ಗೋಕಾಕ : ಕೇಂದ್ರ ರೈಲ್ವೇ ಖಾತೆಯ ಸಹಾಯಕ ಸಚಿವ ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಬುಧವಾರ ರಾತ್ರಿ ಕೊರೋನಾ ಸೋಂಕಿನಿoದ ಮೃತಪಟ್ಟಿರುವ ವಿಷಯ ಕೇಳಿ ದಿಗ್ಭçಮೆಗೊಂಡೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004 ರಿಂದ ಸತತ 4 ಬಾರಿ ಸಂಸದರಾಗಿ …
Read More »ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ : ಇಂದು ನಟಿ ರಾಗಿಣಿ, ಸಂಜನಾ ಜಾಮೀನು ಅರ್ಜಿ ವಿಚಾರಣೆ
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಜಾಲದ ನಂಟು ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಇಂದು ನಟಿ ರಾಗಿಣಿ, ಸಂಜನಾಳ ಜಾಮೀನು ಅರ್ಜಿ ವಿಚಾರಣೆ ಸಿಟಿ ಸಿವಿಲ್ ಆವರಣದ ಎನ್ ಡಿಪಿಎಸ್ ವಿಶೇಷ ನ್ಯಾಯಾಲಯದಲ್ಲಿ ನಡೆಯಲಿದ್ದು, ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದಾರೆ. ಕಳೆದ ವಿಚಾರಣೆ ವೇಳೆ ರಾಗಿಣಿ ಅರ್ಜಿಗೆ ರಾಗಿಣಿ ಪರ ವಕೀಲರು ವಾದ ಮಂಡಿಸಿದ್ದರು. ಸಿಸಿಬಿ ಕೂಡ …
Read More »ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಸುರೇಶ ಅಂಗಡಿ ಕೊಡುಗೆ
ಬೆಳಗಾವಿ: ಬೆಳಗಾವಿ- ಕಿತ್ತೂರು-ಧಾರವಾಡ ನಡುವೆ ರೈಲು ಮಾರ್ಗ ನಿರ್ಮಿಸಲು ₹927.40 ಕೋಟಿ ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಈಚೆಗೆ ತಿಳಿಸಿ, ಈ ಭಾಗಕ್ಕೆ ದೊಡ್ಡ ಕೊಡುಗೆ ತಂದಿರುವುದಾಗಿ ಹರ್ಷ ವ್ಯಕ್ತಪಪಡಿಸಿದ್ದರು. ’73 ಕಿ.ಮೀ. ಉದ್ದದ ಈ ಯೋಜನೆ ಇಲ್ಲಿನ ಜನರ ಬಹುದಿನಗಳ ಬೇಡಿಕೆಯಾಗಿತ್ತು. ಇದಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಬೆಳಗಾವಿ, ದೇಸೂರು, ಕಣವಿಕರವಿನಕೊಪ್ಪ, ಬಾಗೇವಾಡಿ, ಎಂ.ಕೆ. ಹುಬ್ಬಳ್ಳಿ, ಹುಲಿಕಟ್ಟಿ, …
Read More »ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗಾವಕಾಶ : ರಾಜ್ಯ ಸರ್ಕಾರದಿಂದ ಕನ್ನಡಿಗರಿಗೆ ಭರ್ಜರಿ ಗುಡ್ ನ್ಯೂಸ್
ಬೆಂಗಳೂರು : ರಾಜ್ಯ ಸರ್ಕಾರವು ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶವನ್ನು ಹೆಚ್ಚಿಸಲು ಆಂಧ್ರಪ್ರದೇಶ ಮಾದರಿಯನ್ನು ರಾಜ್ಯದಲ್ಲಿ ಅಳವಡಿಸಲು ಚಿಂತಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಮಾಧುಸ್ವಾಮಿ, ಸಿ ಮತ್ತು ಡಿ ದರ್ಜೆ ಹುದ್ದೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ನೀಡುವ ಬಗ್ಗೆ ಸರ್ಕಾರದಿಂದ ಶೀಘ್ರದಲ್ಲಿಯೇ ಆದೇಶ ಹೊರಡಿಸಲಾಗುವುದು ಎಂದರು. ಈ ಹಿಂದಿನ ಬಜೆಟ್ ನಲ್ಲಿ ಸರ್ಕಾರದಿಂದ ಸೌಲಭ್ಯ ಪಡೆಯುವ ಖಾಸಗಿ ಸಂಸ್ಥೆಗಳಲ್ಲಿನ ಸಿ ಮತ್ತು …
