಯಂ ಇನ್ನಿಲ್ಲ ಎಂಬುದನ್ನು ಕಲ್ಪಿಸಿಕೊಳ್ಳಲೂ ಆಗುತ್ತಿಲ್ಲ. ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚಿಕಿತ್ಸೆ  ಪಡೆದಿದ್ದ ಎಸ್.ಪಿ.ಬಿ ಅವರನ್ನು ಕಳೆದುಕೊಂಡ ಸಂಗೀತ ಕ್ಷೇತ್ರ . ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರು 16 ಭಾರತೀಯ ಭಾಷೆಗಳಲ್ಲಿ 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಅವರ ಕುಟುಂಬದ ಸದಸ್ಯರಿಗೆ, ಅಪಾರ …

Read More »

ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ

ಬೆಂಗಳೂರು: ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು. ಹತ್ತಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು …

Read More »

ಖ್ಯಾತ ಗಾಯಕ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನದಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ: ಸತೀಶ್ ಜಾರಕಿಹೊಳಿ

ಬೆಳಗಾವಿ: ಖ್ಯಾತ ಗಾಯಕ ಡಾ.ಎಸ್.ಪಿ.ಬಾಲಸುಬ್ರಮಣ್ಯಂ ಅವರ ನಿಧನದಿಂದ ಸಂಗೀತ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಂತಾಪ ಸೂಚಿಸಿದ್ದಾರೆ. ಬಹುಭಾಷಾ ಗಾಯಕ ಎಸ್‍ಪಿಬಿ ಅವರು ಇತ್ತೀಚೆಗೆ ಕೋವಿಡ್ ಸೋಂಕಿಗೆ ಗುರಿಯಾಗಿ ಚೆನ್ನೈ ಎಂಜಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ. ಸರಸ್ವತಿ ಪುತ್ರರಾಗಿದ್ದ ಎಸ್ ಪಿ ಬಿ ಸಂಗೀತ ಮಾಂತ್ರಿಕರಾಗಿದ್ದರು. ಅವರು ಹಾಡಿದ ಹಾಡುಗಳನ್ನು ಕೇಳುತ್ತಾ ಬೆಳೆದ ನಾವು ಅವರ ಅಗಲಿಕೆಯನ್ನೂ …

Read More »

ಗಾಯನ ನಿಲ್ಲಿಸಿದ S.P.B. ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ.

ಚೆನ್ನೈ: ಹಿರಿಯ ಗಾಯಕ, ಪದ್ಮ ವಿಭೂಷಣ ಪ್ರಶಸ್ತಿ ಪುರಸ್ಕೃತ ಹಿರಿಯ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ(74) ಗಾಯನವನ್ನು ನಿಲ್ಲಿಸಿದ್ದಾರೆ. ಹಲವು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಸ್‌ಪಿಬಿ ಇಂದು ಬಾರದ ಲೋಕಕ್ಕೆ ತೆರಳಿದ್ದಾರೆ. ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆ ಆಗಸ್ಟ್ 5ರಂದು ಎಂಜಿಎಂ ಹೆಲ್ತ್ ಕೇರ್‌ ಆಸ್ಪತ್ರೆಗೆ ದಾಖಲಾಗಿದ್ದರು. ಆಗಸ್ಟ್ 13ರ ತಡರಾತ್ರಿಯಿಂದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತಜ್ಞ ವೈದ್ಯರ ತಂಡದಿಂದ ಆರೈಕೆ ಮಾಡಲಾಗುತ್ತಿತ್ತು. ಆಗಸ್ಟ್ 24ರಂದು ಕೊರೊನಾ …

Read More »

ಹೋರಾಟ ಮಾಡಿ ಸಾಕಾಗಿದೆ, ಆದ್ರೆ ಶಸ್ತ್ರ ತ್ಯಾಗ ಮಾಡಿಲ್ಲ: H.D.K.

ಬೆಂಗಳೂರು: ಭೂ ಸುಧಾರಣ ಕಾಯ್ದೆ ಹಾಗೂ ಎಪಿಎಂಸಿ ಕೃಷಿ ಮಸೂದೆ ವಿರುದ್ಧ ನಾನು ಹೋರಾಟ ಮಾಡಿ ಸಾಕಾಗಿದೆ. ಆದರೆ ನಾನು ಶಸ್ತ್ರ ತ್ಯಾಗ ಮಾಡಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭೂ ಸುಧಾರಣ ಕಾಯ್ದೆ, ಎಪಿಎಂಸಿ ಕಾಯ್ದೆ ವಿರುದ್ಧ ಜೆಡಿಎಸ್ ಈಗಾಗಲೇ ಪ್ರತಿಭಟನೆ ಮಾಡಿದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ನಾವು ಪ್ರತಿಭಟನೆ ಮಾಡಿದ್ದೇವೆ. ಆದರೆ ಆತುರವಾಗಿ ಈ ಕಾಯ್ದೆ ಸುಗ್ರಿವಾಜ್ಞೆ ತರುವ …

Read More »