ಬೆಂಗಳೂರು: ಹುಡುಗಿಯರನ್ನ ಇಟ್ಟುಕೊಂಡು ದಂಧೆ ನಡೆಸುತ್ತಿದ್ದ ನಟೋರಿಯಸ್ ಪಿಂಪ್ ಒಬ್ಬನನ್ನ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಚೇತನ್ ಕುಮಾರ್ @ ಮಂಗಳಮುಖಿ ಚೇತನ್ (40) ಬಂಧಿತ ಆರೋಪಿ. ನಟೋರಿಯಸ್ ಪಿಂಪ್ ಚೇತನ್ ವಿರುದ್ಧ ಪೀಣ್ಯಾ, ಬಾಗಲಗುಂಟೆ, ಸಿಸಿಬಿ ಸೇರಿದಂತೆ ಹಲವು ಠಾಣೆಗಳಲ್ಲಿ 10 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿತ್ತು. ಇದನ್ನೂ ಮಂಗಳಮುಖಿ ವೇಷ ಧರಿಸುತ್ತಿದ್ದ ಚೇತನ್ ಪೊಲೀಸರಿಂದಲೂ ಸುಲಭವಾಗಿ ತಪ್ಪಿಸಿಕೊಳ್ಳುತ್ತಿದ್ದ. ಹೊರ ರಾಜ್ಯಗಳಿಂದ ಹುಡುಗಿಯರನ್ನ ಕರೆತಂದು ದಂಧೆ ನಡೆಸುತ್ತಿದ್ದ. 10 ಕ್ಕೂ …
Read More »ʻಜೀವನ ಸಾಕಾಗಿದೆʼ – ಗೆಳೆಯನಿಗೆ ಕೊನೇ ಮೆಸೇಜ್ ಮಾಡಿ ಸ್ಯಾಂಕಿ ಕೆರೆಗೆ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರು: 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಬೆಂಗಳೂರಿನ ಸದಾಶಿವನಗರದ ಸ್ಯಾಂಕಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನ ಚಿಕ್ಕಬಾಣವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಸದಾಶಿವನಗರ ಪೊಲೀಸರು ಮೃತದೇಹವನ್ನ ಹೊರಗೆ ತೆಗೆದಿದ್ದಾರೆ. ಪ್ರೀತಿ ವಿಚಾರಕ್ಕೆ ಆತ್ಮಹತ್ಯೆ ಶಂಕೆ ಮೇಲ್ನೋಟಕ್ಕೆ, ಪ್ರೀತಿ ವಿಚಾರಕ್ಕೆ ತೇಜು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ಆಕೆ ʻನನಗೆ ಜೀವನ ಸಾಕಾಗಿದೆʼ …
Read More »ಡಿಒ ಕಿರುಕುಳ ಆರೋಪ – ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ
ದಾವಣಗೆರೆ: ಪಿಡಿಒ ಕಿರುಕುಳದಿಂದ ಮನನೊಂದು ಡೆತ್ ನೋಟ್ ಬರೆದಿಟ್ಟು ಬಿಲ್ ಕಲೆಕ್ಟರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಳಚೋಡು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಬಿಳಚೋಡು ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಶಿವಪ್ಪ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿರುವ ಶಿವಪ್ಪ, ಬಿಳಚೋಡು ಪಿಡಿಒ ನಂದಲಿಂಗೇಶ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಹೆಚ್ಚುವರಿ …
Read More »4 ದಿನಗಳ ಬಳಿಕ ಪತ್ರಿಕಾ ಪ್ರಕಟಣೆ – ಅನುಮಾನಕ್ಕೆ ಎಡೆ ಮಾಡಿಕೊಟ್ಟ ಅಂಜನಾದ್ರಿ ಹುಂಡಿ ಎಣಿಕೆ
