Breaking News

Uncategorized

ಸ್ಯಾಂಡಲ್‌ವುಡ್‌ Drugs ಜಾಲ: ನಟ ಯೋಗಿ​, ಕ್ರಿಕೆಟಿಗ NC ಅಯ್ಯಪ್ಪ ವಿಚಾರಣೆ

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ನಟ ಲೂಸ್​ ಮಾದ ಯೋಗೀಶ್​ ಹಾಗೂ ಮಾಜಿ ಕ್ರಿಕೆಟಿಗ NC ಅಯ್ಯಪ್ಪರ ವಿಚಾರಣೆ ಸಹ ನಡೆಸಲಾಗಿದೆ ಎಂಬ ಮಾಹಿತಿ ದೊರೆತಿದೆ. ಆಂತರಿಕ ಭದ್ರತಾ ವಿಭಾಗದ ಪೊಲೀಸರಿಂದ ವಿಚಾರಣೆ ನಡೆದಿದ್ದು ಡ್ರಗ್ ಪೆಡ್ಲರ್ ಒಬ್ಬನ ಹೇಳಿಕೆ ಆಧಾರದ ಮೇಲೆ ವಿಚಾರಣೆ ನಡೆಸಲಾಯಿತು ಎಂದು ಹೇಳಲಾಗಿದೆ. ಇಬ್ಬರನ್ನು ಶಾಂತಿನಗರದ ಕೇಂದ್ರ ಕಚೇರಿಯಲ್ಲಿ ವಿಚಾರಣೆ ಮಾಡಿದ್ದೇವೆ ಎಂದು ಆಂತರಿಕ ಭದ್ರತಾ ವಿಭಾಗದ ADGP ಭಾಸ್ಕರ್ …

Read More »

12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಸರಣಿ ಬಾಂಬ್ ಸ್ಫೋಟ ಆರೋಪಿ CCB ಬಲೆಗೆ

ಬೆಂಗಳೂರು: ಕಳೆದ 12 ವರ್ಷಗಳ ಹಿಂದೆ ಮಡಿವಾಳ ಸೇರಿದಂತೆ 9 ಕಡೆಗಳಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೇಂದ್ರ ತನಿಖಾ ಸಂಸ್ಥೆಯ ನೆರವಿನೊಂದಿಗೆ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶೊಯೇಬ್ ಬಂಧಿತ ಆರೋಪಿ. ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ‌ ಸಿಸಿಬಿ ಪೊಲೀಸರು ಕೇರಳಕ್ಕೆ ಕರೆ ತರುತ್ತಿದ್ದಾರೆ. ಮಡಿವಾಳ ಸೇರಿದಂತೆ‌ 9 ಕಡೆಗಳಲ್ಲಿ ಬಾಂಬ್ ಸ್ಪೋಟದಲ್ಲಿ ಭಾಗಿಯಾಗಿದ್ದ.‌ ಕೃತ್ಯದಲ್ಲಿ‌ ಓರ್ವ ಬಲಿಯಾದರೆ 20 ಮಂದಿ ಗಾಯಗೊಂಡಿದ್ದರು. ಬಳಿಕ‌ ಅದೇ …

Read More »

ಆರ್‌ಸಿಯುಗೆ 126 ಎಕರೆ ಮಂಜೂರು.

