ಹುಬ್ಬಳ್ಳಿ :ಶವ ಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದೇ ತೊಂದರೆ ಅನುಭವಿಸುತ್ತಿರುವ ತಾಲೂಕಿನ ಸೊಟಕನಾಳ ಗ್ರಾಮಸ್ಥರು ಸೂಕ್ತ ದಾರಿ ಕಲ್ಪಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು. ಸೊಟಕನಾಳ ಗ್ರಾಮದ ಮುಖಂಡ ಚನ್ನಪ್ಪ ಹಾಲವಾರ ಮಾತನಾಡಿ, ಸೊಟಕನಾಳದಲ್ಲಿ 1997ರಲ್ಲಿ ಅಂದಿನ ತಹಸೀಲ್ದಾರ್ರು ರಿಸನಂ 2ರಲ್ಲಿ 20 ಗುಂಟೆ ಜಾಗವನ್ನು ಸ್ಮಶಾನಕ್ಕೆ ನೀಡಿದ್ದರು. ಆದರೆ, ಸ್ಮಶಾನಕ್ಕೆ ತೆರಳಲು ಜಾಗ ಇಲ್ಲದ್ದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತ ಬಂದಿದ್ದಾರೆ. …
Read More »ದೇವಸ್ಥಾನದಲ್ಲಿ ಅರ್ಚಕರ ಹತ್ಯೆ; ಮೃತರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ
ಮಂಡ್ಯ: ಜಿಲ್ಲೆಯಲ್ಲಿ 3 ಕೊಲೆ ಮಾಡಿ, ದೇವಸ್ಥಾನ ದೋಚಿರುವ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ನಿನ್ನೆ ಮಂಡ್ಯ ಜಿಲ್ಲೆಯ ಅರ್ಕೇಶ್ವರ ದೇವಸ್ಥಾನ ದೋಚಿದ ಕದೀಮರು, ಇಬ್ಬರು ಕಾವಲುಗಾರರು ಹಾಗೂ ಒಬ್ಬ ಆರ್ಚಕನನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಟ್ವೀಟ್ ಮಾಡಿರುವ ಯಡಿಯೂರಪ್ಪ ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5.00 ಲಕ್ಷ ರೂ. ಪರಿಹಾರ ನೀಡಲಾಗುವುದು. …
Read More »ರಾಜ್ಯದಲ್ಲೀಗ ಸಕ್ರಿಯ ಕೊರೋನಾ ಸೋಂಕಿತರು 1 ಲಕ್ಷ!
ಬೆಂಗಳೂರು : ರಾಜ್ಯದಲ್ಲಿ ಗುರುವಾರ ಹೊಸದಾಗಿ 9,217 ಜನರಲ್ಲಿ ಸೋಂಕು ಕಾಣಿಸಿಕೊಳ್ಳುವುದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ ಒಂದು ಲಕ್ಷ (1,01,537) ದಾಟಿದೆ. ಇದರೊಂದಿಗೆ ಈವರೆಗೆ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 4.30 ಲಕ್ಷ ಮುಟ್ಟಿದೆ. ಇದೇ ವೇಳೆ 129 ಜನರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 6,937ಕ್ಕೆ ತಲುಪಿದೆ. ಸದ್ಯ ಮಹಾರಾಷ್ಟ್ರ ಮತ್ತು ಆಂಧ್ರ ಪ್ರದೇಶದಲ್ಲಿ ಮಾತ್ರ ಸಕ್ರಿಯ ಪ್ರಕರಣಗಳ ಸಂಖ್ಯೆ ಲಕ್ಷದ ಮೇಲಿದೆ. ದೇಶದ ಒಟ್ಟು ಕೊರೋನಾ ಸೋಂಕಿತರಲ್ಲಿ ಶೇ. …
Read More »ಚೀನಾ ಆತಿಕ್ರಮಣ ಮಾಡಿದ ಭೂಮಿ ಹಿಂಪಡೆಯುವಿರಾ? ಅಥವಾ ‘ದೇವರ ಆಟ’ಎಂದು ಸುಮ್ಮನಾಗುವಿರಾ: ಕೇಂದ್ರಕ್ಕೆ ರಾಹುಲ್ ಗಾಂಧಿ ಪ್ರಶ್ನೆ
ನವದೆಹಲಿ: ‘ಚೀನಾ ಅತಿಕ್ರಮಣ ಮಾಡಿರುವ ಭೂಮಿಯನ್ನು’ ಹಿಂಪಡೆಯಲು ಯಾವುದೇ ಯೋಜನೆ ರೂಪಿಸುತ್ತಿದ್ದೀರಾ ಅಥವಾ ಅದನ್ನೂ ‘ದೇವರ ಆಟ’ ಎಂದು ಸುಮ್ಮನಿರುವಿರಾ? ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ. “ಚೀನಿಯರು ನಮ್ಮ ಭೂಮಿಯನ್ನು ಕಬಳಿಸಿದ್ದಾರೆ.ಅದನ್ನು ಮರಳಿ ಪಡೆಯಲು ಭಾರತ ಸರ್ಕಾರ ಏನು ತಯಾರಿ ನಡೆಸಿದೆ? ಅಥವಾ ಇದನ್ನೂ’ ದೇವರ ಆಟ’ ಎಂದು ಕೈಬಿಡುತ್ತೀರಾ?” ಕಾಂಗ್ರೆಸ್ ನಾಯಕ ಟ್ವೀಟ್ ನಲ್ಲಿ ಪ್ರಶ್ನಿಸಿದ್ದಾರೆ. ಭಾರತವು ಇತ್ತೀಚೆಗೆ ಪ್ಯಾಂಗೊಂಗ್ ಸರೋವರದ …
Read More »ಇನ್ನೂ ಹಲವರ ಬಣ್ಣ ಬಯಲಾಗಲಿದೆ : ಸಿಎಂ ವಾರ್ನಿಂಗ್!
