Breaking News

Uncategorized

ಹೋರಾಟ ಮಾಡಿ ಸಾಕಾಗಿದೆ, ಆದ್ರೆ ಶಸ್ತ್ರ ತ್ಯಾಗ ಮಾಡಿಲ್ಲ: H.D.K.

ಬೆಂಗಳೂರು: ಭೂ ಸುಧಾರಣ ಕಾಯ್ದೆ ಹಾಗೂ ಎಪಿಎಂಸಿ ಕೃಷಿ ಮಸೂದೆ ವಿರುದ್ಧ ನಾನು ಹೋರಾಟ ಮಾಡಿ ಸಾಕಾಗಿದೆ. ಆದರೆ ನಾನು ಶಸ್ತ್ರ ತ್ಯಾಗ ಮಾಡಿಲ್ಲ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದರು ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ, ಭೂ ಸುಧಾರಣ ಕಾಯ್ದೆ, ಎಪಿಎಂಸಿ ಕಾಯ್ದೆ ವಿರುದ್ಧ ಜೆಡಿಎಸ್ ಈಗಾಗಲೇ ಪ್ರತಿಭಟನೆ ಮಾಡಿದೆ. ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ನಾವು ಪ್ರತಿಭಟನೆ ಮಾಡಿದ್ದೇವೆ. ಆದರೆ ಆತುರವಾಗಿ ಈ ಕಾಯ್ದೆ ಸುಗ್ರಿವಾಜ್ಞೆ ತರುವ …

Read More »

ಸಿಆರ್‌ಪಿಎಫ್‌ ಯೋಧರ ಮೇಲೆ ಮತ್ತೆ ಉಗ್ರರ ದಾಳಿ

ಶ್ರೀನಗರ,  -ಕಾಶ್ಮೀರ ಕಣಿವೆಯಲ್ಲಿ ಯೋಧರನ್ನು ಗುರಿಯಾಗಿರಿಸಿಕೊಂಡು ಭಯೋತ್ಪಾದಕರು ದಾಳಿ ನಡೆಸುವ ಪ್ರಕರಣಗಳು ಮುಂದುವರಿದಿದೆ. ಜಮ್ಮು ಮತ್ತು ಕಾಶ್ಮೀರದ ಶೋಫಿಯಾನ್‍ನಲ್ಲಿ ಪಾಕಿಸ್ತಾನ ಬೆಂಬಲಿತ ಉಗ್ರರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‍ಪಿಎಫ್) ಯೋದರ ಮೇಲೆ ದಾಳಿ ನಡೆಸಿ ವಿಧ್ವಂಸಕ ಕೃತ್ಯ ಎಸಗಲು ಯತ್ನಿಸಿದ್ದಾರೆ. ಸುದೈವವಶಾತ್ ಭಯೋತ್ಪಾದಕರ ಆಕ್ರಮಣದಲ್ಲಿ ಸಾವು-ನೋವು ಸಂಭವಿಸಿಲ್ಲ. ಮಿನಿ ಸೆಕ್ರೆಟರಿಯೇಟ್ (ಪುಟ್ಟ ಸಚಿವಾಲಯ)ನ ಭದ್ರತೆಗೆ ನಿಯೋಜಿಸಿದ್ದ ಸಿಆರ್‍ಪಿಎಫ್ ಯೋಧರನ್ನು ಹತ್ಯೆ ಮಾಡಲು ಉಗ್ರರು ಗುಂಡು ಹಾರಿಸಿ ಪರಾರಿಯಾದರು. ಅದೃಷ್ಟವಶಾತ್ …

Read More »

ರೈತ ವಿರೋಧಿ ಕಾಯ್ದೆ ಖಂಡಿಸಿ ಇಂದು ರಸ್ತೆ ತಡೆ; ಎಲ್ಲೆಲ್ಲಿ ಪ್ರತಿಭಟನೆ ಬಿಸಿ?

ಬೆಂಗಳೂರು : ರೈತ ವಿರೋಧಿ ಕಾಯ್ದೆ ವಿರೋಧಿಸಿ ಅನ್ನದಾತರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ರೈತರ ಪ್ರತಿಭಟನೆಗೆ ಸ್ಪಂದಿಸದ ಸರ್ಕಾರದ ನಡೆಯನ್ನು ವಿರೋಧಿಸಿ ಇಂದು ಅನೇಕ ರೈತ ಸಂಘಟನೆಗಳು ರಸ್ತೆ ತಡೆ ಮಾಡಲಿದ್ದಾರೆ. ಇಂದು ಐಕ್ಯ ಹೋರಾಟ ಸಮಿತಿ ವತಿಯಿಂದ ಬೃಹತ್​ ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಲಿದ್ದಾರೆ. ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್​​ನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ತಡೆಯಲು ಕರೆ …

Read More »

ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಆದ್ದರಿಂದ ಸದನ ಸಭೆಯಿಂದ ದೂರ ಉಳಿಯಲು ಹೇಳಿ : ಮಾಧುಸ್ವಾಮಿ

