Breaking News

Uncategorized

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (17-09-2020-ಗುರುವಾರ)

ನಿತ್ಯ ನೀತಿ: ಎಲ್ಲಿ ಕತ್ತಲೆ ಇದೆಯೋ, ಎಲ್ಲಿ ಅಜ್ಞಾನವಿದೆಯೋ, ಎಲ್ಲಿ ನೋವು ಇದೆಯೋ, ಎಲ್ಲಿ ಆರ್ತನಾದವಿದೆಯೋ, ಎಲ್ಲಿ ವಂಚನೆಗೆ ಒಳಗಾದವರಿ ರುತ್ತಾರೋ ಅಲ್ಲಿ ಅವುಗಳ ನಿವಾರಣೆಗೆ ಮನುಷ್ಯ ದೃಢ ಪ್ರಯತ್ನ ಮಾಡಬೇಕು. -ಡಾ.ಶ್ರೀ ಬಾಲಗಂಗಾಧರನಾಥ ಮಹಾಸ್ವಾಮೀಜಿ   # ಪಂಚಾಂಗ : ಗುರುವಾರ, 17.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.19 ಚಂದ್ರ ಉದಯ ನಾ.ಬೆ.06.50 / ಚಂದ್ರ ಅಸ್ತ ಸಂ.06.31 ಶಾರ್ವರಿ ಸಂವತ್ಸರ / ದಕ್ಷಿಣಾಯಣ / …

Read More »

ಎಸ್‌ಜಿಬಿಐಟಿ: ಎಂಜಿನಿಯರ್‌ಗಳ ದಿನಾಚರಣೆ

ಬೆಳಗಾವಿ: ಇಲ್ಲಿನ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಕಾಲೇಜಿನಲ್ಲಿ ಎಂಜಿನಿಯರ್‌ಗಳ ದಿನ ಆಚರಿಸಲಾಯಿತು. ಸರ್ ಎಂ. ವಿಶ್ವೇಶ್ವರಯ್ಯ ಹಾಗೂ ಎಸ್.ಜಿ. ಬಾಳೇಕುಂದ್ರಿ ಅವರ ಫೋಟೊಗಳಿಗೆ ಪೂಜೆ ಸಲ್ಲಿಸಲಾಯಿತು. ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ‘ವಿಶ್ವೇಶ್ವರಯ್ಯ ಹಾಗೂ ಬಾಳೇಕುಂದ್ರಿ ಅವರ ಜೀವನದ ಬಗ್ಗೆ ತಿಳಿದುಕೊಳ್ಳಬೇಕು. ಅವರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು. ಬಳಿಕ ವೆಬಿನಾರ್‌ ಆಯೋಜಿಸಲಾಗಿತ್ತು. ಸೆಲ್ಕೊ ಸಂಸ್ಥೆಯ ಸಂಸ್ಥಾಪಕ ಡಾ.ಹರೀಶ ಹಂದೆ ಉಪನ್ಯಾಸ ನೀಡಿದರು. ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮ ಪ್ರಭು …

Read More »

