ಕೋಲಾರ: ನಗರದಲ್ಲಿರುವ ಏಷ್ಯಾದ ಅತಿ ದೊಡ್ಡ ಟೊಮೆಟೋ ಮಾರುಕಟ್ಟೆಯಲ್ಲಿ ಶುಕ್ರವಾರ ಬಾಕ್ಸ್ ಟೊಮೆಟೋ 810 ರೂ.ವರೆಗೂ ಹರಾಜಾಗಿದ್ದು, ಟೊಮೆಟೋ ಬೆಳೆದವರ ಸಂತಸಕ್ಕೆಕಾರಣವಾಗಿದೆ. ಹದಿನೈದು ಕೆ.ಜಿ. ತುಂಬಿದ ಬಾಕ್ಸ್ ಒಮ್ಮೊಮ್ಮೆ ಕೇವಲ ಹದಿನೈದು ರೂ.ಗಿಂತಲೂ ಕಡಿಮೆ ಕುಸಿದು ರೈತರು ಟೊಮೆಟೋವನ್ನು ಬೀದಿಗೆ ಎಸೆಯುವುದನ್ನು ಕಾಣುತ್ತಿದ್ದೆವು. ಆದರೆ, ನಾಲ್ಕು ವರ್ಷಗಳ ನಂತರ ಇದೇ ಮೊದಲ ಬಾರಿಗೆ ಟೊಮೆಟೋ ಬಾಕ್ಸ್ 800 ರ ಗಡಿ ದಾಟಿ ಹರಾಜಾಗಿರುವುದು ಧಾರಣೆ ಏರುಮುಖದ ನಿರೀಕ್ಷೆ ಹುಟ್ಟಿಸಿದೆ. ಮಳೆ …
Read More »ಡ್ರಗ್ಸ್ ಮಾಫಿಯಾ ಬೇರು ಸಹಿತ ಕಿತ್ತೊಗೆಯಲು ಬದ್ಧ: ಡಿಸಿಎಂ ಅಶ್ವತ್ಥ್ ನಾರಾಯಣ್
ಮಳವಳ್ಳಿ, – ರಾಜ್ಯದ ಕಳಂಕಕ್ಕೆ ಕಾರಣವಾದ ಡ್ರಗ್ಸ್ ಮಾಫಿಯಾವನ್ನು ಬೇರು ಸಹಿತ ಕಿತ್ತೊಗೆಯಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದರು. ಕಾವೇರಿ ನದಿಯಿಂದ ರಾಮನಗರ ಜಿಲ್ಲೆಗೆ ಕುಡಿಯುವ ನೀರಿನ ಸುಮಾರು 540 ಕೋಟಿ ವೆಚ್ಚದಲ್ಲಿ ಯೋಜನೆ ತಾಲ್ಲೂಕಿನ ನೆಟ್ಕಲ್ ಗ್ರಾಮದ ಬಳಿ ನಡೆಯುತ್ತಿರುವ ಪೈಪ್ಲೈನ್ ಯಾರ್ಡ್ ಕಾಮಗಾರಿ ಪರಿಶೀಲನೆ ನಡೆಸಿ ನಂತರ ಮಾತನಾಡಿದ ಅವರು, ಡ್ರಗ್ಸ್ ದಂಧೆಯನ್ನು ಬೇರು ಸಹಿತ ಕಿತ್ತೊಗೆಯಲು ನಾವು ಬದ್ಧರಾಗಿದ್ದೇವೆ ಎಂದರು. …
Read More »ಫ್ಯಾನ್, ಬೆಡ್ ಇಲ್ಲ- ಇಂದ್ರಾಣಿ ಪಕ್ಕದಲ್ಲೇ ರಿಯಾ ಜೈಲುವಾಸ
ಮುಂಬಯಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಗೆಳತಿ ರಿಯಾ ಚಕ್ರವರ್ತಿ ಜಾಮೀನು ಅರ್ಜಿಯನ್ನು ಮುಂಬೈ ಕೋರ್ಟ್ ವಜಾಗೊಳಿಸಿದ್ದು, ಹೀಗಾಗಿ ಆಕೆಗೆ ಜೈಲೇ ಗತಿಯಾಗಿದೆ. ಹೈಫೈ ಜೀವನ ನಡೆಸುತ್ತಿದ್ದ ರಿಯಾ ಸದ್ಯ ಸೆರೆಮನೆ ವಾಸಿಯಾಗಿದ್ದು, ಮೂಲ ಸೌಕರ್ಯಗಳಿಲ್ಲದ ಕತ್ತಲೆ ಕೋಣೆಯಲ್ಲಿ ದಿನ ಕಳೆಯಬೇಕಿದೆ. ಇನ್ಮೇಲೆ ರಿಯಾಗೆ ಚಾಪೆನೇ ಗತಿ? ಹೌದು ಭದ್ರತೆಯ ಕಾರಣಗಳಿಂದ ರಿಯಾ ಚಕ್ರವರ್ತಿಯನ್ನು ಪ್ರತ್ಯೇಕ ಕೋಣೆಯಲ್ಲಿಡಲಾಗಿದೆ ಎಂದು ಮೂಲಗಳು ತಿಳಿಸಿದ್ದು, ರಿಯಾ ಇರುವ ಬೈಕುಲ್ಲಾ ಜೈಲಿನಲ್ಲಿ ಫ್ಯಾನ್ ಇಲ್ಲ, …
Read More »ಅಭ್ಯರ್ಥಿಗಳಿಗೆ ಚುನಾವಣಾ ಆಯೋಗದ ಭರ್ಜರಿ ಶಾಕ್, ಮರ್ಯಾದೆ ಮೂರು ಕಾಸು!