ಬೆಳಗಾವಿ: ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ 126 ಎಕರೆ 27 ಗುಂಟೆ ಜಮೀನನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಸೋಮವಾರ ಅಧಿಕೃತ ಆದೇಶ ಹೊರಡಿಸಿದೆ. ಇದರೊಂದಿಗೆ ವಿಶ್ವವಿದ್ಯಾಲಯದ ಅಭಿವೃದ್ಧಿಗೆ ಹಾಗೂ ವಿಸ್ತರಣೆಗೆ ಉಂಟಾಗಿದ್ದ ಜಾಗದ ಕೊರತೆ ನಿವಾರಣೆಯಾದಂತಾಗಿದೆ. ‘ತಾಲ್ಲೂಕಿನ ಬಾಗೇವಾಡಿ (ಸಂಕನಾಯ್ಕನಕೊಪ್ಪ) ಗ್ರಾಮದ ರಿ.ಸ.ನಂ. 421/2, 423, 426, 427, 429 ಮತ್ತು 431ರಲ್ಲಿ 87 ಎಕರೆ 39 ಗುಂಟೆ ಹಾಗೂ ಹಾಲಗಿಮರ್ಡಿ ಗ್ರಾಮದ ರಿ.ಸ.ನಂ. 48, 48 ಹಾಗೂ 49ರ …

Read More »

ಗುಡ್ ನ್ಯೂಸ್ : ರಾಜ್ಯದಲ್ಲಿ ಇಳಿಯುತ್ತಿದೆ ಕೊರೋನಾ

ಬೆಂಗಳೂರು  : ರಾಜ್ಯದಲ್ಲಿ ಸೋಮವಾರ 7,339 ಮಂದಿಗೆ ಸೋಂಕು ದೃಢಪಟ್ಟಿದ್ದು 122 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5.26 ಲಕ್ಷಕ್ಕೆ ಹಾಗೂ ಕೊರೋನಾ ಸಾವಿನ ಸಂಖ್ಯೆ 8,145ಕ್ಕೆ ಏರಿಕೆಯಾಗಿದೆ. ಆದರೆ ಸಕ್ರಿಯ ಸೋಂಕಿ​ತರ ಸಂಖ್ಯೆ 98 ಸಾವಿ​ರ​ದಿಂದ 95,335ಕ್ಕೆ ಇಳಿ​ದಿ​ದೆ. ಇದೇ ವೇಳೆ 9,925 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 4.23 ಲಕ್ಷಕ್ಕೆ ಏರಿಕೆಯಾಗಿದೆ. ಸೋಮವಾರ ಒಟ್ಟು 42,691 ಪರೀಕ್ಷೆ ನಡೆಸಿದ್ದು, …

Read More »

ಗುತ್ತಿಗೆ ಆಧಾರದ NHM ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ವಿಶೇಷ ಹೆಚ್ಚುವರಿ ಭತ್ಯೆ

ಬೆಂಗಳೂರು : ರಾಜ್ಯ ಸರ್ಕಾರವು ರಾಷ್ಟ್ರೀಯ ಆರೋಗ್ಯ ಅಭಿಯಾನ (NHM) ದಡಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 14,252 ವಿವಿಧ ಹುದ್ದೆಗಳಿಗೆ ವಿಶೇಷ ಹೆಚ್ಚುವರಿ ಭತ್ಯೆ ನೀಡಲು ಸರ್ಕಾರ ಆದೇಶಿಸಿದೆ. ಆಯುಷ್ ಮತ್ತು ಎಂಬಿಬಿಎಸ್ ವೈದ್ಯರು ಹಾಗೂ ತಜ್ಞರಿಗೆ 10 ಸಾವಿರ ರೂ. ಶುಶ್ರೂಷಕಿಯರಿಗೆ ಎ.ಎನ್. ಎಂ ಲ್ಯಾಬ್ ಟೆಕ್ನೀಷಿಯನ್ ಹಾಗೂ ಫಾರ್ಮಾಸಿಸ್ಟ್ ಗಳಿಗೆ ತಲಾ 5 ಸಾವಿರ ರೂ. ನಂತೆ ಮುಂದಿನ ಆರು ತಿಂಗಳ …

Read More »

ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ಓರ್ವ ವೈದ್ಯ ಹಾಗೂ ನರ್ಸ್ ಮೇಲೆ ಹಲ್ಲೆ