ಬೆಳಗಾವಿ: ಸಾಂಬ್ರಾವರೆಗೂ ಹಿಗ್ಗಲಿದೆ ಬುಡಾ ವ್ಯಾಪ್ತಿ

ಬೆಳಗಾವಿ: ನಗರದ ಸುತ್ತಮುತ್ತಲಿರುವ ವಿವಿಧ 28 ಹಳ್ಳಿಗಳನ್ನು ವ್ಯಾಪ್ತಿಗೆ ಸೇರಿಸುವಂತೆ ಇಲ್ಲಿನ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ)ದಿಂದ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಇದಕ್ಕೆ ಅನುಮೋದನೆ ದೊರೆತಲ್ಲಿ ಪ್ರಾಧಿಕಾರದ ವ್ಯಾಪ್ತಿ ಹಿಗ್ಗಲಿದೆ. ಒಂದೆಡೆ ಸಾಂಬ್ರಾವರೆಗೆ, ಇನ್ನೊಂದೆಡೆ ಯಳ್ಳೂರು, ನಾವಗೆ, ಕಲ್ಲೇಹೊಳ ಹಾಗೂ ಕಡೋಲಿಯವರೆಗೆ ಪ್ರಾಧಿಕಾರದ ವ್ಯಾಪ್ತಿಯು ವಿಸ್ತರಣೆಗೊಳ್ಳಲಿದೆ. ಈ ಮೂಲಕ ಹೆಚ್ಚು ಹೆಚ್ಚು ಬಡಾವಣೆಗಳನ್ನು ಅಭಿವೃದ್ಧಿಪಡಿಸುವುದಕ್ಕೆ ಯೋಜಿಸಲಾಗಿದೆ. ಪ್ರಸ್ತುತ ಪ್ರಾಧಿಕಾರವು ಕಾಕತಿ ಭಾಗಶಃ, ಕಂಗ್ರಾಳಿ ಬಿ.ಕೆ. ಮತ್ತು ಕಂಗ್ರಾಳಿ ಕೆ.ಎಚ್‌., ಸಾಂವಗಾಂವ, ಮಂಡೋಳ್ಳಿ ಹಾಗೂ …

Read More »

ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಸ್ಥಾಪನೆಗೆ ಸಹಕಾರ: ಸಿಎಂ

ಬೆಂಗಳೂರು: ಚೆನ್ನೈನಲ್ಲಿರುವ ಅಮೆರಿಕ ದೂತಾವಾಸದ ಕಾನ್ಸಲ್ ಜನರಲ್ ಜ್ಯುಡಿತ್ ರೇವಿನ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಂಗಳವಾರ ವರ್ಚುಯಲ್ ಸಭೆ ನಡೆಸಿದರು. ಬೆಂಗಳೂರಿನಲ್ಲಿ ಅಮೆರಿಕದ ರಾಯಭಾರ ಕಚೇರಿ ತೆರೆಯಬೇಕೆನ್ನುವುದು ನಮ್ಮ ಬಹು ದಿನಗಳ ಬೇಡಿಕೆಯಾಗಿದ್ದು, ಕಚೇರಿಯ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡುವುದಾಗಿ ಯಡಿಯೂರಪ್ಪ ತಿಳಿಸಿದರು. ಭಾರತದಲ್ಲಿರುವ 100 ಅಮೆರಿಕಾ ಸಂಸ್ಥೆಗಳ ಪೈಕಿ ಸಿಸ್ಕೋ, ಐಬಿಎಂ, ಇಂಟೆಲ್, ಜಿಇ, ಎಚ್ಪಿ, ಒರಾಕಲ್, ಯುಟಿಸಿ ಸೇರಿದಂತೆ 90 ಕಂಪನಿಗಳು ಬೆಂಗಳೂರಿನಲ್ಲಿಯೇ ನೆಲೆಸಿವೆ ಎಂದು …

Read More »

ಬಿಎಸ್‌ವೈ ಇಂದು ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ಬೆಳಿಗ್ಗೆ ಕಲಬುರ್ಗಿಯಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ. ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದು, ಪಕ್ಷದ ಅಧ್ಯಕ್ಷರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ. ಇದೇ 18 ರಂದು ಕರ್ನಾಟಕ ಭವನ ನಂ-1 ರ (ಕಾವೇರಿ) ಮರು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. 19 ರಂದು ನಗರಕ್ಕೆ ವಾಪಸಾಗಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ …

Read More »

ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ‘ಕೈ’ ತಯಾರಿ: ವೈಫಲ್ಯಗಳೇ ಅಸ್ತ್ರ -ಕಾಂಗ್ರೆಸ್‌