ನವದೆಹಲಿ ಸದ್ದಿಲ್ಲದೆ ಚುನಾವಣಾ ಆಯೋಗ ಶಾಕ್ ನೀಡಿದೆ. ಕ್ರಿಮಿನಲ್ ಆರೋಪ ಎದುರಿಸುತ್ತಿರುವ ಅಭ್ಯರ್ಥಿಗಳಿಗೆ ಆಘಾತ ನೀಡಿದೆ. ಚುನಾವಣೆಗೂ ಮುನ್ನ ಮೂರು ಬಾರಿ ಅಭ್ಯರ್ಥಿಗಳು ತಮ್ಮ ಕ್ರಿಮಿನಲ್ ಆರೋಪಗಳನ್ನು ಜನರ ಮುಂದೆ ಇಡಬೇಕಾಗುತ್ತದೆ. ನಾಮಪತ್ರ ಹಿಂಪಡೆಯುವ ನಾಲ್ಕು ದಿನಗಳ ಮುಂಚೆ ಇದಾದ ಮೇಲೆ ನಾಮಪತ್ರ ಹಿಂಪಡೆಯುವ ಕೊನೆಯ ದಿನಕ್ಕೆ 5 ರಿಂದ 8 ದಿನಗಳ ನಡುವೆ ಮತ್ತು ಕೊನೆಯದಾಗಿ ಬಹಿರಂಗ ಪ್ರಚಾರ ಅಂತ್ಯ ಮಾಡುವ ಮುನ್ನ 9 ದಿನದಿಂದ ಹಿಡಿದು ಕೊನೆಯವರೆಗೆ …
Read More »ನಟಿ ರಾಗಿಣಿ, ಸಂಜನಾಗಿಲ್ಲ ಸದ್ಯಕ್ಕಿಲ್ಲ ರಿಲೀಫ್ : ಮತ್ತೆ 3 ದಿನ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
ಬೆಂಗಳೂರು : ಡ್ರಗ್ಸ್ ದಂಧೆಯ ಆರೋಪದಲ್ಲಿ ಸಿಸಿಬಿ ವಶದಲ್ಲಿರುವ ಸ್ಯಾಂಡಲ್ವುಡ್ ನಟಿ ರಾಗಿಣಿ, ಸಂಜನಾ ರನ್ನ ಮತ್ತೆ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ 1 ನೇ ಎಸಿಎಂಎಂ ನ್ಯಾಯಧೀಶರು ಆದೇಶ ಹೊರಡಿಸಿದ್ದಾರೆ. ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ ಕೋರ್ಟ್ ಜಡ್ಜ್ ಮುಂದೆ ಹಾಜರು ಪಡಿಸಿದ್ದರು. ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಯ ಜೊತೆಗೆ ನಟಿ ಸಂಜನಾ, ರಾಹುಲ್, ಲೂಮ್, ಪ್ರಶಾಂತ್ ರಂಕಾ , ರವಿ ಶಂಕರ್, ನಿಯಾಜ್ ಆರು …
Read More »ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ : ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ
ಬೆಂಗಳೂರು : ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು , ಕಾಂಗ್ರೆಸ್ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಿದ್ದು, ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೈಬಿಡಲಾಗಿದ್ದು, ಸಿಡಬ್ಲ್ಯೂಸಿಯ ಸದಸ್ಯರನ್ನಾಗಿ ಮುಂದುವರಿಸಲಾಗಿದೆ. ವಿಶೇಷವಾಗಿ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ರಾಜ್ಯದ ಐವರಿಗೆ ಸ್ಥಾನ ನೀಡಿದೆ.ರಾಷ್ಟ್ರೀಯ ಕಾರ್ಯಕಾರಿ ಸಮಿತಿಯಲ್ಲಿ ಮಲ್ಲಿಕಾರ್ಜುನ ಖರ್ಗೆ. ಕೆ ಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ದಿನೇಶ್ ಗುಂಡೂರಾವ್, ಬಿ ವಿ ಶ್ರೀನಿವಾಸ್ ಗೆ ಸ್ಥಾನ ನೀಡಲಾಗಿದೆ. ಮಹತ್ವದ …
Read More »ಕರ್ನಾಟಕದ 130 ತಾಲೂಕುಗಳು `ಪ್ರವಾಹ ಪೀಡಿತ’ : ರಾಜ್ಯ ಸರ್ಕಾರ ಘೋಷಣೆ