ಬೆಂಗಳೂರು: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. ಆದ್ದರಿಂದ ಸದನ ಸಭೆಯಿಂದ ದೂರ ಉಳಿಯಲು ಹೇಳಿ ಎಂದು ಡಿಸಿಎಂ ಮಾಧುಸ್ವಾಮಿ ಅವರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಘಟನೆ ಇಂದು ಸದನದಲ್ಲಿ ನಡೆಯಿತು. ವಿಧಾನಸಭೆಯಲ್ಲಿ ಮಾತನಾಡಿದ ಚಿವ ಮಾಧುಸ್ವಾಮಿ ಅವರು, ಪ್ರಿಯಾಂಕ್ ಖರ್ಗೆ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಸಭೆಯಿಂದ ದೂರ ಉಳಿಯಲು ಹೇಳಿ ಎಂದು ಮನವಿ ಮಾಡಿದರು. ಆದರೆ ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಅವರು, …

Read More »

ರಾಜ್ಯದ ಹಲವೆಡೆ ರೈತರ ಪ್ರತಿಭಟನೆ; ರಾಷ್ಟ್ರೀಯ ಹೆದ್ದಾರಿ ತಡೆದು ಆಕ್ರೋಶ

ದಾವಣಗೆರೆ: ಭೂ ಸುಧಾರಣೆ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಇಂದು ವಿವಿಧ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ದಾವಣಗೆರೆ ನಗರದ ಜಿಲ್ಲಾ ಪಂಚಾಯತ್​ ಎದುರಿನ ರಾಷ್ಟ್ರೀಯ ಹೆದ್ದಾರಿ 4ನ್ನು ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯ ರೈತ ಸಂಘ ಹುಚ್ಚವ್ವನಹಳ್ಳಿ ಬಣ ಮುಂಜಾನೆ 5 ಗಂಟೆಯಿಂದ ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಪೊಲೀಸರ ಎಚ್ಚರಿಕೆಯ ನಡುವೆಯೇ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »

ಅಕ್ಟೋಬರ್-ನವೆಂಬರ್ ನಲ್ಲಿ ಗ್ರಾಮ ಪಂಚಾಯತ್ ಚುನಾವಣೆ: ರಾಜ್ಯ ಚುನಾವಣಾ ಆಯೋಗ.

ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಸಾಧ್ಯತೆಯಿದೆ. 5,800 ಗ್ರಾಮ ಪಂಚಾಯತ್ ಗಳಿಗೆ ಈ ವರ್ಷ ಚುನಾವಣೆ ನಡೆಯಲಿದ್ದು, ಅಗತ್ಯವಿರುವ ಪೂರ್ವ ಸಿದ್ಧತೆ ಕೈಗೊಳ್ಳಲು ಚುನಾವಣಾ ಆಯೋಗ ರಾಜ್ಯ ಪೊಲೀಸ್ ಡಿಜಿ ಮತ್ತು ಐಜಿಪಿ ಅವರಿಗೆ ಪತ್ರ ಬರೆದಿದೆ. ಚುನಾವಣಾ ಸಮದಲ್ಲಿ ಸೂಕ್ತ ಭದ್ರತೆ ಕೈಗೊಂಡು ಕಾನೂನು ಸುವ್ಯವಸ್ಥೆ ಪಾಲಿಸುವಂತೆ ಸೂಚಿಸಿದೆ. ಚುನಾವಣಾ ಖರ್ಚು ವೆಚ್ಚಕ್ಕಾಗಿ ಹೆಚ್ಚುವರಿ ಅನುದಾನ …

Read More »

ಬೆಂಗಳೂರಲ್ಲಿ ಸೋಂಕು ಪತ್ತೆ ಶೇ.5ಕ್ಕಿಂತ ಕಡಿಮೆ ಮಾಡಿ: ಪ್ರಧಾನಿ ಮೋದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕೊರೋನಾ ಸೋಂಕು ಪರೀಕ್ಷೆ ಪ್ರಮಾಣ ದ್ವಿಗುಣಗೊಳಿಸಿ ಹಾಗೂ ಸೋಂಕು ಪತ್ತೆ ಪ್ರಮಾಣವನ್ನು ಶೇ.5ಕ್ಕಿಂತ ಕಡಿಮೆಗೊಳಿಸಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರಾಜ್ಯ ಸರ್ಕಾರಕ್ಕೆ ಮತ್ತು ಬಿಬಿಎಂಪಿ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಕಳೆದ ಬುಧವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ರಾಜ್ಯದ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್‌ ಮೂಲಕ ಸಭೆ ನಡೆಸಿದರು. ಈ ವೇಳೆ ವಿಶೇಷವಾಗಿ ಬೆಂಗಳೂರಿನಲ್ಲಿ ಕೊರೋನಾ …

Read More »