ಬೆಂಗಳೂರು: ಇದೇ 21ರಿಂದ ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟು, ಆಡಳಿತ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಲು ‘ಕೈ’ ಪಾಳಯ ಸಿದ್ಧತೆ ನಡೆಸಿದೆ. ಕೊರೊನಾ ನಿರ್ವಹಣೆ, ಡಿ.ಜೆ. ಹಳ್ಳಿ ಗಲಭೆ, ಡ್ರಗ್ಸ್ ಜಾಲ, ಕಾನೂನು ಸುವ್ಯವಸ್ಥೆ, ಪ್ರವಾಹ, ಸುಗ್ರೀವಾಜ್ಞೆ ಮೂಲಕ ವಿವಿಧ ಕಾಯ್ದೆಗಳಿಗೆ ತಂದಿರುವ ತಿದ್ದುಪಡಿ ಮತ್ತಿತರ ವಿಷಯಗಳನ್ನು ಅಸ್ತ್ರವಾಗಿ ಬಳಸಿಕೊಳ್ಳಲು ವಿರೋಧ ಪಕ್ಷ ನಿರ್ಧರಿಸಿದೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಸುಮಾರು ಆರು ತಾಸು …

Read More »

ಮೇಕೆದಾಟು ಅಧಿಸೂಚನೆ: ಕೇಂದ್ರಕ್ಕೆ ಜಾರಕಿಹೊಳಿ ಮನವಿ

ಬೆಂಗಳೂರು : ಮೇಕೆದಾಟು ಯೋಜನೆಗೆ ಕೂಡಲೇ ಒಪ್ಪಿಗೆ ಸೂಚಿಸಿ ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಜಲಶಕ್ತಿ ಸಚಿವ ಗಜೇಂದ್ರಸಿಂಗ್‌ ಶೆಖಾವತ್‌ ಅವರನ್ನು ಭೇಟಿ ಮಾಡಿದ ಅವರು ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನ ಕುರಿತು ಚರ್ಚಿಸಿದರು. ಇದೇ ವೇಳೆ ಕೃಷ್ಣಾ ನದಿ ನೀರು ಹಂಚಿಕೆ ಮತ್ತು ಆಲಮಟ್ಟಿಅಣೆಕಟ್ಟು ಎತ್ತರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವಂತೆ ಮನವಿ ಮಾಡಿದರು. ಮೇಕೆದಾಟು ಡ್ಯಾಂಗೆ ತಮಿಳುನಾಡು ಕ್ಯಾತೆ! …

Read More »

ಖ್ಯಾತ ಮಕ್ಕಳ ತಜ್ಞನನ್ನೇ ಬಲಿ ಪಡೆದ ಕೊರೊನಾ!

ಹಾಸನ: ಕಿಲ್ಲರ್ ಕೊರೊನಾ ಸೋಂಕಿಗೆ ಹಾಸನದ ಮತ್ತೊಬ್ಬ ವೈದ್ಯ ಬಲಿಯಾಗಿದ್ದಾರೆ. ಹಾಸನದ ಖ್ಯಾತ ಮಕ್ಕಳ ತಜ್ಞ ಡಾ. ರಾಜೀವ್ (64) ಇಂದು ಕೊರೊನಾಗೆ ಕೊನೆಯುಸಿರೆಳೆದಿದ್ದಾರೆ. ಎರಡು ವಾರಗಳ ಹಿಂದೆ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ರು. ಆದರೆ ಚಿಕಿತ್ಸೆ ಫಲಿಸದೆ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕಳೆದ ನಾಲ್ಕು ದಶಕಗಳಿಂದ‌ ಜಿಲ್ಲೆಯಲ್ಲಿ ಸೇವೆ ಮಾಡುತ್ತಿದ್ದ ಡಾ.ರಾಜೀವ್ ವೈದ್ಯರಾಗಿ ಜಿಲ್ಲೆಯಲ್ಲಿ ಅಪಾರ ಹೆಸರು ಮಾಡಿದ್ದರು. ಮೂಲತಃ ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಬಾನುಗೊಂದಿ ಗ್ರಾಮದವರಾಗಿದ್ದರು. …

Read More »