ಬೆಂಗಳೂರು : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ರಾಜ್ಯ ಸರ್ಕಾರವು ಇದೀಗ 130 ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಣೆ ಮಾಡಿದೆ. ರಾಜ್ಯದಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಪ್ರವಾಹ ಉಂಟಾಗಿತ್ತು. ಇದೀಗ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ರಾಜ್ಯದ 23 ಜಿಲ್ಲೆಗಳ 130 ತಾಲೂಕುಗಳನ್ನು ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಈ …
Read More »Bengaluru City ಕೇಂದ್ರ ಸಚಿವ ಸುರೇಶ್ ಅಂಗಡಿ, ಶಾಸಕ ಎಸ್.ಆರ್.ವಿಶ್ವನಾಥ್ಗೆ ಕೊರೊನಾ ಸೋಂಕು
ಬೆಂಗಳೂರು: ಕೇಂದ್ರ ಸಚಿವ ಸುರೇಶ್ ಅಂಗಡಿ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಕುರಿತು ಇಬ್ಬರೂ ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಸುರೇಶ್ ಅಂಗಡಿಯವರು ಟ್ವೀಟ್ ಮಾಡಿ, ನಾನು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ಯಾವುದೇ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆ ಪಡೆಯುತ್ತಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್-19 ಪರೀಕ್ಷೆ ಮಾಡಿಸಿಕೊಂಡು, ನಿಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಲು ವಿನಂತಿಸಿಕೊಳ್ಳುತ್ತೇನೆ …
Read More »‘ಕ್ಷೇತ್ರದಲ್ಲಿ ಹಿಂದೆ ಅನುದಾನದ ಸದುಪಯೋಗವೇ ಆಗಿಲ್ಲ’
ಬೆಳಗಾವಿ: ‘ಕ್ಷೇತ್ರದಲ್ಲಿ ಈ ಹಿಂದೆ ಅನುದಾನ ಸದುಪಯೋಗವೇ ಆಗಿಲ್ಲ’ ಎಂದು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ದೂರಿದರು. ಕ್ಷೇತ್ರದ ಹೌಸಿಂಗ್ ಬೋರ್ಡ್ ಕಾಲೊನಿಯಲ್ಲಿ ₹ 1.40 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ‘ಕ್ಷೇತ್ರವನ್ನು ಸುತ್ತು ಹಾಕಿ ಗಮನಿಸಿದರೆ ಈವರೆಗೂ ಏಕೆ ಜನಪ್ರತಿನಿಧಿಗಳು ಜನರ ಸಮಸ್ಯೆಗೆ ಸ್ಪಂದಿಸಲಿಲ್ಲ ಎನ್ನುವುದೇ ಅರ್ಥವಾಗುತ್ತಿಲ್ಲ. ಸರ್ಕಾರದ ಅನುದಾನವಿರುವಾಗ ಅದನ್ನು ಸದುಪಯೋಗಪಡಿಸಿಕೊಳ್ಳುವ ಪ್ರಯತ್ನವೇ ಆಗಲಿಲ್ಲ. …
Read More »ನಟಿ ಸಂಜನಾ ಸೇರಿ ಉಳಿದ ಆರೋಪಿಗಳೂ 3 ದಿನ ಸಿಸಿಬಿ ಕಸ್ಟಡಿಗೆ
ಬೆಂಗಳೂರು: ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಸಿಸಿಬಿ ಪೊಲೀಸರಿಂದ ಬಂಧನವಾಗಿರುವ ನಟಿ ಸಂಜನಾ, ರಾಗಿಣಿ, ರವಿಶಂಕರ್, ಲೂಮ್ ಪೆಪ್ಪರ್, ಪ್ರಶಾಂತ್ ರಂಕಾ, ರಾಹುಲ್ ಅವರನ್ನು ಮತ್ತೆ ಮೂರು ದಿನಗಳ ಕಾಲ ಸಿಸಿಬಿ ಪೊಲೀಸರ ಕಸ್ಟಡಿಗೆ ನ್ಯಾಯಾಲಯ ನೀಡಿದೆ. ಸೋಮವಾರದವರೆಗೂ ನಟಿ ರಾಗಿಣಿ, ಸಂಜನಾ ಸೇರಿದಂತೆ 6 ಮಂದಿ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲೇ ಉಳಿಯಲ್ಲಿದ್ದಾರೆ. ಇಂದು ನಟಿ ರಾಗಿಣಿ ಮತ್ತು ಸಂಜನಾ ಅವರನ್ನು ಸಿಸಿಬಿ ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ 1ನೇ ಎಸಿಎಂಎಂ …
Read More »