ಕೊಪ್ಪಳ: ಅಂಜನಾದ್ರಿಯ ಹುಂಡಿ ಎಣಿಕೆಯಾದ ನಾಲ್ಕು ದಿನಗಳ ಬಳಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಇದೀಗ ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಹನುಮ ಹುಟ್ಟಿದ ಸ್ಥಳ ಎಂದೇ ಖ್ಯಾತಿ ಪಡೆದಿದೆ. ಇತ್ತೀಚಿಗೆ ಜು.3ರಂದು ಅಂಜನಾದ್ರಿಯ ಆಂಜನೇಯನ ಹುಂಡಿ ಎಣಿಕೆ ಕಾರ್ಯ ನಡೆದಿತ್ತು. ಅದಾದ ಬಳಿಕ ಇದೀಗ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ನಾಲ್ಕು ದಿನಗಳ ಬಳಿಕ ಪತ್ರಿಕಾ ಪ್ರಕಟಣೆ ಹೊರಡಿಸಿದ ತಾಲೂಕು ಆಡಳಿತದ ನಡೆ ಇದೀಗ …
Read More »ವಯನಾಡಿನಲ್ಲಿ ಮೇಘಸ್ಫೋಟ – ಇಬ್ಬರು ಕಾರ್ಮಿಕರು ಜೀವಂತ ಸಮಾಧಿ; 30 ಮಂದಿ ಮಿಸ್ಸಿಂಗ್
ತಿರುವನಂತಪುರಂ: 2 ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಅಂತಹದ್ದೇ ದುರಂತ ವಯನಾಡಿನಲ್ಲಿ ಮತ್ತೆ ಸಂಭವಿಸಿದೆ. ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ ಸೇತುವೆ ಬಳಿ ಭೂಕುಸಿತ ಸಂಭವಿಸಿದೆ. ಇದರಿಂದ ಇಬ್ಬರು ಕಾರ್ಮಿಕರು ಜೀವಂತ ಸಮಾಧಿಯಾಗಿದ್ದಾರೆ. ಸುಮಾರು 20 ಮಂದಿ ಅವಶೇಷಗಳ ಅಡಿಯಲ್ಲೇ ಸಿಲುಕಿಕೊಂಡಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಇದರಿಂದ …
Read More »ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ – ರಾಜ್ಯಕ್ಕೆ 1 ಲಕ್ಷ ಕ್ಯೂಸೆಕ್ ನೀರಿನ ಒಳಹರಿವು ದಾಖಲು
ಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಕಳೆದ 6 ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯ ಪರಿಣಾಮ ಕರ್ನಾಟಕಕ್ಕೆ ಒಟ್ಟು 98 ಸಾವಿರದಿಂದ 1 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರಿನ ಒಳಹರಿವು ದಾಖಲಾಗಿದ್ದು, ಕಳೆದ ಒಂದೇ ರಾತ್ರಿ ಕೃಷ್ಣಾ ನದಿಗೆ 28 ಸಾವಿರ ಕ್ಯೂಸೆಕ್ ನೀರು ಹೆಚ್ಚುವರಿಯಾಗಿ ಹರಿದು ಬಂದಿದೆ. ಬೆಳಗಾವಿ ಜಿಲ್ಲೆಯ ನದಿಗಳಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಕೃಷ್ಣಾ, ದೂದಗಂಗಾ, ವೇದಗಂಗಾ, ಹೀರಣ್ಯಕೇಶಿ, ಘಟಪ್ರಭಾ, ಮಲಪ್ರಭಾ ಹಾಗೂ ಮಾರ್ಕಂಡೇಯ …
Read More »ಅನೈತಿಕ ಸಂಬಂಧಕ್ಕೆ ಅಡ್ಡಿ – ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಗಂಡನ ಕೊಂದ ನರ್ಸ್
ಹೈದರಾಬಾದ್: ಪ್ರಿಯಕರನೊಂದಿಗಿನ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ನರ್ಸ್ ಆಗಿರುವ ಪತ್ನಿಯೇ ಕೊಲೆ ಮಾಡಿರುವ ಘಟನೆ ತೆಲಂಗಾಣದಲ್ಲಿ ಬೆಳಕಿಗೆ ಬಂದಿದೆ. ನಿಜಾಮಾಬಾದ್ ಜಿಲ್ಲೆಯ ನ್ಯಾಲ್ಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಶಾಂತ್ (35) ಹತ್ಯೆಯಾದ ಪತಿ. ಪ್ರಶಾಂತ್ ಇತ್ತೀಚೆಗಷ್ಟೇ ಗಲ್ಫ್‌ನಿಂದ ಊರಿಗೆ ಮರಳಿದ್ದ. ಈ ವೇಳೆ ಪತ್ನಿ ಸಂಧ್ಯಾ ಮತ್ತು ಆಕೆಯ ಪ್ರಿಯಕರ ಅನಿಲ್ ನಡುವಿನ ಸಂಬಂಧಕ್ಕೆ ಆತ ಅಡ್ಡಿಯಾಗಿದ್ದ ಹಿನ್ನೆಲೆ ಕೊಲೆ ಮಾಡಲಾಗಿದೆ ಎಂದು …