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು ಗಂಭೀರವಾಗಿ ಪರಿಗಣಿಸಿ ಸಮಗ್ರ ತನಿಖೆ ನಡೆಸುತ್ತಿದ್ದೇವೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ನಾವು ಆಳವಾದ ತನಿಖೆಗೆ ಇಳಿದಿದ್ದು, ಈಗಾಗಲೇ ಕೆಲವರ ಬಣ್ಣ ಬಯಲಾಗಿದೆ. ಇನ್ನೂ ಹಲವರ ಬಣ್ಣ ಬಯಲಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಗುರವಾರ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಡ್ರಗ್ಸ್ ದಂಧೆಯಲ್ಲಿ ಪ್ರಭಾವಿಗಳು ಭಾಗಿಯಾಗಿರುವ ಕುರಿತ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಸದ್ಯ ದಂಧೆ ಬಗ್ಗೆ …
Read More »ಸತ್ಯಕ್ಕಾಗಿ ಸರ್ಕಾರದ ವಿರುದ್ಧ ಮಗಳ ಹೋರಾಟ: ಕಂಗನಾ ಪೋಷಕರು
ಮುಂಬೈ: ಜನರು ಕಂಗನಾ ರಣಾವತ್ ಅವರನ್ನು ಬೆಂಬಲಿಸುತ್ತಿರುವುದನ್ನು ಕಂಡು ತುಂಬಾ ಸಂತೋಷವಾಯಿತು. ಸತ್ಯಕ್ಕಾಗಿ ಸರ್ಕಾರವನ್ನೇ ಎದರು ಹಾಕಿಕೊಂಡು ಅವಳು ಮಾಡುತ್ತಿರುವ ಹೋರಾಟವನ್ನು ಕಂಡು ಹೆಮ್ಮೆಯಾಗುತ್ತಿದೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ತಾಯಿ ಆಶಾ ರಣಾವತ್ ಹಾಗೂ ತಂದೆ ಅಮರ್ದೀಪ್ ರಣಾವತ್ ಭಾವುಕರಾದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಜನರು ಮಾತ್ರವಲ್ಲ ಕರ್ಣಿ ಸೇನೆ ಹಾಗೂ ಬಿಜೆಪಿ ಸೇರಿ ಹಲವು ರಾಜಕೀಯ ಪಕ್ಷಗಳು ಸಹ ಕಂಗನಾ ರಣಾವತ್ ಅವರಿಗೆ ಬೆಂಬಲ …
Read More »ಉಮೇಶ ಕತ್ತಿ ಅವರು ನಮ್ಮ ಹಳೆಯ ಸ್ನೇಹಿತರು. ಅವರು ಮಂತ್ರಿಯಾಗಲಿ :ಲಕ್ಷ್ಮಣ ಸವದಿ
ಬೆಳಗಾವಿ: ಸಚಿವ ಸಂಪುಟದಲ್ಲಿ ಹಿರಿಯ ಶಾಸಕ ಉಮೇಶ ಕತ್ತಿ ಸೇರ್ಪಡೆಯಾದರೆ ಸ್ವಾಗತಿಸುವುದಾಗಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾದ್ಯಮದವರೊಂದಿಹೆ ಮಾತನಾಡಿದ ಅವರು, ಉಮೇಶ ಕತ್ತಿ ಅವರು ನಮ್ಮ ಹಳೆಯ ಸ್ನೇಹಿತರು. ಅವರು ಮಂತ್ರಿಯಾಗಲಿ ಎಂಬುವುದು ನಮ್ಮ ಅಪೇಕ್ಷೆ . ಸಚಿವ ಸಂಪುಟ ಯಾವಾಗ ವಿಸ್ತರಣೆ ಆಗುತ್ತದೆ ಎಂಬ ಮಾಹಿತಿ ಇಲ್ಲ. ಮುಖ್ಯಮಂತ್ರಿಗಳನ್ನು ಕೇಳಿ ಹೇಳುವುದಾಗಿ ತಿಳಿಸಿದರು. ಡಿಸಿಸಿ ಬ್ಯಾಂಕ್ ವಿಚಾರವಾಗಿ ಪ್ರತಿಕ್ರಿಯಿಸಿ, ಡಿಸಿಸಿ ಬ್ಯಾಂಕ್ …
Read More »ಪ್ರೇಮಿಗಳಿಬ್ಬರು ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ………….