ಬೆಳಗಾವಿ- ಬೆಳಗಾವಿಯ ಭೀಮ್ಸ್ ಆಸ್ಪತ್ರೆಯಲ್ಲಿ ಓರ್ವ ವೈದ್ಯ ಹಾಗೂ ನರ್ಸ್ ಮೇಲೆ ಹಲ್ಲೆ ಮಾಡಿದ ಘಟನೆ ತಡರಾತ್ರಿ ನಡೆದಿದೆ ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ತಡರಾತ್ರಿ ಮಹಿಳೆಯೊಬ್ಬಳಿಗೆ ಉಸಿರಾಟದ ತೊಂದರೆ ಆಗುತ್ತಿದೆ ಎಂದು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ, ಕೆಲ ಹೊತ್ತಿನಲ್ಲಿಯೇ ಮಹಿಳೆ ಮೃತಪಟ್ಟಿದ್ದಾಳೆ,ಆದ್ರೆ ಅವಳಿಗೆ ಸರಿಯಾಗಿ ಚಿಕಿತ್ಸೆ ಕೊಡಲಿಲ್ಲ ಎಂದು ಆರೋಪಿಸಿ,ಮೃತ ಮಹಿಳೆಯ ಸಮಂಧಿಕರು ವೈದ್ಯರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ ಮಹಿಳೆ ಸಾವನ್ನೊಪ್ಪುತ್ತಿದ್ದಂತೆಯೇ ಆಸ್ಪತ್ರೆಯಲ್ಲಿ ಗದ್ದಲ …

Read More »

ಭಾರತೀಯ ನೌಕಾದಳದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಅಧಿಕಾರಿಗಳು ಯುದ್ಧನೌಕೆಗಳಲ್ಲಿ

ನವದೆಹಲಿ: ಭಾರತೀಯ ನೌಕಾದಳದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಇಬ್ಬರು ಮಹಿಳಾ ಅಧಿಕಾರಿಗಳು ಯುದ್ಧನೌಕೆಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶ ಪಡೆದಿದ್ದಾರೆ. ಈ ಮೂಲಕ ನೌಕಾದಳದಲ್ಲಿಯೂ ಮಹಿಳೆಯರು ತಮ್ಮದೇ ಛಾಪು ಮೂಡಿಸಲು ಆರಂಭಿಸಿದ್ದಾರೆ. ಸಬ್ ಲೆಫ್ಟಿನೆಂಟ್ ಕುಮುದಿನಿ ತ್ಯಾಗಿ ಹಾಗೂ ಸಬ್ ಲೆಫ್ಟಿನೆಂಟ್ ರಿತಿ ಸಿಂಗ್ ಅವರು ಹೆಲಿಕಾಪ್ಟರ್ ವಿಭಾಗದಲ್ಲಿ ವೀಕ್ಷಕರು ಅಥವಾ ವಾಯುಗಾಮಿ ತಂತ್ರಜ್ಞರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಇಬ್ಬರು ಛಲಗಾರ್ತಿಯರು ಭಾರತೀಯ ನೌಕಾಪಡೆಯ ಯುದ್ಧ ಹೆಲಿಕಾಪ್ಟರ್‍ಗಳನ್ನು ಆನ್‍ಬೋರ್ಡ್ ಯುದ್ಧನೌಕೆಗಳ ಮೂಲಕ ನಿರ್ವಹಿಸಲಿದ್ದಾರೆ. …

Read More »

ಶಾಸಕ ಐಹೊಳೆಗೆ ಕೋವಿಡ್ ದೃಢ.