ಮಗನ ಅಂತಿಮ ದರ್ಶನ ಇಲ್ಲದ್ದಕ್ಕೆ ಕಣ್ಣೀರಿಟ್ಟ ಅಂಗಡಿ ತಾಯಿ

ಬೆಳಗಾವಿ  : ದೆಹಲಿಯಲ್ಲಿ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಸಂಸ್ಕಾರ ನಡೆಯುತ್ತಿದ್ದರೆ, ಬೆಳಗಾವಿಯ ಅವರ ನಿವಾಸದಲ್ಲಿ ತಾಯಿ ಸೋಮವ್ವ ಅವರ ಸಂಕಟ, ವೇದನೆ ಹೇಳತೀರದ್ದಾಗಿತ್ತು. ಕಣ್ಣೆದುರೇ ಬಹು ಎತ್ತರಕ್ಕೆ ಬೆಳೆದಿದ್ದ ಮಗನ ಅಕಾಲಿಕ ಮರಣದ ದುಃಖದೊಂದಿಗೇ ಕೈಯ್ಯಾರೆ ಬೆಳೆಸಿದ ಮಗನನ್ನು ಅಂತಿಮವಾಗಿ ನೋಡಲು ಸಾಧ್ಯವಾಗಲಿಲ್ಲವಲ್ಲ ಎಂಬ ನೋವು ಅವರನ್ನು ಆವರಿಸಿಕೊಂಡಿತ್ತು. ಕೋವಿಡ್‌ ನಿಯಮಾನುಸಾರ ಅಂಗಡಿಯವರ ಪಾರ್ಥಿವ ಶರೀರರನ್ನು ಹುಟ್ಟೂರಿಗೂ ತರಲಾಗಿರಲಿಲ್ಲ. ತಾಯಿ ಸೋಮವ್ವ ಅಂಗಡಿ ಮಗನ …

Read More »

ಹಂಪಿಗೆ ಡಬಲ್‌ ಡೆಕ್ಕರ್‌ ಬಸ್‌!300 ರು. ಫಿಕ್ಸ್

ಹೊಸಪೇಟೆ : ಕಣ್ಣಿದ್ರೇ ಕನಕಗಿರಿ ನೋಡಬೇಕು… ಕಾಲಿದ್ರೇ ಹಂಪಿ ಸುತ್ತಬೇಕು ಅನ್ನೋ ವಾಡಿಕೆ ಮಾತಿಗೆ ಮತ್ತೊಂದು ಸೇರ್ಪಡೆ, ಹಣವಿದ್ದವರಿಗೆ ಡಬಲ್‌ ಡೆಕ್ಕರ್‌ ಬಸ್‌! ಹೌದು, ಇನ್ಮುಂದೆ ಹಂಪಿಯ ಸ್ಮಾರಕಗಳ ಸೊಬಗನ್ನು ಡಬಲ್‌ ಡೆಕ್ಕರ್‌ ಬಸ್‌ನಲ್ಲಿ ಸುತ್ತಾಡಿ ಕಣ್ಣದುಂಬಿಕೊಳ್ಳಬಹುದು. ಹಂಪಿಯಲ್ಲಿ ಆರಂಭದಲ್ಲಿ ಮೂರು ಬಸ್‌ಗಳು ಬರಲಿವೆ. ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಈ ಬಗ್ಗೆ ಯೋಜನೆ ರೂಪಿಸಿದ್ದು, ಹಂಪಿಯಲ್ಲಿ ಬಸ್‌ ಓಡಾಟದ ಕುರಿತ ಮಾರ್ಗ (ರೂಟ್‌ ಸರ್ವೇ) ಸಮೀಕ್ಷೆ ನಡೆಸಲಾಗುತ್ತಿದೆ. ಭೋರ್ಗರೆದ ತುಂಗಭದ್ರಾ: …

Read More »

ಮತ್ತೆ ಲಾಕ್‌ಡೌನ್ ಇಲ್ಲ; ಮೈಕ್ರೋ ಸೀಲ್‌ಡೌನ್‌ ಜಾರಿಗೆ ಚಿಂತನೆ..!

ಬೆಂಗಳೂರು : ಕೊರೋನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತಡೆಯಲು ಮತ್ತೊಮ್ಮೆ ರಾಜ್ಯದಲ್ಲಿ ಲಾಕ್‌ಡೌನ್‌ ಜಾರಿಯಾಗುವುದೇ ಎಂಬ ಚರ್ಚೆ ಆರಂಭವಾಗಿದೆ. ಆದರೆ ಈ ಹಿಂದಿನಂತೆ ಸಂಪೂರ್ಣ ಲಾಕ್‌ಡೌನ್‌ ಜಾರಿಯಾಗುವ ಸಾಧ್ಯತೆಗಳು ಇಲ್ಲ. ಆದರೆ ಸೋಂಕು ಹೆಚ್ಚಿರುವ ಪ್ರದೇಶಗಳಲ್ಲಿ ಮೈಕ್ರೋ ಸೀಲ್‌ಡೌನ್‌ ಮಾಡುವ ಬಗ್ಗೆ ಚಿಂತನೆ ನಡೆದಿದೆ. ಕೋವಿಡ್‌ ನಿಯಂತ್ರಣ ಕುರಿತಂತೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಸಂಬಂಧಪಟ್ಟ ಸಚಿವರೊಂದಿಗೆ ನಡೆಸಿದ ಸಂವಾದದಲ್ಲಿ ಈ ವಿಷಯ ಸೂಕ್ಷ್ಮವಾಗಿ …

Read More »