ಯಾದಗಿರಿ: ಅಂತರ್ ಜಾತಿ ಹಿನ್ನೆಲೆ ಮನೆಯಲ್ಲಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಪ್ರೇಮಿಗಳಿಬ್ಬರು ಸೆಲ್ಫಿ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಯಾದಗಿರಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಯಾದಗಿರಿ ತಾಲೂಕಿನ ಗೊಂದಡಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಪ್ರೀತಿಗೆ ಪೋಷಕರು ಅಡ್ಡಿಪಡಿಸಿದ್ದರಿಂದ ಪ್ರೇಮಿಗಳು ಗ್ರಾಮದ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹನುಮಂತಪ್ಪ(21), ಮಹಾದೇವಿ (17) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಹನುಮಂತ ಮತ್ತು ಮಹಾದೇವಿ ಕಳೆದ ಎರಡು ವರ್ಷಗಳಿಂದ ಗಾಢವಾಗಿ ಪ್ರೀತಿಸುತ್ತಿದ್ದರು. ಅನ್ಯ ಜಾತಿಯವರಾಗಿದ್ದರಿಂದ, ಹುಡುಗಿಯ …
Read More »ನಾವು ರಾಗಿಣಿ ಅಂತ ತೆಗೊಂಡಿದ್ವಿ, ಡ್ರಗ್ ಹುಡುಗಿಯಂತಲ್ಲ: ರಮೇಶ್ ಜಾರಕಿಹೊಳಿ
ಬೆಂಗಳೂರು: ರಾಗಿಣಿಯಂತ ಪ್ರಚಾರಕ್ಕೆ ತಗೊಂಡಿದ್ವಿ, ಡ್ರಗ್ ಹುಡುಗಿಯಂತಲ್ಲ ಎಂದು ಜಲಸಂಪನ್ಮೂಲ ಸಚಿಇಂದು ವಿಧಾನಸೌಧದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಿಜೆಪಿ ಪರ ಡ್ರಗ್ಸ್ ಪ್ರಕರಣದ ಆರೋಪಿ ನಟಿ ರಾಗಿಣಿ ಪ್ರಚಾರ ಮಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ಅದರ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ, ತನಿಖೆ ನಡೆಯುತ್ತಿದೆ. ಎಷ್ಟೇ ಪ್ರಭಾವಿಗಳಿದ್ದರೂ ಕ್ರಮ ಆಗಲಿದೆ ಎಂದು ತಿಳಿಸಿದರು.ವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ರಾಗಿಣಿ ಎಂದು ಭಾವಿಸಿ ನಾವು ಪ್ರಚಾರಕ್ಕೆ ಕರೆ ತಂದಿದ್ವಿ. ಅದನ್ನು …
Read More »ಅತಿವೃಷ್ಟಿಯಿಂದ ಬೆಳೆ ಹಾನಿ: ಪರಿಹಾರಕ್ಕೆ ಆಗ್ರಹ
ಸವದತ್ತಿ: ‘ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿದ್ದು, ಕಂಗಾಲಾಗಿರುವ ರೈತರಿಗೆ ಕೂಡಲೇ ಸಮರ್ಪಕ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ರೈತ ಸಂಘದವರು ಉಪ ತಹಶೀಲ್ದಾರ್ ಆರ್.ಎಸ್. ನೇಸರಗಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಬಿಜ್ಜೂರ ಮಾತನಾಡಿ, ‘ಬರ, ನೆರೆ, ಅತಿವೃಷ್ಟಿ ಹೀಗೆ ಒಂದಿಲ್ಲೊಂದು ತೊಂದರೆಗೆ ರೈತರು ಪ್ರತಿ ವರ್ಷವೂ ಸಿಲುಕುತ್ತಿದ್ದೇವೆ. ಕಷ್ಟಪಟ್ಟು ಬೆಳೆದ ಬೆಳೆ ನಮ್ಮ ಕೈ ಸೇರುತ್ತಿಲ್ಲ. ಈ ಬಾರಿ ಅತಿವೃಷ್ಟಿಯಿಂದ ಹೆಸರು, ಮೆಕ್ಕೆಜೋಳ, …
Read More »