ಬೆಳಗಾವಿ: ರಾಯಬಾಗ ಬಿಜೆಪಿ ಶಾಸಕ ಡಿ.ಎಂ. ಐಹೊಳೆ ಅವರಿಗೆ ಸೋಮವಾರ ಕೋವಿಡ್-19 ದೃಢಪಟ್ಟಿದೆ. ಈ ಬಗ್ಗೆ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ‌ ಬರೆದುಕೊಂಡಿರುವ ಅವರು, ‘ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಯಾವುದೇ ರೀತಿಯ ರೋಗದ ಲಕ್ಷಣಗಳಿಲ್ಲ. ಆರೋಗ್ಯವಾಗಿದ್ದು, ಬೆಂಗಳೂರಿನ ಮನೆಯಲ್ಲಿ ಪ್ರತ್ಯೇಕವಾಗಿರುತ್ತೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗದಂತೆ ಬೆಂಗಳೂರಿನಿಂದಲೇ ನಿಗಾ ವಹಿಸುತ್ತೇನೆ’ ಎಂದು ತಿಳಿಸಿದ್ದಾರೆ.

Read More »

ಜೂಜಾಟ: 22 ಮಂದಿ ಬಂಧನ.

ಬೆಳಗಾವಿ: ಇಲ್ಲಿನ ರಾಜಹಂಸ ಗಲ್ಲಿಯ ಸದಾನಂದ ಮಠದ ಪಕ್ಕದ ಗಲ್ಲಿಯಲ್ಲಿ ಭಾನುವಾರ ಮಧ್ಯರಾತ್ರಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ 22 ಮಂದಿಯನ್ನು ಟಿಳಕವಾಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಜೂರ ಚೋಪಧಾರ, ಪ್ರದೀಪ ಲಾಟೂಕರ, ಮೋಯಿಜ ಗಚವಾಲೆ, ವಿಜಯ ಪಾಟೀಲ, ಪರಶುರಾಮ ಮೇತ್ರಿ, ಸುಶೀಲ ಮುದೋಳಕರ, ಬಾಬು ಯಾದವ, ಅನಿಲ ಯಳ್ಳೂರಕರ, ಕಿಸನ ಪಾಟೀಲ, ಜಹಾಂಗೀರಖಾನ ಪಠಾಣ, ವಿಜಯ ಶಿಂದೋಳಕರ, ದೀಪಕ ಹೊನ್ಯಾಳಕರ, ಆಕಾಶ ಜಕ್ಕಾನೆ, ವಿನಾಯಕ ಗಣಾಚಾರಿ, ಸಾಗರ ಮುತಗೇಕರ, …

Read More »

ಸಿಎಂ ಬಿ ಎಸ್ ಯಡಿಯೂರಪ್ಪ ಓರ್ವ ಸರ್ವಾಧಿಕಾರಿ ; ವಾಟಾಳ್ ನಾಗರಾಜ್ ಗಂಭೀರ ಆರೋಪ

ಬೆಳಗಾವಿ : ರಾಜ್ಯದಲ್ಲಿ ಅನೇಕ ಮುಖ್ಯಮಂತ್ರಿಗಳನ್ನು ನಾನು ನೋಡಿದ್ದೇನೆ. ಆದರೆ, ಬಿ ಎಸ್ ಯಡಿಯೂರಪ್ಪ ಅವರು ಓರ್ವ ಸರ್ವಾಧಿಕಾರಿ ಮುಖ್ಯಮಂತ್ರಿ. ನನ್ನನ್ನು ವಿಧಾನಸಭೆ ಹಾಗೂ ವಿಧಾನ ಪರಿಷತ್ ಪ್ರವೇಶ ಆಗದಂತೆ ನೋಡಿಕೊಂಡಿದ್ದಾರೆ. ನನ್ನ ವಿರುದ್ಧ ಶ್ರೀಮಂತರನ್ನು ನಿಲ್ಲಿಸಿ ಸೋಲಿಸುತ್ತಾರೆ ಎಂದು ಬೆಳಗಾವಿಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ ವಿಶೇಷ ಅಧಿವೇಶನ ನಡೆಸಬೇಕು. ಪ್ರವಾಹ, ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಗಂಭೀರ ಚರ್ಚೆ ನಡೆಸಿ, …

Read More »