Read More »ಮಲೆನಾಡಲ್ಲಿ ಮಳೆಯಬ್ಬರ – ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಜೀವಕಳೆ
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಳೆ ಅಬ್ಬರಿಸುತ್ತಿರುವ ಪರಿಣಾಮ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಕಳೆದ 4 ದಿನದಿಂದ ಶಿವಮೊಗ್ಗದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಇದರ ಜೊತೆಗೆ ಶರಾವತಿ ಕಣಿವೆ ಪ್ರದೇಶದಲ್ಲಿಯೂ ಉತ್ತಮ ಮಳೆಯಾಗಿದ್ದು, ಸಾಗರ ತಾಲೂಕಿನಲ್ಲಿರುವ ಜೋಗ ಜಲಪಾತ ಜೀವಕಳೆ ಪಡೆದು, ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿದೆ. ರಾಜ, ರಾಣಿ, ರೋರರ್, ರಾಕೆಟ್ ಎಂಬ ನಾಲ್ಕು ಕವಲುಗಳಲ್ಲಿಯೂ ನೀರು ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರ ದಂಡು ಹರಿದುಬರುತ್ತಿದೆ. ಜೋಗ ಜಲಪಾತದ ಸೊಬಗಿಗೆ ಪ್ರವಾಸಿಗರು ಫಿದಾ ಆಗಿದ್ದಾರೆ.
Read More »ಹಿರಣ್ಯಕೇಶಿ ನದಿಗೆ ಒಳಹರಿವು ಹೆಚ್ಚಳ; ಧುಪದಾಳ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಜಿಲ್ಲೆಯಲ್ಲಿನ ಮಳೆಯ ಕೊರತೆ ಹಾಗೂ ಕುಡಿಯುವ ನೀರಿನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಭಾನುವಾರ ಬೆಳಗ್ಗೆ ಘಟಪ್ರಭಾ ಸಮೀಪದ ಧುಪದಾಳ ಜಲಾಶಯಕ್ಕೆ ಭೇಟಿ ನೀಡಿ ಜಲಾಶಯದ ನೀರಿನ ಮಟ್ಟ, ಒಳಹರಿವು ಹಾಗೂ ನೀರು ನಿರ್ವಹಣೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಪರಿಶೀಲನೆ ಬಳಿಕ ಮಾತನಾಡಿದ ಸಚಿವರು, ಮುಂಗಾರು ವಿಳಂಬದಿಂದ ರೈತರು ಹಾಗೂ ಸಾರ್ವಜನಿಕರಲ್ಲಿ ಉಂಟಾಗಿದ್ದ ಆತಂಕ ಈಗ ದೂರವಾಗತೊಡಗಿದೆ. ಕಳೆದ ಕೆಲವು ದಿನಗಳಿಂದ ಮುಂಗಾರು ಚುರುಕುಗೊಂಡಿರುವ ಪರಿಣಾಮ …
Read More »ಹಾವೇರಿಯಲ್ಲಿ ಮೋಡ ಬಿತ್ತನೆಗೆ ಚಾಲನೆ – ಅಗತ್ಯವಿದ್ದರೆ ರಾಜ್ಯದೆಲ್ಲೆಡೆ ವಿಸ್ತರಿಸಲು ಚಿಂತನೆ: ಸತೀಶ್ ಜಾರಕಿಹೊಳಿ
ಹಾವೇರಿ: ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದರ ನಡುವೆ ಹಾವೇರಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ಕಾರ್ಯಕ್ಕೆ ಅಧಿಕೃತ ಚಾಲನೆ ದೊರೆತಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮಾಜಿ ಸಚಿವ ಹೆಚ್.ಕೆ. ಪಾಟೀಲ್ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಹೆಚ್.ಕೆ. ಪಾಟೀಲ್, ಉತ್ತರ ಕರ್ನಾಟಕದಲ್ಲಿ ಮಳೆಯ ಕೊರತೆ ತೀವ್ರವಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಮೋಡ ಬಿತ್ತನೆ ಕಾರ್ಯಕ್ರಮವನ್ನು ಆರಂಭಿಸಬೇಕು ಎಂದು …
Read More »
Laxmi News 24×7