Read More »871 ಔಷಧಗಳ ಬೆಲೆ ನಿಗದಿ: ಡಿವಿಎಸ್
ಹೊಸದಿಲ್ಲಿ: ರಾಷ್ಟ್ರೀಯ ಔಷಧ ಬೆಲೆ ನಿಗದಿ ಪ್ರಾಧಿಕಾರವು (ಎನ್‌ಪಿಪಿಎ), 2015ರಲ್ಲಿ ಸಿದ್ಧಪಡಿಸಲಾಗಿದ್ದ “ಅತ್ಯಗತ್ಯ ಔಷಧಿಗಳ ರಾಷ್ಟ್ರೀಯ ದರ ನಿಗದಿ ಪಟ್ಟಿ’ಯಲ್ಲಿರುವ (ಎನ್‌ಎಲ್‌ಇಎಂ) 871 ಔಷಧಿಗಳ ಗರಿಷ್ಟ ದರವನ್ನು ನಿಗದಿಪಡಿಸಿ ಆದೇಶ ಹೊರಡಿಸಿದೆ ಎಂದು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರ ಸಚಿವ ಡಿ.ವಿ. ಸದಾನಂದ ಗೌಡ ತಿಳಿಸಿದ್ದಾರೆ. ರಾಜ್ಯಸಭೆಗೆ ನೀಡಿರುವ ಲಿಖೀತ ಉತ್ತರದಲ್ಲಿ ಅವರು ಈ ವಿಷಯ ಉಲ್ಲೇಖೀಸಿದ್ದಾರೆ. ಇದೇ ವೇಳೆ, ಪ್ಲಾಸ್ಟಿಕ್ ಪ್ರಾಸೆಸಿಂಗ್ ಉದ್ಯಮಕ್ಕೆ ಉತ್ತೇಜನ ನೀಡಲು ಮಧ್ಯಪ್ರದೇಶದ ಟೋಮಟ್, ಬಿಲೌವಾ, …
Read More »ಅಸಂಸದೀಯ ಪದ ಬಳಕೆ: ರಮೇಶ್ ಕುಮಾರ್- ಸುಧಾಕರ್ ಜಟಾಪಟಿ
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹಾಗೂ ಕಾಂಗ್ರೆಸ್‌ನ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಧ್ಯದ ಜಟಾಪಟಿಗೆ ವಿಧಾನಸಭೆ ಬುಧವಾರ ಸಾಕ್ಷಿಯಾಯಿತು. ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಉತ್ತರ ನೀಡಿದ ಸುಧಾಕರ್, ‘ಸಚಿವರನ್ನು ಒಳಗೊಂಡ ಕಾರ್ಯಪಡೆ ಸಭೆಯಲ್ಲಿ ಚರ್ಚಿಸಿ ಪಿಪಿಇ ಕಿಟ್‌ಗಳ ಖರೀದಿ ಮಾಡಲಾಗುತ್ತಿದೆ’ ಎಂದರು. ಆಗ ಎದ್ದು ನಿಂತ ರಮೇಶ್ ಕುಮಾರ್, ‘ಪಿಪಿಇ ಕಿಟ್‌ಗಳ ಖರೀದಿ ದರದ ಏರಿಳಿತವನ್ನು ಸಚಿವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಮೊದಲು ಕಿಟ್‌ಗಳನ್ನು ₹300ಕ್ಕೆ …
Read More »ತಂದೆಯ ಟಾರ್ಚರ್ ತಾಳಲಾರದೆ ಅನಾಥಾಶ್ರಮಕ್ಕೆ ಸೇರಿಸುವಂತೆ ಬಾಲಕಿ ಮನವಿ
ಮಡಿಕೇರಿ: ತನ್ನ ತಂದೆ ಪ್ರತಿನಿತ್ಯ ಕೊಡುತ್ತಿದ್ದ ಹಿಂಸೆಯನ್ನು ಸಹಿಸಿಕೊಳ್ಳಲಾರದೆ 8 ವರ್ಷದ ಬಾಲಕಿಯೊಬ್ಬಳು ನನ್ನನ್ನು ಅನಾಥ ಆಶ್ರಮಕ್ಕೆ ಸೇರಿಸುವಂತೆ ಗ್ರಾಮಸ್ಥರನ್ನು ಕೇಳಿಕೊಂಡಿರುವ ಹೃದವಿದ್ರಾವಕ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರಸಂತೆಯಲ್ಲಿ ನಡೆದಿದೆ. ಮಗುವಿನ ಕಷ್ಟವನ್ನು ಮನಗಂಡ ಸ್ಥಳೀಯರು ಮಕ್ಕಳ ಸಹಾಯವಾಣಿಗೆ ಕರೆಮಾಡಿ ಬಾಲಕಿಯನ್ನು ರಕ್ಷಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಪಾಪಿ ತಂದೆ ತನ್ನ 8 ವರ್ಷದ ಮಗಳಿಂದ ಕಷ್ಟವಾದ ಕೆಲಸಗಳನ್ನು ಮಾಡಿಸುತ್ತಿದ್ದ. ಒಂದು ವೇಳೆ ಕೆಲಸಗಳನ್ನು ಮಾಡದಿದ್ದರೆ ದಿನನಿತ್ಯ …