ವೇಶ್ಯೆ ಮನೆಗೆ ಹೋಗಿಬಂದ ಮರು ದಿನವೇ ಅದೆ ಮನೆಯಲ್ಲಿ ದರೋಡೆ;. ಮೈಸೂರಿನಲ್ಲಿ ಖತರ್‌ನಾಕ್‌ ಗ್ಯಾಂಗ್‌ ಅರೆಸ್ಟ್‌

ಮೈಸೂರು ; ಅವರೆಲ್ಲ ಶಾಲಾ, ಕಾಲೇಜು ಹಂತದ ಡ್ರಾಪ್‌ಔಟ್ ಸ್ಟೂಡೆಂಟ್ಸು. ಓದು ತಲೆಗೆ ಅತ್ತಲಿಲ್ಲ, ಮಾಡೋದಕ್ಕೆ ಕೆಲಸ ಇಲ್ಲ. ಆದ್ರೆ ದುಷ್ಚಟ, ಶೋಕಿಗಳಿಗೇನೂ ಕಮ್ಮಿ ಇಲ್ಲ. ದುಷ್ಚಟಕ್ಕೆ ದುಡ್ಡುಬೇಕಲ್ಲ, ಆಗ ಶುರುವಾಗಿದ್ದು ರೋಡ್ ರಾಬರಿಯಂತಹ ದುಷ್ಕೃತ್ಯಗಳು. ಗುಂಪು ಕಟ್ಟಿಕೊಂಡು ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದ ಆರೋಪಿಗಳು ಈಗ ಪೊಲೀಸರ ಅತಿಥಿಯಾಗಿದ್ದಾರೆ. ಮೈಸೂರಿನಲ್ಲಿ 8 ಜನರ ಭಾರಿ ದರೋಡೆ ಗ್ಯಾಂಗ್‌ವೊಂದು ಬಲೆಗೆ ಬಿದ್ದಿದೆ . ಶರತ್, ಸುಮಂತ್, ಕಾರ್ತಿಕ್, ಮಹದೇವ್, ಸುನೀಲ್ ಕುಮಾರ್, …

Read More »

ಮಹಿಳೆಯರೇ ಅಂಗಡಿಯಲ್ಲಿ ಮೊಬೈಲ್‍ಗೆ ಕರೆನ್ಸಿ ಹಾಕಿಸುವ ಮುನ್ನ ಈ ಸುದ್ದಿ ಓದಿ

ಮಡಿಕೇರಿ : ಅಂಗಡಿಯಲ್ಲಿ ಮೊಬೈಲ್‍ಗೆ ಕರೆನ್ಸಿ ಹಾಕಿಸುವ ಯುವತಿಯರ ಹಾಗೂ ಹೆಣ್ಣು ಮಕ್ಕಳ ಮೊಬೈಲ್ ನಂಬರ್ ಗಳನ್ನು ಪಡೆದುಕೊಳ್ಳುತ್ತಿದ್ದ ವ್ಯಕ್ತಿಯೊಬ್ಬ ಮಹಿಳೆಯರಿಗೆ/ಹುಡುಗಿಯರ ಮೊಬೈಲ್‌ಗೆ ಪೋಲಿ ಸಂದೇಶಗಳನ್ನು ಕಳುಹಿಸುತ್ತಿದ್ದ ಕಾಮುಕನಿಗೆ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗ ಜನತೆ ಜಾಡಿಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮಡಿಕೇರಿ ನಗರದಲ್ಲಿ ಮೊಬೈಲ್ ಅಂಗಡಿ ಹಾಗೂ ಕರೆನ್ಸಿ ಅಂಗಡಿಯೊಂದನ್ನು ಇಟ್ಟುಕೊಂಡಿದ್ದ ಮುದಾಸಿರ್ ಎನ್ನವ ಕಾಮುಕನೇ ಹೀಗೆ ಹೊಡೆತ ತಿಂದಿರುವ ವ್ಯಕ್ತಿಯಾಗಿದ್ದು, ಈತ ಪದೇ ಪದೇ ಮೊಬೈಲ್‍ಗೆ ಅಶ್ಲೀಲ ಸಂದೇಶ …

Read More »