Read More »ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರು ಮಂದಿಯನ್ನು ಬೆಂಗಳೂರು ಕ್ರೈಮ್ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಐಪಿಎಲ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಆರು ಮಂದಿಯನ್ನು ಬೆಂಗಳೂರು ಕ್ರೈಮ್ ಬ್ರ್ಯಾಂಚ್ ಪೊಲೀಸರು ಬಂಧಿಸಿದ್ದಾರೆ. ಪ್ರಪಂಚದ ಅತ್ಯಂತ ಶ್ರೀಮಂತ ಕ್ರಿಕೆಟ್ ಟೂರ್ನಿ ಐಪಿಎಲ್ ಸೆಪ್ಟೆಂಬರ್ 19ರಿಂದ ಆರಂಭವಾಗಿದೆ. ಈಗಾಗಲೇ ನಾಲ್ಕು ಪಂದ್ಯಗಳು ಮುಗಿದಿವೆ. ಇದರ ಜೊತೆಗೆ ಐಪಿಎಲ್ ಬೆಟ್ಟಿಂಗ್ ದಂಧೆಗಳು ಕೂಡ ಆರಂಭವಾಗಿವೇ. ತಡರಾತ್ರಿ ಐಪಿಎಲ್ ದಂಧೆಯಲ್ಲಿ ತೊಡಗಿದ್ದ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ವಿಚಾರವಾಗಿ ಮಾತನಾಡಿರುವ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ತಡರಾತ್ರಿ ಬೆಟ್ಟಿಂಗ್ …
Read More »ಮಹಾ ಮಳೆಗೆ ಮುಂಬೈನ ರಸ್ತೆಗಳೇ ಮಾಯ-
ಮುಂಬೈ: ಮಂಗಳವಾರ ರಾತ್ರಿ ಸುರಿದ ಮಳೆದ ವಾಣಿಜ್ಯ ನಗರಿ ಮುಂಬೈನ ರಸ್ತೆಗಳೇ ಮಾಯವಾಗಿದ್ದು, ತಗ್ಗು ಪ್ರದೇಶಗಳಿಗೆ ಭಾರೀ ಪ್ರಮಾಣದ ನೀರು ನುಗ್ಗಿದೆ. ನಗರದ ಬಹುತೇಕ ರಸ್ತೆಗಳಲ್ಲಿ ಮೂರರಿಂದ ನಾಲ್ಕು ಅಡಿಯವರೆಗೆ ನೀರು ನಿಂತಿದೆ. ಮಂಗಳವಾರ ರಾತ್ರಿ ಆರಂಭವಾದ ಮಳೆ ಬುಧವಾರ ಬೆಳಗ್ಗೆಯವರೆಗೆ ಸುರಿದಿದೆ. ಮುಂದಿನ 24 ಗಂಟೆಯೂ ಸಹ ಭಾರೀ ಮಳೆಯಾಗಲಿದೆ. ಈ ವಾರ ನಗರದಲ್ಲಿ ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಬುಧವಾರದ ನಂತರ ತುಂತುರು ಮಳೆಯಾಗುವ ಸಾಧ್ಯತೆಗಳಿವೆ …
Read More »ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್‍ಗೆ ಕರೆ/2 ಬಸ್‍ಗಳಲ್ಲಿ ರೈತರನ್ನ ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಅಧಿವೇಶನದಲ್ಲಿ ಸಚಿವ ಎಸ್.ಟಿ.ಸೋಮಶೇಖರ್ ಎಪಿಎಂಸಿ ಮಸೂದೆ ಮಂಡಿಸಿದ ಬೆನ್ನಲ್ಲೇ ರಾಜ್ಯ ರೈತ ಸಂಘದ ಅಧ್ಯಕ್ಷ ಸೆಪ್ಟೆಂಬರ್ 28ಕ್ಕೆ ಕರ್ನಾಟಕ ಬಂದ್‍ಗೆ ಕರೆ ನೀಡಿದ್ದಾರೆ. ಈಗಾಗಲೇ ಫ್ರೀಡಂಪಾರ್ಕ್ ಮತ್ತು ಮೌರ್ಯ ಸರ್ಕಲ್‍ನಲ್ಲಿ ರೈತರು ರಸ್ತೆ ತಡೆಗೆ ಸಜ್ಜಾಗುತ್ತಿದ್ದರು. ಇದೀಗ ಪೊಲೀಸರು ಹಲವು ರೈತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಹೆದ್ದಾರಿ ಬಂದ್ ಮಾಡಿ ಶುಕ್ರವಾರ ಬೃಹತ್ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಆದರೆ ಈಗಲೇ ರೈತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು …
Read More »